ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಯಾಜಕಕಾಂಡ
1. {#1ಆಚರಿಸಬೇಕಾದ ಹಬ್ಬಗಳು } [PS]ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
2. “ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನೀವು ಪರಿಶುದ್ಧ ಸಭೆಗಳಾಗಿ ಸೇರಿ ಯೆಹೋವ ದೇವರಾಗಿರುವ ನನಗೋಸ್ಕರ ನೇಮಕವಾದ ಈ ಹಬ್ಬಗಳನ್ನು ಪ್ರಕಟಿಸಬೇಕು. [PE]
3. {#2ಸಬ್ಬತ್ ದಿನ }
4. [PS]“ ‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು. [PE]{#2ಪಸ್ಕಹಬ್ಬ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ } [PS]“ ‘ಇವು ಯೆಹೋವ ದೇವರ ಹಬ್ಬಗಳು: ನೀವು ನೇಮಕವಾದ ಕಾಲಗಳಲ್ಲಿ ನಿಮ್ಮ ಪವಿತ್ರ ಸಭಾ ಕೂಟಗಳಲ್ಲಿ ಈ ಹಬ್ಬಗಳನ್ನು ಪ್ರಕಟಿಸಬೇಕು.
5. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಲ್ಲಿ ಯೆಹೋವ ದೇವರ ಪಸ್ಕಹಬ್ಬವಾಗಬೇಕು.
6. ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಯೆಹೋವ ದೇವರಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.
7. ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.
8. ಆದರೆ ಏಳು ದಿವಸ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ಪರಿಶುದ್ಧ ಸಭಾಕೂಟವಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.’ ” [PE]
9. {#2ಸುಗ್ಗಿಯ ಪ್ರಥಮ ಫಲ } [PS]ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
10. “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
11. ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಅರ್ಪಿಸಬೇಕು. ಸಬ್ಬತ್ ದಿನವಾದ ಮಾರನೆಯ ದಿನ ಯಾಜಕನು ಅದನ್ನು ಅರ್ಪಿಸಬೇಕು.
12. ನೀವು ಸಿವುಡನ್ನು ಅರ್ಪಿಸುವ ದಿನದಲ್ಲಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂತೆ ಒಂದು ವರ್ಷದ ಮತ್ತು ಕಳಂಕರಹಿತವಾದ ಕುರಿಮರಿಯನ್ನು ಅರ್ಪಿಸಬೇಕು.
13. ಇದರೊಂದಿಗೆ, ಧಾನ್ಯ ಸಮರ್ಪಣೆಯಲ್ಲಿ ಬೆರೆಸಿದ ಎಣ್ಣೆ ಮತ್ತು ಮೂರು ಕಿಲೋಗ್ರಾಂ[* ಹೀಬ್ರೂ ಭಾಷೆಯಲ್ಲಿ ಎಫಾದ ಹತ್ತನೇ ಎರಡು ಭಾಗ, ಅಂದರೆ ಸುಮಾರು 3.2 ಕಿಲೋಗ್ರಾಂ ] ನಯವಾದ ಹಿಟ್ಟನ್ನು ಆಹ್ಲಾದಕರವಾದ ಪರಿಮಳದ ರೂಪದಲ್ಲಿ ಯೆಹೋವ ದೇವರಿಗೆ ಅರ್ಪಿಸಬೇಕು. ಇದಲ್ಲದೆ ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಸುಮಾರು ಒಂದು ಲೀಟರ್ [† ಹೀಬ್ರೂ ಭಾಷೆಯಲ್ಲಿ ಒಂದು ಹಿನ್ ನಾಲ್ಕನೆಯ ಒಂದು ಭಾಗ, ಅಂದರೆ ಸುಮಾರು 1 ಲೀಟರ್ ] ದ್ರಾಕ್ಷಾರಸ ಆಗಿರಬೇಕು.
14. ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಬಲಿಯನ್ನು ತರುವವರೆಗೆ ರೊಟ್ಟಿಯನ್ನಾಗಲಿ, ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿಯೂ ಶಾಶ್ವತವಾದ ನಿಯಮವಾಗಿರಬೇಕು. [PE]
15. {#2ವಾರಗಳ ಹಬ್ಬ } [PS]“ ‘ಸಬ್ಬತ್ ದಿನದ ಮಾರನೆಯ ದಿನ ನೀವು ನೈವೇದ್ಯವಾಗಿ ನಿವಾಳಿಸಿದ ಸಿವುಡನ್ನು ತಂದ ದಿನದಿಂದ ಏಳು ವಾರಗಳು ಪೂರ್ಣವಾಗುವವರೆಗೆ ಲೆಕ್ಕಿಸಬೇಕು.
16. ಏಳನೆಯ ಸಬ್ಬತ್ ದಿನದ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಯೆಹೋವ ದೇವರಿಗೆ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸಬೇಕು.
17. ಇದಲ್ಲದೆ ನೀವು ನಿಮ್ಮ ಮನೆಗಳಿಂದ ತಂದ ಹಿಟ್ಟಿನಲ್ಲಿ ಎರಡೆರಡು ಓಮರ್ ಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋಧಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವ ದೇವರಿಗೆ ನೈವೇದ್ಯವಾಗಿ ನಿವಾಳಿಸಬೇಕು.
18. ಇದಲ್ಲದೆ ನೀವು ರೊಟ್ಟಿಯೊಂದಿಗೆ ಕಳಂಕರಹಿತವಾದ ಒಂದು ವರ್ಷದ ಏಳು ಕುರಿಮರಿಗಳನ್ನೂ ಒಂದು ಎಳೆಯ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಅವು ಯೆಹೋವ ದೇವರಿಗೆ ದಹನಬಲಿಗಳಾಗುವುವು. ಅವುಗಳೊಂದಿಗೆ ಆಹಾರ ಬಲಿಯು ಮತ್ತು ಪಾನಾರ್ಪಣೆಗಳು, ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.
19. ತರುವಾಯ ಹೋತವನ್ನು ಪಾಪ ಪರಿಹಾರದ ಬಲಿಯಾಗಿಯೂ ಮತ್ತು ಸಮಾಧಾನ ಬಲಿಯಾಗಿ ಒಂದು ವರ್ಷದ ಎರಡು ಕುರಿಮರಿಗಳನ್ನು ಬಲಿಯಾಗಿ ಅರ್ಪಿಸಬೇಕು.
20. ಯಾಜಕನು ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಥಮ ಫಲದ ರೊಟ್ಟಿಯೊಂದಿಗೂ, ಎರಡು ಕುರಿಮರಿಗಳೊಂದಿಗೂ ಅವುಗಳನ್ನು ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವ ದೇವರಿಗೆ ಪರಿಶುದ್ಧವಾಗಿದ್ದು ಯಾಜಕನಿಗೋಸ್ಕರ ಇರಬೇಕು.
21. ಅದೇ ದಿನದಲ್ಲಿ ಪವಿತ್ರ ಸಭೆ ಕೂಡುವುದೆಂದು ಪ್ರಕಟಿಸಬೇಕು ಮತ್ತು ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ, ನೀವು ಎಲ್ಲೇ ಇದ್ದರೂ ಪಾಲಿಸಬೇಕಾದ ಶಾಶ್ವತ ನಿಯಮ. [PE]
22.
23. [PS]“ ‘ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು, ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನೂ ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ” [PE]{#2ತುತೂರಿಗಳ ಹಬ್ಬ } [PS]ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
24. “ಇಸ್ರಾಯೇಲರೊಂದಿಗೆ ಮಾತನಾಡಿ: ‘ಏಳನೆಯ ತಿಂಗಳಿನಲ್ಲಿ ಮೊದಲನೆಯ ದಿನದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥವಾದ ಸಬ್ಬತ್ ದಿನವಾಗಿರಬೇಕು. ಆ ದಿನ ಪರಿಶುದ್ಧ ಸಭೆಯ ಕೂಟವೂ ಇರಬೇಕು.
25. ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ದಹನಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು,’ ” ಎಂದು ಹೇಳಿದರು. [PE]
26. {#2ಪ್ರಾಯಶ್ಚಿತ್ತದ ದಿನ } [PS]ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
27. “ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿರುವುದು. ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವುದು. ನೀವು ಉಪವಾಸ ಮಾಡಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು.
28. ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಏಕೆಂದರೆ ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿರುವುದು.
29. ಅದೇ ದಿವಸದಲ್ಲಿ ಯಾರಾದರೂ ಉಪವಾಸ ಮಾಡದೆ ಇದ್ದಲ್ಲಿ, ಅವರು ತಮ್ಮ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.
30. ಅದೇ ದಿವಸದಲ್ಲಿ ಯಾರಾದರೂ ಕೆಲಸವನ್ನು ಮಾಡಿದರೆ, ಅವರನ್ನು ನಾನು ಅವರ ಜನರ ಮಧ್ಯದಿಂದ ನಾಶಮಾಡುವೆನು.
31. ನೀವು ಯಾವ ತರಹದ ಕೆಲಸವನ್ನೂ ಮಾಡಬಾರದು. ಇದು ನಿಮ್ಮ ಸಂತತಿಗೆ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
32. ಇದು ನಿಮಗೆ ಸಬ್ಬತ್ ದಿನವಾಗಿರುವುದು. ನೀವು ನಿಮ್ಮನ್ನು ಉಪವಾಸ ಇಡಬೇಕು. ಆ ತಿಂಗಳಿನ ಒಂಬತ್ತನೆಯ ದಿವಸದ ಸಾಯಂಕಾಲದಿಂದ ಹಿಡಿದು ಮರುದಿನದ ಸಂಜೆಯವರೆಗೆ ಸಬ್ಬತ್ ದಿನವನ್ನು ಆಚರಿಸಬೇಕು,” ಎಂಬದೇ. [PE]
33. {#2ಗುಡಾರಗಳ ಹಬ್ಬ } [PS]ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
34. “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳವರೆಗೆ ಯೆಹೋವ ದೇವರಿಗೆ ಗುಡಾರಗಳ ಹಬ್ಬವಾಗಿರುವುದು.
35. ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವುದು. ನೀವು ಅದರಲ್ಲಿ ಕಷ್ಟಕರವಾದ ಕೆಲಸಗಳನ್ನು ಮಾಡಬಾರದು.
36. ಏಳು ದಿವಸ ನೀವು ಬೆಂಕಿಯ ಮೂಲಕ ಬಲಿಗಳನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿಶುದ್ಧ ಕೂಟವಾಗಿರುವುದು. ನೀವು ಬೆಂಕಿಯ ಮೂಲಕ ಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಅದೊಂದು ಗಂಭೀರ ಸಭೆಯಾಗಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸಗಳನ್ನು ಮಾಡಬಾರದು. [PE]
37. [PS]“ ‘ನೀವು ಪರಿಶುದ್ಧ ಸಭೆಯಾಗಿ ಯೆಹೋವ ದೇವರ ನೇಮಕವಾದ ಹಬ್ಬಗಳು ಇವೇ. ಇವುಗಳ ಒಂದೊಂದು ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಯನ್ನೂ, ಧಾನ್ಯ ಸಮರ್ಪಣೆಯನ್ನೂ, ಯಜ್ಞವನ್ನೂ, ಪಾನದ್ರವ್ಯ ಬಲಿಗಳನ್ನೂ ಅರ್ಪಿಸಬೇಕು.
38. ಯೆಹೋವ ದೇವರ ವಿಶ್ರಾಂತಿಯ ದಿನಗಳ ಹೊರತಾಗಿಯೂ, ನೀವು ಯೆಹೋವ ದೇವರಿಗೆ ಸಮರ್ಪಿಸುವ ನಿಮ್ಮ ದಾನಗಳ ಹೊರತಾಗಿಯೂ, ನಿಮ್ಮ ಎಲ್ಲಾ ಹರಕೆಗಳ ಹೊರತಾಗಿಯೂ, ನಿಮ್ಮ ಎಲ್ಲಾ ಸ್ವಯಿಚ್ಛೆಯ ಕಾಣಿಕೆಗಳ ಹೊರತಾಗಿಯೂ ಸಲ್ಲಿಸಬೇಕಾದ ಅರ್ಪಣೆಗಳಿರುತ್ತವೆ. [PE]
39. [PS]“ ‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಭೂಮಿಯ ಫಲವನ್ನು ಕೂಡಿಸಿದಾಗ, ಯೆಹೋವ ದೇವರಿಗೆ ಏಳು ದಿವಸಗಳ ಹಬ್ಬವನ್ನು ಕೈಗೊಳ್ಳಬೇಕು. ಮೊದಲನೆಯ ದಿನವು ಸಬ್ಬತ್ ದಿನವಾಗಿರಬೇಕು ಮತ್ತು ಎಂಟನೆಯ ದಿನವು ಸಬ್ಬತ್ ದಿನವಾಗಿರಬೇಕು.
40. ಮೊದಲನೆಯ ದಿವಸದಲ್ಲಿ ನೀವು ಸುಂದರವಾದ ಮರಗಳ ರೆಂಬೆಗಳನ್ನೂ, ಖರ್ಜೂರ ಮರಗಳ ರೆಂಬೆಗಳನ್ನೂ, ದಟ್ಟವಾದ ಮರಗಳ ರೆಂಬೆಗಳನ್ನೂ, ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳವರೆಗೆ ನಿಮ್ಮ ದೇವರಾಗಿರುವ ಯೆಹೋವ ದೇವರ ಎದುರಿನಲ್ಲಿ ಸಂತೋಷ ಪಡಬೇಕು.
41. ವರ್ಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಯೆಹೋವ ದೇವರಿಗಾಗಿ ಕೈಗೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು.
42. ಏಳು ದಿವಸಗಳವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು. ಸ್ವದೇಶೀಯರಾದ ಇಸ್ರಾಯೇಲರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸಬೇಕು.
43. ಏಕೆಂದರೆ ನಾನು ಇಸ್ರಾಯೇಲರನ್ನು ಈಜಿಪ್ಟ್ ದೇಶದೊಳಗಿನಿಂದ ಹೊರಗೆ ಬರಮಾಡಿದಾಗ, ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ” [PE]
44. [PS]ಹೀಗೆ ಮೋಶೆಯು ಇಸ್ರಾಯೇಲರಿಗೆ ಯೆಹೋವ ದೇವರ ಹಬ್ಬಗಳನ್ನು ನೇಮಕಮಾಡಿದನು. [PE]
ಒಟ್ಟು 27 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 23 / 27
ಆಚರಿಸಬೇಕಾದ ಹಬ್ಬಗಳು 1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, 2 “ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನೀವು ಪರಿಶುದ್ಧ ಸಭೆಗಳಾಗಿ ಸೇರಿ ಯೆಹೋವ ದೇವರಾಗಿರುವ ನನಗೋಸ್ಕರ ನೇಮಕವಾದ ಈ ಹಬ್ಬಗಳನ್ನು ಪ್ರಕಟಿಸಬೇಕು. ಸಬ್ಬತ್ ದಿನ 3 4 “ ‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು. ಪಸ್ಕಹಬ್ಬ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ “ ‘ಇವು ಯೆಹೋವ ದೇವರ ಹಬ್ಬಗಳು: ನೀವು ನೇಮಕವಾದ ಕಾಲಗಳಲ್ಲಿ ನಿಮ್ಮ ಪವಿತ್ರ ಸಭಾ ಕೂಟಗಳಲ್ಲಿ ಈ ಹಬ್ಬಗಳನ್ನು ಪ್ರಕಟಿಸಬೇಕು. 5 ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಲ್ಲಿ ಯೆಹೋವ ದೇವರ ಪಸ್ಕಹಬ್ಬವಾಗಬೇಕು. 6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಯೆಹೋವ ದೇವರಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. 7 ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ. 8 ಆದರೆ ಏಳು ದಿವಸ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ಪರಿಶುದ್ಧ ಸಭಾಕೂಟವಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.’ ” ಸುಗ್ಗಿಯ ಪ್ರಥಮ ಫಲ 9 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, 10 “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು. 11 ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಅರ್ಪಿಸಬೇಕು. ಸಬ್ಬತ್ ದಿನವಾದ ಮಾರನೆಯ ದಿನ ಯಾಜಕನು ಅದನ್ನು ಅರ್ಪಿಸಬೇಕು. 12 ನೀವು ಸಿವುಡನ್ನು ಅರ್ಪಿಸುವ ದಿನದಲ್ಲಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂತೆ ಒಂದು ವರ್ಷದ ಮತ್ತು ಕಳಂಕರಹಿತವಾದ ಕುರಿಮರಿಯನ್ನು ಅರ್ಪಿಸಬೇಕು. 13 ಇದರೊಂದಿಗೆ, ಧಾನ್ಯ ಸಮರ್ಪಣೆಯಲ್ಲಿ ಬೆರೆಸಿದ ಎಣ್ಣೆ ಮತ್ತು ಮೂರು ಕಿಲೋಗ್ರಾಂ* ಹೀಬ್ರೂ ಭಾಷೆಯಲ್ಲಿ ಎಫಾದ ಹತ್ತನೇ ಎರಡು ಭಾಗ, ಅಂದರೆ ಸುಮಾರು 3.2 ಕಿಲೋಗ್ರಾಂ ನಯವಾದ ಹಿಟ್ಟನ್ನು ಆಹ್ಲಾದಕರವಾದ ಪರಿಮಳದ ರೂಪದಲ್ಲಿ ಯೆಹೋವ ದೇವರಿಗೆ ಅರ್ಪಿಸಬೇಕು. ಇದಲ್ಲದೆ ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಸುಮಾರು ಒಂದು ಲೀಟರ್ † ಹೀಬ್ರೂ ಭಾಷೆಯಲ್ಲಿ ಒಂದು ಹಿನ್ ನಾಲ್ಕನೆಯ ಒಂದು ಭಾಗ, ಅಂದರೆ ಸುಮಾರು 1 ಲೀಟರ್ ದ್ರಾಕ್ಷಾರಸ ಆಗಿರಬೇಕು. 14 ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಬಲಿಯನ್ನು ತರುವವರೆಗೆ ರೊಟ್ಟಿಯನ್ನಾಗಲಿ, ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿಯೂ ಶಾಶ್ವತವಾದ ನಿಯಮವಾಗಿರಬೇಕು. ವಾರಗಳ ಹಬ್ಬ 15 “ ‘ಸಬ್ಬತ್ ದಿನದ ಮಾರನೆಯ ದಿನ ನೀವು ನೈವೇದ್ಯವಾಗಿ ನಿವಾಳಿಸಿದ ಸಿವುಡನ್ನು ತಂದ ದಿನದಿಂದ ಏಳು ವಾರಗಳು ಪೂರ್ಣವಾಗುವವರೆಗೆ ಲೆಕ್ಕಿಸಬೇಕು. 16 ಏಳನೆಯ ಸಬ್ಬತ್ ದಿನದ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಯೆಹೋವ ದೇವರಿಗೆ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸಬೇಕು. 17 ಇದಲ್ಲದೆ ನೀವು ನಿಮ್ಮ ಮನೆಗಳಿಂದ ತಂದ ಹಿಟ್ಟಿನಲ್ಲಿ ಎರಡೆರಡು ಓಮರ್ ಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋಧಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವ ದೇವರಿಗೆ ನೈವೇದ್ಯವಾಗಿ ನಿವಾಳಿಸಬೇಕು. 18 ಇದಲ್ಲದೆ ನೀವು ರೊಟ್ಟಿಯೊಂದಿಗೆ ಕಳಂಕರಹಿತವಾದ ಒಂದು ವರ್ಷದ ಏಳು ಕುರಿಮರಿಗಳನ್ನೂ ಒಂದು ಎಳೆಯ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಅವು ಯೆಹೋವ ದೇವರಿಗೆ ದಹನಬಲಿಗಳಾಗುವುವು. ಅವುಗಳೊಂದಿಗೆ ಆಹಾರ ಬಲಿಯು ಮತ್ತು ಪಾನಾರ್ಪಣೆಗಳು, ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು. 19 ತರುವಾಯ ಹೋತವನ್ನು ಪಾಪ ಪರಿಹಾರದ ಬಲಿಯಾಗಿಯೂ ಮತ್ತು ಸಮಾಧಾನ ಬಲಿಯಾಗಿ ಒಂದು ವರ್ಷದ ಎರಡು ಕುರಿಮರಿಗಳನ್ನು ಬಲಿಯಾಗಿ ಅರ್ಪಿಸಬೇಕು. 20 ಯಾಜಕನು ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಥಮ ಫಲದ ರೊಟ್ಟಿಯೊಂದಿಗೂ, ಎರಡು ಕುರಿಮರಿಗಳೊಂದಿಗೂ ಅವುಗಳನ್ನು ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವ ದೇವರಿಗೆ ಪರಿಶುದ್ಧವಾಗಿದ್ದು ಯಾಜಕನಿಗೋಸ್ಕರ ಇರಬೇಕು. 21 ಅದೇ ದಿನದಲ್ಲಿ ಪವಿತ್ರ ಸಭೆ ಕೂಡುವುದೆಂದು ಪ್ರಕಟಿಸಬೇಕು ಮತ್ತು ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ, ನೀವು ಎಲ್ಲೇ ಇದ್ದರೂ ಪಾಲಿಸಬೇಕಾದ ಶಾಶ್ವತ ನಿಯಮ. 22 23 “ ‘ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು, ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನೂ ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ” ತುತೂರಿಗಳ ಹಬ್ಬ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, 24 “ಇಸ್ರಾಯೇಲರೊಂದಿಗೆ ಮಾತನಾಡಿ: ‘ಏಳನೆಯ ತಿಂಗಳಿನಲ್ಲಿ ಮೊದಲನೆಯ ದಿನದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥವಾದ ಸಬ್ಬತ್ ದಿನವಾಗಿರಬೇಕು. ಆ ದಿನ ಪರಿಶುದ್ಧ ಸಭೆಯ ಕೂಟವೂ ಇರಬೇಕು. 25 ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ದಹನಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು,’ ” ಎಂದು ಹೇಳಿದರು. ಪ್ರಾಯಶ್ಚಿತ್ತದ ದಿನ 26 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, 27 “ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿರುವುದು. ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವುದು. ನೀವು ಉಪವಾಸ ಮಾಡಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು. 28 ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಏಕೆಂದರೆ ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿರುವುದು. 29 ಅದೇ ದಿವಸದಲ್ಲಿ ಯಾರಾದರೂ ಉಪವಾಸ ಮಾಡದೆ ಇದ್ದಲ್ಲಿ, ಅವರು ತಮ್ಮ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು. 30 ಅದೇ ದಿವಸದಲ್ಲಿ ಯಾರಾದರೂ ಕೆಲಸವನ್ನು ಮಾಡಿದರೆ, ಅವರನ್ನು ನಾನು ಅವರ ಜನರ ಮಧ್ಯದಿಂದ ನಾಶಮಾಡುವೆನು. 31 ನೀವು ಯಾವ ತರಹದ ಕೆಲಸವನ್ನೂ ಮಾಡಬಾರದು. ಇದು ನಿಮ್ಮ ಸಂತತಿಗೆ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. 32 ಇದು ನಿಮಗೆ ಸಬ್ಬತ್ ದಿನವಾಗಿರುವುದು. ನೀವು ನಿಮ್ಮನ್ನು ಉಪವಾಸ ಇಡಬೇಕು. ಆ ತಿಂಗಳಿನ ಒಂಬತ್ತನೆಯ ದಿವಸದ ಸಾಯಂಕಾಲದಿಂದ ಹಿಡಿದು ಮರುದಿನದ ಸಂಜೆಯವರೆಗೆ ಸಬ್ಬತ್ ದಿನವನ್ನು ಆಚರಿಸಬೇಕು,” ಎಂಬದೇ. ಗುಡಾರಗಳ ಹಬ್ಬ 33 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, 34 “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳವರೆಗೆ ಯೆಹೋವ ದೇವರಿಗೆ ಗುಡಾರಗಳ ಹಬ್ಬವಾಗಿರುವುದು. 35 ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವುದು. ನೀವು ಅದರಲ್ಲಿ ಕಷ್ಟಕರವಾದ ಕೆಲಸಗಳನ್ನು ಮಾಡಬಾರದು. 36 ಏಳು ದಿವಸ ನೀವು ಬೆಂಕಿಯ ಮೂಲಕ ಬಲಿಗಳನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿಶುದ್ಧ ಕೂಟವಾಗಿರುವುದು. ನೀವು ಬೆಂಕಿಯ ಮೂಲಕ ಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಅದೊಂದು ಗಂಭೀರ ಸಭೆಯಾಗಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸಗಳನ್ನು ಮಾಡಬಾರದು. 37 “ ‘ನೀವು ಪರಿಶುದ್ಧ ಸಭೆಯಾಗಿ ಯೆಹೋವ ದೇವರ ನೇಮಕವಾದ ಹಬ್ಬಗಳು ಇವೇ. ಇವುಗಳ ಒಂದೊಂದು ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಯನ್ನೂ, ಧಾನ್ಯ ಸಮರ್ಪಣೆಯನ್ನೂ, ಯಜ್ಞವನ್ನೂ, ಪಾನದ್ರವ್ಯ ಬಲಿಗಳನ್ನೂ ಅರ್ಪಿಸಬೇಕು. 38 ಯೆಹೋವ ದೇವರ ವಿಶ್ರಾಂತಿಯ ದಿನಗಳ ಹೊರತಾಗಿಯೂ, ನೀವು ಯೆಹೋವ ದೇವರಿಗೆ ಸಮರ್ಪಿಸುವ ನಿಮ್ಮ ದಾನಗಳ ಹೊರತಾಗಿಯೂ, ನಿಮ್ಮ ಎಲ್ಲಾ ಹರಕೆಗಳ ಹೊರತಾಗಿಯೂ, ನಿಮ್ಮ ಎಲ್ಲಾ ಸ್ವಯಿಚ್ಛೆಯ ಕಾಣಿಕೆಗಳ ಹೊರತಾಗಿಯೂ ಸಲ್ಲಿಸಬೇಕಾದ ಅರ್ಪಣೆಗಳಿರುತ್ತವೆ. 39 “ ‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಭೂಮಿಯ ಫಲವನ್ನು ಕೂಡಿಸಿದಾಗ, ಯೆಹೋವ ದೇವರಿಗೆ ಏಳು ದಿವಸಗಳ ಹಬ್ಬವನ್ನು ಕೈಗೊಳ್ಳಬೇಕು. ಮೊದಲನೆಯ ದಿನವು ಸಬ್ಬತ್ ದಿನವಾಗಿರಬೇಕು ಮತ್ತು ಎಂಟನೆಯ ದಿನವು ಸಬ್ಬತ್ ದಿನವಾಗಿರಬೇಕು. 40 ಮೊದಲನೆಯ ದಿವಸದಲ್ಲಿ ನೀವು ಸುಂದರವಾದ ಮರಗಳ ರೆಂಬೆಗಳನ್ನೂ, ಖರ್ಜೂರ ಮರಗಳ ರೆಂಬೆಗಳನ್ನೂ, ದಟ್ಟವಾದ ಮರಗಳ ರೆಂಬೆಗಳನ್ನೂ, ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳವರೆಗೆ ನಿಮ್ಮ ದೇವರಾಗಿರುವ ಯೆಹೋವ ದೇವರ ಎದುರಿನಲ್ಲಿ ಸಂತೋಷ ಪಡಬೇಕು. 41 ವರ್ಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಯೆಹೋವ ದೇವರಿಗಾಗಿ ಕೈಗೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು. 42 ಏಳು ದಿವಸಗಳವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು. ಸ್ವದೇಶೀಯರಾದ ಇಸ್ರಾಯೇಲರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸಬೇಕು. 43 ಏಕೆಂದರೆ ನಾನು ಇಸ್ರಾಯೇಲರನ್ನು ಈಜಿಪ್ಟ್ ದೇಶದೊಳಗಿನಿಂದ ಹೊರಗೆ ಬರಮಾಡಿದಾಗ, ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ” 44 ಹೀಗೆ ಮೋಶೆಯು ಇಸ್ರಾಯೇಲರಿಗೆ ಯೆಹೋವ ದೇವರ ಹಬ್ಬಗಳನ್ನು ನೇಮಕಮಾಡಿದನು.
ಒಟ್ಟು 27 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 23 / 27
×

Alert

×

Kannada Letters Keypad References