ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಲೂಕನು
1. {#1ಪೀಠಿಕೆ } [PS]ಸನ್ಮಾನ್ಯ ಥೆಯೊಫಿಲರೇ, ನಮ್ಮ ಮಧ್ಯದಲ್ಲಿ ನಡೆದಿರುವ ಘಟನೆಗಳ ವರದಿಯನ್ನು ಬರೆದಿಡಲು ಅನೇಕರು ಪ್ರಯತ್ನಿಸಿದ್ದಾರೆ.
2. ಮೊದಲಿನಿಂದ ಕಣ್ಣಾರೆ ಕಂಡವರೂ ದೇವರ ವಾಕ್ಯದ ಸೇವಕರೂ ನಮಗೆ ಕೊಟ್ಟಿರುವ ರೀತಿಯಲ್ಲಿಯೇ ಬರೆದಿದ್ದಾರೆ.
3. ಆದ್ದರಿಂದ ನಾನು ಸಹ ಮೊದಲಿನಿಂದ ಎಲ್ಲವನ್ನೂ ಸೂಕ್ಷ್ಮವಾಗಿ ಪರಿಶೋಧಿಸಿ, ಅವುಗಳನ್ನು ಕ್ರಮವಾಗಿ ನಿಮಗೆ ಬರೆಯುವುದು ಒಳ್ಳೆಯದೆಂದು ನನಗೆ ತೋಚಿತು.
4. ಹೀಗೆ ನಿಮಗೆ ಬೋಧಿಸಿರುವ ವಿಷಯಗಳು ಖಚಿತವೆಂದು ನಿಮಗೆ ತಿಳಿದುಬರುವುದು. [PE]
5. {#1ಸ್ನಾನಿಕ ಯೋಹಾನನ ಜನನವನ್ನು ಮುಂತಿಳಿಸಿದ್ದು } [PS]ಯೂದಾಯದ ಅರಸನಾಗಿದ್ದ ಹೆರೋದನ ದಿನಗಳಲ್ಲಿ, ಅಬೀಯನ ವರ್ಗಕ್ಕೆ[* 24 ಯಾಜಕ ವರ್ಗದಲ್ಲಿ ಅಬೀಯನ ವರ್ಗವು ಒಂದಾಗಿತ್ತು. ಅಬೀಯನು ಎಂಟನೆಯ ವರ್ಗದ ಮುಖ್ಯಸ್ಥನಾಗಿದ್ದನು 1 ಪೂರ್ವ 24:7-18 ] ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಹೆಂಡತಿಯ ಹೆಸರು ಎಲಿಸಬೇತ್. ಇವಳು ಆರೋನನ ವಂಶದವಳು.
6. ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.
7. ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ, ಇದಲ್ಲದೆ ಅವರಿಬ್ಬರೂ ಬಹಳ ವಯಸ್ಸಾದವರಾಗಿದ್ದರು. [PE]
8. [PS]ಹೀಗಿರಲಾಗಿ ಜಕರೀಯನು ತನ್ನ ವರ್ಗದ ಸರದಿಯ ಪ್ರಕಾರ ದೇವರ ಮುಂದೆ ಯಾಜಕ ಸೇವೆಯನ್ನು ಮಾಡುತ್ತಿದ್ದಾಗ,
9. ಯಾಜಕೋದ್ಯೋಗದ ಪದ್ಧತಿಯಂತೆ, ಅವನು ಕರ್ತದೇವರ ಆಲಯವನ್ನು ಪ್ರವೇಶಿಸಿ ಧೂಪವನ್ನು ಅರ್ಪಿಸುವದಕ್ಕೆ ಚೀಟು ಹಾಕಿದಾಗ, ಅದು ಅವನ ಪಾಲಿಗೆ ಬಿದ್ದಿತು.
10. ಧೂಪಾರ್ಪಣೆಯ ಸಮಯದಲ್ಲಿ ಸೇರಿದ ಜನರೆಲ್ಲರೂ ಹೊರಗೆ ಪ್ರಾರ್ಥಿಸುತ್ತಿದ್ದರು. [PE]
11. [PS]ಆಗ ಧೂಪವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ, ಕರ್ತದೇವರ ದೂತನು ಅವನಿಗೆ ಕಾಣಿಸಿಕೊಂಡನು.
12. ಜಕರೀಯನು ದೂತನನ್ನು ಕಂಡು, ಚಕಿತಗೊಂಡು ಭಯಭ್ರಾಂತನಾದನು.
13. ಆದರೆ ದೂತನು ಅವನಿಗೆ, “ಜಕರೀಯನೇ; ಭಯಪಡಬೇಡ, ದೇವರು ನಿನ್ನ ವಿಜ್ಞಾಪನೆಯನ್ನು ಕೇಳಿದ್ದಾರೆ. ನಿನ್ನ ಹೆಂಡತಿ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು, ನೀನು ಅವನಿಗೆ, ‘ಯೋಹಾನ’[† ಯೋಹಾನ ಅಂದರೆ, ದೇವರ ದಯೆಯುಳ್ಳವನು ] ಎಂದು ಹೆಸರನ್ನಿಡಬೇಕು.
14. ಅನೇಕರು ಅವನ ಜನನಕ್ಕೆ ಸಂತೋಷಪಡುವರು, ನಿನಗೆ ಆನಂದವೂ ಉಲ್ಲಾಸವೂ ಆಗುವುದು,
15. ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.
16. ಅವನು ಇಸ್ರಾಯೇಲರಲ್ಲಿ ಅನೇಕರನ್ನು ಅವರ ಕರ್ತದೇವರ ಕಡೆಗೆ ತಿರುಗಿಸುವನು.
17. ಅವನು ತಂದೆಯರ ಹೃದಯಗಳನ್ನು ಮಕ್ಕಳ ಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತ ದೇವರಿಗೋಸ್ಕರ ಜನರನ್ನು ಸಿದ್ಧಮಾಡುವುದಕ್ಕೆ ಎಲೀಯನ ಆತ್ಮದಿಂದಲೂ ಶಕ್ತಿಯಿಂದಲೂ ಕರ್ತದೇವರ ಮುಂದೆ ಹೋಗುವನು,” ಎಂದು ಹೇಳಿದನು. [PE]
18.
19. [PS]ಜಕರೀಯನು ಆ ದೇವದೂತನಿಗೆ, “ಇದನ್ನು ನಾನು ಯಾವುದರಿಂದ ತಿಳಿದುಕೊಳ್ಳಲಿ? ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯ ಮೀರಿದವಳು,” ಎಂದನು. [PE][PS]ಅದಕ್ಕೆ ಆ ದೂತನು ಉತ್ತರವಾಗಿ, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು. ನಿನ್ನ ಸಂಗಡ ಮಾತನಾಡುವುದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾರೆ.
20. ಸಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದಕಾರಣ, ಈ ಸಂಗತಿಗಳು ಈಡೇರುವ ದಿನದವರೆಗೆ ನೀನು ಮಾತನಾಡಲಾರದೆ ಮೂಕನಾಗಿರುವಿ,” ಎಂದನು. [PE]
21. [PS]ಆಗ, ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
22. ಜಕರೀಯನು ಹೊರಗೆ ಬಂದಾಗ, ಅವರೊಂದಿಗೆ ಏನೂ ಮಾತನಾಡಲಾಗಲಿಲ್ಲ. ಅವನು ಅವರಿಗೆ ಸನ್ನೆಮಾಡುತ್ತಾ ಮೂಕನಾಗಿಯೇ ಇದ್ದುದರಿಂದ, ಅವರು ದೇವಾಲಯದಲ್ಲಿ ಅವನಿಗೆ ಏನೋ ದರ್ಶನವಾಗಿರಬೇಕೆಂದು ಗ್ರಹಿಸಿದರು. [PE]
23. [PS]ತನ್ನ ಸೇವೆಯ ದಿನಗಳು ಮುಗಿದ ನಂತರ, ಜಕರೀಯನು ತನ್ನ ಮನೆಗೆ ಹೊರಟುಹೋದನು.
24. ಕೆಲವು ದಿನಗಳಾದ ಮೇಲೆ, ಅವನ ಹೆಂಡತಿ ಎಲಿಸಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು.
25. ಅವಳು, “ಜನರಲ್ಲಿ ನನಗಿದ್ದ ಅವಮಾನವನ್ನು ತೆಗೆದುಹಾಕುವುದಕ್ಕಾಗಿ ಕರ್ತದೇವರು ನನ್ನ ಮೇಲೆ ದಯೆತೋರಿಸಿ ಈ ದಿನಗಳಲ್ಲಿ ನನಗೆ ಹೀಗೆ ಮಾಡಿದ್ದಾರೆ,” ಎಂದು ಹೇಳಿದಳು. [PE]
26. {#1ದೇವದೂತನು ಯೇಸುವಿನ ಜನನವನ್ನು ಮುಂತಿಳಿಸಿದ್ದು } [PS]ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ಗಲಿಲಾಯ ಪ್ರಾಂತದ ನಜರೇತೆಂಬ ಊರಿಗೆ, ದೇವರು ಗಬ್ರಿಯೇಲನೆಂಬ ದೇವದೂತನನ್ನು,
27. ದಾವೀದನ ವಂಶದ ಯೋಸೇಫನಿಗೆ, ನಿಶ್ಚಯವಾಗಿದ್ದ ಮರಿಯಳೆಂಬ ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದರು.
28. ಆ ದೇವದೂತನು ಆಕೆಗೆ, “ಅತ್ಯಂತ ದಯೆ ಹೊಂದಿದವಳೇ! ನಿನಗೆ ಶುಭವಾಗಲಿ, ಪ್ರಭುವು ನಿನ್ನೊಂದಿಗಿದ್ದಾರೆ,” ಎಂದು ಹೇಳಿದನು. [PE]
29. [PS]ಮರಿಯಳು ದೇವದೂತನ ಮಾತಿಗೆ ಬಹಳವಾಗಿ ಕಳವಳಗೊಂಡು, “ಇದು ಎಂಥಾ ಶುಭಾಶಯ?” ಎಂದು ತನ್ನ ಮನದಲ್ಲಿ ಯೋಚಿಸತೊಡಗಿದಳು.
30. ಆ ದೇವದೂತನು ಆಕೆಗೆ, “ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ.
31. ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’[‡ ಯೇಸು ಅಂದರೆ, ಪ್ರಭುವು ರಕ್ಷಿಸುವನು ] ಎಂದು ಹೆಸರಿಡಬೇಕು.
32. ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು.
33. ಅವರು ಯಾಕೋಬನ ವಂಶವನ್ನು ಸದಾಕಾಲ ಆಳುವರು; ಅವರ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ,” ಎಂದು ಹೇಳಿದನು. [PE]
34.
35. [PS]ಮರಿಯಳು ಆ ದೇವದೂತನಿಗೆ, “ಇದು ಹೇಗಾಗುವುದು, ನಾನು ಕನ್ಯೆ?” ಎಂದಳು. [PE][PS]ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು.
36. ನಿನ್ನ ಬಂಧು ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಒಬ್ಬ ಮಗನನ್ನು ಹೆರಲಿದ್ದಾಳೆ. ಬಂಜೆಯಾಗಿದ್ದ ಆಕೆಗೆ ಇದು ಆರನೆಯ ತಿಂಗಳು.
37. ದೇವರಿಂದ ಬರುವ ಯಾವ ತಕ್ಕ ಮಾತು ಎಂದಿಗೂ ಅಸಾಧ್ಯವಾಗಿರುವುದಿಲ್ಲ,” ಎಂದು ಹೇಳಿದನು. [PE]
38.
39. [PS]ಮರಿಯಳು, “ಇಗೋ ನಾನು ಕರ್ತದೇವರ ದಾಸಿ, ನಿನ್ನ ತಕ್ಕ ಮಾತಿನಂತೆ ನನಗಾಗಲಿ,” ಎಂದಳು. ಆಗ ದೇವದೂತನು ಆಕೆಯ ಬಳಿಯಿಂದ ಹೊರಟುಹೋದನು. [PE]{#1ಮರಿಯಳು ಎಲಿಸಬೇತಳನ್ನು ಸಂಧಿಸಿದ್ದು } [PS]ಆ ಕಾಲದಲ್ಲಿ ಮರಿಯಳು ಬೆಟ್ಟದ ಸೀಮೆಯ ಯೆಹೂದದಲ್ಲಿರುವ ಒಂದು ಊರಿಗೆ ಅವಸರವಾಗಿ ಹೊರಡಲು ಸಿದ್ಧಳಾದಳು.
40. ಅಲ್ಲಿ ಜಕರೀಯನ ಮನೆಯನ್ನು ಪ್ರವೇಶಿಸಿ, ಎಲಿಸಬೇತಳನ್ನು ವಂದಿಸಿದಳು.
41. ಮರಿಯಳ ವಂದನೆಯನ್ನು ಕೇಳಿದಾಗ, ಎಲಿಸಬೇತಳ ಗರ್ಭದಲ್ಲಿದ್ದ ಕೂಸು ನಲಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮ ಭರಿತಳಾಗಿ
42. ಮಹಾಧ್ವನಿಯಿಂದ: “ಸ್ತ್ರೀಯರಲ್ಲಿ ನೀನು ಧನ್ಯಳೇ, ನಿನ್ನಲ್ಲಿ ಹುಟ್ಟುವ ಶಿಶುವೂ ಆಶೀರ್ವಾದ ಹೊಂದಿದ್ದು!
43. ನನ್ನ ಕರ್ತದೇವರ ತಾಯಿಯು, ನನ್ನ ಬಳಿಗೆ ಬರುವಷ್ಟು ನಾನು ದಯೆ ಹೊಂದಿದ್ದು ಏಕೆ?
44. ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿಗಳಲ್ಲಿ ಬಿದ್ದ ಕೂಡಲೇ, ಶಿಶುವು ನನ್ನ ಗರ್ಭದಲ್ಲಿ ಉಲ್ಲಾಸದಿಂದ ನಲಿದಾಡಿತು.
45. ಕರ್ತದೇವರು ತಮಗೆ ಹೇಳಿದವುಗಳು ನೆರವೇರುವುವು ಎಂದು ನಂಬಿದವಳು ಧನ್ಯಳು,” ಎಂದು ಹೇಳಿದಳು. [PE]
46. {#1ಮರಿಯಳ ಹಾಡು } [PS]ಆಗ ಮರಿಯಳು ಹೀಗೆ ಹೇಳಿದ್ದು: [PE][QS]“ನನ್ನ ಪ್ರಾಣವು ಕರ್ತದೇವರನ್ನು ಸ್ತುತಿಸುತ್ತದೆ, [QE]
2. [QS2]ನನ್ನ ಆತ್ಮವು ನನ್ನ ರಕ್ಷಕ ದೇವರಲ್ಲಿ ಉಲ್ಲಾಸಗೊಂಡಿದೆ. [QE]
48. [QS]ದೇವರು ತಮ್ಮ ದಾಸಿಯ [QE][QS2]ದೀನಸ್ಥಿತಿಯನ್ನು ಲಕ್ಷಿಸಿದ್ದಾರೆ. [QE][QS]ಇಂದಿನಿಂದ ತಲತಲಾಂತರದವರೆಲ್ಲರೂ ನನ್ನನ್ನು ಧನ್ಯಳೆಂದು ಕರೆಯುವರು, [QE]
2. [QS2]ಪರಾಕ್ರಮಿಯಾದ ದೇವರು ನನಗೆ ಮಹಾಕಾರ್ಯಗಳನ್ನು ಮಾಡಿದ್ದಾರೆ, [QE][QS2]ಅವರ ಹೆಸರು ಪವಿತ್ರವಾದದ್ದು. [QE]
50. [QS]ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ, [QE][QS2]ಅವರ ಕರುಣೆಯು ತಲತಲಾಂತರಗಳಿಗೂ ಇರುವುದು. [QE]
51. [QS]ದೇವರು ತಮ್ಮ ಭುಜಪರಾಕ್ರಮವನ್ನು ಮಾಡಿ; [QE][QS2]ಹೃದಯದ ಯೋಚನೆಯಲ್ಲಿ ಗರ್ವಿಷ್ಠರಾದವರನ್ನು ಚದರಿಸಿಬಿಟ್ಟಿದ್ದಾರೆ. [QE]
52. [QS]ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗೆ ದಬ್ಬಿ, [QE][QS2]ದೀನರನ್ನು ಮೇಲಕ್ಕೆ ಎತ್ತಿದ್ದಾರೆ. [QE]
53. [QS]ಹಸಿದವರನ್ನು ಒಳ್ಳೆಯವುಗಳಿಂದ ತುಂಬಿಸಿ, [QE][QS2]ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾರೆ. [QE]
54. [QS](54-55)ನಮ್ಮ ಪಿತೃಗಳಾದ [QE][QS2]ಅಬ್ರಹಾಮನಿಗೂ ಅವನ ಸಂತತಿಗೂ [QE][QS]ತಾವು ವಾಗ್ದಾನಮಾಡಿದ ತಮ್ಮ ನಿತ್ಯ ಕರುಣೆಯನ್ನು [QE][QS2]ಜ್ಞಾಪಕಮಾಡಿಕೊಂಡು, ತಮ್ಮ ಸೇವಕನಾದ ಇಸ್ರಾಯೇಲನಿಗೆ, ದೇವರು ಸಹಾಯ ಮಾಡಿದ್ದಾರೆ.” [QE]
55.
56.
57. [PS]ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಜೊತೆಯಲ್ಲಿದ್ದು, ಅನಂತರ ತನ್ನ ಮನೆಗೆ ಹಿಂತಿರುಗಿ ಹೋದಳು. [PE]{#1ಸ್ನಾನಿಕ ಯೋಹಾನನ ಜನನ } [PS]ಎಲಿಸಬೇತಳಿಗೆ ಹೆರಿಗೆಯ ಕಾಲ ಬಂದಾಗ, ಆಕೆಯು ಒಬ್ಬ ಮಗನನ್ನು ಹೆತ್ತಳು.
58. ಕರ್ತದೇವರು ತಮ್ಮ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಯವರೂ ಬಂಧುಗಳೂ ಕೇಳಿ, ಆಕೆಯ ಕೂಡ ಸಂತೋಷಪಟ್ಟರು. [PE]
59. [PS]ಅವರು ಎಂಟನೆಯ ದಿನ ಆ ಮಗುವಿಗೆ ಸುನ್ನತಿ ಮಾಡಿಸುವುದಕ್ಕಾಗಿ ಬಂದು, ಅವನ ತಂದೆಯ ಹೆಸರಿನಂತೆ ಮಗನನ್ನು ಜಕರೀಯನೆಂದು ನಾಮಕರಣ ಮಾಡಲಿದ್ದರು.
60. ಆದರೆ ಅದಕ್ಕೆ ಶಿಶುವಿನ ತಾಯಿಯು ಉತ್ತರವಾಗಿ, “ಹಾಗಲ್ಲ! ಅವನಿಗೆ ‘ಯೋಹಾನ’ ಎಂದು ಹೆಸರಿಡಬೇಕು,” ಎಂದಳು. [PE]
61.
62. [PS]ಬಂದಿದ್ದವರು ಆಕೆಗೆ, “ನಿನ್ನ ಬಂಧುಬಳಗದವರಲ್ಲಿ ಆ ಹೆಸರಿನವರು ಒಬ್ಬರೂ ಇಲ್ಲವಲ್ಲಾ,” ಎಂದರು. [PE][PS]ಶಿಶುವನ್ನು ಯಾವ ಹೆಸರಿನಿಂದ ಕರೆಯಬೇಕೆಂದು, ಅವನ ತಂದೆಗೆ ಅವರು ಸನ್ನೆಮಾಡಿದರು.
63. ಆಗ ಜಕರೀಯನು ಒಂದು ಬರೆಯುವ ಹಲಗೆಯನ್ನು ಕೇಳಿ, “ಶಿಶುವಿನ ಹೆಸರು ಯೋಹಾನ,” ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.
64. ಕೂಡಲೇ ಜಕರೀಯನಿಗೆ ಮಾತು ಬಂತು, ಅವನ ನಾಲಿಗೆಯು ಸಡಿಲವಾಯಿತು, ಅವನು ಮಾತನಾಡಿ, ದೇವರನ್ನು ಕೊಂಡಾಡಿದನು.
65. ಈ ಘಟನೆಯಿಂದ ಸುತ್ತಲೂ ವಾಸಮಾಡುತ್ತಿದ್ದವರೆಲ್ಲರಿಗೆ ಭಯವುಂಟಾಯಿತು, ಯೂದಾಯದ ಬೆಟ್ಟದ ಪ್ರಾಂತದಲ್ಲೆಲ್ಲಾ ಈ ಸಂಗತಿಗಳನ್ನು ಮಾತನಾಡಿಕೊಳ್ಳುತ್ತಿದ್ದರು.
66. ಕೇಳಿದವರೆಲ್ಲರೂ ವಿಸ್ಮಯಗೊಂಡು, “ಈ ಮಗುವು ಎಂಥವನಾಗುವನೋ?” ಎಂದು ತಮ್ಮ ಮನಸ್ಸಿನಲ್ಲಿ ಪ್ರಶ್ನಿಸಿಕೊಂಡರು. ಕರ್ತದೇವರ ಹಸ್ತವು ಈ ಮಗುವಿನ ಮೇಲೆ ಇತ್ತು. [PE]
67. {#1ಜಕರೀಯನ ಹಾಡು }
68. [PS]ಆಗ ಮಗುವಿನ ತಂದೆ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು: [PE][QS]“ಇಸ್ರಾಯೇಲಿನ ಕರ್ತದೇವರಿಗೆ ಸ್ತೋತ್ರವಾಗಲಿ, [QE][QS2]ದೇವರು ತಮ್ಮ ಜನರನ್ನು ಸಂಧಿಸಿ ಅವರನ್ನು ವಿಮೋಚಿಸಿದ್ದಾರೆ. [QE]
69. [QS](69-70)ಪುರಾತನದಿಂದ ಅವರು ತಮ್ಮ [QE][QS2]ಪವಿತ್ರ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ, [QE][QS]ದೇವರು ತಮ್ಮ ಸೇವಕ ದಾವೀದನ ಮನೆತನದಿಂದ, [QE][QS2]ನಮಗಾಗಿ ಬಲವಾದ ರಕ್ಷಣೆಯ[§ ಮೂಲಭಾಷೆಯಲ್ಲಿ ರಕ್ಷಣೆಯ ಕೊಂಬು. ಕೊಂಬು ಇದು ಬಲವಾದ ರಾಜನ ಪ್ರತೀಕವಾಗಿದೆ ] ಕರ್ತದೇವರನ್ನು ಎಬ್ಬಿಸಿದ್ದಾರೆ. [QE]
70.
71. [QS]ಇದನ್ನು, ನಾವು ನಮ್ಮ ಶತ್ರುಗಳಿಂದಲೂ [QE][QS2]ನಮ್ಮನ್ನು ದ್ವೇಷಮಾಡುವವರ ಕೈಯಿಂದಲೂ ರಕ್ಷಣೆ ಹೊಂದುವಂತೆಯೂ [QE]
72. [QS](72-73)ನಮ್ಮ ಪಿತೃಗಳಿಗೆ ಕರುಣೆ ತೋರಿಸುವಂತೆಯೂ [QE][QS2]ನಮ್ಮ ಪಿತೃವಾದ ಅಬ್ರಹಾಮನಿಗೆ [QE][QS2]ಆಣೆಯಿಟ್ಟು ಪ್ರಮಾಣ ಮಾಡಿದಂತೆಯೂ [QE][QS2]ತಮ್ಮ ಪವಿತ್ರ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡವನಾಗಿಯೂ [QE]
73.
74. [QS]ನಾವು ನಮ್ಮ ಶತ್ರುಗಳ ಕೈಯಿಂದ ಬಿಡುಗಡೆಹೊಂದಿ ನಿರ್ಭಯವುಳ್ಳವರಾಗಿಯೂ [QE]
75. [QS]ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ದೇವರ ಮುಂದೆ ಪವಿತ್ರತೆಯಿಂದಲೂ ನೀತಿಯಿಂದಲೂ [QE][QS2]ಅವರನ್ನೇ ಸೇವಿಸುವವರಾಗುವಂತೆಯೂ ಈ ಪ್ರಕಾರ ಮಾಡಿದ್ದಾರೆ. [QE][PBR] [PBR]
76. [QS]“ನನ್ನ ಮಗುವೇ, ನೀನಾದರೋ ಮಹೋನ್ನತರ ಪ್ರವಾದಿ ಎಂದು ಎನಿಸಿಕೊಳ್ಳುವೆ. [QE][QS2]ಯಾಕೆಂದರೆ, ನೀನು ಕರ್ತದೇವರ ಮಾರ್ಗಗಳನ್ನು ಸಿದ್ಧಮಾಡುವುದಕ್ಕೆ, ಅವರ ಮುಂದೆ ಹೋಗುವೆ. [QE]
77. [QS]ನೀನು ಜನರ ಪಾಪಕ್ಷಮಾಪಣೆಯ ಮೂಲಕ [QE][QS2]ರಕ್ಷಣೆ ಹೊಂದುವ ತಿಳುವಳಿಕೆಯನ್ನು ಕೊಡುವೆ, [QE]
78. [QS]ನಮ್ಮ ದೇವರ ಮಮತೆಯ ಕರುಣೆಯಿಂದಲೇ, [QE][QS2]ಸ್ವರ್ಗದಿಂದ ನಮಗೆ ಅರುಣೋದಯವು ಉಂಟಾಗಿ [QE]
79. [QS]ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ [QE][QS2]ವಾಸಿಸುವವರಿಗೆ ಪ್ರಕಾಶಿಸಿ, [QE][QS]ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವಂತೆ ಮಾಡುವೆ.” [QE]
80. [PS]ಆ ಶಿಶುವಾದ ಯೋಹಾನನು ಬೆಳೆದು, ಆತ್ಮದಲ್ಲಿ ಬಲಗೊಂಡು; ತನ್ನನ್ನು ಇಸ್ರಾಯೇಲರಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು. [PE]
ಒಟ್ಟು 24 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 24
ಪೀಠಿಕೆ 1 ಸನ್ಮಾನ್ಯ ಥೆಯೊಫಿಲರೇ, ನಮ್ಮ ಮಧ್ಯದಲ್ಲಿ ನಡೆದಿರುವ ಘಟನೆಗಳ ವರದಿಯನ್ನು ಬರೆದಿಡಲು ಅನೇಕರು ಪ್ರಯತ್ನಿಸಿದ್ದಾರೆ. 2 ಮೊದಲಿನಿಂದ ಕಣ್ಣಾರೆ ಕಂಡವರೂ ದೇವರ ವಾಕ್ಯದ ಸೇವಕರೂ ನಮಗೆ ಕೊಟ್ಟಿರುವ ರೀತಿಯಲ್ಲಿಯೇ ಬರೆದಿದ್ದಾರೆ. 3 ಆದ್ದರಿಂದ ನಾನು ಸಹ ಮೊದಲಿನಿಂದ ಎಲ್ಲವನ್ನೂ ಸೂಕ್ಷ್ಮವಾಗಿ ಪರಿಶೋಧಿಸಿ, ಅವುಗಳನ್ನು ಕ್ರಮವಾಗಿ ನಿಮಗೆ ಬರೆಯುವುದು ಒಳ್ಳೆಯದೆಂದು ನನಗೆ ತೋಚಿತು. 4 ಹೀಗೆ ನಿಮಗೆ ಬೋಧಿಸಿರುವ ವಿಷಯಗಳು ಖಚಿತವೆಂದು ನಿಮಗೆ ತಿಳಿದುಬರುವುದು. ಸ್ನಾನಿಕ ಯೋಹಾನನ ಜನನವನ್ನು ಮುಂತಿಳಿಸಿದ್ದು 5 ಯೂದಾಯದ ಅರಸನಾಗಿದ್ದ ಹೆರೋದನ ದಿನಗಳಲ್ಲಿ, ಅಬೀಯನ ವರ್ಗಕ್ಕೆ* 24 ಯಾಜಕ ವರ್ಗದಲ್ಲಿ ಅಬೀಯನ ವರ್ಗವು ಒಂದಾಗಿತ್ತು. ಅಬೀಯನು ಎಂಟನೆಯ ವರ್ಗದ ಮುಖ್ಯಸ್ಥನಾಗಿದ್ದನು 1 ಪೂರ್ವ 24:7-18 ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಹೆಂಡತಿಯ ಹೆಸರು ಎಲಿಸಬೇತ್. ಇವಳು ಆರೋನನ ವಂಶದವಳು. 6 ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು. 7 ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ, ಇದಲ್ಲದೆ ಅವರಿಬ್ಬರೂ ಬಹಳ ವಯಸ್ಸಾದವರಾಗಿದ್ದರು. 8 ಹೀಗಿರಲಾಗಿ ಜಕರೀಯನು ತನ್ನ ವರ್ಗದ ಸರದಿಯ ಪ್ರಕಾರ ದೇವರ ಮುಂದೆ ಯಾಜಕ ಸೇವೆಯನ್ನು ಮಾಡುತ್ತಿದ್ದಾಗ, 9 ಯಾಜಕೋದ್ಯೋಗದ ಪದ್ಧತಿಯಂತೆ, ಅವನು ಕರ್ತದೇವರ ಆಲಯವನ್ನು ಪ್ರವೇಶಿಸಿ ಧೂಪವನ್ನು ಅರ್ಪಿಸುವದಕ್ಕೆ ಚೀಟು ಹಾಕಿದಾಗ, ಅದು ಅವನ ಪಾಲಿಗೆ ಬಿದ್ದಿತು. 10 ಧೂಪಾರ್ಪಣೆಯ ಸಮಯದಲ್ಲಿ ಸೇರಿದ ಜನರೆಲ್ಲರೂ ಹೊರಗೆ ಪ್ರಾರ್ಥಿಸುತ್ತಿದ್ದರು. 11 ಆಗ ಧೂಪವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ, ಕರ್ತದೇವರ ದೂತನು ಅವನಿಗೆ ಕಾಣಿಸಿಕೊಂಡನು. 12 ಜಕರೀಯನು ದೂತನನ್ನು ಕಂಡು, ಚಕಿತಗೊಂಡು ಭಯಭ್ರಾಂತನಾದನು. 13 ಆದರೆ ದೂತನು ಅವನಿಗೆ, “ಜಕರೀಯನೇ; ಭಯಪಡಬೇಡ, ದೇವರು ನಿನ್ನ ವಿಜ್ಞಾಪನೆಯನ್ನು ಕೇಳಿದ್ದಾರೆ. ನಿನ್ನ ಹೆಂಡತಿ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು, ನೀನು ಅವನಿಗೆ, ‘ಯೋಹಾನ’ ಯೋಹಾನ ಅಂದರೆ, ದೇವರ ದಯೆಯುಳ್ಳವನು ಎಂದು ಹೆಸರನ್ನಿಡಬೇಕು. 14 ಅನೇಕರು ಅವನ ಜನನಕ್ಕೆ ಸಂತೋಷಪಡುವರು, ನಿನಗೆ ಆನಂದವೂ ಉಲ್ಲಾಸವೂ ಆಗುವುದು, 15 ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು. 16 ಅವನು ಇಸ್ರಾಯೇಲರಲ್ಲಿ ಅನೇಕರನ್ನು ಅವರ ಕರ್ತದೇವರ ಕಡೆಗೆ ತಿರುಗಿಸುವನು. 17 ಅವನು ತಂದೆಯರ ಹೃದಯಗಳನ್ನು ಮಕ್ಕಳ ಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತ ದೇವರಿಗೋಸ್ಕರ ಜನರನ್ನು ಸಿದ್ಧಮಾಡುವುದಕ್ಕೆ ಎಲೀಯನ ಆತ್ಮದಿಂದಲೂ ಶಕ್ತಿಯಿಂದಲೂ ಕರ್ತದೇವರ ಮುಂದೆ ಹೋಗುವನು,” ಎಂದು ಹೇಳಿದನು. 18 19 ಜಕರೀಯನು ಆ ದೇವದೂತನಿಗೆ, “ಇದನ್ನು ನಾನು ಯಾವುದರಿಂದ ತಿಳಿದುಕೊಳ್ಳಲಿ? ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯ ಮೀರಿದವಳು,” ಎಂದನು. ಅದಕ್ಕೆ ಆ ದೂತನು ಉತ್ತರವಾಗಿ, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು. ನಿನ್ನ ಸಂಗಡ ಮಾತನಾಡುವುದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾರೆ. 20 ಸಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದಕಾರಣ, ಈ ಸಂಗತಿಗಳು ಈಡೇರುವ ದಿನದವರೆಗೆ ನೀನು ಮಾತನಾಡಲಾರದೆ ಮೂಕನಾಗಿರುವಿ,” ಎಂದನು. 21 ಆಗ, ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು. 22 ಜಕರೀಯನು ಹೊರಗೆ ಬಂದಾಗ, ಅವರೊಂದಿಗೆ ಏನೂ ಮಾತನಾಡಲಾಗಲಿಲ್ಲ. ಅವನು ಅವರಿಗೆ ಸನ್ನೆಮಾಡುತ್ತಾ ಮೂಕನಾಗಿಯೇ ಇದ್ದುದರಿಂದ, ಅವರು ದೇವಾಲಯದಲ್ಲಿ ಅವನಿಗೆ ಏನೋ ದರ್ಶನವಾಗಿರಬೇಕೆಂದು ಗ್ರಹಿಸಿದರು. 23 ತನ್ನ ಸೇವೆಯ ದಿನಗಳು ಮುಗಿದ ನಂತರ, ಜಕರೀಯನು ತನ್ನ ಮನೆಗೆ ಹೊರಟುಹೋದನು. 24 ಕೆಲವು ದಿನಗಳಾದ ಮೇಲೆ, ಅವನ ಹೆಂಡತಿ ಎಲಿಸಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು. 25 ಅವಳು, “ಜನರಲ್ಲಿ ನನಗಿದ್ದ ಅವಮಾನವನ್ನು ತೆಗೆದುಹಾಕುವುದಕ್ಕಾಗಿ ಕರ್ತದೇವರು ನನ್ನ ಮೇಲೆ ದಯೆತೋರಿಸಿ ಈ ದಿನಗಳಲ್ಲಿ ನನಗೆ ಹೀಗೆ ಮಾಡಿದ್ದಾರೆ,” ಎಂದು ಹೇಳಿದಳು. ದೇವದೂತನು ಯೇಸುವಿನ ಜನನವನ್ನು ಮುಂತಿಳಿಸಿದ್ದು 26 ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ಗಲಿಲಾಯ ಪ್ರಾಂತದ ನಜರೇತೆಂಬ ಊರಿಗೆ, ದೇವರು ಗಬ್ರಿಯೇಲನೆಂಬ ದೇವದೂತನನ್ನು, 27 ದಾವೀದನ ವಂಶದ ಯೋಸೇಫನಿಗೆ, ನಿಶ್ಚಯವಾಗಿದ್ದ ಮರಿಯಳೆಂಬ ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದರು. 28 ಆ ದೇವದೂತನು ಆಕೆಗೆ, “ಅತ್ಯಂತ ದಯೆ ಹೊಂದಿದವಳೇ! ನಿನಗೆ ಶುಭವಾಗಲಿ, ಪ್ರಭುವು ನಿನ್ನೊಂದಿಗಿದ್ದಾರೆ,” ಎಂದು ಹೇಳಿದನು. 29 ಮರಿಯಳು ದೇವದೂತನ ಮಾತಿಗೆ ಬಹಳವಾಗಿ ಕಳವಳಗೊಂಡು, “ಇದು ಎಂಥಾ ಶುಭಾಶಯ?” ಎಂದು ತನ್ನ ಮನದಲ್ಲಿ ಯೋಚಿಸತೊಡಗಿದಳು. 30 ಆ ದೇವದೂತನು ಆಕೆಗೆ, “ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ. 31 ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’ ಯೇಸು ಅಂದರೆ, ಪ್ರಭುವು ರಕ್ಷಿಸುವನು ಎಂದು ಹೆಸರಿಡಬೇಕು. 32 ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು. 33 ಅವರು ಯಾಕೋಬನ ವಂಶವನ್ನು ಸದಾಕಾಲ ಆಳುವರು; ಅವರ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ,” ಎಂದು ಹೇಳಿದನು. 34 35 ಮರಿಯಳು ಆ ದೇವದೂತನಿಗೆ, “ಇದು ಹೇಗಾಗುವುದು, ನಾನು ಕನ್ಯೆ?” ಎಂದಳು. ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು. 36 ನಿನ್ನ ಬಂಧು ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಒಬ್ಬ ಮಗನನ್ನು ಹೆರಲಿದ್ದಾಳೆ. ಬಂಜೆಯಾಗಿದ್ದ ಆಕೆಗೆ ಇದು ಆರನೆಯ ತಿಂಗಳು. 37 ದೇವರಿಂದ ಬರುವ ಯಾವ ತಕ್ಕ ಮಾತು ಎಂದಿಗೂ ಅಸಾಧ್ಯವಾಗಿರುವುದಿಲ್ಲ,” ಎಂದು ಹೇಳಿದನು. 38 39 ಮರಿಯಳು, “ಇಗೋ ನಾನು ಕರ್ತದೇವರ ದಾಸಿ, ನಿನ್ನ ತಕ್ಕ ಮಾತಿನಂತೆ ನನಗಾಗಲಿ,” ಎಂದಳು. ಆಗ ದೇವದೂತನು ಆಕೆಯ ಬಳಿಯಿಂದ ಹೊರಟುಹೋದನು. ಮರಿಯಳು ಎಲಿಸಬೇತಳನ್ನು ಸಂಧಿಸಿದ್ದು ಆ ಕಾಲದಲ್ಲಿ ಮರಿಯಳು ಬೆಟ್ಟದ ಸೀಮೆಯ ಯೆಹೂದದಲ್ಲಿರುವ ಒಂದು ಊರಿಗೆ ಅವಸರವಾಗಿ ಹೊರಡಲು ಸಿದ್ಧಳಾದಳು. 40 ಅಲ್ಲಿ ಜಕರೀಯನ ಮನೆಯನ್ನು ಪ್ರವೇಶಿಸಿ, ಎಲಿಸಬೇತಳನ್ನು ವಂದಿಸಿದಳು. 41 ಮರಿಯಳ ವಂದನೆಯನ್ನು ಕೇಳಿದಾಗ, ಎಲಿಸಬೇತಳ ಗರ್ಭದಲ್ಲಿದ್ದ ಕೂಸು ನಲಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮ ಭರಿತಳಾಗಿ 42 ಮಹಾಧ್ವನಿಯಿಂದ: “ಸ್ತ್ರೀಯರಲ್ಲಿ ನೀನು ಧನ್ಯಳೇ, ನಿನ್ನಲ್ಲಿ ಹುಟ್ಟುವ ಶಿಶುವೂ ಆಶೀರ್ವಾದ ಹೊಂದಿದ್ದು! 43 ನನ್ನ ಕರ್ತದೇವರ ತಾಯಿಯು, ನನ್ನ ಬಳಿಗೆ ಬರುವಷ್ಟು ನಾನು ದಯೆ ಹೊಂದಿದ್ದು ಏಕೆ? 44 ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿಗಳಲ್ಲಿ ಬಿದ್ದ ಕೂಡಲೇ, ಶಿಶುವು ನನ್ನ ಗರ್ಭದಲ್ಲಿ ಉಲ್ಲಾಸದಿಂದ ನಲಿದಾಡಿತು. 45 ಕರ್ತದೇವರು ತಮಗೆ ಹೇಳಿದವುಗಳು ನೆರವೇರುವುವು ಎಂದು ನಂಬಿದವಳು ಧನ್ಯಳು,” ಎಂದು ಹೇಳಿದಳು. ಮರಿಯಳ ಹಾಡು 46 ಆಗ ಮರಿಯಳು ಹೀಗೆ ಹೇಳಿದ್ದು: “ನನ್ನ ಪ್ರಾಣವು ಕರ್ತದೇವರನ್ನು ಸ್ತುತಿಸುತ್ತದೆ, 2 ನನ್ನ ಆತ್ಮವು ನನ್ನ ರಕ್ಷಕ ದೇವರಲ್ಲಿ ಉಲ್ಲಾಸಗೊಂಡಿದೆ. 48 ದೇವರು ತಮ್ಮ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾರೆ. ಇಂದಿನಿಂದ ತಲತಲಾಂತರದವರೆಲ್ಲರೂ ನನ್ನನ್ನು ಧನ್ಯಳೆಂದು ಕರೆಯುವರು, 2 ಪರಾಕ್ರಮಿಯಾದ ದೇವರು ನನಗೆ ಮಹಾಕಾರ್ಯಗಳನ್ನು ಮಾಡಿದ್ದಾರೆ, ಅವರ ಹೆಸರು ಪವಿತ್ರವಾದದ್ದು. 50 ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ, ಅವರ ಕರುಣೆಯು ತಲತಲಾಂತರಗಳಿಗೂ ಇರುವುದು. 51 ದೇವರು ತಮ್ಮ ಭುಜಪರಾಕ್ರಮವನ್ನು ಮಾಡಿ; ಹೃದಯದ ಯೋಚನೆಯಲ್ಲಿ ಗರ್ವಿಷ್ಠರಾದವರನ್ನು ಚದರಿಸಿಬಿಟ್ಟಿದ್ದಾರೆ. 52 ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗೆ ದಬ್ಬಿ, ದೀನರನ್ನು ಮೇಲಕ್ಕೆ ಎತ್ತಿದ್ದಾರೆ. 53 ಹಸಿದವರನ್ನು ಒಳ್ಳೆಯವುಗಳಿಂದ ತುಂಬಿಸಿ, ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾರೆ. 54 (54-55)ನಮ್ಮ ಪಿತೃಗಳಾದ ಅಬ್ರಹಾಮನಿಗೂ ಅವನ ಸಂತತಿಗೂ ತಾವು ವಾಗ್ದಾನಮಾಡಿದ ತಮ್ಮ ನಿತ್ಯ ಕರುಣೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಸೇವಕನಾದ ಇಸ್ರಾಯೇಲನಿಗೆ, ದೇವರು ಸಹಾಯ ಮಾಡಿದ್ದಾರೆ.” 55 56 57 ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಜೊತೆಯಲ್ಲಿದ್ದು, ಅನಂತರ ತನ್ನ ಮನೆಗೆ ಹಿಂತಿರುಗಿ ಹೋದಳು. ಸ್ನಾನಿಕ ಯೋಹಾನನ ಜನನ ಎಲಿಸಬೇತಳಿಗೆ ಹೆರಿಗೆಯ ಕಾಲ ಬಂದಾಗ, ಆಕೆಯು ಒಬ್ಬ ಮಗನನ್ನು ಹೆತ್ತಳು. 58 ಕರ್ತದೇವರು ತಮ್ಮ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಯವರೂ ಬಂಧುಗಳೂ ಕೇಳಿ, ಆಕೆಯ ಕೂಡ ಸಂತೋಷಪಟ್ಟರು. 59 ಅವರು ಎಂಟನೆಯ ದಿನ ಆ ಮಗುವಿಗೆ ಸುನ್ನತಿ ಮಾಡಿಸುವುದಕ್ಕಾಗಿ ಬಂದು, ಅವನ ತಂದೆಯ ಹೆಸರಿನಂತೆ ಮಗನನ್ನು ಜಕರೀಯನೆಂದು ನಾಮಕರಣ ಮಾಡಲಿದ್ದರು. 60 ಆದರೆ ಅದಕ್ಕೆ ಶಿಶುವಿನ ತಾಯಿಯು ಉತ್ತರವಾಗಿ, “ಹಾಗಲ್ಲ! ಅವನಿಗೆ ‘ಯೋಹಾನ’ ಎಂದು ಹೆಸರಿಡಬೇಕು,” ಎಂದಳು. 61 62 ಬಂದಿದ್ದವರು ಆಕೆಗೆ, “ನಿನ್ನ ಬಂಧುಬಳಗದವರಲ್ಲಿ ಆ ಹೆಸರಿನವರು ಒಬ್ಬರೂ ಇಲ್ಲವಲ್ಲಾ,” ಎಂದರು. ಶಿಶುವನ್ನು ಯಾವ ಹೆಸರಿನಿಂದ ಕರೆಯಬೇಕೆಂದು, ಅವನ ತಂದೆಗೆ ಅವರು ಸನ್ನೆಮಾಡಿದರು. 63 ಆಗ ಜಕರೀಯನು ಒಂದು ಬರೆಯುವ ಹಲಗೆಯನ್ನು ಕೇಳಿ, “ಶಿಶುವಿನ ಹೆಸರು ಯೋಹಾನ,” ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು. 64 ಕೂಡಲೇ ಜಕರೀಯನಿಗೆ ಮಾತು ಬಂತು, ಅವನ ನಾಲಿಗೆಯು ಸಡಿಲವಾಯಿತು, ಅವನು ಮಾತನಾಡಿ, ದೇವರನ್ನು ಕೊಂಡಾಡಿದನು. 65 ಈ ಘಟನೆಯಿಂದ ಸುತ್ತಲೂ ವಾಸಮಾಡುತ್ತಿದ್ದವರೆಲ್ಲರಿಗೆ ಭಯವುಂಟಾಯಿತು, ಯೂದಾಯದ ಬೆಟ್ಟದ ಪ್ರಾಂತದಲ್ಲೆಲ್ಲಾ ಈ ಸಂಗತಿಗಳನ್ನು ಮಾತನಾಡಿಕೊಳ್ಳುತ್ತಿದ್ದರು. 66 ಕೇಳಿದವರೆಲ್ಲರೂ ವಿಸ್ಮಯಗೊಂಡು, “ಈ ಮಗುವು ಎಂಥವನಾಗುವನೋ?” ಎಂದು ತಮ್ಮ ಮನಸ್ಸಿನಲ್ಲಿ ಪ್ರಶ್ನಿಸಿಕೊಂಡರು. ಕರ್ತದೇವರ ಹಸ್ತವು ಈ ಮಗುವಿನ ಮೇಲೆ ಇತ್ತು. ಜಕರೀಯನ ಹಾಡು 67 68 ಆಗ ಮಗುವಿನ ತಂದೆ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು: “ಇಸ್ರಾಯೇಲಿನ ಕರ್ತದೇವರಿಗೆ ಸ್ತೋತ್ರವಾಗಲಿ, ದೇವರು ತಮ್ಮ ಜನರನ್ನು ಸಂಧಿಸಿ ಅವರನ್ನು ವಿಮೋಚಿಸಿದ್ದಾರೆ. 69 (69-70)ಪುರಾತನದಿಂದ ಅವರು ತಮ್ಮ ಪವಿತ್ರ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ, ದೇವರು ತಮ್ಮ ಸೇವಕ ದಾವೀದನ ಮನೆತನದಿಂದ, ನಮಗಾಗಿ ಬಲವಾದ ರಕ್ಷಣೆಯ§ ಮೂಲಭಾಷೆಯಲ್ಲಿ ರಕ್ಷಣೆಯ ಕೊಂಬು. ಕೊಂಬು ಇದು ಬಲವಾದ ರಾಜನ ಪ್ರತೀಕವಾಗಿದೆ ಕರ್ತದೇವರನ್ನು ಎಬ್ಬಿಸಿದ್ದಾರೆ. 70 71 ಇದನ್ನು, ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ದ್ವೇಷಮಾಡುವವರ ಕೈಯಿಂದಲೂ ರಕ್ಷಣೆ ಹೊಂದುವಂತೆಯೂ 72 (72-73)ನಮ್ಮ ಪಿತೃಗಳಿಗೆ ಕರುಣೆ ತೋರಿಸುವಂತೆಯೂ ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆಯೂ ತಮ್ಮ ಪವಿತ್ರ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡವನಾಗಿಯೂ 73 74 ನಾವು ನಮ್ಮ ಶತ್ರುಗಳ ಕೈಯಿಂದ ಬಿಡುಗಡೆಹೊಂದಿ ನಿರ್ಭಯವುಳ್ಳವರಾಗಿಯೂ 75 ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ದೇವರ ಮುಂದೆ ಪವಿತ್ರತೆಯಿಂದಲೂ ನೀತಿಯಿಂದಲೂ ಅವರನ್ನೇ ಸೇವಿಸುವವರಾಗುವಂತೆಯೂ ಈ ಪ್ರಕಾರ ಮಾಡಿದ್ದಾರೆ. 76 “ನನ್ನ ಮಗುವೇ, ನೀನಾದರೋ ಮಹೋನ್ನತರ ಪ್ರವಾದಿ ಎಂದು ಎನಿಸಿಕೊಳ್ಳುವೆ. ಯಾಕೆಂದರೆ, ನೀನು ಕರ್ತದೇವರ ಮಾರ್ಗಗಳನ್ನು ಸಿದ್ಧಮಾಡುವುದಕ್ಕೆ, ಅವರ ಮುಂದೆ ಹೋಗುವೆ. 77 ನೀನು ಜನರ ಪಾಪಕ್ಷಮಾಪಣೆಯ ಮೂಲಕ ರಕ್ಷಣೆ ಹೊಂದುವ ತಿಳುವಳಿಕೆಯನ್ನು ಕೊಡುವೆ, 78 ನಮ್ಮ ದೇವರ ಮಮತೆಯ ಕರುಣೆಯಿಂದಲೇ, ಸ್ವರ್ಗದಿಂದ ನಮಗೆ ಅರುಣೋದಯವು ಉಂಟಾಗಿ 79 ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ವಾಸಿಸುವವರಿಗೆ ಪ್ರಕಾಶಿಸಿ, ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವಂತೆ ಮಾಡುವೆ.” 80 ಆ ಶಿಶುವಾದ ಯೋಹಾನನು ಬೆಳೆದು, ಆತ್ಮದಲ್ಲಿ ಬಲಗೊಂಡು; ತನ್ನನ್ನು ಇಸ್ರಾಯೇಲರಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
ಒಟ್ಟು 24 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 24
×

Alert

×

Kannada Letters Keypad References