1. {#1ಸ್ನಾನಿಕ ಯೋಹಾನನು ಮಾರ್ಗ ಸಿದ್ಧಮಾಡಿದ್ದು } [PS]ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು ಯೂದಾಯ ಪ್ರಾಂತದ ಅರಣ್ಯಕ್ಕೆ ಬಂದು,
2. “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು. [PE]
3. [QS]“ ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, [QE][QS2]ಅವರ ದಾರಿಗಳನ್ನು ಸರಾಗಮಾಡಿರಿ,’ [QE][QS]ಎಂದು ಅರಣ್ಯದಲ್ಲಿ ಕೂಗುವ ಸ್ವರವು,”[* ಯೆಶಾಯ 40:3 ] [QE][MS]ಎಂದು ಪ್ರವಾದಿಯಾದ ಯೆಶಾಯನ ಮೂಲಕ ಸೂಚಿತನಾದವನು ಇವನೇ. [ME]
4. [PS]ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಲಾಗಿತ್ತು. ಅವನು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು[† ನೋಡಿರಿ 2 ಅರಸು 1:8 ವಚನದಲ್ಲಿ ಪ್ರವಾದಿ ಎಲೀಯನ ಉಡುಪು ಹಾಗು ಜೆಕರ್ಯ 13:4 ]. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
5. ಯೆರೂಸಲೇಮಿನಿಂದಲೂ ಯೂದಾಯ ಪ್ರಾಂತದ ಎಲ್ಲಾ ಸ್ಥಳಗಳಿಂದಲೂ ಯೊರ್ದನ್ ನದಿ ಸುತ್ತಲಿರುವ ಪ್ರದೇಶದಿಂದಲೂ ಜನರು ಅವನ ಬಳಿಗೆ ಬರುತ್ತಿದ್ದರು.
6. ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. [PE]
7. [PS]ಆದರೆ ಫರಿಸಾಯರು[‡ ಫರಿಸಾಯರು ಅಂದರೆ ಯೆಹೂದ್ಯರಲ್ಲಿ ಕಟ್ಟುನಿಟ್ಟಾದ ಧಾರ್ಮಿಕ ಪಂಗಡದವರು ] ಹಾಗೂ ಸದ್ದುಕಾಯರಲ್ಲಿ [§ ಸದ್ದುಕಾಯರು ಅಂದರೆ ಯೆಹೂದ್ಯರಲ್ಲಿ ಅದ್ಭುತ ಅನುಭವಗಳನ್ನು ನಂಬದ ಪಂಗಡದವರು. ಉದಾಹರಣೆ: ಮರಣದ ನಂತರ ಜೀವಿತ, ದೇವದೂತರು ] ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?
8. ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.
9. ‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.
10. ಮರಗಳ ಬೇರಿಗೆ ಈಗಾಗಲೇ ಕೊಡಲಿ ಬಿದ್ದಿದೆ, ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕಲಾಗುವುದು. [PE]
11. [PS]“ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ[* ಅಂದರೆ, ಗುಲಾಮನಾಗಿರುವುದಕ್ಕೂ ] ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.
12. ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು. [PE]
13. {#1ಯೇಸುವಿನ ದೀಕ್ಷಾಸ್ನಾನ } [PS]ಆಮೇಲೆ ಯೇಸು ಯೋಹಾನನಿಂದ ದೀಕ್ಷಾಸ್ನಾನ ಪಡೆಯಲು ಗಲಿಲಾಯದಿಂದ ಯೊರ್ದನ್ ನದಿಗೆ ಬಂದರು.
14. ಆದರೆ ಯೋಹಾನನು ಅದಕ್ಕೆ ಅಡ್ಡಿ ಮಾಡುತ್ತಾ, “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ, ನೀವು ನನ್ನ ಬಳಿಗೆ ಬರಬಹುದೇ?” ಎಂದು ಕೇಳಿದನು. [PE]
15.
16. [PS]ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು. [PE][PS]ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು.
17. ಸ್ವರ್ಗದೊಳಗಿಂದ, “ಈತನು ನನ್ನ ಪ್ರಿಯ ಮಗನು. ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿ ಕೇಳಿಸಿತು. [PE]