1. {#1ಮನುಷ್ಯನ ಯೋಜನೆ ಹಾಗೂ ದೇವರ ಯೋಜನೆ } [QS]ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, [QE][QS2]ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! [QE][QS]ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. [QE][QS2]ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ. [QE]
2. [QS]ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತೆಗೆದುಕೊಳ್ಳುತ್ತಾರೆ. [QE][QS2]ಮನೆಗಳನ್ನೂ ಸಹ ತೆಗೆದುಕೊಳ್ಳುತ್ತಾರೆ. [QE][QS]ಮನುಷ್ಯನಿಗೂ ಅವನ ಮನೆಗೂ [QE][QS2]ಇತರರಿಗೂ ಅವನ ಸ್ವಾಸ್ತ್ಯವನ್ನು ಕಸಿದುಕೊಳ್ಳುತ್ತಾರೆ. [QE]
3. [PS]ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ, [PE][QS]“ಇಗೋ, ನಾನು ಈ ವಂಶಕ್ಕೆ ವಿರೋಧವಾಗಿ ನಾಶನವನ್ನು ಯೋಚಿಸುತ್ತೇನೆ. [QE][QS2]ಇದರಿಂದ ನೀವು ನಿಮ್ಮನ್ನು ರಕ್ಷಿಸಿಕೊಳ್ಳಲಾರಿರಿ. [QE][QS]ಅಹಂಕಾರವಾಗಿ ನಡೆಯದೆ ಇರುವಿರಿ. [QE][QS2]ಇದು ವಿಪತ್ತಿನ ಕಾಲವೇ, [QE]
4. [QS]ಆ ದಿನದಲ್ಲಿ ಜನರು ನಿಮ್ಮನ್ನು ಅಪಹಾಸ್ಯ ಮಾಡುವರು. [QE][QS2]‘ನಾವು ಸಂಪೂರ್ಣವಾಗಿ ಹಾಳಾಗಿದ್ದೇವೆ. [QE][QS]ನನ್ನ ಪ್ರಜೆಗಳ ಆಸ್ತಿ ವಿಭಾಗವಾಗಿದೆ. [QE][QS2]ಆತನು ಅದನ್ನು ನನ್ನಿಂದ ತೆಗೆದುಕೊಳ್ಳುವನು. [QE][QS]ಆತನು ನಮ್ಮ ಹೊಲಗಳನ್ನು ದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ,’ ” [QE][QS2]ಎಂಬ ದುಃಖದಾಯಕ ಸಂಗೀತದಿಂದ ಹಾಸ್ಯಮಾಡುವರು. [QE][PBR]
5. [QS]ಆದ್ದರಿಂದ ಚೀಟುಹಾಕಿ ದೇಶವನ್ನು [QE][QS2]ಹಂಚುವದಕ್ಕೆ ಯೆಹೋವ ದೇವರ ಸಭೆಯಲ್ಲಿ ನಿನಗೆ ಯಾರೂ ಇರುವುದಿಲ್ಲ. [QE]
6. {#1ಸುಳ್ಳು ಪ್ರವಾದಿಗಳು } [QS]“ಪ್ರವಾದಿಸಬೇಡ, ಈ ಸಂಗತಿಗಳ ಬಗ್ಗೆ ಪ್ರವಾದನೆ ಹೇಳಬೇಡ. [QE][QS2]ಅವಮಾನ ನಮ್ಮ ಮೇಲೆ ಬರುವುದೇ ಇಲ್ಲ,” [QE][QS2]ಎಂದು ಅವರ ಪ್ರವಾದಿಗಳು ಹೇಳುತ್ತಾರೆ. [QE]
7. [QS]ಯಾಕೋಬಿನ ಮನೆತನದವರೇ, [QE][QS2]“ಯೆಹೋವ ದೇವರ ಆತ್ಮವು ಕೋಪಗೊಂಡಿದೆಯೇ? [QE][QS2]ಅವರು ಇಂಥ ಕಾರ್ಯ ಮಾಡುವರೋ?” [QE][PBR] [QS]“ಯಥಾರ್ಥವಾಗಿ ನಡೆಯುವವನಿಗೆ [QE][QS2]ನನ್ನ ಮಾತುಗಳು ಒಳ್ಳೆಯದನ್ನು ಮಾಡುವುದಿಲ್ಲವೋ? [QE]
8. [QS]ಇತ್ತೀಚೆಗೆ ನನ್ನ ಜನರು [QE][QS2]ವೈರಿಯ ಹಾಗೆ ಎದ್ದಿದ್ದಾರೆ. [QE][QS]ಯುದ್ಧದಿಂದ ತಿರುಗಿಕೊಂಡು ನಿರ್ಭಯವಾಗಿ [QE][QS2]ಹೋಗುವವರ ವಸ್ತ್ರದ ಸಂಗಡ [QE][QS2]ನಿಲುವಂಗಿಯನ್ನು ನೀವು ಕಿತ್ತುಕೊಳ್ಳುತ್ತೀರಿ. [QE]
9. [QS]ನನ್ನ ಜನರ ಸ್ತ್ರೀಯರನ್ನು [QE][QS2]ಅವರ ರಮ್ಯವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ. [QE][QS]ಅವರ ಮಕ್ಕಳಿಂದ [QE][QS2]ನನ್ನ ಆಶೀರ್ವಾದವನ್ನು ಎಂದೆಂದಿಗೂ ತೆಗೆದಿದ್ದೀರಿ. [QE]
10. [QS]ಎದ್ದು ಹೋಗಿರಿ; [QE][QS2]ಇದು ನಿಮ್ಮ ವಿಶ್ರಾಂತಿಯ ಸ್ಥಳವಲ್ಲ, [QE][QS]ಏಕೆಂದರೆ ಇದಕ್ಕೆ ಹೊಲಸು ಅಂಟಿಕೊಂಡು, [QE][QS2]ಯಾವ ಸುಧಾರಣೆಗೂ ಒಳಗಾಗದಂತೆ ಹಾಳಾಗಿ ಹೋಗಿಬಿಟ್ಟಿದೆ. [QE]
11. [QS]ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, [QE][QS2]‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ [QE][QS]ದೊರೆಯುವುದೆಂದು ನಾನು ಪ್ರವಾದಿಸುವೆನು,’ [QE][QS2]ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು. [QE]
12. {#1ಇಸ್ರಾಯೇಲಿಗೆ ರಕ್ಷಣೆ ವಾಗ್ದಾನ } [QS]“ಯಾಕೋಬೇ, ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು. [QE][QS2]ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು. [QE][QS]ಬೊಚ್ರದ ಕುರಿಗಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆಯಂತೆಯೂ [QE][QS2]ಅವರನ್ನು ಒಟ್ಟಾಗಿ ಕೂಡಿಸುವೆನು. [QE][QS2]ಹುಲ್ಲುಗಾವಲಿನ ಕುರಿಮಂದೆಯಂತೆ, ಸ್ಥಳವು ಜನರಿಂದ ತುಂಬಿ ತುಳುಕುವುದು. [QE]
13. [QS]ಮಾರ್ಗ ತೆರೆಯುವಾತನು ಅವರ ಮುಂದೆ ಹೋಗುವನು. [QE][QS2]ಅವರು ಬಾಗಿಲು ತೆರೆದು ಹೊರಗೆ ಹೋಗುವರು. [QE][QS]ಅವರ ಅರಸನು ಅವರ ಮುಂದೆ ಹಾದು ಹೋಗುತ್ತಾನೆ. [QE][QS2]ಯೆಹೋವ ದೇವರು ಅವರ ಮುಂದಾಳತ್ವವನ್ನು ವಹಿಸುವರು.” [QE]