1. {#1ನಾಯಕರನ್ನು ಪ್ರವಾದಿಗಳನ್ನು ಗದರಿಸಿದ್ದು } [PS]ಆಗ ನಾನು, [PE][QS]“ಯಾಕೋಬಿನ ಮುಖ್ಯಸ್ಥರೇ, [QE][QS2]ಇಸ್ರಾಯೇಲಿನ ಮನೆತನದ ಪ್ರಧಾನರೇ, [QE][QS]ಈಗ ಕೇಳಿರಿ. ನೀವು ನ್ಯಾಯವನ್ನು ಪ್ರೀತಿಸಬಾರದೇ. [QE]
2. [QS2]ಒಳ್ಳೆಯದನ್ನು ದ್ವೇಷಮಾಡಿ ಕೆಟ್ಟದ್ದನ್ನು ಪ್ರೀತಿ ಮಾಡುವವರೇ, [QE][QS]ಅವರ ಮೇಲಿನಿಂದ ಅವರ ಚರ್ಮವನ್ನೂ ನನ್ನ ಜನರ [QE][QS2]ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತು ಕೊಳ್ಳುವವರೇ, [QE]
3. [QS]ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. [QE][QS2]ಅವರ ಚರ್ಮವನ್ನು ಸುಲಿದುಹಾಕುತ್ತಾರೆ. [QE][QS2]ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. [QE][QS]ಹಂಡೆಯಲ್ಲಿನ ತುಂಡುಗಳಂತೆ, ಮಡಕೆಯಲ್ಲಿನ ಮಾಂಸದ ಚೂರುಗಳಂತೆ [QE][QS2]ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.” [QE][PBR]
4. [QS]ಆಗ ಅವರು ಯೆಹೋವ ದೇವರಿಗೆ ಮೊರೆಯಿಡುವರು; [QE][QS2]ಆದರೆ ಅವರು ಅವರಿಗೆ ಉತ್ತರ ಕೊಡುವುದಿಲ್ಲ. [QE][QS]ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, [QE][QS2]ಆ ಕಾಲದಲ್ಲಿ ಅವರಿಗೆ ತಮ್ಮ ಮುಖವನ್ನು ಮರೆಮಾಡುವರು. [QE]
5. [PS]ಯೆಹೋವ ದೇವರು ಹೇಳುವುದೇನೆಂದರೆ, [PE][QS]“ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವ ಪ್ರವಾದಿಗಳಿಗೆ [QE][QS2]ತಿನ್ನಲು ಕೊಟ್ಟರೆ ‘ಸಮಾಧಾನವಾಗಲಿ’ ಎನ್ನುವರು. [QE][QS]ಆದರೆ ಅವರಿಗೆ ತಿನ್ನಲು ಏನೂ ಕೊಡದವನ [QE][QS2]ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು. [QE]
6. [QS]ದರ್ಶನವಿಲ್ಲದೆ, ನಿಮಗೆ ರಾತ್ರಿಯಾಗುವುದು; [QE][QS2]ಶಕುನವಿಲ್ಲದೆ ನಿಮಗೆ ಕತ್ತಲಾಗುವುದು. [QE][QS]ಪ್ರವಾದಿಗಳಿಗೆ ಸೂರ್ಯ ಮುಳುಗುವುದು. [QE][QS2]ಅವರ ಮೇಲೆ ಹಗಲು ಕತ್ತಲೆಯಾಗುವುದು. [QE]
7. [QS]ಆಗ ದರ್ಶಿಗಳು ನಾಚಿಕೆಪಡುವರು, [QE][QS2]ಶಕುನಗಾರರು ಅವಮಾನಗೊಳ್ಳುವರು. [QE][QS]ದೇವರಿಂದ ಉತ್ತರವಿಲ್ಲದ ಕಾರಣ, [QE][QS2]ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿಕೊಳ್ಳುವರು.” [QE]
8. [QS]ಆದರೆ ನಿಶ್ಚಯವಾಗಿ ನಾನು ಯಾಕೋಬಿನ ಅವನ ಅಪರಾಧವನ್ನೂ [QE][QS2]ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವುದಕ್ಕೆ [QE][QS]ಯೆಹೋವ ದೇವರ ಆತ್ಮದ ಮುಖಾಂತರ ಶಕ್ತಿಯಿಂದಲೂ [QE][QS2]ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ. [QE][PBR]
9. [QS]ಯಾಕೋಬನ ಮನೆತನದವರ ಪ್ರಧಾನರೇ, [QE][QS2]ಇಸ್ರಾಯೇಲಿನ ಮನೆತನದವರ [QE][QS]ನ್ಯಾಯಾಧಿಪತಿಗಳೇ, ನ್ಯಾಯವನ್ನು ನಿಂದಿಸಿ [QE][QS2]ಸರಿಯಾದದ್ದನ್ನೆಲ್ಲಾ ಡೊಂಕುಮಾಡುವವರೇ, [QE]
10. [QS]ಚೀಯೋನನ್ನು ರಕ್ತದಿಂದಲೂ [QE][QS2]ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ. [QE]
11. [QS]ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. [QE][QS2]ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. [QE][QS2]ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. [QE][QS]ಆದರೂ ಯೆಹೋವ ದೇವರ ಮೇಲೆ ಆತುಕೊಂಡು, [QE][QS2]“ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? [QE][QS2]ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ. [QE]
12. [QS]ಆದಕಾರಣ ನಿಮ್ಮ ನಿಮಿತ್ತವೇ, [QE][QS2]ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. [QE][QS]ಯೆರೂಸಲೇಮು ಹಾಳುದಿಬ್ಬಗಳಾಗುವುದು. [QE][QS2]ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು. [QE]