ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಿಕ
1. {#1ಯೆಹೋವ ದೇವರ ಬೆಟ್ಟ } [PS]ಅಂತ್ಯಕಾಲದಲ್ಲಿ, [PE][QS]ಯೆಹೋವ ದೇವರ ಮಂದಿರದ ಪರ್ವತವು [QE][QS2]ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ [QE][QS]ಬೆಳೆದು ನೆಲೆಗೊಳ್ಳುವುದು, [QE][QS2]ಆಗ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು. [QE]
2. [PS]ಅನೇಕ ಜನಾಂಗಗಳು ಬಂದು ಹೀಗೆಂದು ಹೇಳುವರು, [PE][QS]“ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ [QE][QS2]ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. [QE][QS]ಅವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು. [QE][QS2]ನಾವು ಅವರ ದಾರಿಗಳಲ್ಲಿ ನಡೆಯುವೆವು. [QE][QS]ಚೀಯೋನಿನಿಂದ ದೇವರ ನಿಯಮವೂ [QE][QS2]ಯೆರೂಸಲೇಮಿನಿಂದ ದೇವರ ವಾಕ್ಯವೂ ಹೊರಡುವುವು.” [QE]
3. [QS]ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ [QE][QS2]ದೂರದಲ್ಲಿರುವ ಬಲವಾದ ಜನಾಂಗಗಳಿಗೆ ತೀರ್ಪುಕೊಡುವನು. [QE][QS]ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ [QE][QS2]ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. [QE][QS]ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ. [QE][QS2]ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ. [QE]
4. [QS]ಆದರೆ ಒಬ್ಬಬ್ಬನು ತನ್ನ ತನ್ನ ದ್ರಾಕ್ಷಿಬಳ್ಳಿಯ ಕೆಳಗೂ [QE][QS2]ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕುಳಿತುಕೊಳ್ಳುವನು. [QE][QS]ಭಯಪಡಿಸುವವನು ಯಾರೂ ಇರುವುದಿಲ್ಲ. [QE][QS2]ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಇದನ್ನು ನುಡಿದಿದ್ದಾರೆ. [QE]
5. [QS]ಎಲ್ಲಾ ಜನಾಂಗಗಳಲ್ಲಿ ಪ್ರತಿಯೊಬ್ಬನು [QE][QS2]ತನ್ನ ತನ್ನ ದೇವರ ಹೆಸರಿನಲ್ಲಿ ನಡೆಯುವನು. [QE][QS]ಆದರೆ ನಾವು ನಮ್ಮ ದೇವರಾದ [QE][QS2]ಯೆಹೋವ ದೇವರ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು. [QE]
6. {#1ದೇವರ ಯೋಜನೆ } [QS]ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಆ ದಿವಸದಲ್ಲಿ” [QE][QS2]ನಾನು ಕುಂಟಾದವರನ್ನು ಒಟ್ಟುಗೂಡಿಸುವೆನು. [QE][QS]ನಾನು ತಳ್ಳಿಬಿಟ್ಟದ್ದನ್ನೂ ಕಷ್ಟಪಡಿಸಿದವರನ್ನೂ [QE][QS2]ಒಂದಾಗಿ ಸೇರಿಸುವೆನು. [QE]
7. [QS]“ಕುಂಟಾದದ್ದನ್ನು ಉಳಿದದ್ದನ್ನಾಗಿಯೂ ತಳ್ಳಿಬಿಟ್ಟಿದ್ದನ್ನು [QE][QS2]ಬಲವಾದ ಜನಾಂಗವಾಗಿಯೂ ಮಾಡುವೆನು. [QE][QS]ಯೆಹೋವ ದೇವರು ಇಂದಿನಿಂದ ಸದಾಕಾಲವೂ [QE][QS2]ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವರು. [QE]
8. [QS]ಕುರಿಮಂದೆಯ ಬುರುಜೇ, [QE][QS2]ಚೀಯೋನ್ ಪುತ್ರಿಯ ದುರ್ಗವೇ, [QE][QS]ಮೊದಲಿದ್ದ ರಾಜ್ಯಾಧಿಕಾರವೂ ನಿಮಗೆ ಲಭಿಸುವುದು. [QE][QS2]ಯೆರೂಸಲೇಮಿನ ಪುತ್ರಿಗೆ ರಾಜ್ಯತ್ವವೂ ಬರುವುದು.” [QE][PBR]
9. [QS]ಈಗ ಏಕೆ ಗಟ್ಟಿಯಾಗಿ ಕೂಗುತ್ತೀ? [QE][QS2]ನಿನ್ನಲ್ಲಿ ಅರಸನಿಲ್ಲವೋ? [QE][QS]ನಿನ್ನ ಅಧಿಕಾರಿಯು ನಾಶವಾದನೋ? [QE][QS2]ಹೆರುವವಳಂತೆ ನಿನಗೆ ವೇದನೆ ಬಂದಿರುವುದೋ? [QE]
10. [QS]ಚೀಯೋನ್ ಪುತ್ರಿಯೇ ಹೆರುವವಳಂತೆ [QE][QS2]ವೇದನೆ ತಾಳಿಕೋ, [QE][QS]ಏಕೆಂದರೆ ಈಗ ಪಟ್ಟಣದೊಳಗಿಂದ ಹೊರಟು [QE][QS2]ಹೊಲದಲ್ಲಿ ವಾಸಮಾಡಿ [QE][QS]ಬಾಬಿಲೋನಿಗೆ ಹೋಗುವೆ, [QE][QS2]ಅಲ್ಲಿ ನಿನಗೆ ಬಿಡುಗಡೆಯಾಗುವುದು. [QE][QS]ಅಲ್ಲಿ ಯೆಹೋವ ದೇವರು ನಿನ್ನನ್ನು [QE][QS2]ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿಸುವರು. [QE][PBR]
11. [QS]ಆದರೆ ಈಗ ಅನೇಕ ಜನಾಂಗಗಳು [QE][QS2]ನಿನಗೆ ವಿರೋಧವಾಗಿ ಕೂಡಿಬಂದಿವೆ. [QE][QS]ಅವರು, “ಯೆರೂಸಲೇಮನ್ನು ಕೆಡಿಸೋಣ. [QE][QS2]ಚೀಯೋನಿನ ನಾಶನವನ್ನು ಕಣ್ಣಾರೆ ನೋಡೋಣ,” ಎಂದು ಹೇಳುತ್ತಾರೆ. [QE]
12. [QS]ಆದರೆ ಯೆಹೋವ ದೇವರ ಯೋಚನೆಗಳು [QE][QS2]ಅವರಿಗೆ ತಿಳಿದಿಲ್ಲ. [QE][QS]ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ. [QE][QS2]ಏಕೆಂದರೆ ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವರು. [QE]
13. [QS]ಚೀಯೋನ್ ಪುತ್ರಿಯೇ, ಎದ್ದು ತುಳಿ. [QE][QS2]ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂ [QE][QS]ನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು. [QE][QS2]ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ. [QE][QS]ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂ [QE][QS2]ಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು. [QE]
ಒಟ್ಟು 7 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 7
1 2 3 4 5 6 7
ಯೆಹೋವ ದೇವರ ಬೆಟ್ಟ 1 ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು, ಆಗ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು. 2 ಅನೇಕ ಜನಾಂಗಗಳು ಬಂದು ಹೀಗೆಂದು ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ಅವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು. ನಾವು ಅವರ ದಾರಿಗಳಲ್ಲಿ ನಡೆಯುವೆವು. ಚೀಯೋನಿನಿಂದ ದೇವರ ನಿಯಮವೂ ಯೆರೂಸಲೇಮಿನಿಂದ ದೇವರ ವಾಕ್ಯವೂ ಹೊರಡುವುವು.” 3 ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗಗಳಿಗೆ ತೀರ್ಪುಕೊಡುವನು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ. ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ. 4 ಆದರೆ ಒಬ್ಬಬ್ಬನು ತನ್ನ ತನ್ನ ದ್ರಾಕ್ಷಿಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕುಳಿತುಕೊಳ್ಳುವನು. ಭಯಪಡಿಸುವವನು ಯಾರೂ ಇರುವುದಿಲ್ಲ. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಇದನ್ನು ನುಡಿದಿದ್ದಾರೆ. 5 ಎಲ್ಲಾ ಜನಾಂಗಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆಯುವನು. ಆದರೆ ನಾವು ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು. ದೇವರ ಯೋಜನೆ 6 ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಆ ದಿವಸದಲ್ಲಿ” ನಾನು ಕುಂಟಾದವರನ್ನು ಒಟ್ಟುಗೂಡಿಸುವೆನು. ನಾನು ತಳ್ಳಿಬಿಟ್ಟದ್ದನ್ನೂ ಕಷ್ಟಪಡಿಸಿದವರನ್ನೂ ಒಂದಾಗಿ ಸೇರಿಸುವೆನು. 7 “ಕುಂಟಾದದ್ದನ್ನು ಉಳಿದದ್ದನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾಗಿಯೂ ಮಾಡುವೆನು. ಯೆಹೋವ ದೇವರು ಇಂದಿನಿಂದ ಸದಾಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವರು. 8 ಕುರಿಮಂದೆಯ ಬುರುಜೇ, ಚೀಯೋನ್ ಪುತ್ರಿಯ ದುರ್ಗವೇ, ಮೊದಲಿದ್ದ ರಾಜ್ಯಾಧಿಕಾರವೂ ನಿಮಗೆ ಲಭಿಸುವುದು. ಯೆರೂಸಲೇಮಿನ ಪುತ್ರಿಗೆ ರಾಜ್ಯತ್ವವೂ ಬರುವುದು.” 9 ಈಗ ಏಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಅಧಿಕಾರಿಯು ನಾಶವಾದನೋ? ಹೆರುವವಳಂತೆ ನಿನಗೆ ವೇದನೆ ಬಂದಿರುವುದೋ? 10 ಚೀಯೋನ್ ಪುತ್ರಿಯೇ ಹೆರುವವಳಂತೆ ವೇದನೆ ತಾಳಿಕೋ, ಏಕೆಂದರೆ ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬಿಲೋನಿಗೆ ಹೋಗುವೆ, ಅಲ್ಲಿ ನಿನಗೆ ಬಿಡುಗಡೆಯಾಗುವುದು. ಅಲ್ಲಿ ಯೆಹೋವ ದೇವರು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿಸುವರು. 11 ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ. ಅವರು, “ಯೆರೂಸಲೇಮನ್ನು ಕೆಡಿಸೋಣ. ಚೀಯೋನಿನ ನಾಶನವನ್ನು ಕಣ್ಣಾರೆ ನೋಡೋಣ,” ಎಂದು ಹೇಳುತ್ತಾರೆ. 12 ಆದರೆ ಯೆಹೋವ ದೇವರ ಯೋಚನೆಗಳು ಅವರಿಗೆ ತಿಳಿದಿಲ್ಲ. ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ. ಏಕೆಂದರೆ ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವರು. 13 ಚೀಯೋನ್ ಪುತ್ರಿಯೇ, ಎದ್ದು ತುಳಿ. ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು. ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ. ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂ ಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು.
ಒಟ್ಟು 7 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 7
1 2 3 4 5 6 7
×

Alert

×

Kannada Letters Keypad References