1. {#1ಇಸ್ರಾಯೇಲರ ವಿರುದ್ಧ ಯೆಹೋವ ದೇವರ ವ್ಯಾಜ್ಯ } [PS]ಯೆಹೋವ ದೇವರು ಹೇಳುವುದನ್ನು ಈಗ ಕೇಳಿರಿ, [PE][QS]ಎದ್ದೇಳು, ಬೆಟ್ಟಗಳ ಮುಂದೆ ವ್ಯಾಜ್ಯವಾಡು; [QE][QS2]ನೀನು ಹೇಳುವುದನ್ನು ಗುಡ್ಡಗಳು ಕೇಳಲಿ. [QE][PBR]
2. [QS]ಬೆಟ್ಟಗಳೇ, ಯೆಹೋವ ದೇವರ ಆಪಾದನೆಯನ್ನು ಕೇಳಿರಿ. [QE][QS2]ಭೂಮಿಯ ಶಾಶ್ವತವಾದ ಅಸ್ತಿವಾರಗಳೇ ಕಿವಿಗೊಡಿರಿ. [QE][QS]ಏಕೆಂದರೆ ಯೆಹೋವ ದೇವರಿಗೆ ತಮ್ಮ ಜನರ ವಿರುದ್ಧ ವ್ಯಾಜ್ಯವಿದೆ, [QE][QS2]ಅವರು ಇಸ್ರಾಯೇಲಿನ ವಿರುದ್ಧ ಆರೋಪಿಸುತ್ತಾರೆ. [QE][PBR]
3. [QS]ನನ್ನ ಜನರೇ, ನಾನು ನಿಮಗೆ ಏನು ಮಾಡಿದ್ದೇನೆ? [QE][QS2]ನಾನು ನಿಮ್ಮ ಮೇಲೆ ಭಾರ ಹಾಕಿದ್ದೇನೋ? ನನಗೆ ಉತ್ತರಕೊಡಿರಿ. [QE]
4. [QS]ನಾನು ಈಜಿಪ್ಟ್ ದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, [QE][QS2]ದಾಸತ್ವದ ದೇಶದೊಳಗಿಂದ ನಿನ್ನನ್ನು ವಿಮೋಚಿಸಿ, [QE][QS]ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು [QE][QS2]ನಿನಗೆ ನಾಯಕರನ್ನಾಗಿ ಕಳುಹಿಸಿದೆನು. [QE]
5. [QS]ನನ್ನ ಜನರೇ, [QE][QS2]ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ [QE][QS2]ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ [QE][QS]ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ [QE][QS2]ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. [QE][QS2]ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ. [QE][PBR]
6. [QS]ನಾನು ಯಾವುದರೊಂದಿಗೆ ಯೆಹೋವ ದೇವರ ಮುಂದೆ ಬಂದು, [QE][QS2]ಯಾವುದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? [QE][QS]ದಹನಬಲಿಗಳ ಮತ್ತು [QE][QS2]ಒಂದು ವರ್ಷದ ಕರುಗಳ ಸಂಗಡ ಆತನ ಮುಂದೆ ಹೋಗಲೇ? [QE]
7. [QS]ಯೆಹೋವ ದೇವರು ಸಾವಿರ ಟಗರುಗಳಿಗಾದರೂ [QE][QS2]ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಮೆಚ್ಚುವರೋ? [QE][QS]ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗನನ್ನೂ [QE][QS2]ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನೂ ಕೊಡಲೋ? [QE]
8. [QS]ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. [QE][QS2]ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ [QE][QS]ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ [QE][QS2]ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ? [QE]
9. {#1ಇಸ್ರಾಯೇಲರ ವಂಚನೆ ಮತ್ತು ಶಿಕ್ಷೆ } [QS]ಕೇಳು! ಯೆಹೋವ ದೇವರು ಪಟ್ಟಣವನ್ನು ಕರೆಯುತ್ತಿದ್ದಾರೆ. [QE][QS2]ನಿಮ್ಮ ನಾಮಕ್ಕೆ ಭಯಪಡುವುದು ಜ್ಞಾನ. [QE][QS2]ಕೋಲು ಮತ್ತು ಅದನ್ನು ನೇಮಿಸಿದ ವ್ಯಕ್ತಿಯನ್ನು ಎಚ್ಚರಿಕೆಯಿಂದ ಆಲಿಸಿರಿ. [QE]
10. [QS]ದುಷ್ಟಮನೆತನವೇ ನೀನು ಕೆಟ್ಟದ್ದಾಗಿ ಸಂಪಾದಿಸಿದ್ದನ್ನು ಶಾಪಗ್ರಸ್ತರಾದ [QE][QS2]ಕಡಿಮೆ ಅಳತೆಯನ್ನು ನಾನು ಮರೆಯಬೇಕೋ? [QE]
11. [QS]ನಾನು ದುಷ್ಟತ್ವದ ತಕ್ಕಡಿಗಳುಳ್ಳವರನ್ನು [QE][QS2]ಮೋಸವಾದ ಕಲ್ಲುಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ? [QE]
12. [QS]ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿದ್ದಾರೆ. [QE][QS2]ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವರಾಗಿದ್ದಾರೆ. [QE][QS2]ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ. [QE]
13. [QS]ಆದ್ದರಿಂದ ನಾನು ಸಹ ನಿನ್ನನ್ನು ಹೊಡೆದು [QE][QS2]ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು. [QE]
14. [QS]ನೀನು ಉಂಡರೂ ತೃಪ್ತಿಯಾಗದೆ ಇರುವೆ; [QE][QS2]ನಿನ್ನೊಳಗೆ ಹಸಿವೆಯು ಇರುವುದು; [QE][QS]ನೀವು ಸಂಗ್ರಹಿಸುತ್ತೀರಿ ಆದರೆ ಏನನ್ನೂ ಉಳಿಸುವುದಿಲ್ಲ, [QE][QS2]ಏಕೆಂದರೆ ನೀವು ಉಳಿಸುವದನ್ನು ನಾನು ಕತ್ತಿಗೆ ಕೊಡುತ್ತೇನೆ. [QE]
15. [QS]ನೀನು ಬೀಜ ಬಿತ್ತಿ ಕೊಯ್ಯದೆ ಇರುವೆ; [QE][QS2]ಹಿಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವೆ; [QE][QS2]ದ್ರಾಕ್ಷಾರಸಮಾಡಿ ಕುಡಿಯದೆ ಇರುವೆ. [QE]
16. [QS]ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. [QE][QS2]ಅಹಾಬ್ ಮನೆತನದ ದುರಾಚಾರಗಳನ್ನೂ [QE][QS2]ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. [QE][QS]ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. [QE][QS2]ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. [QE][QS2]ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ. [QE]