1. [PS]ನಿನೆವೆಯ ವಿಷಯವಾದ ಪ್ರವಾದನೆ: ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು. [PE][PBR]
2. {#1ನಿನೆವೆ ಮೇಲೆ ಯೆಹೋವ ದೇವರ ರೌದ್ರ } [QS]ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು. [QE][QS2]ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ. [QE][QS2]ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. [QE][QS]ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, [QE][QS2]ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ. [QE]
3. [QS]ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು. [QE][QS2]ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು. [QE][QS]ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ. [QE][QS2]ಮೇಘಗಳು ಅವರ ಕಾಲುಗಳ ಧೂಳೇ. [QE]
4. [QS]ಅವರು ಸಮುದ್ರವನ್ನು ಗದರಿಸಿ, ಅದನ್ನು ಒಣಗುವಂತೆ ಮಾಡುತ್ತಾರೆ. [QE][QS2]ಸಕಲನದಿಗಳನ್ನು ಬತ್ತಿಸುತ್ತಾರೆ. [QE][QS]ಬಾಷಾನು, ಕರ್ಮೆಲು ಬಾಡಿ ಹೋಗುತ್ತವೆ [QE][QS2]ಮತ್ತು ಲೆಬನೋನಿನ ಹೂವು ಬಾಡಿ ಹೋಗುತ್ತದೆ. [QE]
5. [QS]ಬೆಟ್ಟಗಳು ಅವರ ಮುಂದೆ ಕಂಪಿಸುತ್ತವೆ; [QE][QS2]ಗುಡ್ಡಗಳು ಕರಗುತ್ತವೆ; [QE][QS]ಭೂಮಿಯೂ, ಲೋಕವೂ, ಅದರ ನಿವಾಸಿಗಳೆಲ್ಲವೂ [QE][QS2]ಅವರ ಮುಂದೆ ನಡುಗುತ್ತವೆ. [QE]
6. [QS]ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? [QE][QS2]ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? [QE][QS]ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; [QE][QS2]ಬಂಡೆಗಳು ಆತನ ಮುಂದೆ ಕೆಡವಲಾಗಿವೆ. [QE][PBR]
7. [QS]ಯೆಹೋವ ದೇವರು ಒಳ್ಳೆಯವರು. [QE][QS2]ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ. [QE][QS]ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ. [QE]
2. [QS2]ಆದರೆ ಮೇರೆ ಮೀರುವ ಪ್ರಳಯದಿಂದ [QE][QS]ನಿನೆವೆಯನ್ನು ಮುಗಿಸಿಬಿಡುವರು. [QE][QS2]ಕತ್ತಲೆ ಅವರ ಶತ್ರಗಳನ್ನು ಹಿಂದಟ್ಟುವುದು. [QE][PBR]
9. [QS]ಯೆಹೋವ ದೇವರಿಗೆ ವಿರೋಧವಾಗಿ ಅವರು ಏನೇನು ಯೋಚಿಸಿರುವರೋ, [QE][QS2]ಅದನ್ನು ಅವರು ಅಂತ್ಯಗೊಳಿಸುವರು. [QE][QS2]ತೊಂದರೆಯು ಎರಡು ಸಾರಿ ಏಳದು. [QE]
10. [QS]ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, [QE][QS2]ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. [QE][QS2]ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು. [QE]
11. [QS]ನಿನೆವೆಯೇ ಯೆಹೋವ ದೇವರಿಗೆ [QE][QS2]ವಿರೋಧವಾಗಿ ದುರಾಲೋಚನೆ ಮಾಡಿ, [QE][QS2]ಕೇಡನ್ನು ಯೋಚಿಸುವವನು ನಿನ್ನೊಳಗಿಂದ ಹೊರಟಿದ್ದಾನೆ. [QE]
12. [PS]ಯೆಹೋವ ದೇವರು ಹೀಗೆ ಹೇಳುತ್ತಾರೆ: [PE][QS]ಅವರೊಂದಿಗೆ ಒಪ್ಪಂದ ಮಾಡಿಕೊಂಡವರಿದ್ದರೂ, [QE][QS2]ಅವರು ಬಹುಮಂದಿಯಾಗಿದ್ದರೂ ನಾಶಕ್ಕೆ ಒಳಗಾಗುವರು. [QE][QS]ಯೆಹೂದವೇ, ನಾನು ನಿನ್ನನ್ನು ಕಷ್ಟಪಡಿಸಿದಾಗ್ಯೂ, [QE][QS2]ಇನ್ನು ಮೇಲೆ ಕಷ್ಟಪಡಿಸೆನು. [QE]
13. [QS]ನಾನು ಈಗ ನಿನ್ನ ಮೇಲಿನ ಅವರ ನೊಗವನ್ನು ಮುರಿದು, [QE][QS2]ನಿನ್ನ ಬಂಧನಗಳನ್ನು ಹರಿದುಬಿಡುವೆನು. [QE][PBR]
14. [QS]ನಿನೆವೆಯೇ, ನಿನ್ನ ವಿಷಯವಾಗಿ ಯೆಹೋವ ದೇವರು ಆಜ್ಞಾಪಿಸುವುದೇನೆಂದರೆ: [QE][QS2]ಹೆಸರೆತ್ತಲು ನಿನಗೆ ಸಂತಾನವಿಲ್ಲದಂತೆ ಮಾಡುವೆನು. [QE][QS]ನಿನ್ನ ದೇವರ ಮಂದಿರದಲ್ಲಿರುವ ಕೆತ್ತಿದ ವಿಗ್ರಹವನ್ನೂ, [QE][QS2]ಎರಕ ಬೊಂಬೆಯನ್ನೂ ನಾಶಮಾಡುವೆನು. [QE][QS]ನೀನು ತುಚ್ಛನಾದದ್ದರಿಂದ [QE][QS2]ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು. [QE][PBR]
15. [QS]ಇಗೋ, ಪರ್ವತಗಳ ಮೇಲೆ ಶುಭಸಮಾಚಾರವನ್ನು ತಂದು, [QE][QS2]ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. [QE][QS]ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, [QE][QS2]ನಿನ್ನ ಹರಕೆಗಳನ್ನು ಸಲ್ಲಿಸು. [QE][QS]ಏಕೆಂದರೆ ಇನ್ನು ಮೇಲೆ ದುಷ್ಟರು ನಿನ್ನ ಮೇಲೆ ಮುತ್ತಿಗೆ ಹಾಕರು. [QE][QS2]ಅವರು ಸಂಪೂರ್ಣವಾಗಿ ನಾಶವಾಗುವರು. [QE]