ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಅರಣ್ಯಕಾಂಡ
1. {#1ದೇವಾಲಯದ ದೀಪಗಳು } [PS]ಯೆಹೋವ ದೇವರು ಮೋಶೆಗೆ:
2. “ಆರೋನನ ಸಂಗಡ ಮಾತನಾಡಿ ಅವನಿಗೆ ಹೀಗೆ ಹೇಳಬೇಕು, ‘ನೀನು ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳೂ ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಪ್ರಕಾಶಕೊಡುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.” [PE]
3. [PS]ಆರೋನನು ಹಾಗೆಯೇ ಮಾಡಿ, ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಅದರ ದೀಪಗಳನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.
4. ದೀಪಸ್ತಂಭವೂ ಅದರ ಬುಡಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಹೊಡೆದು ಮಾಡಲಾಗಿತ್ತು. ಯೆಹೋವ ದೇವರು ಮೋಶೆಗೆ ತೋರಿಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿದನು. [PE]
5. {#1ಲೇವಿಯರ ಶುದ್ಧೀಕರಣ } [PS]ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
6. “ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡು ಅವರನ್ನು ಪ್ರತ್ಯೇಕಿಸಿ ಶುದ್ಧಮಾಡು.
7. ಅವರನ್ನು ಶುದ್ಧಮಾಡುವುದಕ್ಕೆ ಅವರಿಗೆ ಮಾಡಬೇಕಾದದ್ದೇನೆಂದರೆ ಶುದ್ಧೀಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಅವರು ಸರ್ವಾಂಗ ಕ್ಷೌರ ಮಾಡಿಸಿಕೊಳ್ಳಲಿ. ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧ ಮಾಡಿಕೊಳ್ಳಬೇಕು.
8. ಅವರು ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು, ಅದರೊಂದಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ದೋಷಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ನೀನು ತೆಗೆದುಕೋ.
9. ಆಗ ನೀನು ಲೇವಿಯರನ್ನು ದೇವದರ್ಶನದ ಗುಡಾರದ ಮುಂದೆ ಕರೆತಂದು, ಇಸ್ರಾಯೇಲರ ಸಮೂಹವನ್ನೆಲ್ಲಾ ಒಟ್ಟುಗೂಡಿಸಬೇಕು.
10. ನೀನು ಲೇವಿಯರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಕರೆತಂದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
11. ಲೇವಿಯರು ಇಸ್ರಾಯೇಲರ ಪರವಾಗಿ ಯೆಹೋವ ದೇವರ ಸೇವೆಯನ್ನು ಮಾಡುವುದಕ್ಕೆ ಸಿದ್ಧರಾಗುವಂತೆ ಆರೋನನು ಅವರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು. [PE]
12. [PS]“ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರಿಗೆ ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿಯೂ ಮತ್ತೊಂದು ಹೋರಿಯನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು.
13. ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಪುತ್ರರ ಮುಂದೆಯೂ ನಿಲ್ಲಿಸಿ, ಅವರನ್ನು ಯೆಹೋವ ದೇವರಿಗೆ ನೈವೇದ್ಯದಂತೆ ಸಮರ್ಪಿಸಬೇಕು.
14. ಹೀಗೆ ನೀನು ಲೇವಿಯರನ್ನು ಇಸ್ರಾಯೇಲರೊಳಗಿಂದ ಪ್ರತ್ಯೇಕಿಸಬೇಕು, ಆಗ ಲೇವಿಯರು ನನ್ನವರಾಗುವರು. [PE]
15. [PS]“ಅದರ ತರುವಾಯ ಲೇವಿಯರು ಸೇವೆ ಮಾಡವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸುವರು. ಆಗ ನೀನು ಅವರನ್ನು ಶುದ್ಧೀಮಾಡಿ, ನೈವೇದ್ಯದಂತೆ ಸಮರ್ಪಿಸಬೇಕು.
16. ಏಕೆಂದರೆ ಅವರು ಇಸ್ರಾಯೇಲರಲ್ಲಿ ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಚೊಚ್ಚಲು ಮಕ್ಕಳಿಗೆ ಬದಲಾಗಿ, ಅಂದರೆ ಇಸ್ರಾಯೇಲರ ಜೇಷ್ಠಪುತ್ರರಿಗೆ ಬದಲಾಗಿ ನಾನು ಅವರನ್ನೇ ನನಗೋಸ್ಕರ ತೆಗೆದುಕೊಂಡಿದ್ದೇನೆ.
17. ಏಕೆಂದರೆ ಇಸ್ರಾಯೇಲರಲ್ಲಿ ಮನುಷ್ಯರಾದರೂ ಪಶುಗಳಾದರೂ ಜೇಷ್ಠರಾದದ್ದೆಲ್ಲಾ ನನ್ನದೇ. ನಾನು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹರಿಸಿದಾಗ ಇಸ್ರಾಯೇಲರಲ್ಲಿ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತ್ಯೇಕಿಸಿಕೊಂಡೆನು.
18. ಇಸ್ರಾಯೇಲರಲ್ಲಿರುವ ಎಲ್ಲಾ ಜೇಷ್ಠಪುತ್ರರಿಗೆ ಬದಲಾಗಿ ಲೇವಿಯರನ್ನು ನಾನು ತೆಗೆದುಕೊಂಡೆನು.
19. ಅವರು ದೇವದರ್ಶನದ ಗುಡಾರದಲ್ಲಿ ಇಸ್ರಾಯೇಲರ ಸೇವೆಯನ್ನು ಮಾಡುವುದಕ್ಕೂ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲರು ಸಮೀಪಿಸುವಾಗ ಇಸ್ರಾಯೇಲರೊಳಗೆ ವ್ಯಾಧಿಯು ಇರದಂತೆ ನಾನು ಲೇವಿಯರನ್ನು ಇಸ್ರಾಯೇಲರೊಳಗಿಂದ ಆರೋನನಿಗೂ, ಅವನ ಪುತ್ರರಿಗೂ ದಾನವಾಗಿ ಕೊಟ್ಟಿದ್ದೇನೆ.” [PE]
20. [PS]ಆಗ ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆಯೂ ಆರೋನನೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು.
21. ಲೇವಿಯರು ತಮ್ಮನ್ನು ಶುದ್ಧಿಮಾಡಿಕೊಂಡು, ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಯೆಹೋವ ದೇವರ ಮುಂದೆ ನೈವೇದ್ಯದಂತೆ ಅರ್ಪಿಸಿದನು. ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.
22. ತರುವಾಯ ಲೇವಿಯರು ದೇವದರ್ಶನದ ಗುಡಾರದಲ್ಲಿ ಆರೋನನ ಮುಂದೆಯೂ, ಅವನ ಪುತ್ರರ ಮುಂದೆಯೂ ಅವರ ಸೇವೆ ಮಾಡುವುದಕ್ಕೆ ಒಳಗೆ ಪ್ರವೇಶಿಸಿದರು. ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮಾಡಿದನು. [PE]
23. [PS]ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
24. “ಲೇವಿಯರಿಗೆ ಸಂಬಂಧಪಟ್ಟದ್ದು ಇದಾಗಿದೆ: ಇಪ್ಪತ್ತೈದು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ದೇವದರ್ಶನದ ಗುಡಾರದ ಸೇವೆಗಾಗಿ ಒಳಗೆ ಸೇರಬೇಕು.
25. ಆದರೆ ಐವತ್ತು ವರ್ಷದವರಾದ ನಂತರ ಸೇವೆಯನ್ನು ಬಿಟ್ಟು ನಿವೃತ್ತರಾಗಬೇಕು ಮತ್ತು ತದನಂತರ ಕೆಲಸಮಾಡಬಾರದು.
26. ಆದರೆ ಅವರು ದೇವದರ್ಶನದ ಗುಡಾರದಲ್ಲಿ ಅಪ್ಪಣೆಯನ್ನು ಕೈಗೊಂಡು ತಮ್ಮ ಸಹೋದರರೊಂದಿಗೆ ಕೆಲಸಮಾಡಲಿ, ಆದರೆ ಅವರು ಸೇವೆಯನ್ನು ತಾವಾಗಿ ಮಾಡಬಾರದು. ಈ ಪ್ರಕಾರ ನೀನು ಲೇವಿಯರಿಗೆ ಕರ್ತವ್ಯಗಳನ್ನು ಆಜ್ಞಾಪಿಸಬೇಕು,” ಎಂಬುದು. [PE]
ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 36
ದೇವಾಲಯದ ದೀಪಗಳು 1 ಯೆಹೋವ ದೇವರು ಮೋಶೆಗೆ: 2 “ಆರೋನನ ಸಂಗಡ ಮಾತನಾಡಿ ಅವನಿಗೆ ಹೀಗೆ ಹೇಳಬೇಕು, ‘ನೀನು ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳೂ ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಪ್ರಕಾಶಕೊಡುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.” 3 ಆರೋನನು ಹಾಗೆಯೇ ಮಾಡಿ, ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಅದರ ದೀಪಗಳನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು. 4 ದೀಪಸ್ತಂಭವೂ ಅದರ ಬುಡಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಹೊಡೆದು ಮಾಡಲಾಗಿತ್ತು. ಯೆಹೋವ ದೇವರು ಮೋಶೆಗೆ ತೋರಿಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿದನು. ಲೇವಿಯರ ಶುದ್ಧೀಕರಣ 5 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 6 “ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡು ಅವರನ್ನು ಪ್ರತ್ಯೇಕಿಸಿ ಶುದ್ಧಮಾಡು. 7 ಅವರನ್ನು ಶುದ್ಧಮಾಡುವುದಕ್ಕೆ ಅವರಿಗೆ ಮಾಡಬೇಕಾದದ್ದೇನೆಂದರೆ ಶುದ್ಧೀಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಅವರು ಸರ್ವಾಂಗ ಕ್ಷೌರ ಮಾಡಿಸಿಕೊಳ್ಳಲಿ. ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧ ಮಾಡಿಕೊಳ್ಳಬೇಕು. 8 ಅವರು ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು, ಅದರೊಂದಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ದೋಷಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ನೀನು ತೆಗೆದುಕೋ. 9 ಆಗ ನೀನು ಲೇವಿಯರನ್ನು ದೇವದರ್ಶನದ ಗುಡಾರದ ಮುಂದೆ ಕರೆತಂದು, ಇಸ್ರಾಯೇಲರ ಸಮೂಹವನ್ನೆಲ್ಲಾ ಒಟ್ಟುಗೂಡಿಸಬೇಕು. 10 ನೀನು ಲೇವಿಯರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಕರೆತಂದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು. 11 ಲೇವಿಯರು ಇಸ್ರಾಯೇಲರ ಪರವಾಗಿ ಯೆಹೋವ ದೇವರ ಸೇವೆಯನ್ನು ಮಾಡುವುದಕ್ಕೆ ಸಿದ್ಧರಾಗುವಂತೆ ಆರೋನನು ಅವರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು. 12 “ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರಿಗೆ ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿಯೂ ಮತ್ತೊಂದು ಹೋರಿಯನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು. 13 ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಪುತ್ರರ ಮುಂದೆಯೂ ನಿಲ್ಲಿಸಿ, ಅವರನ್ನು ಯೆಹೋವ ದೇವರಿಗೆ ನೈವೇದ್ಯದಂತೆ ಸಮರ್ಪಿಸಬೇಕು. 14 ಹೀಗೆ ನೀನು ಲೇವಿಯರನ್ನು ಇಸ್ರಾಯೇಲರೊಳಗಿಂದ ಪ್ರತ್ಯೇಕಿಸಬೇಕು, ಆಗ ಲೇವಿಯರು ನನ್ನವರಾಗುವರು. 15 “ಅದರ ತರುವಾಯ ಲೇವಿಯರು ಸೇವೆ ಮಾಡವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸುವರು. ಆಗ ನೀನು ಅವರನ್ನು ಶುದ್ಧೀಮಾಡಿ, ನೈವೇದ್ಯದಂತೆ ಸಮರ್ಪಿಸಬೇಕು. 16 ಏಕೆಂದರೆ ಅವರು ಇಸ್ರಾಯೇಲರಲ್ಲಿ ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಚೊಚ್ಚಲು ಮಕ್ಕಳಿಗೆ ಬದಲಾಗಿ, ಅಂದರೆ ಇಸ್ರಾಯೇಲರ ಜೇಷ್ಠಪುತ್ರರಿಗೆ ಬದಲಾಗಿ ನಾನು ಅವರನ್ನೇ ನನಗೋಸ್ಕರ ತೆಗೆದುಕೊಂಡಿದ್ದೇನೆ. 17 ಏಕೆಂದರೆ ಇಸ್ರಾಯೇಲರಲ್ಲಿ ಮನುಷ್ಯರಾದರೂ ಪಶುಗಳಾದರೂ ಜೇಷ್ಠರಾದದ್ದೆಲ್ಲಾ ನನ್ನದೇ. ನಾನು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹರಿಸಿದಾಗ ಇಸ್ರಾಯೇಲರಲ್ಲಿ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತ್ಯೇಕಿಸಿಕೊಂಡೆನು. 18 ಇಸ್ರಾಯೇಲರಲ್ಲಿರುವ ಎಲ್ಲಾ ಜೇಷ್ಠಪುತ್ರರಿಗೆ ಬದಲಾಗಿ ಲೇವಿಯರನ್ನು ನಾನು ತೆಗೆದುಕೊಂಡೆನು. 19 ಅವರು ದೇವದರ್ಶನದ ಗುಡಾರದಲ್ಲಿ ಇಸ್ರಾಯೇಲರ ಸೇವೆಯನ್ನು ಮಾಡುವುದಕ್ಕೂ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲರು ಸಮೀಪಿಸುವಾಗ ಇಸ್ರಾಯೇಲರೊಳಗೆ ವ್ಯಾಧಿಯು ಇರದಂತೆ ನಾನು ಲೇವಿಯರನ್ನು ಇಸ್ರಾಯೇಲರೊಳಗಿಂದ ಆರೋನನಿಗೂ, ಅವನ ಪುತ್ರರಿಗೂ ದಾನವಾಗಿ ಕೊಟ್ಟಿದ್ದೇನೆ.” 20 ಆಗ ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆಯೂ ಆರೋನನೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು. 21 ಲೇವಿಯರು ತಮ್ಮನ್ನು ಶುದ್ಧಿಮಾಡಿಕೊಂಡು, ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಯೆಹೋವ ದೇವರ ಮುಂದೆ ನೈವೇದ್ಯದಂತೆ ಅರ್ಪಿಸಿದನು. ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು. 22 ತರುವಾಯ ಲೇವಿಯರು ದೇವದರ್ಶನದ ಗುಡಾರದಲ್ಲಿ ಆರೋನನ ಮುಂದೆಯೂ, ಅವನ ಪುತ್ರರ ಮುಂದೆಯೂ ಅವರ ಸೇವೆ ಮಾಡುವುದಕ್ಕೆ ಒಳಗೆ ಪ್ರವೇಶಿಸಿದರು. ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮಾಡಿದನು. 23 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 24 “ಲೇವಿಯರಿಗೆ ಸಂಬಂಧಪಟ್ಟದ್ದು ಇದಾಗಿದೆ: ಇಪ್ಪತ್ತೈದು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ದೇವದರ್ಶನದ ಗುಡಾರದ ಸೇವೆಗಾಗಿ ಒಳಗೆ ಸೇರಬೇಕು. 25 ಆದರೆ ಐವತ್ತು ವರ್ಷದವರಾದ ನಂತರ ಸೇವೆಯನ್ನು ಬಿಟ್ಟು ನಿವೃತ್ತರಾಗಬೇಕು ಮತ್ತು ತದನಂತರ ಕೆಲಸಮಾಡಬಾರದು. 26 ಆದರೆ ಅವರು ದೇವದರ್ಶನದ ಗುಡಾರದಲ್ಲಿ ಅಪ್ಪಣೆಯನ್ನು ಕೈಗೊಂಡು ತಮ್ಮ ಸಹೋದರರೊಂದಿಗೆ ಕೆಲಸಮಾಡಲಿ, ಆದರೆ ಅವರು ಸೇವೆಯನ್ನು ತಾವಾಗಿ ಮಾಡಬಾರದು. ಈ ಪ್ರಕಾರ ನೀನು ಲೇವಿಯರಿಗೆ ಕರ್ತವ್ಯಗಳನ್ನು ಆಜ್ಞಾಪಿಸಬೇಕು,” ಎಂಬುದು.
ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 36
×

Alert

×

Kannada Letters Keypad References