1. {#3ಸೊಲೊಮೋನನ ಜ್ಞಾನೋಕ್ತಿಗಳು } [PS]ಸೊಲೊಮೋನನ ಜ್ಞಾನೋಕ್ತಿಗಳು: [PE][QS]ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನು ಉಂಟುಮಾಡುತ್ತಾನೆ. [QE][QS2]ಅಜ್ಞಾನಿಯಾದ ಮಗನಾದರೋ ತನ್ನ ತಾಯಿಗೆ ಶೋಕವನ್ನುಂಟು ಮಾಡುತ್ತಾನೆ. [QE][PBR]
2. [QS]ಅನ್ಯಾಯದ ಸಂಪತ್ತುಗಳು ಶಾಶ್ವತವಲ್ಲ, [QE][QS2]ಆದರೆ ನೀತಿಯು ಮರಣದಿಂದ ಬಿಡಿಸುತ್ತದೆ. [QE][PBR]
3. [QS]ನೀತಿವಂತನನ್ನು ಹಸಿವೆಯಿಂದ ಬಳಲುವಂತೆ ಯೆಹೋವ ದೇವರು ಬಿಡುವುದಿಲ್ಲ; [QE][QS2]ಆದರೆ ದುಷ್ಟರ ಆಶೆಯನ್ನು ಅವರು ಭಂಗಪಡಿಸುತ್ತಾರೆ. [QE][PBR]
4. [QS]ಆಲಸ್ಯದ ಕೈ ದರಿದ್ರನನ್ನಾಗಿ ಮಾಡುವದು; [QE][QS2]ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ. [QE][PBR]
5. [QS]ಬೇಸಿಗೆಯಲ್ಲಿ ಫಸಲನ್ನು ಕೂಡಿಸುವವರು ಬುದ್ಧಿವಂತ ಮಕ್ಕಳು, [QE][QS2]ಸುಗ್ಗಿಯಲ್ಲಿ ನಿದ್ರೆ ಮಾಡುವವರು ನಾಚಿಕೆಗೆಟ್ಟ ಮಕ್ಕಳು. [QE][PBR]
6. [QS]ನೀತಿವಂತರ ತಲೆಯ ಮೇಲೆ ಆಶೀರ್ವಾದವಿದೆ; [QE][QS2]ಆದರೆ ದುಷ್ಟರ ಬಾಯಲ್ಲಿ ಕ್ರೌರ್ಯ ಅಡಗಿದೆ. [QE][PBR]
7. [QS]ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; [QE][QS2]ಆದರೆ ದುಷ್ಟನ ಹೆಸರು ಕೊಳೆಯುವುದು.[* ಆದಿ 48:20 ] [QE][PBR]
8. [QS]ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು; [QE][QS2]ಆದರೆ ಹರಟೆಯ ಮೂರ್ಖನು ಬೀಳುವನು. [QE][PBR]
9. [QS]ಯಥಾರ್ಥ ನಡತೆಯವರು ಸುರಕ್ಷಿತವಾಗಿ ಜೀವಿಸುತ್ತಾರೆ; [QE][QS2]ಆದರೆ ವಕ್ರಮಾರ್ಗಗಳಲ್ಲಿ ನಡೆಯುವವನು ಬಯಲಿಗೆ ಬರುವನು. [QE][PBR]
10. [QS]ದುರುದ್ದೇಶದಿಂದ ಕಣ್ಣು ಮಿಟಕಿಸುವವನು ದುಃಖವನ್ನು ಉಂಟುಮಾಡುತ್ತಾನೆ, [QE][QS2]ಆದರೆ ಹರಟೆಯ ಮೂರ್ಖನು ಬೀಳುವನು. [QE][PBR]
11. [QS]ನೀತಿವಂತನ ಬಾಯಿಯು ಜೀವದ ಬುಗ್ಗೆ; [QE][QS2]ಆದರೆ ದುಷ್ಟನ ಬಾಯಿ ಹಿಂಸೆಯನ್ನು ಮರೆಮಾಡುತ್ತದೆ. [QE][PBR]
12. [QS]ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; [QE][QS2]ಆದರೆ ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚುತ್ತದೆ. [QE][PBR]
13. [QS]ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕುತ್ತದೆ; [QE][QS2]ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ. [QE][PBR]
14. [QS]ಜ್ಞಾನಿಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; [QE][QS2]ಆದರೆ ಮೂರ್ಖನ ಬಾಯಿ ವಿನಾಶವನ್ನು ಆಹ್ವಾನಿಸುತ್ತದೆ. [QE][PBR]
15. [QS]ಐಶ್ವರ್ಯವಂತರಿಗೆ ಸಂಪತ್ತೇ ಅವರ ಬಲವಾದ ಕೋಟೆ; [QE][QS2]ಆದರೆ, ಬಡತನವೇ ಬಡವರ ನಾಶನಕ್ಕೆ ಕಾರಣ. [QE][PBR]
16. [QS]ನೀತಿವಂತರ ದುಡಿತವು ಜೀವವಾಗುವುದು; [QE][QS2]ಆದರೆ, ದುಷ್ಟರ ಆದಾಯವು ಪಾಪ ಹಾಗು ಮರಣ. [QE][PBR]
17. [QS]ಶಿಸ್ತನ್ನು ಕೈಗೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; [QE][QS2]ಆದರೆ ತಿದ್ದುಪಾಟನ್ನು ತಿರಸ್ಕರಿಸುವವನು ಇತರರ ದಾರಿತಪ್ಪಿಸುವನು. [QE][PBR]
18. [QS]ದ್ವೇಷವನ್ನು ಮರೆಮಾಚುವವನು ಸುಳ್ಳುಗಾರ [QE][QS2]ಮತ್ತು ಚಾಡಿ ಹೇಳುವವನು ಮೂರ್ಖನು. [QE][PBR]
19. [QS]ಅತಿಯಾದ ಮಾತುಗಳಿಂದ ಪಾಪವು ಕೊನೆಗೊಳ್ಳುವುದಿಲ್ಲ. [QE][QS2]ಆದರೆ ಜ್ಞಾನವಂತನು ತನ್ನ ನಾಲಿಗೆಯನ್ನು ತಡೆಯುವನು. [QE][PBR]
20. [QS]ನೀತಿವಂತರ ನಾಲಿಗೆಯು ಚೊಕ್ಕಬೆಳ್ಳಿಯಂತಿದೆ; [QE][QS2]ದುಷ್ಟರ ಹೃದಯವು ಬೆಲೆಯಿಲ್ಲದ್ದು. [QE][PBR]
21. [QS]ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ, [QE][QS2]ಜ್ಞಾನದ ಕೊರತೆಯಿಂದ ಬುದ್ಧಿಹೀನರು ಸಾಯುತ್ತಾರೆ. [QE][PBR]
22. [QS]ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು; [QE][QS2]ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ. [QE][PBR]
23. [QS]ಮೂರ್ಖನಿಗೆ ಕೇಡು ಮಾಡುವುದರಲ್ಲಿ ಆನಂದ; [QE][QS2]ಆದರೆ ತಿಳುವಳಿಕೆಯ ವ್ಯಕ್ತಿಯು ಜ್ಞಾನದಲ್ಲಿ ಸಂತೋಷಪಡುತ್ತಾನೆ. [QE][PBR]
24. [QS]ದುಷ್ಟನ ಭೀತಿಯೇ ಅವನನ್ನು ಹಿಂದಿಕ್ಕುವುದು; [QE][QS2]ಆದರೆ ನೀತಿವಂತರ ಇಷ್ಟವು ಸಫಲವಾಗುವುದು. [QE][PBR]
25. [QS]ಬಿರುಗಾಳಿಯು ಬೀಸಿದರೆ, ದುಷ್ಟರು ಇಲ್ಲವಾಗುವರು; [QE][QS2]ಆದರೆ ನೀತಿವಂತರು ಶಾಶ್ವತವಾಗಿ ನಿಲ್ಲುವರು. [QE][PBR]
26. [QS]ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, [QE][QS2]ಯಜಮಾನನಿಗೆ ಸೋಮಾರಿಯು ಹಾಗೆಯೇ ಇರುವನು. [QE][PBR]
27. [QS]ಯೆಹೋವ ದೇವರ ಭಯವು ಜೀವನದ ದಿನಗಳನ್ನು ಹೆಚ್ಚಿಸುತ್ತದೆ; [QE][QS2]ದುಷ್ಟರ ವರ್ಷಗಳು ಕಡಿಮೆ ಆಗುವವು. [QE][PBR]
28. [QS]ನೀತಿವಂತರ ನಿರೀಕ್ಷೆಯು ಆನಂದಕರವಾಗಿರುವುದು; [QE][QS2]ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವುದು. [QE][PBR]
29. [QS]ಯೆಹೋವ ದೇವರ ಮಾರ್ಗವು ನಿರ್ದೋಷಿಗಳಿಗೆ ಆಶ್ರಯವಾಗಿದೆ; [QE][QS2]ಆದರೆ ಕೇಡು ಮಾಡುವವರಿಗೆ ಅದು ವಿನಾಶಕರವಾಗಿದೆ. [QE][PBR]
30. [QS]ನೀತಿವಂತರು ಎಂದಿಗೂ ಕದಲುವುದೇ ಇಲ್ಲ; [QE][QS2]ಆದರೆ ದುಷ್ಟರು ಭೂಮಿಯಲ್ಲಿ ನಿಲ್ಲುವುದಿಲ್ಲ. [QE][PBR]
31. [QS]ನೀತಿವಂತರ ಬಾಯಲ್ಲಿ ಜ್ಞಾನವು ಫಲಿಸುತ್ತದೆ; [QE][QS2]ಆದರೆ ಮೂರ್ಖನ ನಾಲಿಗೆಯು ಕತ್ತರಿಸಲಾಗುವುದು. [QE][PBR]
32. [QS]ಯೋಗ್ಯವಾದದ್ದು ಯಾವುದೆಂದು ನೀತಿವಂತರ ತುಟಿಗಳಿಗೆ ತಿಳಿಯುವುದು, [QE][QS2]ಆದರೆ, ದುಷ್ಟರ ಬಾಯಿ ಮೂರ್ಖತನವನ್ನೇ ಹೊರಗೆಡವುದು. [QE][PBR]