ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
1. [QS]ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ; [QE][QS2]ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ. [QE][PBR]
2. [QS]ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ಆನಂದಿಸುತ್ತಾನೆ, [QE][QS2]ಆದರೆ ವಿಶ್ವಾಸದ್ರೋಹಿಗಳಿಗೆ ಹಿಂಸೆಯ ಹಸಿವು ಇರುತ್ತದೆ. [QE][PBR]
3. [QS]ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; [QE][QS2]ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು. [QE][PBR]
4. [QS]ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ; [QE][QS2]ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು. [QE][PBR]
5. [QS]ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ, [QE][QS2]ಆದರೆ ದುಷ್ಟರು ತಮ್ಮನ್ನು ತಾವೇ ದುರ್ವಾಸನೆಗೊಳಪಡಿಸಿಕೊಳ್ಳುತ್ತಾರೆ [QE][QS2]ಮತ್ತು ತಮ್ಮ ಮೇಲೆ ಅವಮಾನವನ್ನು ತಂದುಕೊಳ್ಳುತ್ತಾರೆ. [QE][PBR]
6. [QS]ನೀತಿಯು ಯಥಾರ್ಥವಂತನನ್ನು ಕಾಪಾಡುತ್ತದೆ; [QE][QS2]ಆದರೆ ದುಷ್ಟತನವು ಪಾಪಿಯನ್ನು ಕೆಡವುತ್ತದೆ. [QE][PBR]
7. [QS]ಬಡವನಾಗಿದ್ದರೂ ಐಶ್ವರ್ಯವಂತನಾಗಿ ನಟಿಸುವವನು ಇದ್ದಾನೆ; [QE][QS2]ಮತ್ತೊಬ್ಬನು ದರಿದ್ರನಾಗಿ ಕಾಣಿಸಿದರೂ ಬಹು ಸಿರಿವಂತನೇ. [QE][PBR]
8. [QS]ಐಶ್ವರ್ಯವಂತನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯದಿಂದಲೇ; [QE][QS2]ಆದರೆ ಬಡವನು ಬೆದರಿಕೆಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. [QE][PBR]
9. [QS]ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ; [QE][QS2]ದುಷ್ಟರ ದೀಪವು ಆರಿಹೋಗುವುದು. [QE][PBR]
10. [QS]ಎಲ್ಲಿ ಗರ್ವವೋ ಅಲ್ಲಿ ಕಲಹ; [QE][QS2]ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ. [QE][PBR]
11. [QS]ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು; [QE][QS2]ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು. [QE][PBR]
12. [QS]ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; [QE][QS2]ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು. [QE][PBR]
13. [QS]ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; [QE][QS2]ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು. [QE][PBR]
14. [QS]ಮರಣದ ಪಾಶಗಳಿಂದ ತಪ್ಪಿಸಿಕೊಳ್ಳುವುದಕ್ಕೆ [QE][QS2]ಜ್ಞಾನವಂತರ ಉಪದೇಶವು ಜೀವದ ಬುಗ್ಗೆಯಾಗಿದೆ. [QE][PBR]
15. [QS]ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ; [QE][QS2]ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ. [QE][PBR]
16. [QS]ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; [QE][QS2]ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ. [QE][PBR]
17. [QS]ದುಷ್ಟ ದೂತನು ಕೇಡಿಗೆ ಬೀಳುತ್ತಾನೆ; [QE][QS2]ಆದರೆ ನಂಬಿಗಸ್ತನಾದ ರಾಯಭಾರಿಯು ಆರೋಗ್ಯದಾಯಕನು. [QE][PBR]
18. [QS]ಬೋಧನೆಯನ್ನು ಕಡೆಗಣಿಸುವವನಿಗೆ ಬಡತನವೂ, ಅವಮಾನವೂ ಬರುವುವು; [QE][QS2]ಗದರಿಕೆಯನ್ನು ಗಮನಿಸುವವನು ಸನ್ಮಾನ ಹೊಂದುವನು. [QE][PBR]
19. [QS]ಕನಸುಗಳು ನನಸಾಗುವುದನ್ನು ನೋಡುವುದು ಆಹ್ಲಾದಕರವಾಗಿರುತ್ತದೆ; [QE][QS2]ಕೆಟ್ಟತನದಿಂದ ತಿರುಗುವುದು ಮೂರ್ಖರಿಗೆ ಅಸಹ್ಯವಾಗಿದೆ. [QE][PBR]
20. [QS]ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; [QE][QS2]ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು. [QE][PBR]
21. [QS]ವಿಪತ್ತು ಪಾಪಿಗಳನ್ನು ಹಿಂಬಾಲಿಸುತ್ತದೆ; [QE][QS2]ಆದರೆ ನೀತಿವಂತರಿಗೆ ಒಳ್ಳೆಯದು ಪ್ರತಿಫಲವಾಗುವುದು. [QE][PBR]
22. [QS]ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; [QE][QS2]ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ. [QE][PBR]
23. [QS]ಬಡವರಿಗೆ ಜವುಳು ಭೂಮಿಯಲ್ಲಿಯೂ ಬಹು ಬೆಳೆಯು ಸಿಕ್ಕುತ್ತದೆ; [QE][QS2]ಅನ್ಯಾಯವು ಅದನ್ನು ಹಾರಿಸಿಬಿಡುವುದು. [QE][PBR]
24. [QS]ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ; [QE][QS2]ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ. [QE][PBR]
25. [QS]ನೀತಿವಂತನು ತನ್ನ ಪ್ರಾಣವು ತೃಪ್ತಿಯಾಗುವವರೆಗೆ ತಿನ್ನುತ್ತಾನೆ; [QE][QS2]ದುಷ್ಟರ ಹೊಟ್ಟೆಗೆ ಕೊರತೆಯಾಗುವುದು. [QE][PBR]
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 31
1 ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ; ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ. 2 ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ಆನಂದಿಸುತ್ತಾನೆ, ಆದರೆ ವಿಶ್ವಾಸದ್ರೋಹಿಗಳಿಗೆ ಹಿಂಸೆಯ ಹಸಿವು ಇರುತ್ತದೆ. 3 ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು. 4 ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ; ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು. 5 ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ, ಆದರೆ ದುಷ್ಟರು ತಮ್ಮನ್ನು ತಾವೇ ದುರ್ವಾಸನೆಗೊಳಪಡಿಸಿಕೊಳ್ಳುತ್ತಾರೆ ಮತ್ತು ತಮ್ಮ ಮೇಲೆ ಅವಮಾನವನ್ನು ತಂದುಕೊಳ್ಳುತ್ತಾರೆ. 6 ನೀತಿಯು ಯಥಾರ್ಥವಂತನನ್ನು ಕಾಪಾಡುತ್ತದೆ; ಆದರೆ ದುಷ್ಟತನವು ಪಾಪಿಯನ್ನು ಕೆಡವುತ್ತದೆ. 7 ಬಡವನಾಗಿದ್ದರೂ ಐಶ್ವರ್ಯವಂತನಾಗಿ ನಟಿಸುವವನು ಇದ್ದಾನೆ; ಮತ್ತೊಬ್ಬನು ದರಿದ್ರನಾಗಿ ಕಾಣಿಸಿದರೂ ಬಹು ಸಿರಿವಂತನೇ. 8 ಐಶ್ವರ್ಯವಂತನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯದಿಂದಲೇ; ಆದರೆ ಬಡವನು ಬೆದರಿಕೆಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. 9 ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ; ದುಷ್ಟರ ದೀಪವು ಆರಿಹೋಗುವುದು. 10 ಎಲ್ಲಿ ಗರ್ವವೋ ಅಲ್ಲಿ ಕಲಹ; ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ. 11 ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು; ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು. 12 ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು. 13 ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು. 14 ಮರಣದ ಪಾಶಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಜ್ಞಾನವಂತರ ಉಪದೇಶವು ಜೀವದ ಬುಗ್ಗೆಯಾಗಿದೆ. 15 ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ; ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ. 16 ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ. 17 ದುಷ್ಟ ದೂತನು ಕೇಡಿಗೆ ಬೀಳುತ್ತಾನೆ; ಆದರೆ ನಂಬಿಗಸ್ತನಾದ ರಾಯಭಾರಿಯು ಆರೋಗ್ಯದಾಯಕನು. 18 ಬೋಧನೆಯನ್ನು ಕಡೆಗಣಿಸುವವನಿಗೆ ಬಡತನವೂ, ಅವಮಾನವೂ ಬರುವುವು; ಗದರಿಕೆಯನ್ನು ಗಮನಿಸುವವನು ಸನ್ಮಾನ ಹೊಂದುವನು. 19 ಕನಸುಗಳು ನನಸಾಗುವುದನ್ನು ನೋಡುವುದು ಆಹ್ಲಾದಕರವಾಗಿರುತ್ತದೆ; ಕೆಟ್ಟತನದಿಂದ ತಿರುಗುವುದು ಮೂರ್ಖರಿಗೆ ಅಸಹ್ಯವಾಗಿದೆ. 20 ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು. 21 ವಿಪತ್ತು ಪಾಪಿಗಳನ್ನು ಹಿಂಬಾಲಿಸುತ್ತದೆ; ಆದರೆ ನೀತಿವಂತರಿಗೆ ಒಳ್ಳೆಯದು ಪ್ರತಿಫಲವಾಗುವುದು. 22 ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ. 23 ಬಡವರಿಗೆ ಜವುಳು ಭೂಮಿಯಲ್ಲಿಯೂ ಬಹು ಬೆಳೆಯು ಸಿಕ್ಕುತ್ತದೆ; ಅನ್ಯಾಯವು ಅದನ್ನು ಹಾರಿಸಿಬಿಡುವುದು. 24 ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ; ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ. 25 ನೀತಿವಂತನು ತನ್ನ ಪ್ರಾಣವು ತೃಪ್ತಿಯಾಗುವವರೆಗೆ ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವುದು.
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 31
×

Alert

×

Kannada Letters Keypad References