ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
1. [QS]ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ [QE][QS2]ಸಮಸ್ತ ಸುಜ್ಞಾನಕ್ಕೂ ರೇಗುವನು. [QE][PBR]
2. [QS]ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; [QE][QS2]ಆದರೆ ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವುದೇ ಅವನಿಗೆ ಸಂತೋಷ. [QE][PBR]
3. [QS]ದುಷ್ಟತ್ವವು ಬಂದಾಗ ತಾತ್ಸಾರವೂ, [QE][QS2]ಅವಮಾನದೊಂದಿಗೆ ನಿಂದೆಯೂ ಬರುತ್ತವೆ. [QE][PBR]
4. [QS]ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ, [QE][QS2]ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ. [QE][PBR]
5. [QS]ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ, [QE][QS2]ದುಷ್ಟರಿಗೆ ಪಕ್ಷಪಾತ ತೋರಿಸುವುದು ಯುಕ್ತವಲ್ಲ. [QE][PBR]
6. [QS]ಜ್ಞಾನಹೀನನ ತುಟಿಗಳು ಕಲಹದಲ್ಲಿ ಸೇರುವುದರಿಂದ [QE][QS2]ಏಟುಗಳನ್ನು ತಿನ್ನುವುದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ. [QE][PBR]
7. [QS]ಬುದ್ಧಿಹೀನನ ಬಾಯಿಯು ಅವನ ನಾಶನ; [QE][QS2]ಅವನ ತುಟಿಗಳು ಅವನ ಪ್ರಾಣಕ್ಕೆ ಪಾಶ. [QE][PBR]
8. [QS]ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; [QE][QS2]ಅವು ಹೊಟ್ಟೆಯ ಒಳಭಾಗಗಳಿಗೆ ಇಳಿದು ಹೋಗುವುವು. [QE][PBR]
9. [QS]ತನ್ನ ಕೆಲಸದಲ್ಲಿ ಸೋಮಾರಿಯಾಗಿರುವವನು, [QE][QS2]ಕೆಡುಕನಿಗೆ ಸಹೋದರನಾಗಿದ್ದಾನೆ. [QE][PBR]
10. [QS]ಯೆಹೋವ ದೇವರ ನಾಮವು ಬಲವಾದ ಬುರುಜು; [QE][QS2]ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ. [QE][PBR]
11. [QS]ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ [QE][QS2]ಅವನ ಕಲ್ಪನೆಯಲ್ಲಿ ಅದು ಸುರಕ್ಷತೆಯ ಎತ್ತರವಾದ ಗೋಡೆಯೂ ಆಗಿದೆ. [QE][PBR]
12. [QS]ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು; [QE][QS2]ಸನ್ಮಾನಕ್ಕೆ ಮುಂಚೆ ದೀನತ್ವವು ಬರುತ್ತದೆ. [QE][PBR]
13. [QS]ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ [QE][QS2]ಅದು ಮೂರ್ಖತನವೂ, ಅವಮಾನವೂ ಆಗಿದೆ. [QE][PBR]
14. [QS]ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು; [QE][QS2]ಆದರೆ ಮುರಿದ ಆತ್ಮವನ್ನು ಸಹಿಸುವವರು ಯಾರು? [QE][PBR]
15. [QS]ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; [QE][QS2]ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ. [QE][PBR]
16. [QS]ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; [QE][QS2]ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ. [QE][PBR]
17. [QS]ಪ್ರತಿವಾದಿ ಬಂದು ಪರಿಶೀಲಿಸುವವರೆಗೆ, [QE][QS2]ಮೊದಲು ವಾದಿಸುವವನು ನ್ಯಾಯವಂತನೆಂದು ತೋರುತ್ತಾನೆ. [QE][PBR]
18. [QS]ಚೀಟು ಹಾಕುವುದರಿಂದ ವ್ಯಾಜ್ಯಶಮನ; [QE][QS2]ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ. [QE][PBR]
19. [QS]ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಬೇಸರಗೊಂಡ ಸಹೋದರನನ್ನು ಗೆಲ್ಲುವುದು ಕಷ್ಟಕರ; [QE][QS2]ಅವರ ಕಲಹಗಳು ಕೋಟೆಯ ಬಾಗಿಲಿಗೆ ಅಗುಳಿಗಳಂತೆ ಇವೆ. [QE][PBR]
20. [QS]ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿ ಹೊಂದುವುದು; [QE][QS2]ತನ್ನ ತುಟಿಗಳ ಆದಾಯದಿಂದ ಅವನು ತೃಪ್ತಿಹೊಂದುವನು. [QE][PBR]
21. [QS]ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; [QE][QS2]ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು. [QE][PBR]
22. [QS]ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ, [QE][QS2]ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ. [QE][PBR]
23. [QS]ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; [QE][QS2]ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ. [QE][PBR]
24. [QS]ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ; [QE][QS2]ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ. [QE][PBR]
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 18 / 31
1 ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು. 2 ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ಆದರೆ ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವುದೇ ಅವನಿಗೆ ಸಂತೋಷ. 3 ದುಷ್ಟತ್ವವು ಬಂದಾಗ ತಾತ್ಸಾರವೂ, ಅವಮಾನದೊಂದಿಗೆ ನಿಂದೆಯೂ ಬರುತ್ತವೆ. 4 ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ, ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ. 5 ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ, ದುಷ್ಟರಿಗೆ ಪಕ್ಷಪಾತ ತೋರಿಸುವುದು ಯುಕ್ತವಲ್ಲ. 6 ಜ್ಞಾನಹೀನನ ತುಟಿಗಳು ಕಲಹದಲ್ಲಿ ಸೇರುವುದರಿಂದ ಏಟುಗಳನ್ನು ತಿನ್ನುವುದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ. 7 ಬುದ್ಧಿಹೀನನ ಬಾಯಿಯು ಅವನ ನಾಶನ; ಅವನ ತುಟಿಗಳು ಅವನ ಪ್ರಾಣಕ್ಕೆ ಪಾಶ. 8 ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಹೊಟ್ಟೆಯ ಒಳಭಾಗಗಳಿಗೆ ಇಳಿದು ಹೋಗುವುವು. 9 ತನ್ನ ಕೆಲಸದಲ್ಲಿ ಸೋಮಾರಿಯಾಗಿರುವವನು, ಕೆಡುಕನಿಗೆ ಸಹೋದರನಾಗಿದ್ದಾನೆ. 10 ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ. 11 ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ ಅವನ ಕಲ್ಪನೆಯಲ್ಲಿ ಅದು ಸುರಕ್ಷತೆಯ ಎತ್ತರವಾದ ಗೋಡೆಯೂ ಆಗಿದೆ. 12 ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು; ಸನ್ಮಾನಕ್ಕೆ ಮುಂಚೆ ದೀನತ್ವವು ಬರುತ್ತದೆ. 13 ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ ಅದು ಮೂರ್ಖತನವೂ, ಅವಮಾನವೂ ಆಗಿದೆ. 14 ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು; ಆದರೆ ಮುರಿದ ಆತ್ಮವನ್ನು ಸಹಿಸುವವರು ಯಾರು? 15 ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ. 16 ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ. 17 ಪ್ರತಿವಾದಿ ಬಂದು ಪರಿಶೀಲಿಸುವವರೆಗೆ, ಮೊದಲು ವಾದಿಸುವವನು ನ್ಯಾಯವಂತನೆಂದು ತೋರುತ್ತಾನೆ. 18 ಚೀಟು ಹಾಕುವುದರಿಂದ ವ್ಯಾಜ್ಯಶಮನ; ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ. 19 ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಬೇಸರಗೊಂಡ ಸಹೋದರನನ್ನು ಗೆಲ್ಲುವುದು ಕಷ್ಟಕರ; ಅವರ ಕಲಹಗಳು ಕೋಟೆಯ ಬಾಗಿಲಿಗೆ ಅಗುಳಿಗಳಂತೆ ಇವೆ. 20 ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿ ಹೊಂದುವುದು; ತನ್ನ ತುಟಿಗಳ ಆದಾಯದಿಂದ ಅವನು ತೃಪ್ತಿಹೊಂದುವನು. 21 ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು. 22 ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ, ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ. 23 ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ. 24 ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ; ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 18 / 31
×

Alert

×

Kannada Letters Keypad References