ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
1. [QS]ಬುದ್ಧಿಹೀನನ ವಕ್ರ ತುಟಿಗಳಿಗಿಂತ, [QE][QS2]ನಿರ್ದೋಷವಾಗಿ ನಡೆಯುವ ಬಡವನು ಉತ್ತಮ. [QE][PBR]
2. [QS]ಪರಿಜ್ಞಾನವಿಲ್ಲದ ಆಸಕ್ತಿಯು ಯುಕ್ತವಲ್ಲ; [QE][QS2]ತನ್ನ ಹೆಜ್ಜೆಗಳಲ್ಲಿ ದುಡುಕುವವನು ದಾರಿ ತಪ್ಪುವನು. [QE][PBR]
3. [QS]ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ, [QE][QS2]ಆದರೂ ಅವನ ಹೃದಯವು ಯೆಹೋವ ದೇವರಿಗೆ ವಿರೋಧವಾಗಿ ಉರಿಗೊಳ್ಳುತ್ತದೆ. [QE][PBR]
4. [QS]ಸಂಪತ್ತು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳುತ್ತದೆ; [QE][QS2]ಆದರೆ ಬಡವನು ತನ್ನ ಆಪ್ತಸ್ನೇಹಿತನಿಂದ ದೂರವಾಗುತ್ತಾನೆ. [QE][PBR]
5. [QS]ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; [QE][QS2]ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು. [QE][PBR]
6. [QS]ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ. [QE][QS2]ಕಾಣಿಕೆಗಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ. [QE][PBR]
7. [QS]ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ; [QE][QS2]ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? [QE][QS]ಮಾತುಗಳಿಂದ ಅವನು ಮೊರೆಯಿಟ್ಟು ಹಿಂಬಾಲಿಸಿದರೂ [QE][QS2]ಅವನಿಗೆ ಏನೂ ದೊರಕದು. [QE][PBR]
8. [QS]ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ; [QE][QS2]ತಿಳುವಳಿಕೆಯನ್ನು ಪ್ರೀತಿಸುವವನು ಶೀಘ್ರದಲ್ಲೇ ಏಳಿಗೆ ಹೊಂದುತ್ತಾನೆ. [QE][PBR]
9. [QS]ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ; [QE][QS2]ಸುಳ್ಳಾಡುವವನು ಹಾಳಾಗಿ ಹೋಗುವನು. [QE][PBR]
10. [QS]ಬುದ್ಧಿಹೀನನಿಗೆ ಭೋಗಜೀವನವು ಯುಕ್ತವಲ್ಲ; [QE][QS2]ಅಧಿಪತಿಗಳ ಮೇಲೆ ದೊರೆತನ ಮಾಡುವುದು ಸೇವಕನಿಗೆ ಯುಕ್ತವೇ ಅಲ್ಲ. [QE][PBR]
11. [QS]ಮನುಷ್ಯನ ಜ್ಞಾನವು ತಾಳ್ಮೆಯನ್ನು ನೀಡುತ್ತದೆ; [QE][QS2]ಅಪರಾಧವನ್ನು ಲಕ್ಷಿಸದೆ ಇರುವುದು ಅವನಿಗೆ ಮಹಿಮೆಯಾಗಿದೆ. [QE][PBR]
12. [QS]ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; [QE][QS2]ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ. [QE][PBR]
13. [QS]ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕರನು; [QE][QS2]ಜಗಳವಾಡುವ ಹೆಂಡತಿ [QE][QS2]ಯಾವಾಗಲೂ ತೊಟ್ಟಿಕ್ಕುವ ಹನಿ. [QE][PBR]
14. [QS]ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು; [QE][QS2]ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ. [QE][PBR]
15. [QS]ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; [QE][QS2]ಸೋಮಾರಿಯು ಹಸಿವೆಗೊಳ್ಳುವನು. [QE][PBR]
16. [QS]ಯಾರು ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ತನ್ನ ಜೀವವನ್ನು ಉಳಿಸಿಕೊಳ್ಳುತ್ತಾನೆ, [QE][QS2]ಆದರೆ ಅವುಗಳನ್ನು ಅಸಡ್ಡೆ ಮಾಡುವವನು ಸಾಯುವನು. [QE][PBR]
17. [QS]ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; [QE][QS2]ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು. [QE][PBR]
18. [QS]ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; [QE][QS2]ಅವನ ಮರಣಕ್ಕೆ ನೀನು ಕಾರಣನಾಗಬೇಡ. [QE][PBR]
19. [QS]ಕೋಪಿಷ್ಟನು ಶಿಕ್ಷೆಯನ್ನು ಅನುಭವಿಸುವನು; [QE][QS2]ಅವನನ್ನು ನೀನು ಬಿಡಿಸಿದರೆ, ತಿರುಗಿ ನೀನು ಬಿಡಿಸಬೇಕಾಗುವುದು. [QE][PBR]
20. [QS]ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು; [QE][QS2]ಕಡೆಯಲ್ಲಿ ನೀನು ಜ್ಞಾನಿಯಾಗುವೆ. [QE][PBR]
21. [QS]ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; [QE][QS2]ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು. [QE][PBR]
22. [QS]ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ. [QE][QS2]ಬಡವನು ಸುಳ್ಳುಗಾರನಿಗಿಂತ ಲೇಸು. [QE][PBR]
23. [QS]ಯೆಹೋವ ದೇವರ ಭಯವು ಜೀವದಾಯಕವು; [QE][QS2]ಆಗ ಅವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವುದಿಲ್ಲ. [QE][PBR]
24. [QS]ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, [QE][QS2]ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ! [QE][PBR]
25. [QS]ಪರಿಹಾಸ್ಯಗಾರನನ್ನು ಹೊಡೆದರೆ, ಮುಗ್ಧರು ಎಚ್ಚರಗೊಳ್ಳುವರು; [QE][QS2]ವಿವೇಕಿಯನ್ನು ಗದರಿಸಿದರೆ, ಅವನು ಪರಿಜ್ಞಾನವನ್ನು ಗ್ರಹಿಸುವನು. [QE][PBR]
26. [QS]ಯಾರು ತಂದೆಯನ್ನು ದೋಚಿಕೊಂಡು ತಾಯಿಯನ್ನು ಓಡಿಸುವರೋ [QE][QS2]ನಾಚಿಕೆಯನ್ನುಂಟುಮಾಡಿ, ನಿಂದೆಯನ್ನು ತರುತ್ತಾರೆ. [QE][PBR]
27. [QS]ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ, [QE][QS2]ಪರಿಜ್ಞಾನದ ಮಾತುಗಳಿಂದ ದಾರಿತಪ್ಪುವೆ. [QE][PBR]
28. [QS]ಭ್ರಷ್ಟನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿ ಮಾಡುತ್ತದೆ; [QE][QS2]ದುಷ್ಟನ ಬಾಯಿಯು ದ್ರೋಹವನ್ನು ನುಂಗುವುದು. [QE][PBR]
29. [QS]ಪರಿಹಾಸ್ಯಗಾರರಿಗೆ ನ್ಯಾಯ ತೀರ್ಪುಗಳೂ, [QE][QS2]ಬುದ್ಧಿಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ. [QE][PBR]
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 19 / 31
1 ಬುದ್ಧಿಹೀನನ ವಕ್ರ ತುಟಿಗಳಿಗಿಂತ, ನಿರ್ದೋಷವಾಗಿ ನಡೆಯುವ ಬಡವನು ಉತ್ತಮ. 2 ಪರಿಜ್ಞಾನವಿಲ್ಲದ ಆಸಕ್ತಿಯು ಯುಕ್ತವಲ್ಲ; ತನ್ನ ಹೆಜ್ಜೆಗಳಲ್ಲಿ ದುಡುಕುವವನು ದಾರಿ ತಪ್ಪುವನು. 3 ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ, ಆದರೂ ಅವನ ಹೃದಯವು ಯೆಹೋವ ದೇವರಿಗೆ ವಿರೋಧವಾಗಿ ಉರಿಗೊಳ್ಳುತ್ತದೆ. 4 ಸಂಪತ್ತು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳುತ್ತದೆ; ಆದರೆ ಬಡವನು ತನ್ನ ಆಪ್ತಸ್ನೇಹಿತನಿಂದ ದೂರವಾಗುತ್ತಾನೆ. 5 ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು. 6 ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ. ಕಾಣಿಕೆಗಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ. 7 ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ; ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಮೊರೆಯಿಟ್ಟು ಹಿಂಬಾಲಿಸಿದರೂ ಅವನಿಗೆ ಏನೂ ದೊರಕದು. 8 ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ; ತಿಳುವಳಿಕೆಯನ್ನು ಪ್ರೀತಿಸುವವನು ಶೀಘ್ರದಲ್ಲೇ ಏಳಿಗೆ ಹೊಂದುತ್ತಾನೆ. 9 ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ; ಸುಳ್ಳಾಡುವವನು ಹಾಳಾಗಿ ಹೋಗುವನು. 10 ಬುದ್ಧಿಹೀನನಿಗೆ ಭೋಗಜೀವನವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವುದು ಸೇವಕನಿಗೆ ಯುಕ್ತವೇ ಅಲ್ಲ. 11 ಮನುಷ್ಯನ ಜ್ಞಾನವು ತಾಳ್ಮೆಯನ್ನು ನೀಡುತ್ತದೆ; ಅಪರಾಧವನ್ನು ಲಕ್ಷಿಸದೆ ಇರುವುದು ಅವನಿಗೆ ಮಹಿಮೆಯಾಗಿದೆ. 12 ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ. 13 ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕರನು; ಜಗಳವಾಡುವ ಹೆಂಡತಿ ಯಾವಾಗಲೂ ತೊಟ್ಟಿಕ್ಕುವ ಹನಿ. 14 ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು; ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ. 15 ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; ಸೋಮಾರಿಯು ಹಸಿವೆಗೊಳ್ಳುವನು. 16 ಯಾರು ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ತನ್ನ ಜೀವವನ್ನು ಉಳಿಸಿಕೊಳ್ಳುತ್ತಾನೆ, ಆದರೆ ಅವುಗಳನ್ನು ಅಸಡ್ಡೆ ಮಾಡುವವನು ಸಾಯುವನು. 17 ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು. 18 ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಮರಣಕ್ಕೆ ನೀನು ಕಾರಣನಾಗಬೇಡ. 19 ಕೋಪಿಷ್ಟನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ, ತಿರುಗಿ ನೀನು ಬಿಡಿಸಬೇಕಾಗುವುದು. 20 ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು; ಕಡೆಯಲ್ಲಿ ನೀನು ಜ್ಞಾನಿಯಾಗುವೆ. 21 ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು. 22 ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ. ಬಡವನು ಸುಳ್ಳುಗಾರನಿಗಿಂತ ಲೇಸು. 23 ಯೆಹೋವ ದೇವರ ಭಯವು ಜೀವದಾಯಕವು; ಆಗ ಅವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವುದಿಲ್ಲ. 24 ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ! 25 ಪರಿಹಾಸ್ಯಗಾರನನ್ನು ಹೊಡೆದರೆ, ಮುಗ್ಧರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿದರೆ, ಅವನು ಪರಿಜ್ಞಾನವನ್ನು ಗ್ರಹಿಸುವನು. 26 ಯಾರು ತಂದೆಯನ್ನು ದೋಚಿಕೊಂಡು ತಾಯಿಯನ್ನು ಓಡಿಸುವರೋ ನಾಚಿಕೆಯನ್ನುಂಟುಮಾಡಿ, ನಿಂದೆಯನ್ನು ತರುತ್ತಾರೆ. 27 ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ, ಪರಿಜ್ಞಾನದ ಮಾತುಗಳಿಂದ ದಾರಿತಪ್ಪುವೆ. 28 ಭ್ರಷ್ಟನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿ ಮಾಡುತ್ತದೆ; ದುಷ್ಟನ ಬಾಯಿಯು ದ್ರೋಹವನ್ನು ನುಂಗುವುದು. 29 ಪರಿಹಾಸ್ಯಗಾರರಿಗೆ ನ್ಯಾಯ ತೀರ್ಪುಗಳೂ, ಬುದ್ಧಿಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 19 / 31
×

Alert

×

Kannada Letters Keypad References