1. [QS]ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; [QE][QS2]ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ. [QE][PBR]
2. [QS]ಅರಸನ ಭಯವು ಸಿಂಹದ ಘರ್ಜನೆಯಂತಿದೆ; [QE][QS2]ಅವನ ಕೋಪವನ್ನೆಬ್ಬಿಸುವವರು, ತಮ್ಮ ಪ್ರಾಣಕ್ಕೆ ಅಪಾಯ ತಂದುಕೊಳ್ಳುವರು. [QE][PBR]
3. [QS]ಕಲಹವನ್ನು ತಡೆಯುವವನು, ಮಾನಕ್ಕೆ ಯೋಗ್ಯನು; [QE][QS2]ಆದರೆ ಬುದ್ಧಿಹೀನನು ಮಾತ್ರ ಜಗಳವಾಡಲು ಒತ್ತಾಯಿಸುತ್ತಾನೆ. [QE][PBR]
4. [QS]ಮೈಗಳ್ಳನು ಮಳೆಗಾಲದಲ್ಲಿ ಉಳುಮೆ ಮಾಡುವುದಿಲ್ಲ; [QE][QS2]ಆದಕಾರಣ ಸುಗ್ಗಿಯಲ್ಲಿ ಅವನು ಅಪೇಕ್ಷಿಸಿದರೂ ಏನೂ ಸಿಕ್ಕುವುದಿಲ್ಲ. [QE][PBR]
5. [QS]ಮನುಷ್ಯನ ಹೃದಯದ ಆಲೋಚನೆಯು ಆಳವಾದ ಬಾವಿಯ ನೀರಿನಂತಿದೆ; [QE][QS2]ವಿವೇಕಿಯು ಅದನ್ನು ಸೇದುವನು. [QE][PBR]
6. [QS]ಅನೇಕರಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ಪ್ರಾಮಾಣಿಕತೆಯನ್ನು ಸಾರುವನು; [QE][QS2]ಆದರೆ ನಂಬಿಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು? [QE][PBR]
7. [QS]ನೀತಿವಂತನು ನಿರ್ದೋಷವಾಗಿ ಜೀವಿಸುತ್ತಾನೆ; [QE][QS2]ಅವನನ್ನು ಅನುಸರಿಸುವ ಅವನ ಮಕ್ಕಳು ಆಶೀರ್ವಾದ ಹೊಂದುವರು. [QE][PBR]
8. [QS]ಅರಸನು ತನ್ನ ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವಾಗ, [QE][QS2]ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು. [QE][PBR]
9. [QS]“ನನ್ನ ಹೃದಯವನ್ನು ಶುದ್ಧವಾಗಿ ಇಟ್ಟುಕೊಂಡಿದ್ದೇನೆ. [QE][QS2]ನಾನು ಶುದ್ಧನೂ ಪಾಪರಹಿತನೂ,” ಎಂದು ಯಾರು ಹೇಳಬಲ್ಲರು? [QE][PBR]
10. [QS]ಮೋಸದ ತೂಕಗಳೂ, ಮೋಸದ ಅಳತೆಗಳೂ [QE][QS2]ಇವೆರಡೂ ಯೆಹೋವ ದೇವರಿಗೆ ಅಸಹ್ಯ. [QE][PBR]
11. [QS]ಚಿಕ್ಕ ಮಕ್ಕಳಾದರೋ ತಮ್ಮ ಕ್ರಿಯೆಗಳಿಂದಲೇ, [QE][QS2]ತಾವು ಶುದ್ಧರೋ ಯಥಾರ್ಥರೋ ಎಂಬುದನ್ನು ತೋರ್ಪಡಿಸಿಕೊಳ್ಳುತ್ತಾರೆ. [QE][PBR]
12. [QS]ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು [QE][QS2]ಯೆಹೋವ ದೇವರು ಉಂಟುಮಾಡಿದ್ದಾನೆ. [QE][PBR]
13. [QS]ನೀವು ನಿದ್ರೆಯನ್ನು ಪ್ರೀತಿಸಿದರೆ, ನೀವು ಬಡತನದಲ್ಲಿ ಕೊನೆಗೊಳ್ಳುತ್ತೀರಿ; [QE][QS2]ನಿಮ್ಮ ಕಣ್ಣುಗಳನ್ನು ತೆರೆದರೆ, ಸಾಕಷ್ಟು ಆಹಾರ ಇರುತ್ತದೆ! [QE][PBR]
14. [QS]“ಇದು ಒಳ್ಳೆಯದಲ್ಲ ಇದು ಒಳ್ಳೆಯದಲ್ಲ!” ಎಂದು ಕೊಳ್ಳುವವನು ಹೇಳುತ್ತಾನೆ; [QE][QS2]ಆದರೆ ಅವನು ಕೊಂಡು ಹೋದ ಮೇಲೆ ಅದನ್ನೇ ಹೊಗಳುತ್ತಾನೆ. [QE][PBR]
15. [QS]ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ; [QE][QS2]ಆದರೆ ಪರಿಜ್ಞಾನದ ತುಟಿಗಳು ಅಪರೂಪದ ರತ್ನವಾಗಿವೆ. [QE][PBR]
16. [QS]ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; [QE][QS2]ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ. [QE][PBR]
17. [QS]ವಂಚನೆಯಿಂದ ಸಿಕ್ಕಿದ ಆಹಾರವು ರುಚಿ; [QE][QS2]ಆದರೆ ಆಮೇಲೆ ಅವನ ಬಾಯಿಯು ಮರಳಿನಿಂದ ತುಂಬುವುದು. [QE][PBR]
18. [QS]ಸಲಹೆಯಿಂದ ಯೋಜನೆಗಳು ನೆರವೆರುವವು; [QE][QS2]ಜ್ಞಾನಿಯ ಸಲಹೆಯಿಲ್ಲದೆ ಯುದ್ಧಕ್ಕೆ ಹೋಗಬೇಡಿ. [QE][PBR]
19. [QS]ಚಾಡಿಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ; [QE][QS2]ಆದಕಾರಣ ಹರಟೆ ಹೊಡೆಯುವವನ ಸಹವಾಸ ಮಾಡಬೇಡ. [QE][PBR]
20. [QS]ತನ್ನ ತಂದೆಯನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವನ [QE][QS2]ದೀಪವು ಮಧ್ಯರಾತ್ರಿಯ ಕತ್ತಲೆಯಲ್ಲಿ ಆರಿಹೋಗುವುದು. [QE][PBR]
21. [QS]ಪ್ರಾರಂಭದಲ್ಲಿ ತ್ವರೆಯಾಗಿ ಪಡೆದುಕೊಂಡ ಆಸ್ತಿಯೂ [QE][QS2]ಅಂತ್ಯದಲ್ಲಿ ಆಶೀರ್ವಾದವಾಗಿರುವುದಿಲ್ಲ. [QE][PBR]
22. [QS]ನೀನು, “ಕೇಡಿಗೆ ಮುಯ್ಯಿತೀರಿಸುವೆನು,” ಎಂದು ಹೇಳಬೇಡ; [QE][QS2]ಯೆಹೋವ ದೇವರನ್ನು ನಿರೀಕ್ಷಿಸು; ಆಗ ಅವರೇ ನಿಮ್ಮನ್ನು ರಕ್ಷಿಸಿ ಉದ್ಧರಿಸುವನು. [QE][PBR]
23. [QS]ವ್ಯತ್ಯಾಸದ ತೂಕಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; [QE][QS2]ಅಪ್ರಾಮಾಣಿಕ ತಕ್ಕಡಿಗಳು ಅವರನ್ನು ಮೆಚ್ಚಿಸುವುದಿಲ್ಲ. [QE][PBR]
24. [QS]ಮನುಷ್ಯನ ಹೆಜ್ಜೆಗಳನ್ನು ಯೆಹೋವ ದೇವರು ನಿರ್ದೇಶಿಸುತ್ತಾರೆ. [QE][QS2]ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಳ್ಳಬಲ್ಲನು? [QE][PBR]
25. [QS]ದುಡುಕಿ ಪ್ರತಿಷ್ಠೆಗಾಗಿ ದೇವರಿಗೆ ಹರಕೆ ಮಾಡಿಕೊಂಡು [QE][QS2]ಆಮೇಲೆ ವಿಚಾರಿಸುವುದು ಉರುಲಾಗಿದೆ. [QE][PBR]
26. [QS]ಜ್ಞಾನಿಯಾದ ಅರಸನು ದುಷ್ಟರನ್ನು ತೂರುವನು; [QE][QS2]ಅವರ ಮೇಲೆ ಕಣದ ಚಕ್ರವನ್ನು ಎಳೆಯುವನು. [QE][PBR]
27. [QS]ಮನುಷ್ಯನ ಆತ್ಮವು ಯೆಹೋವ ದೇವರ ದೀಪವಾಗಿದೆ. [QE][QS2]ಅದು ಅವನ ಅಂತರಂಗವನ್ನು ಶೋಧಿಸುತ್ತದೆ. [QE][PBR]
28. [QS]ಪ್ರೀತಿಯೂ ನಂಬಿಗಸ್ತಿಕೆಯೂ ಅರಸನನ್ನು ಕಾಯುತ್ತವೆ; [QE][QS2]ಪ್ರೀತಿಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ. [QE][PBR]
29. [QS]ಯೌವನಸ್ಥರ ಮಹಿಮೆ ಅವರ ಬಲವೇ; [QE][QS2]ಮುದುಕರ ವೈಭವ ನರೆತ ತಲೆಯೇ. [QE][PBR]
30. [QS]ಗಾಯಗೊಳಿಸುವ ಏಟುಗಳು ದುಷ್ಟತ್ವವನ್ನು ತೊಳೆಯುತ್ತವೆ; [QE][QS2]ಪೆಟ್ಟುಗಳು ಅಂತರಂಗವನ್ನೂ ಶುದ್ಧಿಗೊಳಿಸುತ್ತವೆ. [QE][PBR]