1. [QS]ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; [QE][QS2]ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ. [QE][PBR]
2. [QS]ಮನುಷ್ಯನ ಪ್ರತಿಯೊಂದು ಮಾರ್ಗವು ಅವನ ದೃಷ್ಟಿಯಲ್ಲಿ ಸರಿಯಾಗಿದೆ; [QE][QS2]ಆದರೆ ಯೆಹೋವ ದೇವರು ಹೃದಯಗಳನ್ನು ಪರೀಕ್ಷಿಸುತ್ತಾರೆ. [QE][PBR]
3. [QS]ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು [QE][QS2]ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ. [QE][PBR]
4. [QS]ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, [QE][QS2]ದುಷ್ಟರ ಉಳುವಿಕೆ ಇವೆಲ್ಲಾ ಪಾಪವೇ. [QE][PBR]
5. [QS]ಶ್ರದ್ಧೆಯುಳ್ಳವನ ಯೋಜನೆಗಳಿಂದ ಸಮೃದ್ಧಿ; [QE][QS2]ಆತುರತೆಯು ಬಡತನಕ್ಕೆ ನಡೆಸುತ್ತದೆ. [QE][PBR]
6. [QS]ಸುಳ್ಳಿನ ನಾಲಿಗೆಯಿಂದ ಸಂಪಾದಿಸಿದ ಸಂಪತ್ತು [QE][QS2]ಕ್ಷಣಿಕ ಆವಿಯಂತೆಯೂ ಮೃತ್ಯುಪಾಶದಂತೆಯೂ ಆಗಿದೆ. [QE][PBR]
7. [QS]ದುಷ್ಟರ ಹಿಂಸೆಯು ಅವರನ್ನು ನಾಶಪಡಿಸುವುದು; [QE][QS2]ಏಕೆಂದರೆ ನ್ಯಾಯವಾದದ್ದನ್ನು ಮಾಡುವುದನ್ನು ಅವರು ನಿರಾಕರಿಸುತ್ತಾರೆ. [QE][PBR]
8. [QS]ದೋಷಿಯ ಮಾರ್ಗವು ಡೊಂಕು, [QE][QS2]ಮುಗ್ಧನ ನಡತೆ ಯಥಾರ್ಥ. [QE][PBR]
9. [QS]ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, [QE][QS2]ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು. [QE][PBR]
10. [QS]ದುಷ್ಟರು ಕೇಡನ್ನು ಅಪೇಕ್ಷಿಸುತ್ತಾರೆ; [QE][QS2]ಅವನು ತನ್ನ ನೆರೆಯವನಿಗೂ ಯಾವ ದಯೆಯನ್ನೂ ತೋರಿಸನು. [QE][PBR]
11. [QS]ಪರಿಹಾಸ್ಯಕಾರರನ್ನು ಶಿಕ್ಷಿಸಿದರೆ, ಮುಗ್ಧರು ಜ್ಞಾನವಂತರಾಗುವರು; [QE][QS2]ಜ್ಞಾನಿಯು ಶಿಕ್ಷಣ ಹೊಂದಿದರೆ, ಅವನು ಪರಿಜ್ಞಾನವನ್ನು ಹೊಂದುತ್ತಾನೆ. [QE][PBR]
12. [QS]ನೀತಿವಂತನು ದುಷ್ಟರ ಮನೆಯನ್ನು ಗಮನಿಸುತ್ತಾನೆ; [QE][QS2]ದುಷ್ಟರನ್ನು ಕೇಡಿಗೆ ತಳ್ಳುವನು. [QE][PBR]
13. [QS]ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು [QE][QS2]ತಾನೇ ಕೂಗಿದಾಗ ಯಾರೂ ಅವನಿಗೆ ಉತ್ತರ ಕೊಡುವುದಿಲ್ಲ. [QE][PBR]
14. [QS]ಗುಟ್ಟಾಗಿ ಕೊಡುವ ಬಹುಮಾನವು ಕೋಪವನ್ನು ಅಡಗಿಸುವುದು; [QE][QS2]ಮಡಿಲಲ್ಲಿ ಇಟ್ಟ ಲಂಚವು ಮಹಾ ಕೋಪವನ್ನು ಆರಿಸುವುದು. [QE][PBR]
15. [QS]ನ್ಯಾಯತೀರಿಸುವುದು ನೀತಿವಂತರಿಗೆ ಸಂತೋಷ; [QE][QS2]ಆದರೆ ಕೆಟ್ಟದ್ದನ್ನು ಮಾಡುವವರಿಗೆ ಭೀತಿ. [QE][PBR]
16. [QS]ವಿವೇಕದ ಹಾದಿಯಿಂದ ತಪ್ಪಿಸಿಕೊಳ್ಳುವವನು [QE][QS2]ಸತ್ತವರ ಸಹವಾಸದಲ್ಲಿ ವಿಶ್ರಾಂತಿ ಪಡೆಯುವನು. [QE][PBR]
17. [QS]ಭೋಗಾಸಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ, [QE][QS2]ತೈಲವನ್ನೂ ಅಪೇಕ್ಷಿಸುವವನು ಎಂದಿಗೂ ಧನವಂತನಾಗನು. [QE][PBR]
18. [QS]ದುಷ್ಟರು ನೀತಿವಂತರಿಗೂ, [QE][QS2]ದ್ರೋಹಿಗಳು ಸನ್ಮಾರ್ಗಿಗಳಿಗೂ ಈಡಾಗಿದ್ದಾರೆ. [QE][PBR]
19. [QS]ಕಾಡುವ ಜಗಳಗಂಟಿ ಹೆಂಡತಿಯೊಂದಿಗೆ ವಾಸಮಾಡುವುದಕ್ಕಿಂತ, [QE][QS2]ಮರಭೂಮಿಯಲ್ಲಿ ವಾಸಿಸುವುದು ಲೇಸು. [QE][PBR]
20. [QS]ಜ್ಞಾನವಂತರ ನಿವಾಸದಲ್ಲಿ ಆಯ್ದ ಐಶ್ವರ್ಯವೂ, ಎಣ್ಣೆಯೂ ಇರುತ್ತವೆ; [QE][QS2]ಆದರೆ ಬುದ್ಧಿಹೀನನು ಇದ್ದದ್ದೆಲ್ಲವನ್ನು ನುಂಗಿಬಿಡುತ್ತಾನೆ. [QE][PBR]
21. [QS]ನೀತಿಯನ್ನೂ, ಕರುಣೆಯನ್ನೂ ಹಿಂಬಾಲಿಸುವವನು [QE][QS2]ಜೀವವನ್ನೂ, ನೀತಿಯನ್ನೂ, ಕೀರ್ತಿಯನ್ನೂ ಕಂಡುಕೊಳ್ಳುತ್ತಾನೆ. [QE][PBR]
22. [QS]ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ, [QE][QS2]ಅವರು ಭರವಸವಿಟ್ಟ ಬಲವಾದ ಕೋಟೆಯನ್ನು ಕೆಡವಿ ಹಾಕುತ್ತಾನೆ. [QE][PBR]
23. [QS]ತನ್ನ ಬಾಯಿಯನ್ನೂ, ನಾಲಿಗೆಯನ್ನೂ ಕಾಯುವವನು, [QE][QS2]ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ. [QE][PBR]
24. [QS]ಸೊಕ್ಕೇರಿ ಗರ್ವದಲ್ಲಿ ವರ್ತಿಸುವವನ [QE][QS2]ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕ. [QE][PBR]
25. [QS]ಸೋಮಾರಿಯ ಆಸೆಯು ಅವನನ್ನು ಕೊಲ್ಲುತ್ತದೆ; [QE][QS2]ಅವನ ಕೈಗಳು ದುಡಿಯುವುದಕ್ಕೆ ನಿರಾಕರಿಸುತ್ತವೆ. [QE]
26. [QS]ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; [QE][QS2]ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ. [QE][PBR]
27. [QS]ದುಷ್ಟರ ಯಜ್ಞವು ಅಸಹ್ಯ; [QE][QS2]ಅದನ್ನು ದುರ್ಬುದ್ಧಿಯಿಂದ ಅರ್ಪಿಸಿದರೆ, ಇನ್ನೂ ಎಷ್ಟೋ ಅಸಹ್ಯಕರ. [QE][PBR]
28. [QS]ಸುಳ್ಳುಸಾಕ್ಷಿಯವನು ನಾಶವಾಗುವನು; [QE][QS2]ಆದರೆ ಕೇಳಿದ್ದನ್ನೇ ನುಡಿಯುವವನ ಸಾಕ್ಷಿ ಸದಾ ನಿಲ್ಲುವುದು. [QE][PBR]
29. [QS]ದುಷ್ಟನು ತನ್ನ ಮುಖವನ್ನು ಕಠಿಣ ಮಾಡಿಕೊಳ್ಳುತ್ತಾನೆ; [QE][QS2]ಯಥಾರ್ಥವಂತನಾದರೋ ತನ್ನ ಮಾರ್ಗಗಳನ್ನು ಯೋಚಿಸುತ್ತಾರೆ. [QE][PBR]
30. [QS]ಯೆಹೋವ ದೇವರಿಗೆ ವಿರೋಧವಾಗಿ [QE][QS2]ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ. [QE][PBR]
31. [QS]ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; [QE][QS2]ಆದರೆ ಜಯ ದೊರೆಯುವುದು ಯೆಹೋವ ದೇವರಿಂದಲೇ. [QE][PBR]