1. {#3ಮತ್ತಷ್ಟು ಸೊಲೊಮೋನನ ಜ್ಞಾನೋಕ್ತಿಗಳು }
2. [PS]ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳೇ. [PE][QS]ವಿಷಯವನ್ನು ರಹಸ್ಯ ಮಾಡುವುದು ದೇವರ ಮಹಿಮೆ. [QE][QS2]ಒಂದು ವಿಷಯವನ್ನು ಹುಡುಕುವುದು ರಾಜರ ಮಹಿಮೆ. [QE]
3. [QS]ಆಕಾಶದ ಎತ್ತರವನ್ನು, ಭೂಮಿಯ ಆಳವನ್ನು ಯಾರೂ ಗ್ರಹಿಸಲು ಸಾಧ್ಯವಿಲ್ಲ. [QE][QS2]ಹಾಗೆಯೇ ಅರಸರ ಹೃದಯವು ಅಗೋಚರ. [QE][PBR]
4. [QS]ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, [QE][QS2]ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ರೂಪಗೊಳ್ಳುವುದು. [QE]
5. [QS]ಅರಸನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ, [QE][QS2]ಆಗ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವುದು. [QE][PBR]
6. [QS]ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; [QE][QS2]ದೊಡ್ಡವರಿಗೆ ಏರ್ಪಡಿಸಿದ ಸ್ಥಾನವನ್ನು ಕೇಳಬೇಡ. [QE]
7. [QS]ಘನವಂತರ ಸನ್ನಿಧಿಯಲ್ಲಿ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ, [QE][QS2]“ಮೇಲಕ್ಕೆ ಬಾ,” ಎಂದು ಅರಸನು ನಿನಗೆ ಹೇಳುವುದು ಲೇಸು. [QE][PBR] [QS]ನೀವು ಏನನ್ನೋ ಕಂಡಿದ್ದರಿಂದ, [QE]
2. [QS2]ದುಡುಕಿ ವ್ಯಾಜ್ಯಮಾಡುವುದಕ್ಕಾಗಿ ಹೋಗಬೇಡ. [QE][QS]ಏಕೆಂದರೆ ನಿನ್ನ ನೆರೆಯವನು ನಿನ್ನನ್ನು ಅವಮಾನ ಮಾಡಿದಾಗ, [QE][QS2]ನೀನು ಕಡೆಯಲ್ಲಿ ಏನು ಮಾಡುವೆ? [QE][PBR]
9. [QS]ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; [QE][QS2]ಇನ್ನೊಬ್ಬರ ಗುಟ್ಟನ್ನು ಬಹಿರಂಗಪಡಿಸಬೇಡ, [QE]
10. [QS]ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು; [QE][QS2]ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು. [QE][PBR]
11. [QS]ಸಮಯೋಚಿತವಾದ ಮಾತು [QE][QS2]ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ. [QE]
12. [QS]ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; [QE][QS2]ಚೊಕ್ಕ ಬಂಗಾರದ ಆಭರಣ. [QE][PBR]
13. [QS]ಸುಗ್ಗಿಯ ಕಾಲದಲ್ಲಿ ಹಿಮದ ಶೀತದ ಹಾಗೆ [QE][QS2]ತನ್ನನ್ನು ಕಳುಹಿಸುವವರಿಗೆ ನಂಬಿಗಸ್ತನಾದ ಸೇವಕನಿದ್ದಾನೆ; [QE][QS2]ಏಕೆಂದರೆ ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ. [QE]
14. [QS]ದಾನ ಕೊಡದೆ ಕೊಟ್ಟಿದ್ದೇನೆಂದು ಹೊಗಳಿಕೊಳ್ಳುವವನು, [QE][QS2]ಮಳೆ ಇಲ್ಲದ ಮೋಡಗಳ ಮತ್ತು ಗಾಳಿಯ ಹಾಗೆ ಇದ್ದಾನೆ. [QE][PBR]
15. [QS]ತಾಳ್ಮೆಯ ಮೂಲಕ ಪ್ರಭುವನ್ನು ಒಲಿಸಿಕೊಳ್ಳಬಹುದು; [QE][QS2]ಮೃದುವಾದ ಮಾತು ಎಲುಬನ್ನು ಮುರಿಯುತ್ತದೆ. [QE][PBR]
16. [QS]ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟೇ ತಿನ್ನು; [QE][QS2]ಹೊಟ್ಟೆ ತುಂಬಾ ತಿಂದರೆ ಕಾರಬೇಕಾದೀತು. [QE]
17. [QS]ನಿನ್ನ ನೆರೆಯವನ ಮನೆಗೆ ಅಪರೂಪಕ್ಕೆ ಹೆಜ್ಜೆ ಇಡು; [QE][QS2]ಇಲ್ಲವಾದರೆ ನಿನ್ನ ವಿಷಯವಾಗಿ ಅವನು ಬೇಸರಗೊಂಡು ನಿನ್ನನ್ನು ಹಗೆಮಾಡಾನು. [QE][PBR]
18. [QS]ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು [QE][QS2]ಚಮಟಿಗೆ, ಖಡ್ಗ, ಹರಿತವಾದ ಬಾಣವಾಗಿದ್ದಾನೆ. [QE]
19. [QS]ಕಷ್ಟಕಾಲದಲ್ಲಿ ಅಪನಂಬಿಗಸ್ತನಾದ ಮನುಷ್ಯನಲ್ಲಿಯ [QE][QS2]ಭರವಸೆಯು ಮುರಿದ ಹಲ್ಲು, ಕೀಲು ತಪ್ಪಿದ ಪಾದವು. [QE]
20. [QS]ಮನಗುಂದಿದವನಿಗೆ ಸಂಗೀತ ಹಾಡುವುದು [QE][QS2]ಚಳಿಯಲ್ಲಿ ಬಟ್ಟೆ ಬಿಚ್ಚಿದ ಹಾಗೆಯೂ [QE][QS2]ಹುಳಿ ಉಪ್ಪನ್ನು ಗಾಯಕ್ಕೆ ಹಚ್ಚಿದಂತೆಯೂ. [QE][PBR]
21. [QS]ನಿನ್ನ ಶತ್ರು ಹಸಿದಿದ್ದರೆ ಉಣ್ಣುವುದಕ್ಕೆ ಅವನಿಗೆ ಊಟಕೊಡು; [QE][QS2]ಅವನು ಬಾಯಾರಿದ್ದರೆ ಕುಡಿಯುವುದಕ್ಕೆ ನೀರು ಕೊಡು. [QE]
22. [QS]ಏಕೆಂದರೆ ಅದು ಅವನ ತಲೆಯ ಮೇಲೆ ಉರಿಯುವ ಬೆಂಕಿಯ ಕೆಂಡಗಳನ್ನು ಸುರಿಯುವಂತಿರುವುದು; [QE][QS2]ಯೆಹೋವ ದೇವರು ನಿನಗೆ ಪ್ರತಿಫಲ ಕೊಡುವರು. [QE][PBR]
23. [QS]ಅನಿರೀಕ್ಷಿತ ಮಳೆಯನ್ನು ತರುವ ಉತ್ತರದ ಗಾಳಿಯಂತೆ [QE][QS2]ಚಾಡಿಯ ನಾಲಿಗೆ ಕೋಪದ ಮುಖ ಮಾಡುತ್ತದೆ. [QE][PBR]
24. [QS]ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, [QE][QS2]ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು. [QE][PBR]
25. [QS]ಬಾಯಾರಿದವನಿಗೆ ತಣ್ಣೀರು ಹೇಗೋ [QE][QS2]ದೂರದೇಶದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ. [QE]
26. [QS]ದುಷ್ಟರ ಮುಂದೆ ನೀತಿವಂತನು ಸೋಲುವುದು, ಕೆಸರಿನ ಬುಗ್ಗೆಗೂ [QE][QS2]ಕೊಳಕು ಒರತೆಗೂ ಸಮಾನ. [QE][PBR]
27. [QS]ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ; [QE][QS2]ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವುದು ಗೌರವವಲ್ಲ. [QE][PBR]
28. [QS]ತನ್ನ ಸ್ವಂತ ಆತ್ಮವನ್ನು ಆಳದಿರುವವನು, [QE][QS2]ಗೋಡೆ ಬಿದ್ದ ಹಾಳೂರಿಗೆ ಸಮಾನ. [QE]