1. [QS]ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; [QE][QS2]ಏಕೆಂದರೆ ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು. [QE][PBR]
2. [QS]ನಿನ್ನ ಬಾಯಿ ಅಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; [QE][QS2]ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ. [QE][PBR]
3. [QS]ಕಲ್ಲು ಭಾರ, ಮರಳು ಭಾರ; [QE][QS2]ಆದರೆ ಇವೆರಡಕ್ಕಿಂತ ಮೂಢನ ಕೋಪವು ಬಹು ಭಾರ. [QE][PBR]
4. [QS]ಕ್ರೋಧವು ಕ್ರೂರ, ಕೋಪವು ಪ್ರವಾಹ; [QE][QS2]ಆದರೆ ಅಸೂಯೆದ ಮುಂದೆ ಯಾವನು ನಿಂತಾನು? [QE][PBR]
5. [QS]ರಹಸ್ಯವಾದ ಪ್ರೀತಿಗಿಂತಲೂ [QE][QS2]ಬಹಿರಂಗವಾದ ಗದರಿಕೆಯೇ ಲೇಸು. [QE][PBR]
6. [QS]ಸ್ನೇಹಿತನು ಮಾಡುವ ಗಾಯಗಳು ಭರವಸೆಗೆ ಯೋಗ್ಯವಾದದ್ದು; [QE][QS2]ಆದರೆ ಶತ್ರುವಿನ ಮುದ್ದುಗಳು ಹೇರಳವಾಗಿವೆ. [QE][PBR]
7. [QS]ತೃಪ್ತಿ ಹೊಂದಿದವನು ಜೇನುತುಪ್ಪವನ್ನೂ ಅಸಹ್ಯಿಸಿಕೊಳ್ಳುತ್ತಾನೆ; [QE][QS2]ಆದರೆ ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ. [QE][PBR]
8. [QS]ತನ್ನ ಮನೆಯನ್ನು ಬಿಟ್ಟು ಅಲೆಯುವ ಮನುಷ್ಯನು [QE][QS2]ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿಯಂತೆ ಇದ್ದಾನೆ. [QE][PBR]
9. [QS]ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ, [QE][QS2]ಆದರಣೆಯ ಸಲಹೆಯೂ ಸ್ನೇಹಿತನಿಗೆ ಮಧುರವಾಗಿರುತ್ತದೆ. [QE][PBR]
10. [QS]ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; [QE][QS2]ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; [QE][QS2]ಏಕೆಂದರೆ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು. [QE][PBR]
11. [QS]ನನ್ನನ್ನು ನಿಂದಿಸುವವರಿಗೆ ನಾನು ಉತ್ತರಿಸುವಂತೆಯೂ, [QE][QS2]ನನ್ನ ಹೃದಯವನ್ನು ಸಂತೋಷಪಡಿಸುವಂತೆಯೂ, ನನ್ನ ಮಗುವೇ, ಜ್ಞಾನಿಯಾಗಿರು. [QE][PBR]
12. [QS]ಜಾಣನು ಕೇಡನ್ನು ಮುಂದಾಗಿ ಕಂಡು ಅಡಗಿಕೊಳ್ಳುತ್ತಾನೆ; [QE][QS2]ಆದರೆ ಮುಗ್ಧನು ಮುಂದೆ ಹೋಗಿ ಹಾನಿಗೆ ಈಡಾಗುತ್ತಾನೆ. [QE][PBR]
13. [QS]ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; [QE][QS2]ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ. [QE][PBR]
14. [QS]ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ, [QE][QS2]ಅದು ಶಾಪವೆಂದು ಪರಿಗಣಿಸಲಾಗುವುದು. [QE][PBR]
15. [QS]ಜಗಳ ಮಾಡುವ ಹೆಂಡತಿಯು [QE][QS2]ಮಳೆಗಾಲದಲ್ಲಿ ಸೋರುವ ಛಾವಣಿಯಂತಿದೆ. [QE]
16. [QS]ಅವಳನ್ನು ಅಡಗಿಸುವುದು, ಗಾಳಿಯನ್ನು ಅಡಗಿಸಿದಂತೆ; [QE][QS2]ಕೈಯಿಂದ ಎಣ್ಣೆಯನ್ನು ಹಿಡಿದಂತೆ. [QE][PBR]
17. [QS]ಕಬ್ಬಿಣವು ಕಬ್ಬಿಣವನ್ನು ಹರಿತ ಮಾಡುವಂತೆ [QE][QS2]ಒಬ್ಬನು ಮತ್ತೊಬ್ಬನನ್ನು ಹರಿತ ಮಾಡುವನು. [QE][PBR]
18. [QS]ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; [QE][QS2]ಹಾಗೆಯೇ ಯಜಮಾನನಿಗಾಗಿ ಕಾಯುವವನು ಸನ್ಮಾನ ಹೊಂದುವನು. [QE][PBR]
19. [QS]ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಜೀವನವು [QE][QS2]ಅವನ ಹೃದಯವನ್ನು ಪ್ರತಿಬಿಂಬಿಸುತ್ತದೆ.[* ಆದ್ದರಿಂದ ಇತರರು ನಿಮ್ಮ ಹೃದಯವನ್ನು ನಿಮಗೆ ಹಿಂದಿರುಗಿಸುತ್ತಾರೆ ] [QE][PBR]
20. [QS]ಪಾತಾಳಕ್ಕೂ ವಿನಾಶಕ್ಕೂ ತೃಪ್ತಿ ಇಲ್ಲವೇ ಇಲ್ಲ; [QE][QS2]ಹಾಗೆಯೇ, ಮನುಷ್ಯನ ಕಣ್ಣುಗಳು ಎಂದಿಗೂ ತೃಪ್ತಿಹೊಂದುವುದಿಲ್ಲ. [QE][PBR]
21. [QS]ಬೆಳ್ಳಿ, ಬಂಗಾರಗಳ ಪುಟಕ್ಕೆ ಕುಲುಮೆ ಹೇಗೆಯೋ, [QE][QS2]ಹಾಗೆಯೇ ಹೊಗಳಿಕೆಯು ಮನುಷ್ಯನನ್ನು ಪರೀಕ್ಷಿಸುತ್ತದೆ. [QE][PBR]
22. [QS]ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಹಾಕಿ, [QE][QS2]ಒಣಕೆಯಿಂದ ಕುಟ್ಟಿದರೂ, [QE][QS2]ಅವನಿಂದ ಮೂರ್ಖನತವು ತೊಲಗುವುದಿಲ್ಲ. [QE][PBR]
23. [QS]ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; [QE][QS2]ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ. [QE]
24. [QS]ಐಶ್ವರ್ಯವು ಶಾಶ್ವತವಲ್ಲ; [QE][QS2]ಕಿರೀಟವು ತಲತಲಾಂತರಕ್ಕೂ ಇರುವುದಿಲ್ಲ. [QE]
25. [QS]ಒಣಹುಲ್ಲನ್ನು ಕೊಯ್ದು ನಂತರ ಹೊಸ ಬೆಳೆ ಕಾಣಿಸಿಕೊಂಡಾಗ [QE][QS2]ಮತ್ತು ಬೆಟ್ಟಗಳಿಂದ ಹುಲ್ಲು ಸಂಗ್ರಹಿಸಿದಾಗ, [QE]
26. [QS]ಆಗ ಕುರಿಮರಿಗಳು ನಿಮಗೆ ಬಟ್ಟೆಗಳನ್ನು ಒದಗಿಸುತ್ತವೆ, [QE][QS2]ಆಡುಗಳ ಬೆಲೆಗೆ ನೀವು ಹೊಲವನ್ನು ಖರೀದಿಸಬಹುದು, [QE]
27. [QS]ನಿನ್ನ ಊಟಕ್ಕಾಗಿಯೂ, ನಿನ್ನ ಮನೆಯವರ ಆಹಾರಕ್ಕಾಗಿಯೂ [QE][QS2]ನಿನ್ನ ದಾಸಿಯರ ಜೀವನಕ್ಕಾಗಿಯೂ ಬೇಕಾದಷ್ಟು ಆಡುಗಳ ಹಾಲು ಸಾಕಾಗುತ್ತದೆ. [QE][PBR]