1. [QS]ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ [QE][QS2]ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು. [QE][PBR]
2. [QS]ಶಿಷ್ಟರು ಅಧಿಕಾರಕ್ಕೆ ಬಂದರೆ ಜನರು ಹರ್ಷಿಸುತ್ತಾರೆ. [QE][QS2]ಆದರೆ ದುಷ್ಟರು ಆಳಿದರೆ, ಜನರಿಗೆ ನರಳಾಟ. [QE][PBR]
3. [QS]ಜ್ಞಾನಪ್ರಿಯನು ತಂದೆಗೆ ಆನಂದ [QE][QS2]ಆದರೆ ವೇಶ್ಯೆಯರ ಸಹವಾಸದಿಂದ ಆಸ್ತಿಯ ವಿನಾಶ. [QE][PBR]
4. [QS]ನ್ಯಾಯದಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ, [QE][QS2]ಆದರೆ ಲಂಚಕೋರ ಅಧಿಕಾರಿ ದೇಶವನ್ನು ಕೆಡವಿ ಹಾಕುತ್ತಾನೆ. [QE][PBR]
5. [QS]ತನ್ನ ನೆರೆಯವನನ್ನು ಸುಮ್ಮನೇ ಹೊಗಳುತ್ತಿರುವವನು, [QE][QS2]ನೆರೆಯವನ ಕಾಲಿಗೆ ಬಲೆಯನ್ನು ಒಡ್ಡುತ್ತಾನೆ. [QE][PBR]
6. [QS]ಕೆಟ್ಟವನು ತನ್ನ ಪಾಪದಿಂದಲೇ ಸಿಕ್ಕಿಹಾಕಿಕೊಳ್ಳುತ್ತಾನೆ, [QE][QS2]ಆದರೆ ನೀತಿವಂತನು ಸಂತೋಷದಿಂದ ಹಾಡಿ ಹರ್ಷಿಸುತ್ತಾನೆ. [QE][PBR]
7. [QS]ಬಡವರ ನ್ಯಾಯಕ್ಕಾಗಿ ನೀತಿವಂತನು ಚಿಂತಿಸುತ್ತಾನೆ. [QE][QS2]ಆದರೆ ದುಷ್ಟನಿಗೆ ಅಂಥಾ ಚಿಂತೆಯೇ ಇಲ್ಲ. [QE][PBR]
8. [QS]ಪರಿಹಾಸ್ಯಗಾರರು ಪಟ್ಟಣದಲ್ಲಿ ಗಲಾಟೆ ಎಬ್ಬಿಸುತ್ತಾರೆ. [QE][QS2]ಆದರೆ ಜ್ಞಾನಿಗಳು ಕೋಪವನ್ನು ಆರಿಸುವರು. [QE][PBR]
9. [QS]ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯಮಾಡುವಾಗ, [QE][QS2]ಮೂರ್ಖನು ರೇಗಿದರೂ ಅಪಹಾಸ್ಯಮಾಡಿದರೂ ಸಮಾಧಾನವೇ ಇರುವುದಿಲ್ಲ. [QE][PBR]
10. [QS]ಕೊಲೆಪಾತಕರು ಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. [QE][QS2]ಆದರೆ ಯಥಾರ್ಥವಂತರನ್ನು ನಾಶಮಾಡಲು ಯತ್ನಿಸುತ್ತಾರೆ. [QE][PBR]
11. [QS]ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು. [QE][QS2]ಆದರೆ ಜ್ಞಾನಿಯು ಕೋಪವನ್ನು ಶಾಂತಿಯಿಂದ ತಡೆಹಿಡಿಯುತ್ತಾನೆ. [QE][PBR]
12. [QS]ಒಬ್ಬ ಅಧಿಕಾರಿಯು ಸುಳ್ಳಿಗೆ ಕಿವಿಗೊಟ್ಟರೆ, [QE][QS2]ಅವನ ಸೇವಕರೆಲ್ಲರೂ ದುಷ್ಟರಾಗುತ್ತಾರೆ. [QE][PBR]
13. [QS]ಬಡವರಿಗೂ ದಬ್ಬಾಳಿಕೆ ನಡೆಸುವವರಿಗೂ ಒಂದು ಸಂಗತಿ ಹುದುವಾಗಿರುವುದು: [QE][QS2]ಯೆಹೋವ ದೇವರು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವರು ಎಂಬುದೇ. [QE][PBR]
14. [QS]ಅರಸನು ಬಡವರಿಗೆ ಪಕ್ಷಪಾತವಿಲ್ಲದೆ ನ್ಯಾಯತೀರಿಸಿದರೆ, [QE][QS2]ಅವನ ಸಿಂಹಾಸನವು ಎಂದೆಂದಿಗೂ ಸ್ಥಿರಗೊಳ್ಳುವುದು. [QE][PBR]
15. [QS]ಬೆತ್ತ ಮತ್ತು ಬೆದರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; [QE][QS2]ಆದರೆ ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ. [QE][PBR]
16. [QS]ದುಷ್ಟರು ವೃದ್ಧಿಯಾದಾಗ, ಪಾಪವು ವೃದ್ಧಿಯಾಗುತ್ತದೆ. [QE][QS2]ಆದರೆ ನೀತಿವಂತರು ದುಷ್ಟರ ಬೀಳುವಿಕೆಯನ್ನು ಕಣ್ಣಾರೆ ನೋಡುವರು. [QE][PBR]
17. [QS]ನಿನ್ನ ಮಕ್ಕಳನ್ನು ಶಿಕ್ಷಿಸಿದರೆ, ಅವರು ನಿನಗೆ ಮನಶಾಂತಿಯನ್ನು ಕೊಡುವರು; [QE][QS2]ಹೌದು, ಅವರು ನೀನು ಬಯಸುವ ಹರ್ಷವನ್ನು ನಿನಗೆ ತರುವರು. [QE][PBR]
18. [QS]ದೈವ ಪ್ರಕಟನೆ ಇಲ್ಲದಿರುವಾಗ, ಜನರು ನಾಶವಾಗುತ್ತಾರೆ; [QE][QS2]ಆದರೆ ಜ್ಞಾನೋಪದೇಶವನ್ನು ಕೈಗೊಳ್ಳುವವನು ಧನ್ಯನು. [QE][PBR]
19. [QS]ಮಾತಿನಿಂದ ಮಾತ್ರ ಕೆಲಸಗಾರರನ್ನು ತಿದ್ದಲು ಸಾಧ್ಯವಿಲ್ಲ; [QE][QS2]ಏಕೆಂದರೆ ಅವರು ಅರ್ಥಮಾಡಿಕೊಂಡರೂ, ಅದರಂತೆ ನಡೆಯುವುದಿಲ್ಲ. [QE][PBR]
20. [QS]ದುಡುಕಿ ಮಾತನಾಡುವ ವ್ಯಕ್ತಿಯನ್ನು ನೀನು ನೋಡಿದ್ದೀಯೋ? [QE][QS2]ಅಂಥವನಿಗಿಂತಲೂ ಬುದ್ಧಿಹೀನನ ವಿಷಯದಲ್ಲಿ ಹೆಚ್ಚು ನಿರೀಕ್ಷೆ ಇದೆ. [QE][PBR]
21. [QS]ಬಾಲ್ಯದಿಂದ ಕೆಲಸಗಾರನನ್ನು ಅನುಕೂಲವಾಗಿ ಸಾಕಿ ಬಿಟ್ಟರೆ, [QE][QS2]ತರುವಾಯ ಅವನು ಎದುರು ಬೀಳಲು ಸಾಧ್ಯ. [QE][PBR]
22. [QS]ಕೋಪಿಷ್ಟನು ಜಗಳವನ್ನೆಬ್ಬಿಸುವನು, [QE][QS2]ಮುಂಗೋಪಿಯು ಅನೇಕ ಪಾಪಗಳನ್ನು ಮಾಡುತ್ತಾನೆ. [QE][PBR]
23. [QS]ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು; [QE][QS2]ಆದರೆ ಆತ್ಮದಲ್ಲಿ ದೀನರು ಮೆಚ್ಚಿಕೆಯನ್ನು ಪಡೆಯುವರು. [QE][PBR]
24. [QS]ಕಳ್ಳರ ಸಹವಾಸ ಮಾಡುವವರು ತಮಗೆ ತಾವೇ ಶತ್ರುಗಳು. [QE][QS2]ಅವರು ಆಣೆ ಇಟ್ಟರೂ ಅವರಲ್ಲಿ ಬದಲಾವಣೆ ಇರುವುದಿಲ್ಲ. [QE][PBR]
25. [QS]ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; [QE][QS2]ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು. [QE][PBR]
26. [QS]ಅನೇಕರು ಅಧಿಕಾರಿಯ ದಯೆಯನ್ನು ಹುಡುಕುತ್ತಾರೆ. [QE][QS2]ಆದರೆ ಯೆಹೋವ ದೇವರಿಂದಲೇ ಪ್ರತಿಯೊಬ್ಬರಿಗೂ ನ್ಯಾಯ ದೊರಕುತ್ತದೆ. [QE][PBR]
27. [QS]ನೀತಿವಂತರು ಅಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. [QE][QS2]ದುಷ್ಟರು ಪ್ರಾಮಾಣಿಕರನ್ನು ತಿರಸ್ಕರಿಸುತ್ತಾರೆ. [QE]