ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಙ್ಞಾನೋಕ್ತಿಗಳು
1. {#1ಜ್ಞಾನದ ಕರೆ } [QS]ಜ್ಞಾನವು ಕರೆಯುತ್ತದಲ್ಲವೋ? [QE][QS2]ತಿಳುವಳಿಕೆ ಎಂಬಾಕೆಯು ತನ್ನ ಸ್ವರವನ್ನು ಎತ್ತಿ ಕೂಗಿ ಕರೆಯುವುದಿಲ್ಲವೋ? [QE]
2. [QS]ಉನ್ನತ ಸ್ಥಳಗಳ ತುದಿಯಲ್ಲಿಯೂ, [QE][QS2]ಹಾದಿಗಳ ಸಂಧಿಗಳಲ್ಲಿಯೂ ನಿಂತುಕೊಳ್ಳುತ್ತಾಳೆ. [QE]
3. [QS]ಪಟ್ಟಣದ ಪ್ರವೇಶ ದ್ವಾರಗಳಲ್ಲಿಯೂ [QE][QS2]ಒಳಗೆ ಬರುವಾಗ ಅವಳು ಸ್ವರವೆತ್ತಿ ಹೇಳುವುದೇನೆಂದರೆ, [QE]
4. [QS]“ಮನುಷ್ಯರೇ, ನಾನು ಕರೆಯುತ್ತಿರುವುದು ನಿಮ್ಮನ್ನೇ, [QE][QS2]ಮಾನವರಿಗಾಗಿಯೇ ನಾನು ಧ್ವನಿಗೈಯುತ್ತೇನೆ. [QE]
5. [QS]ಮುಗ್ಧರೇ, ಜ್ಞಾನವನ್ನು ಗ್ರಹಿಸಿರಿ. [QE][QS2]ಬುದ್ಧಿಹೀನರೇ, ನೀವು ತಿಳುವಳಿಕೆಯ ಹೃದಯದವರಾಗಿರಿ. [QE]
6. [QS]ಕೇಳಿರಿ, ಉತ್ಕೃಷ್ಟ ಸಂಗತಿಗಳನ್ನು ನಾನು ಮಾತಾಡುವೆನು; [QE][QS2]ನ್ಯಾಯವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯುವೆನು. [QE]
7. [QS]ನನ್ನ ಬಾಯಿಯು ಸತ್ಯವನ್ನು ಮಾತಾಡುವುದು; [QE][QS2]ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ. [QE]
8. [QS]ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯುಕ್ತವಾಗಿವೆ; [QE][QS2]ಮೂರ್ಖತನವಾಗಲಿ, ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ. [QE]
9. [QS]ವಿವೇಚಿಸುವವನಿಗೆ ನನ್ನ ಎಲ್ಲ ಮಾತುಗಳು ನೇರವಾಗಿರುವುದು. [QE][QS2]ತಿಳುವಳಿಕೆ ಉಳ್ಳವನಿಗೆ ಅವು ಪ್ರಾಮಾಣಿಕವಾಗಿಯೂ ಇರುವುದು. [QE]
10. [QS]ಬೆಳ್ಳಿಗಿಂತ ನನ್ನ ಬೋಧನೆಯನ್ನು ಆರಿಸಿಕೋ [QE][QS2]ಉತ್ತಮ ಬಂಗಾರಕ್ಕಿಂತ ಮಿಗಿಲಾದ ತಿಳುವಳಿಕೆಯನ್ನು ಪಡೆದುಕೋ. [QE]
11. [QS]ಏಕೆಂದರೆ ಮಾಣಿಕ್ಯಗಳಿಗಿಂತ ಜ್ಞಾನವು ಅಮೂಲ್ಯವಾದದ್ದು. [QE][QS2]ಅಪೇಕ್ಷಿಸತಕ್ಕ ಯಾವ ವಸ್ತುಗಳನ್ನು ಅದಕ್ಕೆ ಹೋಲಿಸಲಾಗದು. [QE][PBR]
12. [QS]“ಜ್ಞಾನವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. [QE][QS2]ತಿಳುವಳಿಕೆಯನ್ನೂ ವಿವೇಚನೆಯನ್ನೂ ನಾನು ಹೊಂದಿದ್ದೇನೆ. [QE]
13. [QS]ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; [QE][QS2]ಗರ್ವ, ಅಹಂಕಾರ, ಕೆಟ್ಟನಡವಳಿಕೆ, [QE][QS2]ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ. [QE]
14. [QS]ಸಮಾಲೋಚನೆಯೂ ಒಳ್ಳೆಯ ನ್ಯಾಯವೂ ನನ್ನಲ್ಲಿದೆ. [QE][QS2]ನನ್ನಲ್ಲಿ ಒಳನೋಟವೂ ಶಕ್ತಿಯೂ ಇವೆ. [QE]
15. [QS]ನನ್ನ ಮೂಲಕ ರಾಜರು ಆಳುವರು; [QE][QS2]ಪ್ರಧಾನರು ನ್ಯಾಯವಾದ ತೀರ್ಪು ಕೊಡುವರು. [QE]
16. [QS]ನನ್ನಿಂದ ಅಧಿಪತಿಗಳು ಆಳುತ್ತಾರೆ, [QE][QS2]ಕೀರ್ತಿವಂತರೆಲ್ಲರೂ ಭೂಮಿಯ ಮೇಲೆ ಆಳುವರು. [QE]
17. [QS]ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ; [QE][QS2]ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು. [QE]
18. [QS]ಐಶ್ವರ್ಯವೂ ಘನತೆಯೂ, [QE][QS2]ಶಾಶ್ವತ ಸಂಪತ್ತು ಹಾಗೂ ಸಮೃದ್ಧಿಯು ನನ್ನೊಂದಿಗಿವೆ. [QE]
19. [QS]ನನ್ನ ಫಲವು ಬಂಗಾರಕ್ಕಿಂತಲೂ, [QE][QS2]ನನ್ನ ಆದಾಯವು ಉತ್ತಮವಾದ ಬೆಳ್ಳಿಗಿಂತಲೂ ಶ್ರೇಷ್ಠವಾಗಿವೆ. [QE]
20. [QS]ನೀತಿಯ ಮಾರ್ಗದಲ್ಲಿಯೂ [QE][QS2]ನ್ಯಾಯದ ದಾರಿ ನಡುವೆಯೂ ನಾನು ನಡೆಯುತ್ತೇನೆ. [QE]
21. [QS]ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದುವರು. [QE][QS2]ನಾನು ಅವರ ಬೊಕ್ಕಸಗಳನ್ನು ತುಂಬಿಸುವೆನು. [QE][PBR]
22. [QS]“ಯೆಹೋವ ದೇವರು ತಮ್ಮ ಸೃಷ್ಟಿಕ್ರಮದಲ್ಲಿ ನನ್ನನ್ನು ಮೊದಲು ನಿರ್ಮಿಸಿದರು, [QE][QS2]ದೇವರ ಪುರಾತನ ಕಾರ್ಯಗಳಲ್ಲಿ ನಾನೇ ಮೊದಲು; [QE]
23. [QS]ಪ್ರಾರಂಭದಲ್ಲಿ ಜಗದುತ್ಪತ್ತಿಗೆ ಮುಂಚೆಯೇ [QE][QS2]ಅನಾದಿಕಾಲದಲ್ಲಿ ದೇವರು ನನ್ನನ್ನು ಸೃಷ್ಟಿಸಿದರು. [QE]
24. [QS]ಆಗಾಧಗಳು ಇಲ್ಲದೆ ಇರುವಾಗ ನಾನು ಹುಟ್ಟಿ ಬಂದೆನು, [QE][QS2]ನೀರಿನ ಬುಗ್ಗೆಗಳು ಇಲ್ಲದೆ ಇರುವಾಗಲೇ ನಾನಿದ್ದೆನು. [QE]
25. [QS]ಪರ್ವತಗಳು ಸ್ಥಾಪಿತವಾಗುವುದಕ್ಕಿಂತ ಮುಂಚೆಯೂ [QE][QS2]ಬೆಟ್ಟಗುಡ್ಡಗಳಿಗಿಂತ ಮೊದಲು ನಾನು ಜನಿಸಿದೆನು. [QE]
26. [QS]ಭೂಮಿಯನ್ನೂ ಹೊಲಗಳನ್ನೂ ಲೋಕದ ಅಣುಗಳನ್ನೂ [QE][QS2]ಅವರು ನಿರ್ಮಿಸದೆ ಇರುವಾಗಲೇ ನಾನು ಜನಿಸಿದೆನು. [QE]
27. [QS]ಅವರು ಆಕಾಶಗಳನ್ನು ಸಿದ್ಧಪಡಿಸಿದಾಗ [QE][QS2]ಸಾಗರದ ಮೇಲೆ ಚಕ್ರವನ್ನು ಹಾಕಿದಾಗ, [QE]
28. [QS]ಮೇಲೆ ಮೇಘಗಳನ್ನು ಅವರು ಸ್ಥಾಪಿಸಿದಾಗ [QE][QS2]ಅಗಾಧದ ಬುಗ್ಗೆಗಳನ್ನು ಅವರು ಬಲಪಡಿಸಿದಾಗ, [QE]
29. [QS]ಪ್ರವಾಹಗಳು ತನ್ನ ಆಜ್ಞೆಯನ್ನು ಮೀರದಂತೆ ಸಮುದ್ರಕ್ಕೆ [QE][QS2]ಅವರು ಮೇರೆಯನ್ನು ಮಾಡಿ [QE][QS]ಭೂಮಿಯ ಅಸ್ತಿವಾರಗಳನ್ನು ನೇಮಿಸಿದಾಗ, ನಾನು ಅಲ್ಲಿ ಇದ್ದೆನು. [QE]
2. [QS2]ಆಗ ನಾನು ಅವರೊಂದಿಗೆ ಕುಶಲ ಶಿಲ್ಪಿಯಂತೆ [QE][QS]ಅವರ ಹತ್ತಿರ ಇದ್ದೆನು. [QE][QS2]ಅವರ ಸನ್ನಿಧಿಯಲ್ಲಿ ಯಾವಾಗಲೂ ಆನಂದಿಸುತ್ತಾ ಅನುದಿನವೂ ಸಂತೋಷಿಸುತ್ತಿದ್ದೆನು. [QE]
31. [QS]ಅವರ ಭೂಮಿಯ ವಾಸಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು; [QE][QS2]ಮಾನವರೊಂದಿಗೆ ಆನಂದಿಸುತ್ತಿದ್ದೆನು. [QE][PBR]
32. [QS]“ಆದ್ದರಿಂದ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; [QE][QS2]ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು. [QE]
33. [QS]ನನ್ನ ಬೋಧನೆಯನ್ನು ಕೇಳಿ ಬುದ್ಧಿವಂತರಾಗಿರಿ; [QE][QS2]ಅದನ್ನು ನೀವು ತಿರಸ್ಕರಿಸಬೇಡಿರಿ. [QE]
34. [QS]ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ, [QE][QS2]ನನ್ನ ಬಾಗಿಲುಗಳ ನಿಲುವುಗಳಲ್ಲಿ ನಿರೀಕ್ಷಿಸುತ್ತಾ, [QE][QS2]ನನ್ನ ಮಾತುಗಳನ್ನು ಕೇಳುವವರು ಧನ್ಯರು. [QE]
35. [QS]ಏಕೆಂದರೆ ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು [QE][QS2]ಯೆಹೋವ ದೇವರ ಕೃಪೆಯನ್ನು ಹೊಂದುವನು. [QE]
36. [QS]ಆದರೆ ನನ್ನನ್ನು ಬಿಟ್ಟು ದೂರಹೋಗುವವನು [QE][QS2]ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, [QE][QS2]ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.” [QE]
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 31
ಜ್ಞಾನದ ಕರೆ 1 ಜ್ಞಾನವು ಕರೆಯುತ್ತದಲ್ಲವೋ? ತಿಳುವಳಿಕೆ ಎಂಬಾಕೆಯು ತನ್ನ ಸ್ವರವನ್ನು ಎತ್ತಿ ಕೂಗಿ ಕರೆಯುವುದಿಲ್ಲವೋ? 2 ಉನ್ನತ ಸ್ಥಳಗಳ ತುದಿಯಲ್ಲಿಯೂ, ಹಾದಿಗಳ ಸಂಧಿಗಳಲ್ಲಿಯೂ ನಿಂತುಕೊಳ್ಳುತ್ತಾಳೆ. 3 ಪಟ್ಟಣದ ಪ್ರವೇಶ ದ್ವಾರಗಳಲ್ಲಿಯೂ ಒಳಗೆ ಬರುವಾಗ ಅವಳು ಸ್ವರವೆತ್ತಿ ಹೇಳುವುದೇನೆಂದರೆ, 4 “ಮನುಷ್ಯರೇ, ನಾನು ಕರೆಯುತ್ತಿರುವುದು ನಿಮ್ಮನ್ನೇ, ಮಾನವರಿಗಾಗಿಯೇ ನಾನು ಧ್ವನಿಗೈಯುತ್ತೇನೆ. 5 ಮುಗ್ಧರೇ, ಜ್ಞಾನವನ್ನು ಗ್ರಹಿಸಿರಿ. ಬುದ್ಧಿಹೀನರೇ, ನೀವು ತಿಳುವಳಿಕೆಯ ಹೃದಯದವರಾಗಿರಿ. 6 ಕೇಳಿರಿ, ಉತ್ಕೃಷ್ಟ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯುವೆನು. 7 ನನ್ನ ಬಾಯಿಯು ಸತ್ಯವನ್ನು ಮಾತಾಡುವುದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ. 8 ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯುಕ್ತವಾಗಿವೆ; ಮೂರ್ಖತನವಾಗಲಿ, ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ. 9 ವಿವೇಚಿಸುವವನಿಗೆ ನನ್ನ ಎಲ್ಲ ಮಾತುಗಳು ನೇರವಾಗಿರುವುದು. ತಿಳುವಳಿಕೆ ಉಳ್ಳವನಿಗೆ ಅವು ಪ್ರಾಮಾಣಿಕವಾಗಿಯೂ ಇರುವುದು. 10 ಬೆಳ್ಳಿಗಿಂತ ನನ್ನ ಬೋಧನೆಯನ್ನು ಆರಿಸಿಕೋ ಉತ್ತಮ ಬಂಗಾರಕ್ಕಿಂತ ಮಿಗಿಲಾದ ತಿಳುವಳಿಕೆಯನ್ನು ಪಡೆದುಕೋ. 11 ಏಕೆಂದರೆ ಮಾಣಿಕ್ಯಗಳಿಗಿಂತ ಜ್ಞಾನವು ಅಮೂಲ್ಯವಾದದ್ದು. ಅಪೇಕ್ಷಿಸತಕ್ಕ ಯಾವ ವಸ್ತುಗಳನ್ನು ಅದಕ್ಕೆ ಹೋಲಿಸಲಾಗದು. 12 “ಜ್ಞಾನವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ತಿಳುವಳಿಕೆಯನ್ನೂ ವಿವೇಚನೆಯನ್ನೂ ನಾನು ಹೊಂದಿದ್ದೇನೆ. 13 ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ. 14 ಸಮಾಲೋಚನೆಯೂ ಒಳ್ಳೆಯ ನ್ಯಾಯವೂ ನನ್ನಲ್ಲಿದೆ. ನನ್ನಲ್ಲಿ ಒಳನೋಟವೂ ಶಕ್ತಿಯೂ ಇವೆ. 15 ನನ್ನ ಮೂಲಕ ರಾಜರು ಆಳುವರು; ಪ್ರಧಾನರು ನ್ಯಾಯವಾದ ತೀರ್ಪು ಕೊಡುವರು. 16 ನನ್ನಿಂದ ಅಧಿಪತಿಗಳು ಆಳುತ್ತಾರೆ, ಕೀರ್ತಿವಂತರೆಲ್ಲರೂ ಭೂಮಿಯ ಮೇಲೆ ಆಳುವರು. 17 ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ; ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು. 18 ಐಶ್ವರ್ಯವೂ ಘನತೆಯೂ, ಶಾಶ್ವತ ಸಂಪತ್ತು ಹಾಗೂ ಸಮೃದ್ಧಿಯು ನನ್ನೊಂದಿಗಿವೆ. 19 ನನ್ನ ಫಲವು ಬಂಗಾರಕ್ಕಿಂತಲೂ, ನನ್ನ ಆದಾಯವು ಉತ್ತಮವಾದ ಬೆಳ್ಳಿಗಿಂತಲೂ ಶ್ರೇಷ್ಠವಾಗಿವೆ. 20 ನೀತಿಯ ಮಾರ್ಗದಲ್ಲಿಯೂ ನ್ಯಾಯದ ದಾರಿ ನಡುವೆಯೂ ನಾನು ನಡೆಯುತ್ತೇನೆ. 21 ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದುವರು. ನಾನು ಅವರ ಬೊಕ್ಕಸಗಳನ್ನು ತುಂಬಿಸುವೆನು. 22 “ಯೆಹೋವ ದೇವರು ತಮ್ಮ ಸೃಷ್ಟಿಕ್ರಮದಲ್ಲಿ ನನ್ನನ್ನು ಮೊದಲು ನಿರ್ಮಿಸಿದರು, ದೇವರ ಪುರಾತನ ಕಾರ್ಯಗಳಲ್ಲಿ ನಾನೇ ಮೊದಲು; 23 ಪ್ರಾರಂಭದಲ್ಲಿ ಜಗದುತ್ಪತ್ತಿಗೆ ಮುಂಚೆಯೇ ಅನಾದಿಕಾಲದಲ್ಲಿ ದೇವರು ನನ್ನನ್ನು ಸೃಷ್ಟಿಸಿದರು. 24 ಆಗಾಧಗಳು ಇಲ್ಲದೆ ಇರುವಾಗ ನಾನು ಹುಟ್ಟಿ ಬಂದೆನು, ನೀರಿನ ಬುಗ್ಗೆಗಳು ಇಲ್ಲದೆ ಇರುವಾಗಲೇ ನಾನಿದ್ದೆನು. 25 ಪರ್ವತಗಳು ಸ್ಥಾಪಿತವಾಗುವುದಕ್ಕಿಂತ ಮುಂಚೆಯೂ ಬೆಟ್ಟಗುಡ್ಡಗಳಿಗಿಂತ ಮೊದಲು ನಾನು ಜನಿಸಿದೆನು. 26 ಭೂಮಿಯನ್ನೂ ಹೊಲಗಳನ್ನೂ ಲೋಕದ ಅಣುಗಳನ್ನೂ ಅವರು ನಿರ್ಮಿಸದೆ ಇರುವಾಗಲೇ ನಾನು ಜನಿಸಿದೆನು. 27 ಅವರು ಆಕಾಶಗಳನ್ನು ಸಿದ್ಧಪಡಿಸಿದಾಗ ಸಾಗರದ ಮೇಲೆ ಚಕ್ರವನ್ನು ಹಾಕಿದಾಗ, 28 ಮೇಲೆ ಮೇಘಗಳನ್ನು ಅವರು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಅವರು ಬಲಪಡಿಸಿದಾಗ, 29 ಪ್ರವಾಹಗಳು ತನ್ನ ಆಜ್ಞೆಯನ್ನು ಮೀರದಂತೆ ಸಮುದ್ರಕ್ಕೆ ಅವರು ಮೇರೆಯನ್ನು ಮಾಡಿ ಭೂಮಿಯ ಅಸ್ತಿವಾರಗಳನ್ನು ನೇಮಿಸಿದಾಗ, ನಾನು ಅಲ್ಲಿ ಇದ್ದೆನು. 2 ಆಗ ನಾನು ಅವರೊಂದಿಗೆ ಕುಶಲ ಶಿಲ್ಪಿಯಂತೆ ಅವರ ಹತ್ತಿರ ಇದ್ದೆನು. ಅವರ ಸನ್ನಿಧಿಯಲ್ಲಿ ಯಾವಾಗಲೂ ಆನಂದಿಸುತ್ತಾ ಅನುದಿನವೂ ಸಂತೋಷಿಸುತ್ತಿದ್ದೆನು. 31 ಅವರ ಭೂಮಿಯ ವಾಸಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು; ಮಾನವರೊಂದಿಗೆ ಆನಂದಿಸುತ್ತಿದ್ದೆನು. 32 “ಆದ್ದರಿಂದ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು. 33 ನನ್ನ ಬೋಧನೆಯನ್ನು ಕೇಳಿ ಬುದ್ಧಿವಂತರಾಗಿರಿ; ಅದನ್ನು ನೀವು ತಿರಸ್ಕರಿಸಬೇಡಿರಿ. 34 ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ, ನನ್ನ ಬಾಗಿಲುಗಳ ನಿಲುವುಗಳಲ್ಲಿ ನಿರೀಕ್ಷಿಸುತ್ತಾ, ನನ್ನ ಮಾತುಗಳನ್ನು ಕೇಳುವವರು ಧನ್ಯರು. 35 ಏಕೆಂದರೆ ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಯೆಹೋವ ದೇವರ ಕೃಪೆಯನ್ನು ಹೊಂದುವನು. 36 ಆದರೆ ನನ್ನನ್ನು ಬಿಟ್ಟು ದೂರಹೋಗುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 31
×

Alert

×

Kannada Letters Keypad References