ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. {#3ಭಾಗ 1 [BR]ಕೀರ್ತನೆಗಳು 1–41 } [QS]ದುಷ್ಟರ ಆಲೋಚನೆಯಂತೆ ನಡೆಯದೆ, [QE][QS2]ಪಾಪಿಗಳ ಮಾರ್ಗದಲ್ಲಿ ನಿಲ್ಲದೆ, [QE][QS2]ಅಪಹಾಸ್ಯಗಾರರ ಕೂಟದಲ್ಲಿ ಕೂತುಕೊಳ್ಳದೆ, [QE]
2. [QS]ಯೆಹೋವ ದೇವರ ನಿಯಮದಲ್ಲಿ ಆನಂದಿಸುತ್ತಾ, [QE][QS2]ದೇವರ ನಿಯಮವನ್ನು ರಾತ್ರಿ ಹಗಲು ಧ್ಯಾನಿಸುತ್ತಾ ಬದುಕುವವರು ಧನ್ಯರು. [QE]
3. [QS]ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. [QE][QS2]ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, [QE][QS]ಅದರ ಎಲೆ ಉದುರುವುದೇ ಇಲ್ಲ[* ಎಲೆ ಉದುರುವುದೇ ಇಲ್ಲ ಪದದ ಅರ್ಥ ಯಾವಾಗಲೂ ಆರೋಗ್ಯವಾಗಿರುವ ]. [QE][QS2]ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು. [QE][PBR]
4. [QS]ಆದರೆ ದುಷ್ಟರು ಹಾಗಲ್ಲ! [QE][QS2]ಅವರು ಗಾಳಿ ಬಡಿದುಕೊಂಡು ಹೋಗುವ [QE][QS2]ಹೊಟ್ಟಿನ ಹಾಗೆಯೇ ಇದ್ದಾರೆ. [QE]
5. [QS]ಆದ್ದರಿಂದ ದುಷ್ಟರು ನ್ಯಾಯತೀರ್ಪಿಗೆ ಒಳಗಾಗುವರು, [QE][QS2]ಪಾಪಿಗಳಿಗೆ ನೀತಿವಂತರ ಸಭೆಯಲ್ಲಿ ಸ್ಥಳವಿರುವುದಿಲ್ಲ. [QE][PBR]
6. [QS]ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; [QE][QS2]ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 150
ಭಾಗ 1
ಕೀರ್ತನೆಗಳು 1–41

1 ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಿಗಳ ಮಾರ್ಗದಲ್ಲಿ ನಿಲ್ಲದೆ, ಅಪಹಾಸ್ಯಗಾರರ ಕೂಟದಲ್ಲಿ ಕೂತುಕೊಳ್ಳದೆ, 2 ಯೆಹೋವ ದೇವರ ನಿಯಮದಲ್ಲಿ ಆನಂದಿಸುತ್ತಾ, ದೇವರ ನಿಯಮವನ್ನು ರಾತ್ರಿ ಹಗಲು ಧ್ಯಾನಿಸುತ್ತಾ ಬದುಕುವವರು ಧನ್ಯರು. 3 ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ* ಎಲೆ ಉದುರುವುದೇ ಇಲ್ಲ ಪದದ ಅರ್ಥ ಯಾವಾಗಲೂ ಆರೋಗ್ಯವಾಗಿರುವ . ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು. 4 ಆದರೆ ದುಷ್ಟರು ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೇ ಇದ್ದಾರೆ. 5 ಆದ್ದರಿಂದ ದುಷ್ಟರು ನ್ಯಾಯತೀರ್ಪಿಗೆ ಒಳಗಾಗುವರು, ಪಾಪಿಗಳಿಗೆ ನೀತಿವಂತರ ಸಭೆಯಲ್ಲಿ ಸ್ಥಳವಿರುವುದಿಲ್ಲ. 6 ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 150
×

Alert

×

Kannada Letters Keypad References