ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]ನಿಮ್ಮ ಪ್ರೀತಿ ನೀತಿಗಳನ್ನು ಕುರಿತು ಹಾಡುವೆನು; [QE][QS2]ಯೆಹೋವ ದೇವರೇ, ನಿಮ್ಮನ್ನು ಸ್ತುತಿಸುವೆನು. [QE]
2. [QS]ದೋಷರಹಿತ ಮಾರ್ಗದಲ್ಲಿ ನಡೆಯಲು ಜಾಗರೂಕನಾಗಿರುವೆನು; [QE][QS2]ನೀವು ಯಾವಾಗ ನನ್ನ ಬಳಿಗೆ ಬರುವಿರಿ? [QE][PBR] [QS]ನಾನು ನಿರ್ದೋಷ ಹೃದಯದಿಂದ [QE][QS2]ನನ್ನ ಮನೆಯೊಳಗೆ ನಡೆದುಕೊಳ್ಳುವೆನು. [QE]
3. [QS]ನಾನು ಕೆಟ್ಟ ಕಾರ್ಯವನ್ನು [QE][QS2]ನನ್ನ ಕಣ್ಣುಗಳ ಮುಂದೆ ಒಪ್ಪಿಗೆಯಿಂದ ನೋಡುವುದಿಲ್ಲ. [QE][PBR] [QS]ಅವಿಶ್ವಾಸಿಗಳು ಮಾಡುವುದನ್ನು ದ್ವೇಷಿಸುವೆನು; [QE][QS2]ಅದರಲ್ಲಿ ನಾನು ಭಾಗವಹಿಸುವುದಿಲ್ಲ. [QE]
4. [QS]ಮೂರ್ಖಜನರು ನನ್ನಿಂದ ದೂರವಿರುವರು; [QE][QS2]ದುಷ್ಟತನವನ್ನು ಅರಿಯದಿರುವೆನು. [QE][PBR]
5. [QS]ಮರೆಯಾಗಿ ನೆರೆಯವನ ಮೇಲೆ [QE][QS2]ಚಾಡಿ ಹೇಳುವವನನ್ನು ಸುಮ್ಮನಿರಿಸುವೆನು; [QE][QS]ಗರ್ವದ ಕಣ್ಣೂ, ಅಹಂಕಾರದ ಹೃದಯವೂ [QE][QS2]ಉಳ್ಳವನನ್ನು ಸಹಿಸಲಾರೆನು. [QE][PBR]
6. [QS]ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; [QE][QS2]ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು; [QE][QS]ನಿಷ್ಕಳಂಕವಾಗಿ ನಡೆಯುವವರೇ [QE][QS2]ನನ್ನ ಸೇವೆಯಲ್ಲಿರಬೇಕು. [QE][PBR]
7. [QS]ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; [QE][QS2]ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನಿಂತುಕೊಳ್ಳನು. [QE][PBR]
8. [QS]ದುಷ್ಟತನ ಮಾಡುವವರೆಲ್ಲರನ್ನು [QE][QS2]ಪ್ರತಿ ಮುಂಜಾನೆ ನಿಲ್ಲಿಸಿಬಿಡುವೆನು; [QE][QS]ಯೆಹೋವ ದೇವರ ಪಟ್ಟಣದೊಳಗಿಂದ [QE][QS2]ಪ್ರತಿಯೊಬ್ಬ ದುಷ್ಟನನ್ನು ಹೊರಗೆ ಹಾಕುವೆನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 101 / 150
1 ನಿಮ್ಮ ಪ್ರೀತಿ ನೀತಿಗಳನ್ನು ಕುರಿತು ಹಾಡುವೆನು; ಯೆಹೋವ ದೇವರೇ, ನಿಮ್ಮನ್ನು ಸ್ತುತಿಸುವೆನು. 2 ದೋಷರಹಿತ ಮಾರ್ಗದಲ್ಲಿ ನಡೆಯಲು ಜಾಗರೂಕನಾಗಿರುವೆನು; ನೀವು ಯಾವಾಗ ನನ್ನ ಬಳಿಗೆ ಬರುವಿರಿ? ನಾನು ನಿರ್ದೋಷ ಹೃದಯದಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು. 3 ನಾನು ಕೆಟ್ಟ ಕಾರ್ಯವನ್ನು ನನ್ನ ಕಣ್ಣುಗಳ ಮುಂದೆ ಒಪ್ಪಿಗೆಯಿಂದ ನೋಡುವುದಿಲ್ಲ. ಅವಿಶ್ವಾಸಿಗಳು ಮಾಡುವುದನ್ನು ದ್ವೇಷಿಸುವೆನು; ಅದರಲ್ಲಿ ನಾನು ಭಾಗವಹಿಸುವುದಿಲ್ಲ. 4 ಮೂರ್ಖಜನರು ನನ್ನಿಂದ ದೂರವಿರುವರು; ದುಷ್ಟತನವನ್ನು ಅರಿಯದಿರುವೆನು. 5 ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸುಮ್ಮನಿರಿಸುವೆನು; ಗರ್ವದ ಕಣ್ಣೂ, ಅಹಂಕಾರದ ಹೃದಯವೂ ಉಳ್ಳವನನ್ನು ಸಹಿಸಲಾರೆನು. 6 ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು; ನಿಷ್ಕಳಂಕವಾಗಿ ನಡೆಯುವವರೇ ನನ್ನ ಸೇವೆಯಲ್ಲಿರಬೇಕು. 7 ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನಿಂತುಕೊಳ್ಳನು. 8 ದುಷ್ಟತನ ಮಾಡುವವರೆಲ್ಲರನ್ನು ಪ್ರತಿ ಮುಂಜಾನೆ ನಿಲ್ಲಿಸಿಬಿಡುವೆನು; ಯೆಹೋವ ದೇವರ ಪಟ್ಟಣದೊಳಗಿಂದ ಪ್ರತಿಯೊಬ್ಬ ದುಷ್ಟನನ್ನು ಹೊರಗೆ ಹಾಕುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 101 / 150
×

Alert

×

Kannada Letters Keypad References