1. [QS]ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ; [QE][QS2]ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ. [QE]
2. [QS]ದೇವರಿಗೆ ಹಾಡಿರಿ, ದೇವರಿಗೆ ಕೀರ್ತನೆ ಹಾಡಿರಿ; [QE][QS2]ದೇವರ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ. [QE]
3. [QS]ದೇವರ ಪರಿಶುದ್ಧ ನಾಮವನ್ನು ಹೊಗಳಿರಿ; [QE][QS2]ಯೆಹೋವ ದೇವರನ್ನು ಹುಡುಕುವವರ ಹೃದಯವು ಸಂತೋಷಿಸಲಿ. [QE]
4. [QS]ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ, [QE][QS2]ಅವರ ಮುಖವನ್ನು ಯಾವಾಗಲೂ ಹುಡುಕಿರಿ. [QE][PBR]
5. [QS]ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, [QE][QS2]ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ. [QE]
6. [QS]ದೇವರ ಸೇವಕನಾದ ಅಬ್ರಹಾಮನ ಸಂತತಿಯೇ, [QE][QS2]ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ, [QE]
7. [QS]ಅವರೇ ನಮ್ಮ ದೇವರಾದ ಯೆಹೋವ ಆಗಿದ್ದಾರೆ. [QE][QS2]ಅವರ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಇವೆ. [QE][PBR]
8. [QS]ದೇವರು ತಮ್ಮ ಒಡಂಬಡಿಕೆಯನ್ನೂ, [QE][QS2]ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ, [QE]
9. [QS]ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, [QE][QS2]ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾರೆ. [QE]
10. [QS]ದೇವರು ಅದನ್ನು ಯಾಕೋಬನಿಗೆ ತೀರ್ಪನ್ನಾಗಿ ದೃಢಪಡಿಸಿದರು; [QE][QS2]ಅವರು ಇಸ್ರಾಯೇಲರಿಗೆ ನಿತ್ಯ ಒಡಂಬಡಿಕೆಯಾಗಿ ಸ್ಥಾಪಿಸಿ ಹೇಳಿದ್ದೇನೆಂದರೆ: [QE]
11. [QS]“ನಾನು ನಿಮಗೆ ಕಾನಾನ್ ದೇಶವನ್ನು [QE][QS2]ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.” [QE][PBR]
12. [QS]ಆಗ ಅವರು ಅಲ್ಪಸಂಖ್ಯಾತರೂ, [QE][QS2]ಬಹು ಸ್ವಲ್ಪ ಮಂದಿಯಾಗಿಯೂ, ಪರದೇಶಸ್ಥರಾಗಿಯೂ ನಾಡಿನಲ್ಲಿ ಇದ್ದರು. [QE]
13. [QS]ಅವರು ಜನಾಂಗದಿಂದ ಜನಾಂಗಕ್ಕೂ [QE][QS2]ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋಗುತ್ತಿದ್ದರು. [QE]
14. [QS]ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು. [QE][QS2]ಹೌದು, ಅವರಿಗೋಸ್ಕರ ದೇವರು ಅರಸರನ್ನು ಗದರಿಸಿ ಹೀಗೆ ಹೇಳಿದರು: [QE]
15. [QS]“ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, [QE][QS2]ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.” [QE][PBR]
16. [QS]ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು. [QE][QS2]ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು. [QE]
17. [QS]ಆಗ ದೇವರು ಅವರ ಮುಂದೆ ಒಬ್ಬ ಮನುಷ್ಯನನ್ನು ಕಳುಹಿಸಿದರು. [QE][QS2]ಅವನೇ ದಾಸನಾಗಿ ಮಾರಲಾದ ಯೋಸೇಫನು. [QE]
18. [QS]ಸಂಕೋಲೆಗಳಿಂದ ಅವನ ಕಾಲನ್ನು ನೋಯಿಸಿದರು; [QE][QS2]ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಇರಿಸಿದರು. [QE]
19. [QS]ಯೆಹೋವ ದೇವರ ಮುಂತಿಳಿಸಿದ ವಾಕ್ಯವು ನೆರವೇರುವವರೆಗೆ [QE][QS2]ಅವನು ದೇವರ ಮಾತಿನಿಂದ ಪರಿಶೋಧಿತನಾದನು. [QE]
20. [QS]ಅರಸನು ಅವನನ್ನು ಕರೆದು ಸೆರೆಯಿಂದ ಬಿಡಿಸಿದನು. [QE][QS2]ಹೌದು, ಜನಗಳ ಅಧಿಪತಿಯಿಂದ ಅವನು ಬಿಡುಗಡೆಯಾದನು. [QE]
21. [QS]ಅರಸನು ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ, [QE][QS2]ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ, [QE]
22. [QS]ತನ್ನ ಪ್ರಧಾನರಿಗೆ ತನ್ನ ಇಷ್ಟ ಪ್ರಕಾರ ಶಿಕ್ಷಣ ಕೊಡುವುದಕ್ಕೂ, [QE][QS2]ತನ್ನ ಜ್ಞಾನವನ್ನು ಮಂತ್ರಿಗಳಿಗೆ ಬೋಧಿಸುವುದಕ್ಕೂ ಯೋಸೇಫನನ್ನು ನೇಮಿಸಿದನು. [QE][PBR]
23. [QS]ಅನಂತರ ಇಸ್ರಾಯೇಲನು ಈಜಿಪ್ಟಿಗೆ ಬಂದನು; [QE][QS2]ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು. [QE]
24. [QS]ದೇವರು ತಮ್ಮ ಜನರನ್ನು ಬಹಳ ಅಭಿವೃದ್ಧಿಗೊಳಿಸಿ, [QE][QS2]ಅವರನ್ನು ವೈರಿಗಳಿಗಿಂತ ಬಲಿಷ್ಟರನ್ನಾಗಿ ಮಾಡಿದರು. [QE]
25. [QS]ತಮ್ಮ ಜನರನ್ನು ದ್ವೇಷಿಸುವಂತೆಯೂ, [QE][QS2]ತಮ್ಮ ಸೇವಕರನ್ನು ಕುಯುಕ್ತಿಯಿಂದ ನಡೆಸುವಂತೆಯೂ ದೇವರು ಅವರ ಹೃದಯವನ್ನು ಮಾರ್ಪಡಿಸಿದನು. [QE]
26. [QS]ದೇವರು ತಮ್ಮ ಸೇವಕ ಮೋಶೆಯನ್ನೂ, [QE][QS2]ಆಯ್ದುಕೊಂಡ ಆರೋನನನ್ನೂ ಕಳುಹಿಸಿದರು. [QE]
27. [QS]ಇವರು ದೇವರ ಸೂಚಕಕಾರ್ಯಗಳನ್ನೂ, [QE][QS2]ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು. [QE]
28. [QS]ದೇವರು ಕತ್ತಲೆಯನ್ನು ಕಳುಹಿಸಿ, ದೇಶವನ್ನೆಲ್ಲಾ ಕತ್ತಲು ಮಾಡಿದರು. [QE][QS2]ದೇವರ ಮಾತಿಗೆ ಈಜಿಪ್ಟನವರು ವಿರೋಧವಾಗಿ ತಿರುಗಿ ಬಿದ್ದರಲ್ಲವೇ? [QE]
29. [QS]ದೇವರು ಅವರ ನೀರನ್ನು ರಕ್ತವಾಗಿ ಮಾರ್ಪಡಿಸಿದರು. [QE][QS2]ಅವರ ಮೀನುಗಳನ್ನು ನಾಶಮಾಡಿದರು. [QE]
30. [QS]ಅವರ ದೇಶವು ಕಪ್ಪೆಗಳಿಂದ ತುಂಬಿಕೊಂಡಿತು; [QE][QS2]ಅವರ ಅರಸುಗಳ ಕೊಠಡಿಗಳಲ್ಲಿ ಸಹ ಅವು ನುಗ್ಗಿದವು. [QE]
31. [QS]ದೇವರು ಆಜ್ಞಾಪಿಸಲು ನೊಣದ ಗುಂಪುಗಳೂ, [QE][QS2]ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು. [QE]
32. [QS]ದೇವರು ಕಲ್ಮಳೆಯನ್ನೂ, ಅಗ್ನಿ ಜ್ವಾಲೆಗಳನ್ನೂ [QE][QS2]ಅವರ ದೇಶದಲ್ಲಿ ಬರಮಾಡಿದರು. [QE]
33. [QS]ಅವರ ದ್ರಾಕ್ಷಿಯ ಬಳ್ಳಿ, ಅಂಜೂರದ ಗಿಡಗಳು ಹಾಗೂ [QE][QS2]ಅವರ ಮೇರೆಗಳ ಮರಗಳು ಮುರಿದು ಬಿದ್ದವು. [QE]
34. [QS]ದೇವರು ಆಜ್ಞಾಪಿಸಲು ಮಿಡತೆಗಳೂ, [QE][QS2]ಲೆಕ್ಕವಿಲ್ಲದ ಕಂಬಳಿ ಹುಳುಗಳೂ ಬಂದವು. [QE]
35. [QS]ಅವು ಈಜಿಪ್ಟ್ ದೇಶದಲ್ಲಿ ಎಲ್ಲಾ ಸಸ್ಯಗಳನ್ನು ತಿಂದುಬಿಟ್ಟವು; [QE][QS2]ಅವರ ಭೂಮಿಯ ಫಲಗಳನ್ನು ಸಹ ತಿಂದುಬಿಟ್ಟವು. [QE]
36. [QS]ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲ ಮಕ್ಕಳೂ [QE][QS2]ಅವರ ಎಲ್ಲಾ ಪ್ರಮುಖರೂ ದೇವರ ಬಾಧೆಗೆ ಒಳಗಾದರು. [QE]
37. [QS]ದೇವರು ಬೆಳ್ಳಿ ಬಂಗಾರಗಳ ಸಂಗಡ ಇಸ್ರಾಯೇಲರನ್ನು ಹೊರಗೆ ಬರಮಾಡಿದರು. [QE][QS2]ಅವರ ಗೋತ್ರಗಳಲ್ಲಿ ಬಲಹೀನನಾದ ಒಬ್ಬನೂ ಇರಲಿಲ್ಲ. [QE]
38. [QS]ಅವರೆಲ್ಲರೂ ಹೊರಗೆ ಹೋಗುವಾಗ ಈಜಿಪ್ಟ್ ದೇಶವು ಸಂತೋಷಿಸಿತು; [QE][QS2]ಏಕೆಂದರೆ ಈಜಿಪ್ಟಿನವರಿಗೆ ಅವರನ್ನು ಕುರಿತು ಹೆದರಿಕೆ ಇತ್ತು. [QE][PBR]
39. [QS]ದೇವರು ಇಸ್ರಾಯೇಲರ ನೆರಳಿಗೋಸ್ಕರ ಮೇಘವನ್ನೂ, [QE][QS2]ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ಏರ್ಪಡಿಸಿದರು. [QE]
40. [QS]ಅವರು ಕೇಳಿದಾಗ ದೇವರು ಲಾವಕ್ಕಿಗಳನ್ನು ಬರಮಾಡಿ, [QE][QS2]ಪರಲೋಕದ ಆಹಾರದಿಂದ ಅವರನ್ನು ತೃಪ್ತಿಪಡಿಸಿದರು. [QE]
41. [QS]ದೇವರು ಬಂಡೆಯನ್ನು ತೆರೆಯಲು ನೀರು ಹೊರಟಿತು; [QE][QS2]ಅದು ಮರುಭೂಮಿಯಲ್ಲಿ ನದಿಯಾಗಿ ಹರಿಯಿತು. [QE][PBR]
42. [QS]ಹೀಗೆ ದೇವರು ತಮ್ಮ ಪರಿಶುದ್ಧ ವಾಗ್ದಾನವನ್ನೂ, [QE][QS2]ತಮ್ಮ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕಮಾಡಿಕೊಂಡರು. [QE]
43. [QS]ದೇವರು ತಮ್ಮ ಜನರನ್ನು ಆನಂದದಿಂದಲೂ, [QE][QS2]ತಾವು ಆಯ್ದುಕೊಂಡವರನ್ನು ಉತ್ಸಾಹದಿಂದಲೂ ಹೊರತಂದರು. [QE]
44. [QS]ದೇವರು ಜನಾಂಗಗಳ ದೇಶಗಳನ್ನು ಅವರಿಗೆ ಕೊಟ್ಟರು. [QE][QS2]ಇಸ್ರಾಯೇಲರು ಇತರರ ಕಷ್ಟಾರ್ಜಿತವನ್ನು ತಮಗಾಗಿ ಸ್ವಾಧೀನಮಾಡಿಕೊಂಡರು. [QE]
45. [QS]ದೇವರ ಸೂತ್ರಗಳನ್ನು ಕೈಗೊಂಡು, [QE][QS2]ಅವರ ನಿಯಮಗಳನ್ನು ಇಸ್ರಾಯೇಲರು ಕಾಯಬೇಕೆಂಬ ಉದ್ದೇಶದಿಂದಲೇ ಹೀಗೆಲ್ಲಾ ಆಯಿತು. [QE][PBR] [QS]ಯೆಹೋವ ದೇವರನ್ನು ಸ್ತುತಿಸಿರಿ. [QE]