1. [QS]ಯೆಹೋವ ದೇವರನ್ನು ಸ್ತುತಿಸಿರಿ. [QE][PBR] [QS]ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. [QE][QS2]ಅವರ ಪ್ರೀತಿ ಶಾಶ್ವತವಾಗಿರುವುದು. [QE][PBR]
2. [QS]ಯೆಹೋವ ದೇವರ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸಿರಿ, [QE][QS2]ದೇವರನ್ನು ತಕ್ಕಂತೆ ಸ್ತುತಿಸುವವರು ಯಾರಿಗೆ ಸಾಧ್ಯ? [QE]
3. [QS]ನ್ಯಾಯವನ್ನು ಕಾಪಾಡಿಕೊಂಡು ಯಾವಾಗಲೂ [QE][QS2]ಸರಿಯಾದವುಗಳನ್ನು ಪಾಲಿಸುವವರು ಧನ್ಯರು. [QE][PBR]
4. [QS]ದೇವರೇ, ನಿಮ್ಮ ಜನರ ಮೇಲಿರುವ ಮೆಚ್ಚುಗೆಯಿಂದ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ, [QE][QS2]ನಿಮ್ಮ ರಕ್ಷಣೆಯಿಂದ ನನ್ನನ್ನು ದರ್ಶಿಸಿರಿ. [QE]
5. [QS]ಯೆಹೋವ ದೇವರೇ, ನಾನು ನೀವು ಆಯ್ದುಕೊಂಡವರ ಸುಖವನ್ನು ಕಂಡು, [QE][QS2]ನಿಮ್ಮ ಜನರ ಸಂತೋಷದೊಂದಿಗೆ ಸಂತೋಷಿಸಿ, [QE][QS2]ನಿಮ್ಮ ಸ್ವಕೀಯರ ಸಂಗಡ ಹೊಗಳಿಕೊಳ್ಳುವೆನು. [QE][PBR]
6. [QS]ನಮ್ಮ ಪಿತೃಗಳಂತೆ ನಾವು ಕೂಡಾ ಪಾಪಮಾಡಿದ್ದೇವೆ; [QE][QS2]ಅಕ್ರಮ ಮಾಡಿದ್ದೇವೆ; ದುಷ್ಟಕೃತ್ಯಗಳನ್ನು ನಡೆಸಿದ್ದೇವೆ. [QE]
7. [QS]ನಮ್ಮ ಪಿತೃಗಳು ಈಜಿಪ್ಟಿನಲ್ಲಿ [QE][QS2]ನಿಮ್ಮ ಅದ್ಭುತಗಳಿಗೆ ಲಕ್ಷಕೊಡದೆ, [QE][QS]ನಿಮ್ಮ ಕರುಣಾತಿಶಯವನ್ನು ನೆನಸದೆ, [QE][QS2]ಸಮುದ್ರದ ಬಳಿಯಲ್ಲಿ ಅಂದರೆ ಕೆಂಪುಸಮುದ್ರದ ಹತ್ತಿರ ತಿರುಗಿಬಿದ್ದರು. [QE]
8. [QS]ಆದರೂ ದೇವರು ತಮ್ಮ ಮಹಾಶಕ್ತಿಯನ್ನು ಅವರಿಗೆ ತಿಳಿಯಮಾಡುವ ಹಾಗೆ, [QE][QS2]ತಮ್ಮ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದರು. [QE]
9. [QS]ದೇವರು ಕೆಂಪು ಸಮುದ್ರವನ್ನು ಗದರಿಸಲು, ಅದು ಒಣಗಿ ಹೋಯಿತು; [QE][QS2]ಹೀಗೆ ಮರುಭೂಮಿಯಲ್ಲಿ ನಡೆದು ಹೋದಂತೆ ಜಲಾಗಾಧದಲ್ಲಿ ಇಸ್ರಾಯೇಲರನ್ನು ನಡೆಸಿದರು. [QE]
10. [QS]ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿದರು, [QE][QS2]ಶತ್ರುವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದರು. [QE]
11. [QS]ಪ್ರವಾಹಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು, [QE][QS2]ವೈರಿಗಳಲ್ಲಿ ಒಬ್ಬನೂ ಉಳಿಯಲಿಲ್ಲ. [QE]
12. [QS]ಆಗ ಅವರು ದೇವರ ಮಾತುಗಳನ್ನು ನಂಬಿ, [QE][QS2]ದೇವರಿಗೆ ಸ್ತೋತ್ರವನ್ನು ಹಾಡಿದರು. [QE][PBR]
13. [QS]ಆದರೆ ಬೇಗನೇ ದೇವರು ಮಾಡಿದ ಕೆಲಸಗಳನ್ನು ಮರೆತುಬಿಟ್ಟು, [QE][QS2]ದೇವರ ಸಂಕಲ್ಪಕ್ಕೆ ಅವರು ಕಾದುಕೊಳ್ಳದೆ ಹೋದರು. [QE]
14. [QS]ಮರುಭೂಮಿಯಲ್ಲಿ ದುರಾಶೆಯಿಂದ ಆಶಿಸಿ, [QE][QS2]ಹಾಳು ಪ್ರದೇಶದಲ್ಲಿ ದೇವರನ್ನು ಪರೀಕ್ಷಿಸಿದರು. [QE]
15. [QS]ಆಗ ದೇವರು ಅವರ ಬೇಡಿಕೆಯಂತೆಯೇ ಅವರಿಗೆ ಕೊಟ್ಟುಬಿಟ್ಟರು; [QE][QS2]ಆದರೆ ಅವರ ದೇಹಕ್ಕೆ ಭೀಕರ ರೋಗವನ್ನು ಸಹ ಅನುಮತಿಸಿದರು. [QE][PBR]
16. [QS]ಇಸ್ರಾಯೇಲರು ಪಾಳೆಯದಲ್ಲಿ ಮೋಶೆಯ ಮೇಲೆಯೂ, [QE][QS2]ಯೆಹೋವ ದೇವರಿಗೆ ಪ್ರತಿಷ್ಠಿತನಾದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಟ್ಟರು. [QE]
17. [QS]ಆಗ ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ, [QE][QS2]ಅಬೀರಾಮನ ಗುಂಪನ್ನು ಮುಚ್ಚಿಬಿಟ್ಟಿತು. [QE]
18. [QS]ಬೆಂಕಿಯು ಅವರ ಗುಂಪಿನಲ್ಲಿ ಉರಿದು, [QE][QS2]ಜ್ವಾಲೆಯು ದುಷ್ಟರನ್ನು ಸುಟ್ಟಿತು. [QE]
19. [QS]ಅವರು ಹೋರೇಬಿನಲ್ಲಿ ಎರಕದ ಕರುವನ್ನು ಮಾಡಿ, [QE][QS2]ಆ ವಿಗ್ರಹಕ್ಕೆ ಅಡ್ಡಬಿದ್ದರು. [QE]
20. [QS]ಹೀಗೆ ಅವರು ತಮ್ಮ ಮಹಿಮೆಯುಳ್ಳ ದೇವರನ್ನು [QE][QS2]ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು. [QE]
21. [QS]ಅವರು ತಮ್ಮನ್ನು ರಕ್ಷಿಸಿದ ದೇವರನ್ನು ಬೇಗ ಮರೆತುಬಿಟ್ಟರು. [QE][QS2]ಹೌದು, ಈಜಿಪ್ಟ್ ದೇಶದಲ್ಲಿ ಮಹತ್ಕಾರ್ಯಗಳನ್ನೂ, [QE]
22. [QS]ಹಾಮ ದೇಶದಲ್ಲಿ ಅದ್ಭುತಗಳನ್ನೂ, [QE][QS2]ಕೆಂಪುಸಮುದ್ರದ ಬಳಿಯಲ್ಲಿ ಅತಿಶಯವಾದವುಗಳನ್ನೂ ಮಾಡಿದ ದೇವರನ್ನು ಮರೆತುಬಿಟ್ಟರು. [QE]
23. [QS]ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. [QE][QS2]ಆದರೆ ಅವರು ಆಯ್ದುಕೊಂಡ ಮೋಶೆಯು, [QE][QS]ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ [QE][QS2]ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು. [QE][PBR]
24. [QS]ಹೌದು, ಇಸ್ರಾಯೇಲರು ಮನೋಹರವಾದ ದೇಶವನ್ನು ಹೀನೈಸಿ, [QE][QS2]ದೇವರ ಮಾತನ್ನು ನಂಬದೆ ಹೋದರು. [QE]
25. [QS]ತಮ್ಮ ಗುಡಾರಗಳಲ್ಲಿ ಗೊಣಗುಟ್ಟಿ [QE][QS2]ಯೆಹೋವ ದೇವರ ಮಾತನ್ನು ಹೇಳದೆ ಹೋದರು. [QE]
26. [QS]ಆದ್ದರಿಂದ ದೇವರು ಅವರನ್ನು ಮರುಭೂಮಿಯಲ್ಲಿ ಬೀಳುವಂತೆಯೂ, [QE][QS]ಅವರ ಸಂತತಿಯರು ದೇಶಗಳಲ್ಲಿ ಚದರಿಸುವಂತೆಯೂ [QE]
2. [QS2]ತಮ್ಮ ಕೈಯನ್ನು ಎತ್ತಿ ಅವರಿಗೆ ಪ್ರಮಾಣ ಮಾಡಬೇಕಾಯಿತು. [QE][PBR]
28. [QS]ಇಸ್ರಾಯೇಲರು ಬಾಳ್ ಪೆಯೋರನ ದೇವತೆಗೆ ತಮ್ಮನ್ನು ಒಪ್ಪಿಸಿಕೊಟ್ಟರು; [QE][QS2]ಜೀವವಿಲ್ಲದ ದೇವರುಗಳಿಗೆ ಅರ್ಪಿಸಿದ ಯಜ್ಞಗಳನ್ನು ತಿಂದರು. [QE]
29. [QS]ತಮ್ಮ ಕ್ರಿಯೆಗಳಿಂದ ದೇವರನ್ನು ಅಸಂತೋಷಪಡಿಸಿದರು. [QE][QS2]ಆದ್ದರಿಂದ ವ್ಯಾಧಿಯು ಅವರಲ್ಲಿ ಹಬ್ಬಿತು. [QE]
30. [QS]ಆಗ ಫೀನೆಹಾಸನು ಎದ್ದು ಬಂದು ದಂಡಿಸಿದ್ದರಿಂದ [QE][QS2]ವ್ಯಾಧಿ ನಿಂತುಹೋಯಿತು. [QE]
31. [QS]ಇದು ತಲತಲಾಂತರಕ್ಕೂ, ಯುಗಯುಗಕ್ಕೂ [QE][QS2]ಫೀನೆಹಾಸನಿಗೆ ನೀತಿ ಎಂದು ಎಣಿಸಲಾಯಿತು. [QE]
32. [QS]ಮೆರೀಬಾದ[* ಮೆರೀಬಾದ ಅಂದರೆ ಜಗಳ ಎಂದು ಅರ್ಥ. ನೋಡಿರಿ ವಿಮೋ 17:7 ] ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. [QE][QS2]ಅಲ್ಲಿ ಅವರ ನಿಮಿತ್ತ ಮೋಶೆಗೆ ಕೇಡು ಬಂತು. [QE]
33. [QS]ಏಕೆಂದರೆ ಇಸ್ರಾಯೇಲರು ದೇವರ ಆತ್ಮನಿಗೆ ತಿರುಗಿ ಬಿದ್ದದ್ದರಿಂದ, [QE][QS2]ಮೋಶೆ ದುಡುಕಿ ಮಾತನಾಡಿದನು. [QE][PBR]
34. [QS]ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ ಜನಗಳನ್ನು [QE][QS2]ಅವರು ದಂಡಿಸದೆ ಹೋದರು. [QE]
35. [QS]ಆದರೆ ಇತರ ಜನಾಂಗಗಳ ಸಂಗಡ ಕೂಡಿಕೊಂಡು, [QE][QS2]ಅವರ ಪದ್ಧತಿಗಳನ್ನು ಕಲಿತುಕೊಂಡರು. [QE]
36. [QS]ಅವರ ವಿಗ್ರಹಗಳಿಗೆ ಆರಾಧನೆ ಮಾಡಿದರು; [QE][QS2]ಅವು ಅವರಿಗೆ ಉರುಲಿನಂತಾದವು. [QE]
37. [QS]ತಮ್ಮ ಗಂಡು ಮಕ್ಕಳನ್ನೂ, [QE][QS2]ಹೆಣ್ಣು ಮಕ್ಕಳನ್ನೂ ಸುಳ್ಳು ದೇವರುಗಳಿಗೆ ಬಲಿಕೊಟ್ಟರು. [QE]
38. [QS]ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ [QE][QS2]ನಿರಪರಾಧದ ರಕ್ತವನ್ನು ಚೆಲ್ಲಿ, [QE][QS]ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ, [QE][QS2]ದೇಶವನ್ನು ರಕ್ತದಿಂದ ಅಶುದ್ಧ ಮಾಡಿದರು. [QE]
39. [QS]ಹೀಗೆ ತಮ್ಮ ದುಷ್ಕೃತ್ಯಗಳಿಂದ ತಮ್ಮನ್ನು ಅಪವಿತ್ರ ಮಾಡಿಕೊಂಡು, [QE][QS2]ತಮ್ಮ ಕ್ರಿಯೆಗಳಿಂದ ದುರಾಚಾರಿಗಳಾದರು. [QE][PBR]
40. [QS]ಆಗ ಯೆಹೋವ ದೇವರು ತಮ್ಮ ಜನರ ಮೇಲೆ ಬಹು ಬೇಸರಗೊಂಡರು. [QE][QS2]ದೇವರು ತಮ್ಮ ವಾರಸುದಾರರಾದ ಇಸ್ರಾಯೇಲರ ಮೇಲೆ ಅಸಂತೋಷಗೊಂಡು, [QE]
41. [QS]ಅವರನ್ನು ಇತರ ಜನಾಂಗಗಳ ಕೈಗೆ ಒಪ್ಪಿಸಿಕೊಟ್ಟರು. [QE][QS2]ಹೀಗೆ ಅವರ ವೈರಿಗಳು ಅವರನ್ನು ಆಳಿದರು. [QE]
42. [QS]ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; [QE][QS2]ಅವರ ಕೈಕೆಳಗೆ ಅವರು ಅಧೀನರಾದರು. [QE]
43. [QS]ಅನೇಕ ಸಾರಿ ದೇವರು ಇಸ್ರಾಯೇಲರನ್ನು ಬಿಡಿಸಿದರು, [QE][QS2]ಆದರೆ ಅವರು ತಿರುಗಿಬೀಳುತ್ತಲೇ ಇದ್ದರು; [QE][QS2]ತಮ್ಮ ಅಕ್ರಮದಿಂದಲೇ ಅವರು ಕುಗ್ಗಿಹೋದರು; [QE]
44. [QS]ಆದರೂ ಅವರ ಕೂಗನ್ನು ದೇವರು ಕೇಳಿದಾಗ ಇಕ್ಕಟ್ಟಿನಲ್ಲಿದ್ದ [QE][QS2]ಅವರ ಮೇಲೆ ಲಕ್ಷ್ಯವಿಟ್ಟು, [QE]
45. [QS]ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, [QE][QS2]ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ, [QE]
46. [QS]ಅವರನ್ನು ಸೆರೆಹಿಡಿದವರ [QE][QS2]ಕರುಣೆ ತೋರುವಂತೆ ಮಾಡಿದರು. [QE][PBR]
47. [QS]ನಮ್ಮ ದೇವರಾದ ಯೆಹೋವ ದೇವರೇ, [QE][QS2]ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, [QE][QS]ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ, [QE][QS2]ನಮ್ಮನ್ನು ರಕ್ಷಿಸಿರಿ. [QE][PBR] [PBR]
48. [QS]ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ [QE][QS2]ಯುಗಯುಗಕ್ಕೂ ಸ್ತುತಿಯುಂಟಾಗಲಿ. [QE][PBR] [QS]ಜನರೆಲ್ಲರೂ, “ಆಮೆನ್!” ಎಂದು ಹೇಳಲಿ. [QE][PBR] [QS]ನೀವು ಯೆಹೋವ ದೇವರನ್ನು ಸ್ತುತಿಸಿರಿ. [QE]