1. [QS]ದೇವರೇ, ನನ್ನ ಹೃದಯವು ಸ್ಥಿರವಾಗಿದೆ; [QE][QS2]ನಾನು ಮನಃಪೂರ್ವಕವಾಗಿ ಹಾಡುತ್ತಾ, ನಿಮ್ಮ ಕೀರ್ತನೆಯನ್ನು ಮಾಡುವೆನು. [QE]
2. [QS]ವೀಣೆಯೇ, ಕಿನ್ನರಿಯೇ ಎಚ್ಚರವಾಗಿರಿ, [QE][QS2]ನಾನು ಉದಯವನ್ನು ಎಚ್ಚರಗೊಳಿಸುವೆನು. [QE]
3. [QS]ಯೆಹೋವ ದೇವರೇ, ಜನಾಂಗಗಳಲ್ಲಿ ನಾನು ನಿಮ್ಮನ್ನು ಕೊಂಡಾಡುವೆನು. [QE][QS2]ಜನರ ಮಧ್ಯದಲ್ಲಿ ನಿಮ್ಮನ್ನು ಹಾಡಿ ಕೊಂಡಾಡುವೆನು. [QE]
4. [QS]ಆಕಾಶಕ್ಕಿಂತ ನಿಮ್ಮ ಪ್ರೀತಿ ದೊಡ್ಡದು. [QE][QS2]ಮೇಘವನ್ನು ನಿಲುಕುವಷ್ಟು ನಿಮ್ಮ ಸತ್ಯವು ಉನ್ನತವಾಗಿವೆ. [QE]
5. [QS]ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. [QE][QS2]ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ. [QE][PBR]
6. [QS]ನೀವು ಪ್ರೀತಿಸುವವರು ಬಿಡುಗಡೆಯಾಗುವಂತೆ [QE][QS2]ನಿಮ್ಮ ಬಲಗೈಯಿಂದ ರಕ್ಷಿಸಿ ನಮಗೆ ಸಹಾಯಮಾಡಿರಿ. [QE]
7. [QS]ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ: [QE][QS2]“ನಾನು ಜಯದಿಂದ ಶೆಕೆಮ್ ಪ್ರದೇಶವನ್ನು ಹಂಚುವೆನು. [QE][QS2]ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು. [QE]
8. [QS]ಗಿಲ್ಯಾದ್ ನನ್ನದು; ಮನಸ್ಸೆ ನನ್ನದು, [QE][QS2]ಎಫ್ರಾಯೀಮ್ ನನ್ನ ಶಿರಸ್ತ್ರಾಣ, [QE][QS2]ಯೆಹೂದವು ನನ್ನ ರಾಜದಂಡ. [QE]
9. [QS]ಮೋವಾಬ್ ನನ್ನ ಸ್ನಾನ ಪಾತ್ರೆಯು, [QE][QS2]ಎದೋಮ್ ನನ್ನ ಕೆರಗಳ ಸ್ಥಳ. [QE][QS2]ಫಿಲಿಷ್ಟಿಯರ ಮೇಲೆ ಜಯೋತ್ಸಾಹ ಮಾಡುವೆನು.” [QE][PBR]
10. [QS]ಕೋಟೆಯ ಪಟ್ಟಣಕ್ಕೆ ನನ್ನನ್ನು ಕರೆತರುವವರು ಯಾರು? [QE][QS2]ಎದೋಮಿಗೆ ನನ್ನನ್ನು ನಡೆಸುವವರು ಯಾರು? [QE]
11. [QS]ದೇವರೇ, ಈಗ ನೀವು [QE][QS2]ನಮ್ಮ ಸೈನ್ಯಗಳ ಸಂಗಡ ಹೊರಡುವುದಿಲ್ಲವೋ ನಮ್ಮನ್ನು ಕೈಬಿಟ್ಟಿದ್ದೀರೋ? [QE]
12. [QS]ವೈರಿಗಳ ವಿರೋಧ ನಮಗೆ ಸಹಾಯಮಾಡಿರಿ. [QE][QS2]ಮನುಷ್ಯರ ಸಹಾಯವು ವ್ಯರ್ಥ. [QE]
13. [QS]ದೇವರಿಂದ ನಾವು ಜಯ ಹೊಂದುವೆವು. [QE][QS2]ದೇವರೇ ನಮ್ಮ ವೈರಿಗಳನ್ನು ತುಳಿದುಬಿಡುವರು. [QE]