1. [QS]ನಾನು ಸ್ತುತಿಸುವ ದೇವರೇ, [QE][QS2]ನೀವು ಮೌನವಾಗಿರಬೇಡಿರಿ. [QE]
2. [QS]ದುಷ್ಟರೂ, ವಂಚಕರೂ ತಮ್ಮ ಬಾಯಿಯನ್ನು [QE][QS2]ನನಗೆ ವಿರೋಧವಾಗಿ ತೆರೆದಿದ್ದಾರೆ; [QE][QS2]ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ. [QE]
3. [QS]ದ್ವೇಷ ಮಾತುಗಳಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, [QE][QS2]ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧ ಮಾಡುತ್ತಿದ್ದಾರೆ. [QE]
4. [QS]ನನ್ನ ಸ್ನೇಹಕ್ಕೆ ಬದಲಾಗಿ ನನ್ನ ಮೇಲೆ ದೂರು ಹೇಳುತ್ತಾರೆ; [QE][QS2]ಆದರೆ ನಾನು ಪ್ರಾರ್ಥನೆಯ ಮನುಷ್ಯನು. [QE]
5. [QS]ನನಗೆ ಉಪಕಾರಕ್ಕೆ ಬದಲಾಗಿ ಕೇಡನ್ನು ಮಾಡುತ್ತಿದ್ದಾರೆ, [QE][QS2]ನನ್ನ ಸ್ನೇಹಕ್ಕೆ ಬದಲಾಗಿ ನನ್ನ ಮೇಲೆ ದೂರು ಹೇಳುತ್ತಾರೆ. [QE][PBR]
6. [QS]ದುಷ್ಟನು ನನ್ನ ವೈರಿಯ ಮೇಲೆ ನೇಮಕವಾಗಲಿ; [QE][QS2]ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ. [QE]
7. [QS]ಅವನಿಗೆ ನ್ಯಾಯತೀರಿಸುವಾಗ ಅಪರಾಧಿಯೆಂದು ತೀರ್ಪು ಹೊಂದಲಿ; [QE][QS2]ಅವನ ಪ್ರಾರ್ಥನೆಯೇ ಅವನನ್ನು ಖಂಡಿಸಲಿ. [QE]
8. [QS]ಅವನ ದಿವಸಗಳು ಸ್ವಲ್ಪವಾಗಿರಲಿ; [QE][QS2]ಅವನ ಹುದ್ದೆಯನ್ನು ಇನ್ನೊಬ್ಬನು ತೆಗೆದುಕೊಳ್ಳಲಿ. [QE]
9. [QS]ಅವನ ಮಕ್ಕಳು ದಿಕ್ಕಿಲ್ಲದವರಾಗಲಿ, [QE][QS2]ಅವನ ಹೆಂಡತಿ ವಿಧವೆಯೂ ಆಗಲಿ. [QE]
10. [QS]ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಲಿ, [QE][QS2]ತಮ್ಮ ಹಾಳು ಮನೆಯಿಂದ ಹೊರಟು ಹೋಗಲಿ. [QE]
11. [QS]ಸಾಲಗಾರರು ಅವನಿಗೆ ಇರುವುದನ್ನೆಲ್ಲಾ ದೋಚಿಕೊಳ್ಳಲಿ; [QE][QS2]ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ. [QE]
12. [QS]ಅವನಿಗೆ ದಯೆ ತೋರಿಸುವವನು ಯಾವನೂ ಇಲ್ಲದೆ ಇರಲಿ; [QE][QS2]ದಿಕ್ಕಿಲ್ಲದ ಅವನ ಮಕ್ಕಳನ್ನು ಯಾವನೂ ಕನಿಕರಿಸದಿರಲಿ. [QE]
13. [QS]ಅವನ ಸಂತಾನವು ಮುಗಿದು ಹೋಗಲಿ; [QE][QS2]ಎರಡನೆಯ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ. [QE]
14. [QS]ಅವನ ಪಿತೃಗಳ ಅಕ್ರಮವು ಯೆಹೋವ ದೇವರ ಮುಂದೆ ಜ್ಞಾಪಕವಾಗಲಿ; [QE][QS2]ಅವನ ತಾಯಿಯ ಪಾಪವು ಅಳಿದು ಹೋಗದಿರಲಿ. [QE]
15. [QS]ಅವು ಯಾವಾಗಲೂ ಯೆಹೋವ ದೇವರ ಮುಂದೆ ಇರಲಿ; [QE][QS2]ದೇವರು ಅವರ ನೆನಪನ್ನು ಭೂಮಿಯೊಳಗಿಂದ ತೆಗೆದುಬಿಡಲಿ. [QE][PBR]
16. [QS]ಏಕೆಂದರೆ ಅವನು ಯಾರಿಗೂ ದಯೆ ತೋರಿಸಲಿಲ್ಲ. [QE][QS2]ಬಡವನನ್ನೂ, ದೀನನನ್ನೂ, [QE][QS2]ಮನಗುಂದಿದವನನ್ನೂ ಹಿಂಸಿಸಿ ಸಾಯಿಸಬೇಕೆಂದು ಯತ್ನಿಸಿದನು. [QE]
17. [QS]ಅವನು ಶಾಪಕೊಡಲು ಇಷ್ಟಪಟ್ಟನು; [QE][QS2]ಅದೇ ಅವನಿಗೆ ಬರಲಿ; [QE][QS]ಅವನು ಆಶೀರ್ವಾದವನ್ನು ಮೆಚ್ಚಲಿಲ್ಲ; [QE][QS2]ಅದು ಅವನಿಗೆ ದೂರವಾಗಿರಲಿ. [QE]
18. [QS]ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; [QE][QS2]ಅದು ನೀರಿನಂತೆ ಅವನ ಅಂತರಂಗದಲ್ಲಿಯೂ, [QE][QS2]ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಿತು. [QE]
19. [QS]ಶಾಪವು ಅವನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ, [QE][QS2]ಯಾವಾಗಲೂ ಸೊಂಟಕ್ಕೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ. [QE]
20. [QS]ಇದು ನನಗೆ ವಿರೋಧವಾಗಿ ಕೇಡು ಮಾತಾಡುವ [QE][QS2]ನನ್ನ ಎದುರಾಳಿಗಳಿಗೆ ಯೆಹೋವ ದೇವರಿಂದ ಪ್ರತಿಫಲವಾಗಿರಲಿ. [QE][PBR]
21. [QS]ಆದರೆ ಸಾರ್ವಭೌಮ ಯೆಹೋವ ದೇವರೇ, [QE][QS2]ನಿಮ್ಮ ಹೆಸರಿಗೋಸ್ಕರ ನನಗೆ ಸಹಾಯಮಾಡಿರಿ. [QE][QS2]ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನ್ನನ್ನು ಬಿಡಿಸಿರಿ. [QE]
22. [QS]ಏಕೆಂದರೆ ನಾನು ಬಡವನೂ ಅಗತ್ಯತೆಯಲ್ಲಿ ಇರುವವನೂ ಆಗಿದ್ದೇನೆ; [QE][QS2]ನನ್ನ ಹೃದಯವು ನನ್ನ ಅಂತರಂಗದಲ್ಲಿ ಗಾಯಗೊಂಡಿದೆ. [QE]
23. [QS]ನಾನು ಇಳಿಯುವ ನೆರಳಿನ ಹಾಗೆ ಆಗಿದ್ದೇನೆ; [QE][QS2]ಮಿಡತೆಯ ಹಾಗೆ ಹಾರಾಡುತ್ತಿದ್ದೇನೆ. [QE]
24. [QS]ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; [QE][QS2]ನನ್ನ ದೇಹಕ್ಕೆ ಸಾರವಿಲ್ಲದೆ ಹೋಯಿತು. [QE]
25. [QS]ನಾನು ನನ್ನ ದೂರುಗಾರರಿಗೆ ನಿಂದೆಯಾಗಿದ್ದೇನೆ; [QE][QS2]ಅವರು ನನ್ನನ್ನು ಕಂಡು ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ. [QE][PBR]
26. [QS]ನನ್ನ ದೇವರಾದ ಯೆಹೋವ ದೇವರೇ, ನನಗೆ ಸಹಾಯಮಾಡಿರಿ; [QE][QS2]ನಿಮ್ಮ ಒಡಂಬಡಿಕೆಯ ಪ್ರೀತಿಯ ಪ್ರಕಾರ ನನ್ನನ್ನು ರಕ್ಷಿಸಿರಿ. [QE]
27. [QS]ಇದು ನಿಮ್ಮ ಕೈ ಕೆಲಸ ಎಂದು ಅವರಿಗೆ ಗೊತ್ತಾಗಲಿ, [QE][QS2]ಇದು ನಿನ್ನಿಂದಲೇ ಆಯಿತೆಂದು ಅವರು ತಿಳಿದುಕೊಳ್ಳಲಿ. [QE]
28. [QS]ಅವರು ಶಪಿಸಲಿ, ಆದರೆ ನೀವು ಆಶೀರ್ವದಿಸಿರಿ. [QE][QS2]ನನಗೆ ಹಾನಿಮಾಡುವವರು ನಾಚಿಕೆಪಡಲಿ; [QE][QS2]ಆದರೆ ನಿಮ್ಮ ಸೇವಕನಾದ ನಾನು ಸಂತೋಷಿಸಲಿ. [QE]
29. [QS]ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಳ್ಳಲಿ, [QE][QS2]ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ. [QE][PBR]
30. [QS]ನಾನು ಯೆಹೋವ ದೇವರನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; [QE][QS2]ಅನೇಕರ ಮಧ್ಯದಲ್ಲಿ ದೇವರನ್ನು ಸ್ತುತಿಸುವೆನು. [QE]
31. [QS]ದೇವರು ಬಡವನ ಬಲಗಡೆಯಲ್ಲಿ ನಿಂತು, [QE][QS2]ಅವನ ಪ್ರಾಣವನ್ನು ಖಂಡಿಸುವವರಿಂದ ಅವನನ್ನು ರಕ್ಷಿಸುವರು. [QE]