ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]ಯೆಹೋವ ದೇವರಲ್ಲಿ ನಾನು ಆಶ್ರಯಿಸಿದ್ದೇನೆ. [QE][QS2]ಹಾಗಾದರೆ, “ಒಂದು ಪಕ್ಷಿಯಂತೆ ನಿನ್ನ ಪರ್ವತಕ್ಕೆ ಹಾರಿ ಹೋಗು,” [QE][QS2]ಎಂದು ನೀವು ನನಗೆ ಹೇಗೆ ಹೇಳುವಿರಿ? [QE]
2. [QS]“ಇಗೋ, ದುಷ್ಟರು ತಮ್ಮ ಬಿಲ್ಲು ಬಗ್ಗಿಸಿ; [QE][QS2]ಬಾಣವನ್ನು ಬಿಲ್ಲಿಗೆ ಹೂಡಿ, [QE][QS2]ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವುದಕ್ಕೆ ಸಿದ್ಧಮಾಡಿದ್ದಾರೆ. [QE]
3. [QS]ಅಸ್ತಿವಾರಗಳೇ ಕೆಡವುತ್ತಿರಲು, [QE][QS2]ನೀತಿವಂತನು ಏನು ಮಾಡಲು ಸಾಧ್ಯ?” [QE][PBR]
4. [QS]ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ; [QE][QS2]ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ. [QE][QS]ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ; [QE][QS2]ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ. [QE]
5. [QS]ಯೆಹೋವ ದೇವರು ನೀತಿವಂತನನ್ನು ಪರೀಕ್ಷಿಸುತ್ತಾರೆ, [QE][QS2]ಆದರೆ ಅವರು ದುಷ್ಟರನ್ನೂ ಹಿಂಸಾತ್ಮಕರನ್ನೂ ವಿರೋಧಿಸುತ್ತಾರೆ. [QE]
6. [QS]ಅವರು ದುಷ್ಟರ ಮೇಲೆ ಬೆಂಕಿಯನ್ನೂ [QE][QS2]ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; [QE][QS2]ಇವೇ ದುಷ್ಟರ ಪಾಲಾಗಿರಲಿ. [QE][PBR]
7. [QS]ಏಕೆಂದರೆ ಯೆಹೋವ ದೇವರು ನೀತಿಯುಳ್ಳವರು. [QE][QS2]ಅವರು ನ್ಯಾಯವನ್ನು ಪ್ರೀತಿಸುತ್ತಾರೆ; [QE][QS2]ಯಥಾರ್ಥರು ಅವರ ಮುಖವನ್ನು ದೃಷ್ಟಿಸುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 150
1 ಯೆಹೋವ ದೇವರಲ್ಲಿ ನಾನು ಆಶ್ರಯಿಸಿದ್ದೇನೆ. ಹಾಗಾದರೆ, “ಒಂದು ಪಕ್ಷಿಯಂತೆ ನಿನ್ನ ಪರ್ವತಕ್ಕೆ ಹಾರಿ ಹೋಗು,” ಎಂದು ನೀವು ನನಗೆ ಹೇಗೆ ಹೇಳುವಿರಿ? 2 “ಇಗೋ, ದುಷ್ಟರು ತಮ್ಮ ಬಿಲ್ಲು ಬಗ್ಗಿಸಿ; ಬಾಣವನ್ನು ಬಿಲ್ಲಿಗೆ ಹೂಡಿ, ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವುದಕ್ಕೆ ಸಿದ್ಧಮಾಡಿದ್ದಾರೆ. 3 ಅಸ್ತಿವಾರಗಳೇ ಕೆಡವುತ್ತಿರಲು, ನೀತಿವಂತನು ಏನು ಮಾಡಲು ಸಾಧ್ಯ?” 4 ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ; ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ. ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ; ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ. 5 ಯೆಹೋವ ದೇವರು ನೀತಿವಂತನನ್ನು ಪರೀಕ್ಷಿಸುತ್ತಾರೆ, ಆದರೆ ಅವರು ದುಷ್ಟರನ್ನೂ ಹಿಂಸಾತ್ಮಕರನ್ನೂ ವಿರೋಧಿಸುತ್ತಾರೆ. 6 ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ. 7 ಏಕೆಂದರೆ ಯೆಹೋವ ದೇವರು ನೀತಿಯುಳ್ಳವರು. ಅವರು ನ್ಯಾಯವನ್ನು ಪ್ರೀತಿಸುತ್ತಾರೆ; ಯಥಾರ್ಥರು ಅವರ ಮುಖವನ್ನು ದೃಷ್ಟಿಸುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 150
×

Alert

×

Kannada Letters Keypad References