ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರನ್ನು ಸ್ತುತಿಸಿರಿ. [QE][PBR] [QS]ನಾನು ಯೆಹೋವ ದೇವರನ್ನು ಪೂರ್ಣಹೃದಯದಿಂದ [QE][QS2]ಯಥಾರ್ಥರ ಕೂಟದಲ್ಲಿಯೂ, ಸಭೆಯಲ್ಲಿಯೂ ಕೊಂಡಾಡುವೆನು. [QE][PBR]
2. [QS]ಯೆಹೋವ ದೇವರ ಕೆಲಸಗಳು ದೊಡ್ಡವು; [QE][QS2]ಅವುಗಳಲ್ಲಿ ಸಂತೋಷ ಪಡುವವರೆಲ್ಲರು ಅವುಗಳನ್ನೇ ಧ್ಯಾನಿಸುತ್ತಾರೆ. [QE]
3. [QS]ದೇವರ ಕೆಲಸವು ಘನತೆಯೂ, ಮಹಿಮೆಯೂ ಉಳ್ಳದ್ದು; [QE][QS2]ದೇವರ ನೀತಿಯು ಎಂದೆಂದಿಗೂ ನಿಲ್ಲುವುದು. [QE]
4. [QS]ದೇವರು ತಮ್ಮ ಅದ್ಭುತಗಳ ಜ್ಞಾಪಕವನ್ನು ಉಳಿದಿರುವಂತೆ ಮಾಡಿದ್ದಾರೆ; [QE][QS2]ಯೆಹೋವ ದೇವರು ಕೃಪೆಯೂ, ಅನುಕಂಪವೂ ಉಳ್ಳವರು. [QE]
5. [QS]ಅವರು ತಮಗೆ ಭಯಪಡುವವರಿಗೆ ಆಹಾರ ಕೊಟ್ಟಿದ್ದಾರೆ; [QE][QS2]ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವರು. [QE][PBR]
6. [QS]ಜನಾಂಗಗಳ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ [QE][QS2]ದೇವರು ಶಕ್ತಿಯ ಕ್ರಿಯೆಗಳನ್ನು ತಮ್ಮ ಜನರಿಗೆ ತಿಳಿಸಿದ್ದಾರೆ. [QE]
7. [QS]ದೇವರ ಕೈಕೆಲಸಗಳು ಸತ್ಯವೂ, ನ್ಯಾಯವೂ ಆಗಿವೆ; [QE][QS2]ಅವರ ಸೂತ್ರಗಳೆಲ್ಲಾ ವಿಶ್ವಾಸಕ್ಕೆ ಯೋಗ್ಯವಾದವುಗಳು. [QE]
8. [QS]ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ; [QE][QS2]ಅವು ಸತ್ಯದಲ್ಲಿಯೂ, ಯಥಾರ್ಥತೆಯಲ್ಲಿಯೂ ಒಳಗೊಂಡಿರುತ್ತದೆ. [QE]
9. [QS]ದೇವರು ತಮ್ಮ ಜನರಿಗೆ ವಿಮೋಚನೆಯನ್ನು ಕಳುಹಿಸಿದರು; [QE][QS2]ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸಿದ್ದಾರೆ; [QE][QS2]ದೇವರ ಹೆಸರು ಪರಿಶುದ್ಧರು, ಅತಿಶಯರು ಎಂಬುದು. [QE][PBR]
10. [QS]ಯೆಹೋವ ದೇವರ ಭಯವು ಜ್ಞಾನದ ಮೂಲವು; [QE][QS2]ಅವರ ಸೂತ್ರಗಳನ್ನು ಕೈಗೊಳ್ಳುವವರಿಗೆ ಒಳ್ಳೆಯ ತಿಳುವಳಿಕೆ ಉಂಟಾಗುವುದು; [QE][QS2]ನಿತ್ಯ ಸ್ತೋತ್ರವು ದೇವರಿಗೆ ಸಲ್ಲಲಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 111 / 150
1 ಯೆಹೋವ ದೇವರನ್ನು ಸ್ತುತಿಸಿರಿ. ನಾನು ಯೆಹೋವ ದೇವರನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ, ಸಭೆಯಲ್ಲಿಯೂ ಕೊಂಡಾಡುವೆನು. 2 ಯೆಹೋವ ದೇವರ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷ ಪಡುವವರೆಲ್ಲರು ಅವುಗಳನ್ನೇ ಧ್ಯಾನಿಸುತ್ತಾರೆ. 3 ದೇವರ ಕೆಲಸವು ಘನತೆಯೂ, ಮಹಿಮೆಯೂ ಉಳ್ಳದ್ದು; ದೇವರ ನೀತಿಯು ಎಂದೆಂದಿಗೂ ನಿಲ್ಲುವುದು. 4 ದೇವರು ತಮ್ಮ ಅದ್ಭುತಗಳ ಜ್ಞಾಪಕವನ್ನು ಉಳಿದಿರುವಂತೆ ಮಾಡಿದ್ದಾರೆ; ಯೆಹೋವ ದೇವರು ಕೃಪೆಯೂ, ಅನುಕಂಪವೂ ಉಳ್ಳವರು. 5 ಅವರು ತಮಗೆ ಭಯಪಡುವವರಿಗೆ ಆಹಾರ ಕೊಟ್ಟಿದ್ದಾರೆ; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವರು. 6 ಜನಾಂಗಗಳ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ದೇವರು ಶಕ್ತಿಯ ಕ್ರಿಯೆಗಳನ್ನು ತಮ್ಮ ಜನರಿಗೆ ತಿಳಿಸಿದ್ದಾರೆ. 7 ದೇವರ ಕೈಕೆಲಸಗಳು ಸತ್ಯವೂ, ನ್ಯಾಯವೂ ಆಗಿವೆ; ಅವರ ಸೂತ್ರಗಳೆಲ್ಲಾ ವಿಶ್ವಾಸಕ್ಕೆ ಯೋಗ್ಯವಾದವುಗಳು. 8 ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ; ಅವು ಸತ್ಯದಲ್ಲಿಯೂ, ಯಥಾರ್ಥತೆಯಲ್ಲಿಯೂ ಒಳಗೊಂಡಿರುತ್ತದೆ. 9 ದೇವರು ತಮ್ಮ ಜನರಿಗೆ ವಿಮೋಚನೆಯನ್ನು ಕಳುಹಿಸಿದರು; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸಿದ್ದಾರೆ; ದೇವರ ಹೆಸರು ಪರಿಶುದ್ಧರು, ಅತಿಶಯರು ಎಂಬುದು. 10 ಯೆಹೋವ ದೇವರ ಭಯವು ಜ್ಞಾನದ ಮೂಲವು; ಅವರ ಸೂತ್ರಗಳನ್ನು ಕೈಗೊಳ್ಳುವವರಿಗೆ ಒಳ್ಳೆಯ ತಿಳುವಳಿಕೆ ಉಂಟಾಗುವುದು; ನಿತ್ಯ ಸ್ತೋತ್ರವು ದೇವರಿಗೆ ಸಲ್ಲಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 111 / 150
×

Alert

×

Kannada Letters Keypad References