ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರನ್ನು ಸ್ತುತಿಸಿರಿ. [QE][PBR] [QS]ಯೆಹೋವ ದೇವರಿಗೆ ಭಯಪಟ್ಟು ಅವರ ಆಜ್ಞೆಗಳಲ್ಲಿ ಬಹಳವಾಗಿ [QE][QS2]ಸಂತೋಷಿಸುವವರು ಧನ್ಯರು. [QE][PBR]
2. [QS]ಅವರ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿಯಾಗಿರುವುದು; [QE][QS2]ಯಥಾರ್ಥರ ಸಂತತಿಯು ಆಶೀರ್ವಾದ ಹೊಂದುವುದು. [QE]
3. [QS]ಧನವೂ, ಐಶ್ವರ್ಯವೂ ಅವರ ಮನೆಯಲ್ಲಿ ಇರುವುದು; [QE][QS2]ಅವರ ನೀತಿಯು ಶಾಶ್ವತವಾಗಿ ಉಳಿಯುವುದು. [QE]
4. [QS]ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಮೂಡುವುದು; [QE][QS2]ಅವರು ಕೃಪೆಯೂ, ಅನುಕಂಪವೂ, ನೀತಿಯೂ ಉಳ್ಳವವರಾಗಿರುವರು. [QE]
5. [QS]ದಯೆತೋರಿಸಿ ಸಾಲಕೊಡುವವರಿಗೆ, ಒಳ್ಳೆಯದಾಗುವುದು; [QE][QS2]ಅವರು ತಮ್ಮ ಕಾರ್ಯಗಳನ್ನು ನ್ಯಾಯದಿಂದ ನಡೆಸುವರು. [QE][PBR]
6. [QS]ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು; [QE][QS2]ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು. [QE]
7. [QS]ಅವರಿಗೆ ಅಶುಭದ ಸುದ್ದಿಯ ಭಯ ಇರುವುದಿಲ್ಲ; [QE][QS2]ಅವರ ಹೃದಯವು ಯೆಹೋವ ದೇವರಲ್ಲಿ ಭರವಸವಿಟ್ಟು ಸ್ಥಿರವಾಗಿರುವುದು. [QE]
8. [QS]ಅವರ ಹೃದಯವು ಸುರಕ್ಷಿತವಾಗಿರುವುದು. [QE][QS2]ಅವರು ತಮ್ಮ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವರು, ಭಯಪಡರು. [QE]
9. [QS]ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; [QE][QS2]ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; [QE][QS2]ಅವನ ಬಲವು ಘನದಿಂದ ಉನ್ನತವಾಗುವುದು. [QE][PBR]
10. [QS]ದುಷ್ಟರು ಇದನ್ನು ಕಂಡು ವ್ಯಥೆ ಪಡುವರು; [QE][QS2]ಅವರು ತಮ್ಮ ಹಲ್ಲು ಕಡಿದು ಮರೆಯಾಗಿ ಹೋಗುವರು; [QE][QS2]ದುಷ್ಟರ ಆಶೆಯು ನಾಶವಾಗುವುದು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 112 / 150
1 ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಭಯಪಟ್ಟು ಅವರ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವವರು ಧನ್ಯರು. 2 ಅವರ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿಯಾಗಿರುವುದು; ಯಥಾರ್ಥರ ಸಂತತಿಯು ಆಶೀರ್ವಾದ ಹೊಂದುವುದು. 3 ಧನವೂ, ಐಶ್ವರ್ಯವೂ ಅವರ ಮನೆಯಲ್ಲಿ ಇರುವುದು; ಅವರ ನೀತಿಯು ಶಾಶ್ವತವಾಗಿ ಉಳಿಯುವುದು. 4 ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಮೂಡುವುದು; ಅವರು ಕೃಪೆಯೂ, ಅನುಕಂಪವೂ, ನೀತಿಯೂ ಉಳ್ಳವವರಾಗಿರುವರು. 5 ದಯೆತೋರಿಸಿ ಸಾಲಕೊಡುವವರಿಗೆ, ಒಳ್ಳೆಯದಾಗುವುದು; ಅವರು ತಮ್ಮ ಕಾರ್ಯಗಳನ್ನು ನ್ಯಾಯದಿಂದ ನಡೆಸುವರು. 6 ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು; ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು. 7 ಅವರಿಗೆ ಅಶುಭದ ಸುದ್ದಿಯ ಭಯ ಇರುವುದಿಲ್ಲ; ಅವರ ಹೃದಯವು ಯೆಹೋವ ದೇವರಲ್ಲಿ ಭರವಸವಿಟ್ಟು ಸ್ಥಿರವಾಗಿರುವುದು. 8 ಅವರ ಹೃದಯವು ಸುರಕ್ಷಿತವಾಗಿರುವುದು. ಅವರು ತಮ್ಮ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವರು, ಭಯಪಡರು. 9 ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು. 10 ದುಷ್ಟರು ಇದನ್ನು ಕಂಡು ವ್ಯಥೆ ಪಡುವರು; ಅವರು ತಮ್ಮ ಹಲ್ಲು ಕಡಿದು ಮರೆಯಾಗಿ ಹೋಗುವರು; ದುಷ್ಟರ ಆಶೆಯು ನಾಶವಾಗುವುದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 112 / 150
×

Alert

×

Kannada Letters Keypad References