ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. [QE][QS2]ಅವರ ಪ್ರೀತಿ ಶಾಶ್ವತವಾಗಿರುವುದು. [QE][PBR]
2. [QS]“ದೇವರ ಪ್ರೀತಿಯು ಯುಗಯುಗಕ್ಕೂ ಇದೆ,” [QE][QS2]ಎಂದು ಇಸ್ರಾಯೇಲ್ ಹೇಳಲಿ. [QE]
3. [QS]“ದೇವರ ಪ್ರೀತಿಯು ಸದಾಕಾಲವೂ ಇರುವುದು,” [QE][QS2]ಎಂದು ಆರೋನನ ಮನೆಯವರು ಹೇಳಲಿ. [QE]
4. [QS]“ದೇವರ ಪ್ರೀತಿಯು ಸದಾಕಾಲವೂ ಇರುವುದು,” [QE][QS2]ಎಂದು ಯೆಹೋವ ದೇವರಿಗೆ ಭಯಪಡುವವರು ಹೇಳಲಿ. [QE][PBR]
5. [QS]ಇಕ್ಕಟ್ಟಿನೊಳಗಿಂದ ಯೆಹೋವ ದೇವರಿಗೆ ಕೂಗಿದೆನು; [QE][QS2]ಯೆಹೋವ ದೇವರು ಉತ್ತರಕೊಟ್ಟು, ನನ್ನನ್ನು ವಿಶಾಲವಾದ ಸ್ಥಳಕ್ಕೆ ತಂದರು. [QE]
6. [QS]ಯೆಹೋವ ದೇವರು ನನ್ನ ಪರವಾಗಿದ್ದಾರೆ, ನಾನು ಭಯಪಡೆನು. [QE][QS2]ಮನುಷ್ಯನು ನನಗೆ ಏನು ಮಾಡಬಲ್ಲನು? [QE]
7. [QS]ಯೆಹೋವ ದೇವರು ನನ್ನೊಂದಿಗಿದ್ದಾರೆ, ಅವರು ನನಗೆ ಸಹಾಯಕರು; [QE][QS2]ನಾನು ವೈರಿಗಳ ಮೇಲೆ ಜಯ ಸಾಧಿಸುವೆನು. [QE][PBR]
8. [QS]ಮನುಷ್ಯರಲ್ಲಿ ಭರವಸೆ ಇಡುವುದಕ್ಕಿಂತ [QE][QS2]ಯೆಹೋವ ದೇವರಲ್ಲಿ ಆಶ್ರಯ ಪಡೆಯುವುದು ಒಳ್ಳೆಯದು. [QE]
9. [QS]ಅಧಿಪತಿಗಳಲ್ಲಿ ಭರವಸೆ ಇಡುವುದಕ್ಕಿಂತ [QE][QS2]ಯೆಹೋವ ದೇವರ ಆಶ್ರಯ ಪಡೆಯುವುದು ಒಳ್ಳೆಯದು. [QE]
10. [QS]ಎಲ್ಲಾ ರಾಷ್ಟ್ರದವರು ನನ್ನನ್ನು ಸುತ್ತಿಕೊಂಡರು; [QE][QS2]ಆದರೆ ನಾನು ಯೆಹೋವ ದೇವರ ಹೆಸರಿನಲ್ಲಿ ಅವರನ್ನು ದಂಡಿಸುವೆನು. [QE]
11. [QS]ಅವರು ನನ್ನನ್ನು ಎಲ್ಲಾ ದಿಕ್ಕುಗಳಿಂದ ಸುತ್ತಿಕೊಂಡರು; [QE][QS2]ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಸೋಲಿಸುವೆನು. [QE]
12. [QS]ಜೇನುನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ, [QE][QS2]ಅವರು ಮುಳ್ಳಿನ ಬೆಂಕಿಯ ಹಾಗೆ ಕ್ಷಣಮಾತ್ರದಲ್ಲಿ ಇಲ್ಲವಾಗಿ ಹೋದರು; [QE][QS2]ಯೆಹೋವ ದೇವರ ಹೆಸರಿನಲ್ಲಿ ನಾನು ಅವರನ್ನು ಸೋಲಿಸುವೆನು. [QE]
13. [QS]ನಾನು ಬೀಳುವ ಹಾಗೆ ವೈರಿಯು ನನ್ನನ್ನು ನೂಕಿದನು; [QE][QS2]ಆದರೆ ಯೆಹೋವ ದೇವರು ನನಗೆ ಸಹಾಯ ಮಾಡಿದರು. [QE]
14. [QS]ನನ್ನ ಬಲವೂ, ಬೆಂಬಲವೂ ಯೆಹೋವ ದೇವರೇ; [QE][QS2]ಅವರೇ ನನಗೆ ರಕ್ಷಣೆಯಾದರು. [QE][PBR]
15. [QS]ಜಯಘೋಷವೂ ಹರ್ಷಧ್ವನಿಯೂ [QE][QS2]ನೀತಿವಂತರ ಗುಡಾರಗಳಲ್ಲಿ ಪ್ರತಿಧ್ವನಿಸುತ್ತಿರುವುದು; [QE][QS]ಯೆಹೋವ ದೇವರ ಬಲಗೈ ಪರಾಕ್ರಮವನ್ನು ನಡೆಸಿದೆ. [QE]
2. [QS2]ಯೆಹೋವ ದೇವರ ಬಲಗೈ ಎತ್ತರವಾಗಿ ಎತ್ತಲಾಗಿದೆ; [QE][QS2]ಯೆಹೋವ ದೇವರ ಬಲಗೈ ಪರಾಕ್ರಮವನ್ನು ನಡೆಸಿದೆ. [QE]
17. [QS]ನಾನು ಸಾಯದೆ ಬದುಕಿರುವೆನು, [QE][QS2]ಯೆಹೋವ ದೇವರು ಮಾಡಿದ್ದನ್ನು ಸಾರುವೆನು. [QE]
18. [QS]ಏಕೆಂದರೆ ಯೆಹೋವ ದೇವರು ನನ್ನನ್ನು ಕಠಿಣವಾಗಿ ಶಿಕ್ಷಿಸಿದರು; [QE][QS2]ಆದರೆ ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ. [QE]
19. [QS]ನೀತಿಯ ಬಾಗಿಲುಗಳನ್ನು ನನಗೆ ತೆರೆಯಿರಿ; [QE][QS2]ಅವುಗಳೊಳಗೆ ಪ್ರವೇಶಿಸಿ ಯೆಹೋವ ದೇವರಿಗೆ ಧನ್ಯವಾದ ಸಲ್ಲಿಸು. [QE]
20. [QS]ಇದೇ ಯೆಹೋವ ದೇವರ ಬಾಗಿಲು; [QE][QS2]ನೀತಿವಂತರು ಇದರಲ್ಲಿ ಪ್ರವೇಶಿಸುವರು. [QE]
21. [QS]ನಿಮಗೆ ಕೃತಜ್ಞತಾವಂದನೆ ಸಲ್ಲಿಸುವೆನು; [QE][QS2]ಏಕೆಂದರೆ ನನಗೆ ನೀವು ಉತ್ತರಕೊಟ್ಟು, ನನಗೆ ರಕ್ಷಣೆಯಾದಿರಿ. [QE][PBR]
22. [QS]ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ [QE][QS2]ಮುಖ್ಯವಾದ ಮೂಲೆಗಲ್ಲಾಯಿತು. [QE]
23. [QS]ಇದು ಯೆಹೋವ ದೇವರಿಂದಲೇ ಉಂಟಾಯಿತು; [QE][QS2]ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಯಿತು. [QE]
24. [QS]ಯೆಹೋವ ದೇವರು ಮಾಡಿದ ದಿನವು ಇದೇ; [QE][QS2]ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡೋಣ. [QE][PBR]
25. [QS]ಯೆಹೋವ ದೇವರೇ ನಮ್ಮನ್ನು ರಕ್ಷಿಸಿರಿ, [QE][QS2]ಯೆಹೋವ ದೇವರೇ ನಮಗೆ ಜಯಕೊಡಿರಿ. [QE][PBR]
26. [QS]ಯೆಹೋವ ದೇವರ ಹೆಸರಿನಲ್ಲಿ ಬರುವವನು ಧನ್ಯನು; [QE][QS2]ಯೆಹೋವ ದೇವರ ಆಲಯದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸುವೆವು. [QE]
27. [QS]ಯೆಹೋವ ದೇವರು ದೇವರಾಗಿದ್ದಾನೆ; [QE][QS2]ನಮ್ಮ ಮೇಲೆ ಅವರ ಬೆಳಕನ್ನು ಪ್ರಕಾಶಿಸುವಂತೆ ಮಾಡಿದ್ದಾರೆ. [QE][QS]ಕೊಂಬೆಗಳನ್ನು ಕೈಯಲ್ಲಿ ಹಿಡಿದುಕೊಂಡು [QE][QS2]ಬಲಿಪೀಠದ ಕೊಂಬುಗಳವರೆಗೆ ಮೆರವಣಿಗೆಯಾಗಿ ಬನ್ನಿರಿ. [QE][PBR]
28. [QS]ನೀವು ನನ್ನ ದೇವರಾಗಿದ್ದೀರಿ, ನಿಮಗೆ ಉಪಕಾರ ಸಲ್ಲಿಸುವೆನು; [QE][QS2]ನೀವು ನನ್ನ ದೇವರು; ನಿಮ್ಮನ್ನು ನಾನು ಉನ್ನತಪಡಿಸುವೆನು. [QE][PBR]
29. [QS]ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ; ಅವರು ಒಳ್ಳೆಯವರು; [QE][QS2]ಅವರ ಪ್ರೀತಿ ಶಾಶ್ವತವಾಗಿರುವುದು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 118 / 150
1 ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು. 2 “ದೇವರ ಪ್ರೀತಿಯು ಯುಗಯುಗಕ್ಕೂ ಇದೆ,” ಎಂದು ಇಸ್ರಾಯೇಲ್ ಹೇಳಲಿ. 3 “ದೇವರ ಪ್ರೀತಿಯು ಸದಾಕಾಲವೂ ಇರುವುದು,” ಎಂದು ಆರೋನನ ಮನೆಯವರು ಹೇಳಲಿ. 4 “ದೇವರ ಪ್ರೀತಿಯು ಸದಾಕಾಲವೂ ಇರುವುದು,” ಎಂದು ಯೆಹೋವ ದೇವರಿಗೆ ಭಯಪಡುವವರು ಹೇಳಲಿ. 5 ಇಕ್ಕಟ್ಟಿನೊಳಗಿಂದ ಯೆಹೋವ ದೇವರಿಗೆ ಕೂಗಿದೆನು; ಯೆಹೋವ ದೇವರು ಉತ್ತರಕೊಟ್ಟು, ನನ್ನನ್ನು ವಿಶಾಲವಾದ ಸ್ಥಳಕ್ಕೆ ತಂದರು. 6 ಯೆಹೋವ ದೇವರು ನನ್ನ ಪರವಾಗಿದ್ದಾರೆ, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು? 7 ಯೆಹೋವ ದೇವರು ನನ್ನೊಂದಿಗಿದ್ದಾರೆ, ಅವರು ನನಗೆ ಸಹಾಯಕರು; ನಾನು ವೈರಿಗಳ ಮೇಲೆ ಜಯ ಸಾಧಿಸುವೆನು. 8 ಮನುಷ್ಯರಲ್ಲಿ ಭರವಸೆ ಇಡುವುದಕ್ಕಿಂತ ಯೆಹೋವ ದೇವರಲ್ಲಿ ಆಶ್ರಯ ಪಡೆಯುವುದು ಒಳ್ಳೆಯದು. 9 ಅಧಿಪತಿಗಳಲ್ಲಿ ಭರವಸೆ ಇಡುವುದಕ್ಕಿಂತ ಯೆಹೋವ ದೇವರ ಆಶ್ರಯ ಪಡೆಯುವುದು ಒಳ್ಳೆಯದು. 10 ಎಲ್ಲಾ ರಾಷ್ಟ್ರದವರು ನನ್ನನ್ನು ಸುತ್ತಿಕೊಂಡರು; ಆದರೆ ನಾನು ಯೆಹೋವ ದೇವರ ಹೆಸರಿನಲ್ಲಿ ಅವರನ್ನು ದಂಡಿಸುವೆನು. 11 ಅವರು ನನ್ನನ್ನು ಎಲ್ಲಾ ದಿಕ್ಕುಗಳಿಂದ ಸುತ್ತಿಕೊಂಡರು; ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಸೋಲಿಸುವೆನು. 12 ಜೇನುನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ, ಅವರು ಮುಳ್ಳಿನ ಬೆಂಕಿಯ ಹಾಗೆ ಕ್ಷಣಮಾತ್ರದಲ್ಲಿ ಇಲ್ಲವಾಗಿ ಹೋದರು; ಯೆಹೋವ ದೇವರ ಹೆಸರಿನಲ್ಲಿ ನಾನು ಅವರನ್ನು ಸೋಲಿಸುವೆನು. 13 ನಾನು ಬೀಳುವ ಹಾಗೆ ವೈರಿಯು ನನ್ನನ್ನು ನೂಕಿದನು; ಆದರೆ ಯೆಹೋವ ದೇವರು ನನಗೆ ಸಹಾಯ ಮಾಡಿದರು. 14 ನನ್ನ ಬಲವೂ, ಬೆಂಬಲವೂ ಯೆಹೋವ ದೇವರೇ; ಅವರೇ ನನಗೆ ರಕ್ಷಣೆಯಾದರು. 15 ಜಯಘೋಷವೂ ಹರ್ಷಧ್ವನಿಯೂ ನೀತಿವಂತರ ಗುಡಾರಗಳಲ್ಲಿ ಪ್ರತಿಧ್ವನಿಸುತ್ತಿರುವುದು; ಯೆಹೋವ ದೇವರ ಬಲಗೈ ಪರಾಕ್ರಮವನ್ನು ನಡೆಸಿದೆ. 2 ಯೆಹೋವ ದೇವರ ಬಲಗೈ ಎತ್ತರವಾಗಿ ಎತ್ತಲಾಗಿದೆ; ಯೆಹೋವ ದೇವರ ಬಲಗೈ ಪರಾಕ್ರಮವನ್ನು ನಡೆಸಿದೆ. 17 ನಾನು ಸಾಯದೆ ಬದುಕಿರುವೆನು, ಯೆಹೋವ ದೇವರು ಮಾಡಿದ್ದನ್ನು ಸಾರುವೆನು. 18 ಏಕೆಂದರೆ ಯೆಹೋವ ದೇವರು ನನ್ನನ್ನು ಕಠಿಣವಾಗಿ ಶಿಕ್ಷಿಸಿದರು; ಆದರೆ ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ. 19 ನೀತಿಯ ಬಾಗಿಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಯೆಹೋವ ದೇವರಿಗೆ ಧನ್ಯವಾದ ಸಲ್ಲಿಸು. 20 ಇದೇ ಯೆಹೋವ ದೇವರ ಬಾಗಿಲು; ನೀತಿವಂತರು ಇದರಲ್ಲಿ ಪ್ರವೇಶಿಸುವರು. 21 ನಿಮಗೆ ಕೃತಜ್ಞತಾವಂದನೆ ಸಲ್ಲಿಸುವೆನು; ಏಕೆಂದರೆ ನನಗೆ ನೀವು ಉತ್ತರಕೊಟ್ಟು, ನನಗೆ ರಕ್ಷಣೆಯಾದಿರಿ. 22 ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. 23 ಇದು ಯೆಹೋವ ದೇವರಿಂದಲೇ ಉಂಟಾಯಿತು; ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಯಿತು. 24 ಯೆಹೋವ ದೇವರು ಮಾಡಿದ ದಿನವು ಇದೇ; ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡೋಣ. 25 ಯೆಹೋವ ದೇವರೇ ನಮ್ಮನ್ನು ರಕ್ಷಿಸಿರಿ, ಯೆಹೋವ ದೇವರೇ ನಮಗೆ ಜಯಕೊಡಿರಿ. 26 ಯೆಹೋವ ದೇವರ ಹೆಸರಿನಲ್ಲಿ ಬರುವವನು ಧನ್ಯನು; ಯೆಹೋವ ದೇವರ ಆಲಯದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸುವೆವು. 27 ಯೆಹೋವ ದೇವರು ದೇವರಾಗಿದ್ದಾನೆ; ನಮ್ಮ ಮೇಲೆ ಅವರ ಬೆಳಕನ್ನು ಪ್ರಕಾಶಿಸುವಂತೆ ಮಾಡಿದ್ದಾರೆ. ಕೊಂಬೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಕೊಂಬುಗಳವರೆಗೆ ಮೆರವಣಿಗೆಯಾಗಿ ಬನ್ನಿರಿ. 28 ನೀವು ನನ್ನ ದೇವರಾಗಿದ್ದೀರಿ, ನಿಮಗೆ ಉಪಕಾರ ಸಲ್ಲಿಸುವೆನು; ನೀವು ನನ್ನ ದೇವರು; ನಿಮ್ಮನ್ನು ನಾನು ಉನ್ನತಪಡಿಸುವೆನು. 29 ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ; ಅವರು ಒಳ್ಳೆಯವರು; ಅವರ ಪ್ರೀತಿ ಶಾಶ್ವತವಾಗಿರುವುದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 118 / 150
×

Alert

×

Kannada Letters Keypad References