1. [QS]ಯೆಹೋವ ದೇವರನ್ನು ಸ್ತುತಿಸಿರಿ. [QE][PBR] [QS]ಯೆಹೋವ ದೇವರ ಹೆಸರನ್ನು ಸ್ತುತಿಸಿರಿ; [QE][QS2]ಯೆಹೋವ ದೇವರ ಆಲಯದಲ್ಲಿಯೂ, [QE]
2. [QS]ನಮ್ಮ ದೇವರ ಆಲಯದ [QE][QS2]ಅಂಗಳಗಳಲ್ಲಿಯೂ ಸೇವೆ ಮಾಡುವ ಯೆಹೋವ ದೇವರ ಸೇವಕರೇ, ಸ್ತುತಿಸಿರಿ. [QE][PBR]
3. [QS]ಯೆಹೋವ ದೇವರನ್ನು ಸ್ತುತಿಸಿರಿ, ಯೆಹೋವ ದೇವರು ಒಳ್ಳೆಯವರು; [QE][QS2]ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ, ಏಕೆಂದರೆ ಅದು ರಮ್ಯವಾದದ್ದು. [QE]
4. [QS]ಯೆಹೋವ ದೇವರು ಯಾಕೋಬನನ್ನು ತಮಗೋಸ್ಕರ ಆಯ್ದುಕೊಂಡರು, [QE][QS2]ಇಸ್ರಾಯೇಲನ್ನು ತಮ್ಮ ಶ್ರೇಷ್ಠ ಸಂಪತ್ತಾಗಿಯೂ ಆಯ್ದುಕೊಂಡಿದ್ದಾರೆ. [QE][PBR]
5. [QS]ಯೆಹೋವ ದೇವರು ದೊಡ್ಡವರು; [QE][QS2]ನಮ್ಮ ಯೆಹೋವ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರೆಂದು ನಾನು ತಿಳಿದಿದ್ದೇನೆ. [QE]
6. [QS]ಯೆಹೋವ ದೇವರು ಆಕಾಶದಲ್ಲಿಯೂ, [QE][QS2]ಭೂಮಿಯಲ್ಲಿಯೂ, ಸಮುದ್ರದಲ್ಲಿಯೂ, [QE][QS2]ಎಲ್ಲಾ ಅಗಾಧಗಳಲ್ಲಿಯೂ ತಾವು ಅಪೇಕ್ಷಿಸುವುದನ್ನೆಲ್ಲಾ ಮಾಡುತ್ತಾರೆ. [QE]
7. [QS]ಭೂಮಿಯ ಎಲ್ಲಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. [QE][QS2]ಮಳೆಯನ್ನೂ ಮಿಂಚನ್ನೂ ಕಳುಹಿಸುತ್ತಾರೆ. [QE][QS2]ಗಾಳಿಯನ್ನು ತಮ್ಮ ಉಗ್ರಾಣಗಳಿಂದ ಬೀಸುವಂತೆ ಮಾಡುತ್ತಾರೆ. [QE][PBR]
8. [QS]ದೇವರು ಈಜಿಪ್ಟ್ ಜನರನ್ನು ಮೊದಲುಗೊಂಡು ಪಶುಗಳವರೆಗೂ [QE][QS2]ಚೊಚ್ಚಲುಗಳನ್ನೆಲ್ಲಾ ದಂಡಿಸಿದರು. [QE]
9. [QS]ಈಜಿಪ್ಟೇ, ನಿಮ್ಮ ಮಧ್ಯದಲ್ಲಿ ಸೂಚಕಕಾರ್ಯಗಳನ್ನೂ, [QE][QS2]ಅದ್ಭುತಕಾರ್ಯಗಳನ್ನೂ ದೇವರು ಫರೋಹನಿಗೂ, [QE][QS2]ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು. [QE]
10. [QS]ದೇವರು ದೊಡ್ಡ ಜನಾಂಗಗಳನ್ನೂ, [QE][QS2]ಬಲವಾದ ಅರಸರನ್ನೂ ದಂಡಿಸಿದರು. [QE]
11. [QS]ಅಮೋರಿಯರ ಅರಸನಾದ ಸೀಹೋನನನ್ನು, [QE][QS2]ಬಾಷಾನಿನ ಅರಸನಾದ ಓಗನನ್ನೂ, [QE][QS2]ಕಾನಾನಿನ ಎಲ್ಲಾ ಅರಸರನ್ನೂ ದಂಡಿಸಿದರು. [QE]
12. [QS]ದೇವರು ದೇಶವನ್ನು ಸೊತ್ತಾಗಿ [QE][QS2]ತಮ್ಮ ಪ್ರಜೆಯಾದ ಇಸ್ರಾಯೇಲಿಗೆ ಕೊಟ್ಟರು. [QE][PBR]
13. [QS]ಯೆಹೋವ ದೇವರೇ, ನಿಮ್ಮ ನಾಮವೂ, [QE][QS2]ನಿಮ್ಮ ಪ್ರಭಾವವೂ ತಲತಲಾಂತರಕ್ಕೂ ಸ್ಮರಣೆಯಾಗಿರುವುದು. [QE]
14. [QS]ಯೆಹೋವ ದೇವರು ತಮ್ಮ ಜನರಿಗೆ ನ್ಯಾಯವನ್ನು ಸ್ಥಾಪಿಸುವರು, [QE][QS2]ತಮ್ಮ ಸೇವಕರ ಮೇಲೆ ಅನುಕಂಪವನ್ನೂ ತೋರಿಸುವರು. [QE][PBR]
15. [QS]ವಿಗ್ರಹಗಳು ಬೆಳ್ಳಿ, ಬಂಗಾರದವುಗಳು, [QE][QS2]ಅವು ಮನುಷ್ಯರ ಕೈಯಿಂದ ಮಾಡಲಾಗಿವೆ. [QE]
16. [QS]ಅವುಗಳಿಗೆ ಬಾಯಿಯಿದೆ, ಮಾತನಾಡುವುದಿಲ್ಲ; [QE][QS2]ಕಣ್ಣುಗಳಿವೆ, ಕಾಣುವುದಿಲ್ಲ. [QE]
17. [QS]ಕಿವಿಗಳಿವೆ, ಕೇಳಿಸಿಕೊಳ್ಳುವುದಿಲ್ಲ; [QE][QS2]ಅವುಗಳ ಬಾಯಲ್ಲಿ ಶ್ವಾಸ ಇಲ್ಲ. [QE]
18. [QS]ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ; [QE][QS2]ಅವುಗಳಲ್ಲಿ ಭರವಸವಿಡುವವರು ಅವುಗಳಂತಾಗುವರು. [QE][PBR]
19. [QS]ಇಸ್ರಾಯೇಲ್ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ; [QE][QS2]ಆರೋನನ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ. [QE]
20. [QS]ಲೇವಿಯ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ; [QE][QS2]ದೇವರಲ್ಲಿ ಭಯಭಕ್ತಿಯುಳ್ಳವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ. [QE]
21. [QS]ಯೆರೂಸಲೇಮಿನಲ್ಲಿ ವಾಸಿಸುವವ ಯೆಹೋವ ದೇವರನ್ನು ಕೊಂಡಾಡಿ ಸ್ತುತಿಸಿರಿ; [QE][QS2]ಅವರ ಕೀರ್ತಿಯು ಚೀಯೋನಿನಿಂದ ಹೊರಗೂ ಹಬ್ಬಲಿ. [QE][PBR] [QS]ಯೆಹೋವ ದೇವರಿಗೆ ಸ್ತೋತ್ರ. [QE]