ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಬಾಬಿಲೋನಿನ ನದಿಗಳ ಹತ್ತಿರ ನಾವು ಕುಳಿತುಕೊಂಡು, [QE][QS2]ಚೀಯೋನನ್ನು ಜ್ಞಾಪಕ ಮಾಡಿಕೊಂಡಾಗ ಅತ್ತೆವು. [QE]
2. [QS]ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ [QE][QS2]ನಮ್ಮ ಕಿನ್ನರಿಗಳನ್ನು ತೂಗು ಹಾಕಿದೆವು. [QE]
3. [QS]ಏಕೆಂದರೆ ಅಲ್ಲಿ ನಮ್ಮನ್ನು ಸೆರೆಹಿಡಿದು ಬಂಧಿಸಿದವರು, [QE][QS2]ನಮಗೆ ಹಾಡನ್ನು ಹಾಡಲು ಹೇಳಿದ್ದರು; [QE][QS]ನಮ್ಮನ್ನು ಪೀಡಿಸುವವರು ವಿನೋದಕ್ಕಾಗಿ ಹಾಡನ್ನು ಕೇಳಲು ಬಯಸಿದ್ದರು; [QE][QS2]“ಚೀಯೋನಿನ ಹಾಡುಗಳಲ್ಲಿ ಒಂದು ನಮಗೆ ಹಾಡಿರಿ,” ಎಂದರು. [QE][PBR]
4. [QS]ಅನ್ಯದೇಶದಲ್ಲಿ ನಾವು [QE][QS2]ಯೆಹೋವ ದೇವರ ಹಾಡುಗಳನ್ನು ಹಾಡುವುದು ಹೇಗೆ? [QE]
5. [QS]ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ, [QE][QS2]ನನ್ನ ಬಲಗೈಯ ಕೌಶಲ್ಯ ಮರೆತು ಹೋಗಲಿ. [QE]
6. [QS]ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದಿದ್ದರೆ, [QE][QS2]ಯೆರೂಸಲೇಮನ್ನು ನನ್ನ ಎಲ್ಲಾ ಸಂತೋಷಕ್ಕಿಂತಲೂ ಹೆಚ್ಚಾಗಿಡದಿದ್ದರೆ, [QE][QS2]ನನ್ನ ನಾಲಿಗೆಯು ಸೇದಿಹೋಗಲಿ. [QE][PBR]
7. [QS]ಯೆರೂಸಲೇಮು ಬಿದ್ದುಹೋದ ದಿವಸದಲ್ಲಿ, [QE][QS2]“ಹಾಳುಮಾಡಿರಿ, ಅದರ ಅಸ್ತಿವಾರದವರೆಗೆ ಹಾಳುಮಾಡಿರಿ,” [QE][QS]ಎಂದು ಹೇಳಿದ ಎದೋಮಿನವರನ್ನು [QE][QS2]ಯೆಹೋವ ದೇವರೇ ಜ್ಞಾಪಕಮಾಡಿಕೊಳ್ಳಿರಿ. [QE]
8. [QS]ಹಾಳಾಗಲಿಕ್ಕಿರುವ ಬಾಬಿಲೋನ್ ನಗರವೇ, [QE][QS2]ನೀನು ನಮಗೆ ಮಾಡಿದ್ದಕ್ಕೆ ಪ್ರತೀಕಾರವನ್ನು [QE][QS2]ನಿನಗೆ ಸಲ್ಲಿಸುವವನು ಧನ್ಯನು. [QE]
9. [QS]ನಿಮ್ಮ ಚಿಕ್ಕ ಕೂಸುಗಳನ್ನು ಹಿಡಿದು, [QE][QS2]ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 137 / 150
1 ಬಾಬಿಲೋನಿನ ನದಿಗಳ ಹತ್ತಿರ ನಾವು ಕುಳಿತುಕೊಂಡು, ಚೀಯೋನನ್ನು ಜ್ಞಾಪಕ ಮಾಡಿಕೊಂಡಾಗ ಅತ್ತೆವು. 2 ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗು ಹಾಕಿದೆವು. 3 ಏಕೆಂದರೆ ಅಲ್ಲಿ ನಮ್ಮನ್ನು ಸೆರೆಹಿಡಿದು ಬಂಧಿಸಿದವರು, ನಮಗೆ ಹಾಡನ್ನು ಹಾಡಲು ಹೇಳಿದ್ದರು; ನಮ್ಮನ್ನು ಪೀಡಿಸುವವರು ವಿನೋದಕ್ಕಾಗಿ ಹಾಡನ್ನು ಕೇಳಲು ಬಯಸಿದ್ದರು; “ಚೀಯೋನಿನ ಹಾಡುಗಳಲ್ಲಿ ಒಂದು ನಮಗೆ ಹಾಡಿರಿ,” ಎಂದರು. 4 ಅನ್ಯದೇಶದಲ್ಲಿ ನಾವು ಯೆಹೋವ ದೇವರ ಹಾಡುಗಳನ್ನು ಹಾಡುವುದು ಹೇಗೆ? 5 ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ, ನನ್ನ ಬಲಗೈಯ ಕೌಶಲ್ಯ ಮರೆತು ಹೋಗಲಿ. 6 ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದಿದ್ದರೆ, ಯೆರೂಸಲೇಮನ್ನು ನನ್ನ ಎಲ್ಲಾ ಸಂತೋಷಕ್ಕಿಂತಲೂ ಹೆಚ್ಚಾಗಿಡದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ. 7 ಯೆರೂಸಲೇಮು ಬಿದ್ದುಹೋದ ದಿವಸದಲ್ಲಿ, “ಹಾಳುಮಾಡಿರಿ, ಅದರ ಅಸ್ತಿವಾರದವರೆಗೆ ಹಾಳುಮಾಡಿರಿ,” ಎಂದು ಹೇಳಿದ ಎದೋಮಿನವರನ್ನು ಯೆಹೋವ ದೇವರೇ ಜ್ಞಾಪಕಮಾಡಿಕೊಳ್ಳಿರಿ. 8 ಹಾಳಾಗಲಿಕ್ಕಿರುವ ಬಾಬಿಲೋನ್ ನಗರವೇ, ನೀನು ನಮಗೆ ಮಾಡಿದ್ದಕ್ಕೆ ಪ್ರತೀಕಾರವನ್ನು ನಿನಗೆ ಸಲ್ಲಿಸುವವನು ಧನ್ಯನು. 9 ನಿಮ್ಮ ಚಿಕ್ಕ ಕೂಸುಗಳನ್ನು ಹಿಡಿದು, ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 137 / 150
×

Alert

×

Kannada Letters Keypad References