1. [QS]ಯೆಹೋವ ದೇವರೇ, ನೀವು ನನ್ನನ್ನು ಪರಿಶೋಧಿಸಿದ್ದೀರಿ; [QE][QS2]ನನ್ನನ್ನು ತಿಳಿದುಕೊಂಡಿದ್ದೀರಿ. [QE]
2. [QS]ನಾನು ಕುಳಿತಿರುವುದನ್ನೂ, ಏಳುವುದನ್ನೂ ನೀವು ತಿಳಿದುಕೊಂಡಿದ್ದೀರಿ; [QE][QS2]ನನ್ನ ಆಲೋಚನೆಗಳನ್ನು ದೂರದಿಂದ ಗ್ರಹಿಸಿಕೊಂಡಿದ್ದೀರಿ. [QE]
3. [QS]ನಾನು ನಡೆಯುವುದನ್ನೂ, ನಾನು ಮಲಗುವುದನ್ನೂ ನೀವು ವಿವೇಚಿಸಿದ್ದೀರಿ; [QE][QS2]ನನ್ನ ಮಾರ್ಗಗಳೆಲ್ಲಾ ನಿಮಗೆ ಸುಪರಿಚಿತವಾಗಿವೆ. [QE]
4. [QS]ನನ್ನ ನಾಲಿಗೆಯಲ್ಲಿ ಒಂದು ಮಾತು ಆರಂಭಿಸುವುದಕ್ಕಿಂತ ಮುಂಚೆಯೇ [QE][QS2]ಯೆಹೋವ ದೇವರೇ, ಅದು ನಿಮಗೆ ಪೂರ್ಣವಾಗಿ ತಿಳಿದಿರುತ್ತದೆ. [QE]
5. [QS]ನೀವು ನನ್ನ ಹಿಂದೆಯೂ, ಮುಂದೆಯೂ ಆವರಿಸಿಕೊಂಡು, [QE][QS2]ನಿಮ್ಮ ಕೈಯನ್ನು ನನ್ನ ಮೇಲೆ ಇಟ್ಟಿದ್ದೀರಿ. [QE]
6. [QS]ಇಂಥ ಅರಿವು ನನಗೆ ಅತ್ಯಂತ ವಿಸ್ಮಯವಾಗಿದೆ, [QE][QS2]ಅದು ನನಗೆ ನಿಲುಕಲಾರದಷ್ಟು ಉನ್ನತವಾಗಿದೆ. [QE][PBR]
7. [QS]ನಾನು ನಿಮ್ಮ ಆತ್ಮದಿಂದ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? [QE][QS2]ನಿಮ್ಮ ಸನ್ನಿಧಿಯಿಂದ ತಪ್ಪಿಸಿಕೊಂಡು ನಾನು ಎಲ್ಲಿಗೆ ಹೊರಟು ಹೋಗಲಿ? [QE]
8. [QS]ನಾನು ಆಕಾಶಕ್ಕೆ ಏರಿ ಹೋದರೆ, ನೀವು ಅಲ್ಲಿ ಇದ್ದೀರಿ; [QE][QS2]ಪಾತಾಳಕ್ಕೆ ಹೋಗಿ ನಿದ್ರಿಸಿದರೂ ನೀವು ಅಲ್ಲಿಯೂ ಇದ್ದೀರಿ. [QE]
9. [QS]ಉದಯದ ರೆಕ್ಕೆಗಳನ್ನು ತೆಗೆದುಕೊಂಡು, [QE][QS2]ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ, [QE]
10. [QS]ಅಲ್ಲಿಯೂ ನಿಮ್ಮ ಕೈ ನನ್ನನ್ನು ನಡೆಸುವುದು, [QE][QS2]ನಿಮ್ಮ ಬಲಗೈ ನನ್ನನ್ನು ಹಿಡಿದಿರುವುದು. [QE]
11. [QS]“ಕತ್ತಲೆಯು ನನ್ನನ್ನು ಕವಿದುಕೊಳ್ಳಲಿ [QE][QS2]ಮತ್ತು ಬೆಳಕು ನನ್ನ ಸುತ್ತಲೂ ಇರುಳಾಗಲಿ,” [QE][QS2]ಎಂದು ನಾನು ಹೇಳಿದರೂ, [QE]
12. [QS]ಕತ್ತಲು ನಿಮಗೆ ಕತ್ತಲಾಗಿರುವುದಿಲ್ಲ; [QE][QS2]ರಾತ್ರಿಯು ಹಗಲಿನ ಹಾಗೆ ಪ್ರಕಾಶಿಸುವುದು, [QE][QS2]ಏಕೆಂದರೆ ಕತ್ತಲು ನಿಮಗೆ ಬೆಳಕಿನಂತಿರುವುದು. [QE][PBR]
13. [QS]ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ; [QE][QS2]ನನ್ನ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವರು ನೀವೇ. [QE]
14. [QS]ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ [QE][QS2]ನಾನು ನಿಮ್ಮನ್ನು ಸ್ತುತಿಸುತ್ತೇನೆ; [QE][QS2]ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು, [QE][QS2]ನಾನು ಪೂರ್ಣವಾಗಿ ತಿಳಿದಿದ್ದೇನೆ. [QE]
15. [QS]ನೀವು ನನ್ನನ್ನು ಮರೆಯಲ್ಲಿ ರೂಪಿಸಿದಾಗಲೂ, [QE][QS2]ಭೂಗರ್ಭದಲ್ಲಿ ನನ್ನನ್ನು ರಚಿಸಿದಾಗಲೂ [QE][QS2]ನನ್ನ ಅಸ್ಥಿಪಂಜರವು ನಿಮಗೆ ಮರೆಯಾಗಿರಲಿಲ್ಲ. [QE]
16. [QS]ನಾನು ಇನ್ನೂ ಭ್ರೂಣವಾಗಿರುವಾಗಲೇ ನಿಮ್ಮ ಕಣ್ಣುಗಳು ನನ್ನನ್ನು ನೋಡಿದವು; [QE][QS2]ನೀವು ನನಗೆ ಅನುಮತಿಸಿರುವ ಪ್ರಥಮ ದಿನದಿಂದ ಕೊನೆಯದಿನದವರೆಗೆ [QE][QS2]ನನ್ನ ಎಲ್ಲಾ ದಿನಗಳೂ ನಿಮ್ಮ ಪುಸ್ತಕದಲ್ಲಿ ಬರೆಯಲಾಗಿವೆ. [QE]
17. [QS]ದೇವರೇ, ನಿಮ್ಮ ಆಲೋಚನೆಗಳು ನನಗೆ ಎಷ್ಟೋ ಅಮೂಲ್ಯವಾಗಿವೆ! [QE][QS2]ಅವುಗಳ ಎಣಿಕೆ ನನಗೆ ಎಷ್ಟೋ ಅಸಂಖ್ಯವಾಗಿವೆ! [QE]
18. [QS]ನಾನು ಅವುಗಳನ್ನು ಎಣಿಸಿದರೆ, [QE][QS2]ಅವು ಮರಳಿಗಿಂತಲೂ ಹೆಚ್ಚಾಗಿವೆ! [QE][QS2]ನಾನು ಎಚ್ಚರವಾಗುವಾಗ, ನಿಶ್ಚಯವಾಗಿಯೂ ನಿಮ್ಮ ಸಂಗಡ ಇರುವೆನು. [QE][PBR]
19. [QS]ದೇವರೇ, ಒಂದು ವೇಳೆ ನೀವು ದುಷ್ಟರೆಲ್ಲರನ್ನು [QE][QS2]ದಂಡಿಸಿಬಿಟ್ಟರೆ ಎಷ್ಟೋ ಒಳ್ಳೆಯದಾಗಿರುವುದು! [QE][QS2]ಕೊಲೆಪಾತಕರೇ, ನೀವು ನನ್ನಿಂದ ತೊಲಗಿ ಹೋದರೆ ಎಷ್ಟೋ ಹಿತ! [QE]
20. [QS]ಅವರು ನಿಮಗೆ ವಿರೋಧವಾಗಿ ಮಾತಾಡುತ್ತಾರೆ; [QE][QS2]ನಿಮ್ಮ ವೈರಿಗಳು ನಿಮ್ಮ ಹೆಸರನ್ನು ದುರುಪಯೋಗ ಮಾಡುತ್ತಾರೆ. [QE]
21. [QS]ಯೆಹೋವ ದೇವರೇ, ನಿಮ್ಮನ್ನು ದ್ವೇಷಿಸುವವರನ್ನು ನಾನು ದ್ವೇಷಿಸದಿರುವೆನೋ? [QE][QS2]ನಿಮಗೆ ವಿರೋಧವಾಗಿ ತಿರುಗಿ ಬಿದ್ದವರನ್ನು ನಾನು ಹೀನೈಸದಿರುವೆನೋ? [QE]
22. [QS]ನಾನು ಪೂರ್ಣ ದ್ವೇಷದಿಂದ ಅವರನ್ನು ಹಗೆಮಾಡುತ್ತೇನೆ; [QE][QS2]ನಾನು ಅವರನ್ನು ನನ್ನ ಶತ್ರುಗಳಂತೆ ಪರಿಗಣಿಸುತ್ತೇನೆ. [QE]
23. [QS]ದೇವರೇ, ನನ್ನನ್ನು ಪರಿಶೋಧಿಸಿ, ನನ್ನ ಹೃದಯವನ್ನು ತಿಳಿದುಕೊಳ್ಳಿರಿ; [QE][QS2]ನನ್ನನ್ನು ಪರೀಕ್ಷಿಸಿ, ನನ್ನ ಚಿಂತಾಲೋಚನೆಗಳನ್ನು ತಿಳಿದುಕೊಳ್ಳಿರಿ. [QE]
24. [QS]ನನ್ನಲ್ಲಿ ಕೇಡಿನ ಮಾರ್ಗವಿದೆಯೋ ಎಂದು ನೋಡಿರಿ, [QE][QS2]ನನ್ನನ್ನು ನಿತ್ಯ ಮಾರ್ಗದಲ್ಲಿ ನಡೆಸಿರಿ. [QE]