ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]“ದೇವರು ಇಲ್ಲಾ,” ಎಂದು [QE][QS2]ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. [QE][QS]ಅವರು ಕೆಟ್ಟು ಹೋಗಿ, ಅಸಹ್ಯ ಕೃತ್ಯಗಳನ್ನು ಮಾಡುತ್ತಾರೆ; [QE][QS2]ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ. [QE][PBR]
2. [QS]ದೇವರನ್ನು ಹುಡುಕುವ [QE][QS2]ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ [QE][QS]ಯೆಹೋವ ದೇವರು ಸ್ವರ್ಗದಿಂದ, [QE][QS2]ಮನುಷ್ಯರ ಮೇಲೆ ದೃಷ್ಟಿಸಿದರು. [QE]
3. [QS]ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದಾರೆ; [QE][QS2]ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, [QE][QS2]ಒಬ್ಬರಾದರೂ ಇಲ್ಲ. [QE][PBR]
4. [QS]ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? [QE][PBR] [QS]ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? [QE][QS2]ಆದರೆ ಅವರು ಯೆಹೋವ ದೇವರಿಗೆ ಎಂದೂ ಮೊರೆಯಿಡುವುದಿಲ್ಲ. [QE]
5. [QS]ದೇವರು ನೀತಿವಂತರ ಸಹವಾಸದಲ್ಲಿ ಇರುವುದರಿಂದ, [QE][QS2]ದುಷ್ಟತ್ವವನ್ನು ನಡೆಸುವವರು ಅತ್ಯಂತ ಭಯಭ್ರಾಂತರಾಗುವರು. [QE]
6. [QS]ದುಷ್ಟತ್ವ ನಡೆಸುವವರೇ, ನೀವು ಬಡವರ ಯೋಜನೆಗಳನ್ನು ನಿರಾಶೆಗೊಳಿಸುತ್ತೀರಿ, [QE][QS2]ಆದರೆ ಯೆಹೋವ ದೇವರೇ ಅವರ ಆಶ್ರಯವಾಗಿದ್ದಾರೆ. [QE][PBR]
7. [QS]ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! [QE][QS2]ಯೆಹೋವ ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ, [QE][QS2]ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 150
1 “ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋಗಿ, ಅಸಹ್ಯ ಕೃತ್ಯಗಳನ್ನು ಮಾಡುತ್ತಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ. 2 ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ಯೆಹೋವ ದೇವರು ಸ್ವರ್ಗದಿಂದ, ಮನುಷ್ಯರ ಮೇಲೆ ದೃಷ್ಟಿಸಿದರು. 3 ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, ಒಬ್ಬರಾದರೂ ಇಲ್ಲ. 4 ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಆದರೆ ಅವರು ಯೆಹೋವ ದೇವರಿಗೆ ಎಂದೂ ಮೊರೆಯಿಡುವುದಿಲ್ಲ. 5 ದೇವರು ನೀತಿವಂತರ ಸಹವಾಸದಲ್ಲಿ ಇರುವುದರಿಂದ, ದುಷ್ಟತ್ವವನ್ನು ನಡೆಸುವವರು ಅತ್ಯಂತ ಭಯಭ್ರಾಂತರಾಗುವರು. 6 ದುಷ್ಟತ್ವ ನಡೆಸುವವರೇ, ನೀವು ಬಡವರ ಯೋಜನೆಗಳನ್ನು ನಿರಾಶೆಗೊಳಿಸುತ್ತೀರಿ, ಆದರೆ ಯೆಹೋವ ದೇವರೇ ಅವರ ಆಶ್ರಯವಾಗಿದ್ದಾರೆ. 7 ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ಯೆಹೋವ ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ, ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 150
×

Alert

×

Kannada Letters Keypad References