ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರೇ, ಕೆಡುಕರಿಂದ ನನ್ನನ್ನು ತಪ್ಪಿಸಿರಿ, [QE][QS2]ಬಲಾತ್ಕಾರಿಗಳಿಂದ ನನ್ನನ್ನು ತಪ್ಪಿಸಿ ಕಾಪಾಡಿರಿ. [QE]
2. [QS]ಅವರು ಹೃದಯದಲ್ಲಿ ಕೇಡನ್ನು ಕಲ್ಪಿಸುತ್ತಾರೆ; [QE][QS2]ಅವರು ಪ್ರತಿದಿನ ಕಲಹವೆಬ್ಬಿಸುತ್ತಾರೆ. [QE]
3. [QS]ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಹದಮಾಡುತ್ತಾರೆ; [QE][QS2]ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ. [QE][PBR]
4. [QS]ಯೆಹೋವ ದೇವರೇ, ದುಷ್ಟರ ಕೈಗಳಿಂದ ನನ್ನನ್ನು ತಪ್ಪಿಸಿ ಕಾಯಿರಿ. [QE][QS2]ಹಿಂಸಕರಿಂದ ನನ್ನನ್ನು ರಕ್ಷಿಸು, [QE][QS2]ಅವರು ನನ್ನ ಮಾರ್ಗಗಳನ್ನು ಕೆಡಿಸುವುದಕ್ಕೆ ಉದ್ದೇಶಿಸುತ್ತಾರೆ. [QE]
5. [QS]ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ; [QE][QS2]ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; [QE][QS2]ನನಗೆ ಬೋನಿಟ್ಟಿದ್ದಾರೆ. [QE][PBR]
6. [QS]ನಾನು ಯೆಹೋವ ದೇವರಿಗೆ ಹೀಗೆ ಹೇಳಿದೆನು, [QE][QS2]“ನೀವು ನನ್ನ ದೇವರಾಗಿದ್ದೀರಿ; [QE][QS2]ಯೆಹೋವ ದೇವರೇ, ಕರುಣೆಗಾಗಿ ಬೇಡುವ ನನ್ನ ಮೊರೆಗೆ ಕಿವಿಗೊಡಿರಿ. [QE]
7. [QS]ನನ್ನ ರಕ್ಷಣೆಯ ಬಲವಾಗಿರುವ ಸಾರ್ವಭೌಮ ಯೆಹೋವ ದೇವರೇ, [QE][QS2]ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಕಾಪಾಡುತ್ತೀರಿ. [QE]
8. [QS]ಯೆಹೋವ ದೇವರೇ, ದುಷ್ಟರಿಗೆ ಅವರ ಇಷ್ಟಾರ್ಥವನ್ನು ಕೊಡಬೇಡಿರಿ; [QE][QS2]ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡಿರಿ.” [QE][PBR]
9. [QS]ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು, [QE][QS2]ಅವರ ತಲೆಯ ಮೇಲೇ ಬರಲಿ. [QE]
10. [QS]ಉರಿ ಕೆಂಡಗಳು ಅವರ ಮೇಲೆ ಬೀಳಲಿ; [QE][QS2]ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ, [QE][QS2]ಇತರರು ಅವರನ್ನು ಕುಣಿಯಲ್ಲಿ ಕೆಡವಲಿ. [QE]
11. [QS]ಚಾಡಿಕೋರರು ದೇಶದಲ್ಲಿ ಉಳಿಯದಿರಲಿ; [QE][QS2]ಬಲಾತ್ಕಾರಿಯನ್ನು ಕೇಡು ಬೇಟೆಯಾಡಿ ಕೆಡವಲಿ. [QE][PBR]
12. [QS]ಯೆಹೋವ ದೇವರು ಬಡವನಿಗೆ ವ್ಯಾಜ್ಯವನ್ನು, [QE][QS2]ಬಲಹೀನರಿಗೆ ನ್ಯಾಯವನ್ನೂ ತೀರಿಸುವರೆಂದೂ ನಾನು ಬಲ್ಲೆನು. [QE]
13. [QS]ನಿಶ್ಚಯವಾಗಿ ನೀತಿವಂತರು ನಿಮ್ಮ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; [QE][QS2]ಯಥಾರ್ಥರು ನಿಮ್ಮ ಸನ್ನಿಧಿಯಲ್ಲಿ ಬಾಳುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 140 / 150
1 ಯೆಹೋವ ದೇವರೇ, ಕೆಡುಕರಿಂದ ನನ್ನನ್ನು ತಪ್ಪಿಸಿರಿ, ಬಲಾತ್ಕಾರಿಗಳಿಂದ ನನ್ನನ್ನು ತಪ್ಪಿಸಿ ಕಾಪಾಡಿರಿ. 2 ಅವರು ಹೃದಯದಲ್ಲಿ ಕೇಡನ್ನು ಕಲ್ಪಿಸುತ್ತಾರೆ; ಅವರು ಪ್ರತಿದಿನ ಕಲಹವೆಬ್ಬಿಸುತ್ತಾರೆ. 3 ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ. 4 ಯೆಹೋವ ದೇವರೇ, ದುಷ್ಟರ ಕೈಗಳಿಂದ ನನ್ನನ್ನು ತಪ್ಪಿಸಿ ಕಾಯಿರಿ. ಹಿಂಸಕರಿಂದ ನನ್ನನ್ನು ರಕ್ಷಿಸು, ಅವರು ನನ್ನ ಮಾರ್ಗಗಳನ್ನು ಕೆಡಿಸುವುದಕ್ಕೆ ಉದ್ದೇಶಿಸುತ್ತಾರೆ. 5 ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನನಗೆ ಬೋನಿಟ್ಟಿದ್ದಾರೆ. 6 ನಾನು ಯೆಹೋವ ದೇವರಿಗೆ ಹೀಗೆ ಹೇಳಿದೆನು, “ನೀವು ನನ್ನ ದೇವರಾಗಿದ್ದೀರಿ; ಯೆಹೋವ ದೇವರೇ, ಕರುಣೆಗಾಗಿ ಬೇಡುವ ನನ್ನ ಮೊರೆಗೆ ಕಿವಿಗೊಡಿರಿ. 7 ನನ್ನ ರಕ್ಷಣೆಯ ಬಲವಾಗಿರುವ ಸಾರ್ವಭೌಮ ಯೆಹೋವ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಕಾಪಾಡುತ್ತೀರಿ. 8 ಯೆಹೋವ ದೇವರೇ, ದುಷ್ಟರಿಗೆ ಅವರ ಇಷ್ಟಾರ್ಥವನ್ನು ಕೊಡಬೇಡಿರಿ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡಿರಿ.” 9 ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು, ಅವರ ತಲೆಯ ಮೇಲೇ ಬರಲಿ. 10 ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ, ಇತರರು ಅವರನ್ನು ಕುಣಿಯಲ್ಲಿ ಕೆಡವಲಿ. 11 ಚಾಡಿಕೋರರು ದೇಶದಲ್ಲಿ ಉಳಿಯದಿರಲಿ; ಬಲಾತ್ಕಾರಿಯನ್ನು ಕೇಡು ಬೇಟೆಯಾಡಿ ಕೆಡವಲಿ. 12 ಯೆಹೋವ ದೇವರು ಬಡವನಿಗೆ ವ್ಯಾಜ್ಯವನ್ನು, ಬಲಹೀನರಿಗೆ ನ್ಯಾಯವನ್ನೂ ತೀರಿಸುವರೆಂದೂ ನಾನು ಬಲ್ಲೆನು. 13 ನಿಶ್ಚಯವಾಗಿ ನೀತಿವಂತರು ನಿಮ್ಮ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿಮ್ಮ ಸನ್ನಿಧಿಯಲ್ಲಿ ಬಾಳುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 140 / 150
×

Alert

×

Kannada Letters Keypad References