ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ, ನನ್ನ ಬಳಿಗೆ ಬರಲು ತ್ವರೆಪಡಿರಿ. [QE][QS2]ನಾನು ನಿಮ್ಮನ್ನು ಕರೆಯುವಾಗ, ನನಗೆ ಕಿವಿಗೊಡಿರಿ. [QE]
2. [QS]ನನ್ನ ಪ್ರಾರ್ಥನೆ ನಿಮ್ಮ ಮುಂದೆ ಧೂಪವಾಗಿರಲಿ, [QE][QS2]ನಾನು ನಿಮ್ಮ ಕಡೆ ಕೈ ಎತ್ತುವುದು ಸಾಯಂಕಾಲದ ಬಲಿಯಂತೆ ನಿಮಗೆ ಸಮರ್ಪಕವಾಗಿರಲಿ. [QE][PBR]
3. [QS]ಯೆಹೋವ ದೇವರೇ, ನನ್ನ ಬಾಯಿಗೆ ಕಾವಲಿಡಿರಿ; [QE][QS2]ನನ್ನ ತುಟಿಗಳ ಕದವನ್ನು ಕಾಯಿರಿ; [QE]
4. [QS]ಅಪರಾಧ ಮಾಡುವವರ ಸಂಗಡ ನಾನು ಸಹ ಸೇರಿಕೊಂಡು [QE][QS2]ಕೆಟ್ಟ ಕಾರ್ಯಗಳನ್ನು ಮಾಡಲು [QE][QS]ನನ್ನ ಹೃದಯ ಸೆಳೆಯದಂತೆ ಕಾಪಾಡಿರಿ; [QE][QS2]ಅವರ ಸವಿ ಊಟಗಳನ್ನು ನಾನು ಉಣ್ಣದಿರಲಿ. [QE][PBR]
5. [QS]ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. [QE][QS2]ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; [QE][QS]ನನ್ನ ತಲೆ ಅದನ್ನು ಬೇಡವೆನ್ನದಿರಲಿ; [QE][QS2]ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು. [QE][PBR]
6. [QS]ಅವರ ನ್ಯಾಯಾಧಿಪತಿಗಳು ಉನ್ನತ ಸ್ಥಳದಿಂದ ಕೆಳಬಿದ್ದಾಗ [QE][QS2]ಅವರು ನನ್ನ ಮಾತು ಕೇಳುವರು. [QE]
7. [QS]ಅವರು ಹೀಗೆ ಹೇಳುವರು, “ಒಬ್ಬನು ಹೊಲವನ್ನು ಉತ್ತು, ಹೆಂಟೆಗಳನ್ನು ಒಡೆದು [QE][QS2]ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳ ದ್ವಾರದಲ್ಲಿ ಎರಚಲಾಗುವುದು.” [QE][PBR]
8. [QS]ಆದರೆ ಸಾರ್ವಭೌಮ ಯೆಹೋವ ದೇವರೇ, ನನ್ನ ಕಣ್ಣುಗಳು ನಿಮ್ಮ ಕಡೆ ಇವೆ; [QE][QS2]ನಿಮ್ಮನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡಿರಿ. [QE]
9. [QS]ಅವರು ನನಗೆ ಒಡ್ಡಿದ ಉರುಲಿನಿಂದಲೂ, [QE][QS2]ಅಪರಾಧಗಳ ನೇಣುಗಳಿಂದಲೂ ನನ್ನನ್ನು ಕಾಪಾಡಿರಿ. [QE]
10. [QS]ನಾನು ತಪ್ಪಿಸಿಕೊಂಡು ಸುರಕ್ಷಿತವಾಗಿ ಹೋಗುವಷ್ಟರಲ್ಲಿ [QE][QS2]ದುಷ್ಟರು ತಮ್ಮ ಬಲೆಗಳಲ್ಲಿಯೇ ಬೀಳಲಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 141 / 150
1 ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ, ನನ್ನ ಬಳಿಗೆ ಬರಲು ತ್ವರೆಪಡಿರಿ. ನಾನು ನಿಮ್ಮನ್ನು ಕರೆಯುವಾಗ, ನನಗೆ ಕಿವಿಗೊಡಿರಿ. 2 ನನ್ನ ಪ್ರಾರ್ಥನೆ ನಿಮ್ಮ ಮುಂದೆ ಧೂಪವಾಗಿರಲಿ, ನಾನು ನಿಮ್ಮ ಕಡೆ ಕೈ ಎತ್ತುವುದು ಸಾಯಂಕಾಲದ ಬಲಿಯಂತೆ ನಿಮಗೆ ಸಮರ್ಪಕವಾಗಿರಲಿ. 3 ಯೆಹೋವ ದೇವರೇ, ನನ್ನ ಬಾಯಿಗೆ ಕಾವಲಿಡಿರಿ; ನನ್ನ ತುಟಿಗಳ ಕದವನ್ನು ಕಾಯಿರಿ; 4 ಅಪರಾಧ ಮಾಡುವವರ ಸಂಗಡ ನಾನು ಸಹ ಸೇರಿಕೊಂಡು ಕೆಟ್ಟ ಕಾರ್ಯಗಳನ್ನು ಮಾಡಲು ನನ್ನ ಹೃದಯ ಸೆಳೆಯದಂತೆ ಕಾಪಾಡಿರಿ; ಅವರ ಸವಿ ಊಟಗಳನ್ನು ನಾನು ಉಣ್ಣದಿರಲಿ. 5 ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; ನನ್ನ ತಲೆ ಅದನ್ನು ಬೇಡವೆನ್ನದಿರಲಿ; ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು. 6 ಅವರ ನ್ಯಾಯಾಧಿಪತಿಗಳು ಉನ್ನತ ಸ್ಥಳದಿಂದ ಕೆಳಬಿದ್ದಾಗ ಅವರು ನನ್ನ ಮಾತು ಕೇಳುವರು. 7 ಅವರು ಹೀಗೆ ಹೇಳುವರು, “ಒಬ್ಬನು ಹೊಲವನ್ನು ಉತ್ತು, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳ ದ್ವಾರದಲ್ಲಿ ಎರಚಲಾಗುವುದು.” 8 ಆದರೆ ಸಾರ್ವಭೌಮ ಯೆಹೋವ ದೇವರೇ, ನನ್ನ ಕಣ್ಣುಗಳು ನಿಮ್ಮ ಕಡೆ ಇವೆ; ನಿಮ್ಮನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡಿರಿ. 9 ಅವರು ನನಗೆ ಒಡ್ಡಿದ ಉರುಲಿನಿಂದಲೂ, ಅಪರಾಧಗಳ ನೇಣುಗಳಿಂದಲೂ ನನ್ನನ್ನು ಕಾಪಾಡಿರಿ. 10 ನಾನು ತಪ್ಪಿಸಿಕೊಂಡು ಸುರಕ್ಷಿತವಾಗಿ ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿಯೇ ಬೀಳಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 141 / 150
×

Alert

×

Kannada Letters Keypad References