ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]ಅರಸರಾಗಿರುವ ನನ್ನ ದೇವರೇ, ನಿಮ್ಮನ್ನು ಘನಪಡಿಸುವೆನು; [QE][QS2]ನಿಮ್ಮ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು. [QE]
2. [QS]ಪ್ರತಿದಿನ ನಿಮ್ಮನ್ನು ಸ್ತುತಿಸುವೆನು; [QE][QS2]ಎಂದೆಂದಿಗೂ ಸ್ತುತಿಸುವೆನು. [QE][PBR]
3. [QS]ಯೆಹೋವ ದೇವರು ಮಹೋನ್ನತರೂ, ಬಹುಸ್ತುತಿಪಾತ್ರರೂ ಆಗಿದ್ದಾರೆ. [QE][QS2]ಅವರ ಮಹತ್ವವು ಅಗಮ್ಯವಾದದ್ದು. [QE]
4. [QS]ದೇವರೇ ಒಂದು ತಲಾಂತರವು ಇನ್ನೊಂದು ತಲಾಂತರಕ್ಕೆ ನಿಮ್ಮ ಕೆಲಸಗಳನ್ನು ಪ್ರಕಟಿಸುತ್ತದೆ; [QE][QS2]ಜನರು ನಿಮ್ಮ ಪರಾಕ್ರಮಗಳನ್ನು ತಿಳಿಸುತ್ತಾರೆ. [QE]
5. [QS]ನಿಮ್ಮ ಘನತೆಯ ಪ್ರಭಾವದ ಮಹಿಮೆಗಳ ವಿಷಯವಾಗಿಯೂ [QE][QS2]ನಿಮ್ಮ ಅದ್ಭುತಕಾರ್ಯಗಳ ವಿಷಯವಾಗಿಯೂ ನಾನು ಧ್ಯಾನಿಸುತ್ತಿರುವೆನು, [QE]
6. [QS]ನಿಮ್ಮ ಅತಿಶಯ ಶಕ್ತಿಯ ವಿಷಯವಾಗಿ ಅವರು ಹೇಳುವರು; [QE][QS2]ನಿಮ್ಮ ಮಹಾಕಾರ್ಯವನ್ನು ನಾನು ಸಾರುವೆನು. [QE]
7. [QS]ನಿಮ್ಮ ಬಹು ಒಳ್ಳೆಯತನದ ಜ್ಞಾಪಕವನ್ನು ಅವರು ನುಡಿಯುವರು; [QE][QS2]ನಿಮ್ಮ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು. [QE][PBR]
8. [QS]ಯೆಹೋವ ದೇವರು ಕೃಪಾಳುವೂ, ಅನುಕಂಪವೂ, [QE][QS2]ದೀರ್ಘಶಾಂತಿಯೂ, ಪ್ರೀತಿ ಪೂರ್ಣರೂ ಆಗಿದ್ದಾರೆ. [QE][PBR]
9. [QS]ಯೆಹೋವ ದೇವರು ಸರ್ವರಿಗೂ ಒಳ್ಳೆಯವರು. [QE][QS2]ಅವರ ಅನುಕಂಪವು ತಮ್ಮ ಎಲ್ಲಾ ಸೃಷ್ಟಿಗಳ ಮೇಲೆ ಇದೆ. [QE]
10. [QS]ಯೆಹೋವ ದೇವರೇ, ನಿಮ್ಮ ನಂಬಿಗಸ್ತರು [QE][QS2]ನಿಮ್ಮನ್ನು ಸ್ತುತಿಸುವರು. [QE]
11. [QS]ನಿಮ್ಮ ರಾಜ್ಯದ ಮಹಿಮೆಯನ್ನು ಹೇಳುವರು; [QE][QS2]ನಿಮ್ಮ ಪರಾಕ್ರಮವನ್ನು ನುಡಿಯುವರು. [QE]
12. [QS]ಮಾನವರಿಗೆ ನಿಮ್ಮ ಪರಾಕ್ರಮ ಕ್ರಿಯೆಗಳನ್ನೂ, [QE][QS2]ನಿಮ್ಮ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು. [QE]
13. [QS]ನಿಮ್ಮ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; [QE][QS2]ನಿಮ್ಮ ಅಧಿಪತ್ಯವು ಎಲ್ಲಾ ತಲತಲಾಂತರಗಳಲ್ಲಿ ಇರುವುದು. [QE][PBR] [QS]ಯೆಹೋವ ದೇವರು ತಮ್ಮ ಎಲ್ಲಾ ಪ್ರತಿಜ್ಞೆಗಳಲ್ಲಿ ನಂಬಿಗಸ್ತರಾಗಿರುತ್ತಾರೆ. [QE][QS2]ಎಲ್ಲಾ ಕಾರ್ಯಗಳಲ್ಲಿಯೂ ಅವರ ಅನುಗ್ರಹ ಉಳಿದಿದೆ. [QE]
14. [QS]ಯೆಹೋವ ದೇವರು ಬೀಳುವವರೆಲ್ಲರನ್ನು ಉದ್ಧಾರ ಮಾಡುತ್ತಾರೆ. [QE][QS2]ತಗ್ಗಿಸಿಕೊಳ್ಳುವವರೆಲ್ಲರನ್ನು ಎತ್ತುತ್ತಾರೆ. [QE]
15. [QS]ದೇವರೇ, ಎಲ್ಲರ ಕಣ್ಣುಗಳು ನಿಮಗಾಗಿ ಕಾಯುತ್ತಿರುತ್ತವೆ. [QE][QS2]ನೀವು ಅವರಿಗೆ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀರಿ. [QE]
16. [QS]ನಿಮ್ಮ ಕೈದೆರೆದು [QE][QS2]ಎಲ್ಲಾ ಜೀವಿಗಳ ಇಷ್ಟವನ್ನು ಪೂರೈಸುತ್ತೀರಿ. [QE][PBR]
17. [QS]ಯೆಹೋವ ದೇವರು ತಮ್ಮ ಎಲ್ಲಾ ಮಾರ್ಗಗಳಲ್ಲಿ ನೀತಿವಂತರೂ [QE][QS2]ತಮ್ಮ ಸೃಷ್ಟಿಗೆಲ್ಲಾ ಪ್ರೀತಿ ತೋರಿಸುವವರೂ ಆಗಿದ್ದಾರೆ. [QE]
18. [QS]ಯೆಹೋವ ದೇವರನ್ನು ಕರೆಯುವವರು ಯಥಾರ್ಥವಾಗಿ ಕರೆಯುವುದಾದರೆ, [QE][QS2]ಅವರು ಅವರಿಗೆ ಸಮೀಪವಾಗಿದ್ದಾರೆ. [QE]
19. [QS]ತಮಗೆ ಭಯಪಡುವವರ ಇಷ್ಟವನ್ನು ನೆರವೇರಿಸುತ್ತಾರೆ. [QE][QS2]ಅವರ ಮೊರೆಯನ್ನು ಕೇಳಿ, ಅವರನ್ನು ರಕ್ಷಿಸುತ್ತಾರೆ. [QE]
20. [QS]ಯೆಹೋವ ದೇವರು, ತಮ್ಮನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾರೆ. [QE][QS2]ಆದರೆ ದುಷ್ಟರೆಲ್ಲರನ್ನು ದಂಡಿಸುತ್ತಾರೆ. [QE][PBR]
21. [QS]ನನ್ನ ಬಾಯಿ ಯೆಹೋವ ದೇವರ ಸ್ತೋತ್ರವನ್ನು ನುಡಿಯಲಿ; [QE][QS2]ಸಮಸ್ತ ಜೀವಿಗಳು ಆತನ ಪರಿಶುದ್ಧವಾದ ಹೆಸರನ್ನು [QE][QS2]ಯುಗಯುಗಾಂತರಗಳಿಗೂ ಸ್ತುತಿಸಲಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 145 / 150
1 ಅರಸರಾಗಿರುವ ನನ್ನ ದೇವರೇ, ನಿಮ್ಮನ್ನು ಘನಪಡಿಸುವೆನು; ನಿಮ್ಮ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು. 2 ಪ್ರತಿದಿನ ನಿಮ್ಮನ್ನು ಸ್ತುತಿಸುವೆನು; ಎಂದೆಂದಿಗೂ ಸ್ತುತಿಸುವೆನು. 3 ಯೆಹೋವ ದೇವರು ಮಹೋನ್ನತರೂ, ಬಹುಸ್ತುತಿಪಾತ್ರರೂ ಆಗಿದ್ದಾರೆ. ಅವರ ಮಹತ್ವವು ಅಗಮ್ಯವಾದದ್ದು. 4 ದೇವರೇ ಒಂದು ತಲಾಂತರವು ಇನ್ನೊಂದು ತಲಾಂತರಕ್ಕೆ ನಿಮ್ಮ ಕೆಲಸಗಳನ್ನು ಪ್ರಕಟಿಸುತ್ತದೆ; ಜನರು ನಿಮ್ಮ ಪರಾಕ್ರಮಗಳನ್ನು ತಿಳಿಸುತ್ತಾರೆ. 5 ನಿಮ್ಮ ಘನತೆಯ ಪ್ರಭಾವದ ಮಹಿಮೆಗಳ ವಿಷಯವಾಗಿಯೂ ನಿಮ್ಮ ಅದ್ಭುತಕಾರ್ಯಗಳ ವಿಷಯವಾಗಿಯೂ ನಾನು ಧ್ಯಾನಿಸುತ್ತಿರುವೆನು, 6 ನಿಮ್ಮ ಅತಿಶಯ ಶಕ್ತಿಯ ವಿಷಯವಾಗಿ ಅವರು ಹೇಳುವರು; ನಿಮ್ಮ ಮಹಾಕಾರ್ಯವನ್ನು ನಾನು ಸಾರುವೆನು. 7 ನಿಮ್ಮ ಬಹು ಒಳ್ಳೆಯತನದ ಜ್ಞಾಪಕವನ್ನು ಅವರು ನುಡಿಯುವರು; ನಿಮ್ಮ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು. 8 ಯೆಹೋವ ದೇವರು ಕೃಪಾಳುವೂ, ಅನುಕಂಪವೂ, ದೀರ್ಘಶಾಂತಿಯೂ, ಪ್ರೀತಿ ಪೂರ್ಣರೂ ಆಗಿದ್ದಾರೆ. 9 ಯೆಹೋವ ದೇವರು ಸರ್ವರಿಗೂ ಒಳ್ಳೆಯವರು. ಅವರ ಅನುಕಂಪವು ತಮ್ಮ ಎಲ್ಲಾ ಸೃಷ್ಟಿಗಳ ಮೇಲೆ ಇದೆ. 10 ಯೆಹೋವ ದೇವರೇ, ನಿಮ್ಮ ನಂಬಿಗಸ್ತರು ನಿಮ್ಮನ್ನು ಸ್ತುತಿಸುವರು. 11 ನಿಮ್ಮ ರಾಜ್ಯದ ಮಹಿಮೆಯನ್ನು ಹೇಳುವರು; ನಿಮ್ಮ ಪರಾಕ್ರಮವನ್ನು ನುಡಿಯುವರು. 12 ಮಾನವರಿಗೆ ನಿಮ್ಮ ಪರಾಕ್ರಮ ಕ್ರಿಯೆಗಳನ್ನೂ, ನಿಮ್ಮ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು. 13 ನಿಮ್ಮ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿಮ್ಮ ಅಧಿಪತ್ಯವು ಎಲ್ಲಾ ತಲತಲಾಂತರಗಳಲ್ಲಿ ಇರುವುದು. ಯೆಹೋವ ದೇವರು ತಮ್ಮ ಎಲ್ಲಾ ಪ್ರತಿಜ್ಞೆಗಳಲ್ಲಿ ನಂಬಿಗಸ್ತರಾಗಿರುತ್ತಾರೆ. ಎಲ್ಲಾ ಕಾರ್ಯಗಳಲ್ಲಿಯೂ ಅವರ ಅನುಗ್ರಹ ಉಳಿದಿದೆ. 14 ಯೆಹೋವ ದೇವರು ಬೀಳುವವರೆಲ್ಲರನ್ನು ಉದ್ಧಾರ ಮಾಡುತ್ತಾರೆ. ತಗ್ಗಿಸಿಕೊಳ್ಳುವವರೆಲ್ಲರನ್ನು ಎತ್ತುತ್ತಾರೆ. 15 ದೇವರೇ, ಎಲ್ಲರ ಕಣ್ಣುಗಳು ನಿಮಗಾಗಿ ಕಾಯುತ್ತಿರುತ್ತವೆ. ನೀವು ಅವರಿಗೆ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀರಿ. 16 ನಿಮ್ಮ ಕೈದೆರೆದು ಎಲ್ಲಾ ಜೀವಿಗಳ ಇಷ್ಟವನ್ನು ಪೂರೈಸುತ್ತೀರಿ. 17 ಯೆಹೋವ ದೇವರು ತಮ್ಮ ಎಲ್ಲಾ ಮಾರ್ಗಗಳಲ್ಲಿ ನೀತಿವಂತರೂ ತಮ್ಮ ಸೃಷ್ಟಿಗೆಲ್ಲಾ ಪ್ರೀತಿ ತೋರಿಸುವವರೂ ಆಗಿದ್ದಾರೆ. 18 ಯೆಹೋವ ದೇವರನ್ನು ಕರೆಯುವವರು ಯಥಾರ್ಥವಾಗಿ ಕರೆಯುವುದಾದರೆ, ಅವರು ಅವರಿಗೆ ಸಮೀಪವಾಗಿದ್ದಾರೆ. 19 ತಮಗೆ ಭಯಪಡುವವರ ಇಷ್ಟವನ್ನು ನೆರವೇರಿಸುತ್ತಾರೆ. ಅವರ ಮೊರೆಯನ್ನು ಕೇಳಿ, ಅವರನ್ನು ರಕ್ಷಿಸುತ್ತಾರೆ. 20 ಯೆಹೋವ ದೇವರು, ತಮ್ಮನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾರೆ. ಆದರೆ ದುಷ್ಟರೆಲ್ಲರನ್ನು ದಂಡಿಸುತ್ತಾರೆ. 21 ನನ್ನ ಬಾಯಿ ಯೆಹೋವ ದೇವರ ಸ್ತೋತ್ರವನ್ನು ನುಡಿಯಲಿ; ಸಮಸ್ತ ಜೀವಿಗಳು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 145 / 150
×

Alert

×

Kannada Letters Keypad References