ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರನ್ನು ಸ್ತುತಿಸಿರಿ. [QE][PBR] [QS]ಏಕೆಂದರೆ ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದು; [QE][QS2]ದೇವರನ್ನು ಸ್ತುತಿಸುವುದು ರಮ್ಯವೂ, ಯೋಗ್ಯವೂ ಆಗಿದೆ. [QE][PBR]
2. [QS]ಯೆಹೋವ ದೇವರು ಯೆರೂಸಲೇಮನ್ನು ಕಟ್ಟುತ್ತಾರೆ, [QE][QS2]ಚದರಿಹೋದ ಇಸ್ರಾಯೇಲನ್ನು ಕೂಡಿಸುತ್ತಾರೆ. [QE]
3. [QS]ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ, [QE][QS2]ಅವರ ಗಾಯಗಳನ್ನು ಕಟ್ಟುತ್ತಾರೆ. [QE]
4. [QS]ದೇವರು ನಕ್ಷತ್ರಗಳ ಸಂಖ್ಯೆಯನ್ನು ನಿರ್ಧರಿಸುತ್ತಾರೆ; [QE][QS2]ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆಯುತ್ತಾರೆ. [QE]
5. [QS]ನಮ್ಮ ಯೆಹೋವ ದೇವರು ದೊಡ್ಡವರು, ಬಹು ಶಕ್ತರು; [QE][QS2]ಅವರ ವಿವೇಕಕ್ಕೆ ಎಣೆಯಿಲ್ಲ. [QE]
6. [QS]ಯೆಹೋವ ದೇವರು ಸಾತ್ವಿಕರನ್ನು ಉದ್ಧರಿಸುತ್ತಾರೆ; [QE][QS2]ದುಷ್ಟರನ್ನು ದಂಡಿಸುತ್ತಾರೆ. [QE][PBR]
7. [QS]ಯೆಹೋವ ದೇವರಿಗೆ ಸ್ತೋತ್ರಗೀತೆ ಹಾಡಿರಿ, [QE][QS2]ನಮ್ಮ ದೇವರನ್ನು ಕಿನ್ನರಿಯಿಂದ ಸ್ತುತಿಸಿರಿ. [QE][PBR]
8. [QS]ದೇವರು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾರೆ; [QE][QS2]ಭೂಮಿಗೆ ಮಳೆಯನ್ನು ಸುರಿಸುತ್ತಾರೆ; [QE][QS2]ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾರೆ. [QE]
9. [QS]ದೇವರು ಪಶುಗಳಿಗೂ, [QE][QS2]ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾರೆ. [QE][PBR]
10. [QS]ಕುದುರೆಯ ಶಕ್ತಿಯಲ್ಲಿ ಅವರಿಗೆ ಇಷ್ಟವಿಲ್ಲ; [QE][QS2]ಶೂರನ ಕಾಲ್ಬಲವನ್ನು ಮೆಚ್ಚುವುದಿಲ್ಲ. [QE]
11. [QS]ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ, [QE][QS2]ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರಲ್ಲಿ ಹರ್ಷಿಸುತ್ತಾರೆ. [QE][PBR]
12. [QS]ಯೆರೂಸಲೇಮೇ, ಯೆಹೋವ ದೇವರನ್ನು ಸ್ತುತಿಸು; [QE][QS2]ಚೀಯೋನೇ, ನಿಮ್ಮ ದೇವರನ್ನು ಸ್ತುತಿಸು. [QE][PBR]
13. [QS]ನಿಮ್ಮ ಬಾಗಿಲುಗಳ ಅಗುಳಿಗಳನ್ನು ಬಲಗೊಳಿಸಿ, [QE][QS2]ದೇವರು ನಿಮ್ಮ ಜನರನ್ನು ಆಶೀರ್ವದಿಸುತ್ತಾರೆ. [QE]
14. [QS]ದೇವರು ನಿಮ್ಮ ಮೇರೆಗಳನ್ನು ಸಮಾಧಾನಪಡಿಸುತ್ತಾರೆ; [QE][QS2]ಉತ್ತಮವಾದ ಗೋಧಿಯಿಂದ ನಿಮ್ಮನ್ನು ತೃಪ್ತಿಪಡಿಸುತ್ತಾರೆ. [QE][PBR]
15. [QS]ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾರೆ; [QE][QS2]ದೇವರ ವಾಕ್ಯವು ಬಹು ತೀವ್ರವಾಗಿ ಓಡುತ್ತದೆ. [QE]
16. [QS]ದೇವರು ಹಿಮವನ್ನು ಉಣ್ಣೆಯ ಹಾಗೆ ಹರಡುತ್ತಾರೆ; [QE][QS2]ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ. [QE]
17. [QS]ದೇವರು ನೀರುಗಡ್ಡೆಯನ್ನು ಕಲ್ಲು ಹರಳುಗಳಂತೆ ಸುರಿದು ಹಾಕುತ್ತಾರೆ; [QE][QS2]ಅವರು ಕಳುಹಿಸುವ ಚಳಿಯ ಮುಂದೆ ಯಾರು ನಿಲ್ಲುವರು? [QE]
18. [QS]ದೇವರು ತಮ್ಮ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾರೆ; [QE][QS2]ದೇವರು ಗಾಳಿಯನ್ನು ಬೀಸುವಂತೆ ಮಾಡುತ್ತಾರೆ; ನೀರು ಹರಿಯುತ್ತದೆ. [QE][PBR]
19. [QS]ದೇವರು ಯಾಕೋಬ್ಯರಿಗೆ ತಮ್ಮ ವಾಕ್ಯವನ್ನು ಪ್ರಕಟಿಸುತ್ತಾರೆ, [QE][QS2]ಇಸ್ರಾಯೇಲರಿಗೆ ತಮ್ಮ ತೀರ್ಪುಗಳನ್ನೂ, ತನ್ನ ನ್ಯಾಯವಿಧಿಗಳನ್ನೂ ಪ್ರಕಟಿಸುತ್ತಾರೆ. [QE]
20. [QS]ಬೇರೆ ಯಾವ ಜನಾಂಗಕ್ಕಾದರೂ ದೇವರು ಹೀಗೆ ಮಾಡಲಿಲ್ಲ; [QE][QS2]ದೇವರ ನ್ಯಾಯವಿಧಿಗಳನ್ನು ಜನರು ತಿಳಿದುಕೊಳ್ಳುವುದಿಲ್ಲ. [QE][PBR] [QS]ಯೆಹೋವ ದೇವರನ್ನು ಸ್ತುತಿಸಿರಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 147 / 150
1 ಯೆಹೋವ ದೇವರನ್ನು ಸ್ತುತಿಸಿರಿ. ಏಕೆಂದರೆ ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದು; ದೇವರನ್ನು ಸ್ತುತಿಸುವುದು ರಮ್ಯವೂ, ಯೋಗ್ಯವೂ ಆಗಿದೆ. 2 ಯೆಹೋವ ದೇವರು ಯೆರೂಸಲೇಮನ್ನು ಕಟ್ಟುತ್ತಾರೆ, ಚದರಿಹೋದ ಇಸ್ರಾಯೇಲನ್ನು ಕೂಡಿಸುತ್ತಾರೆ. 3 ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ, ಅವರ ಗಾಯಗಳನ್ನು ಕಟ್ಟುತ್ತಾರೆ. 4 ದೇವರು ನಕ್ಷತ್ರಗಳ ಸಂಖ್ಯೆಯನ್ನು ನಿರ್ಧರಿಸುತ್ತಾರೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆಯುತ್ತಾರೆ. 5 ನಮ್ಮ ಯೆಹೋವ ದೇವರು ದೊಡ್ಡವರು, ಬಹು ಶಕ್ತರು; ಅವರ ವಿವೇಕಕ್ಕೆ ಎಣೆಯಿಲ್ಲ. 6 ಯೆಹೋವ ದೇವರು ಸಾತ್ವಿಕರನ್ನು ಉದ್ಧರಿಸುತ್ತಾರೆ; ದುಷ್ಟರನ್ನು ದಂಡಿಸುತ್ತಾರೆ. 7 ಯೆಹೋವ ದೇವರಿಗೆ ಸ್ತೋತ್ರಗೀತೆ ಹಾಡಿರಿ, ನಮ್ಮ ದೇವರನ್ನು ಕಿನ್ನರಿಯಿಂದ ಸ್ತುತಿಸಿರಿ. 8 ದೇವರು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾರೆ; ಭೂಮಿಗೆ ಮಳೆಯನ್ನು ಸುರಿಸುತ್ತಾರೆ; ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾರೆ. 9 ದೇವರು ಪಶುಗಳಿಗೂ, ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾರೆ. 10 ಕುದುರೆಯ ಶಕ್ತಿಯಲ್ಲಿ ಅವರಿಗೆ ಇಷ್ಟವಿಲ್ಲ; ಶೂರನ ಕಾಲ್ಬಲವನ್ನು ಮೆಚ್ಚುವುದಿಲ್ಲ. 11 ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ, ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರಲ್ಲಿ ಹರ್ಷಿಸುತ್ತಾರೆ. 12 ಯೆರೂಸಲೇಮೇ, ಯೆಹೋವ ದೇವರನ್ನು ಸ್ತುತಿಸು; ಚೀಯೋನೇ, ನಿಮ್ಮ ದೇವರನ್ನು ಸ್ತುತಿಸು. 13 ನಿಮ್ಮ ಬಾಗಿಲುಗಳ ಅಗುಳಿಗಳನ್ನು ಬಲಗೊಳಿಸಿ, ದೇವರು ನಿಮ್ಮ ಜನರನ್ನು ಆಶೀರ್ವದಿಸುತ್ತಾರೆ. 14 ದೇವರು ನಿಮ್ಮ ಮೇರೆಗಳನ್ನು ಸಮಾಧಾನಪಡಿಸುತ್ತಾರೆ; ಉತ್ತಮವಾದ ಗೋಧಿಯಿಂದ ನಿಮ್ಮನ್ನು ತೃಪ್ತಿಪಡಿಸುತ್ತಾರೆ. 15 ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾರೆ; ದೇವರ ವಾಕ್ಯವು ಬಹು ತೀವ್ರವಾಗಿ ಓಡುತ್ತದೆ. 16 ದೇವರು ಹಿಮವನ್ನು ಉಣ್ಣೆಯ ಹಾಗೆ ಹರಡುತ್ತಾರೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ. 17 ದೇವರು ನೀರುಗಡ್ಡೆಯನ್ನು ಕಲ್ಲು ಹರಳುಗಳಂತೆ ಸುರಿದು ಹಾಕುತ್ತಾರೆ; ಅವರು ಕಳುಹಿಸುವ ಚಳಿಯ ಮುಂದೆ ಯಾರು ನಿಲ್ಲುವರು? 18 ದೇವರು ತಮ್ಮ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾರೆ; ದೇವರು ಗಾಳಿಯನ್ನು ಬೀಸುವಂತೆ ಮಾಡುತ್ತಾರೆ; ನೀರು ಹರಿಯುತ್ತದೆ. 19 ದೇವರು ಯಾಕೋಬ್ಯರಿಗೆ ತಮ್ಮ ವಾಕ್ಯವನ್ನು ಪ್ರಕಟಿಸುತ್ತಾರೆ, ಇಸ್ರಾಯೇಲರಿಗೆ ತಮ್ಮ ತೀರ್ಪುಗಳನ್ನೂ, ತನ್ನ ನ್ಯಾಯವಿಧಿಗಳನ್ನೂ ಪ್ರಕಟಿಸುತ್ತಾರೆ. 20 ಬೇರೆ ಯಾವ ಜನಾಂಗಕ್ಕಾದರೂ ದೇವರು ಹೀಗೆ ಮಾಡಲಿಲ್ಲ; ದೇವರ ನ್ಯಾಯವಿಧಿಗಳನ್ನು ಜನರು ತಿಳಿದುಕೊಳ್ಳುವುದಿಲ್ಲ. ಯೆಹೋವ ದೇವರನ್ನು ಸ್ತುತಿಸಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 147 / 150
×

Alert

×

Kannada Letters Keypad References