ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರನ್ನು ಸ್ತುತಿಸಿರಿ. [QE][PBR] [QS]ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ, [QE][QS2]ಭಕ್ತರ ಸಭೆಯಲ್ಲಿ ದೇವರ ಸ್ತೋತ್ರವನ್ನೂ ಹಾಡಿರಿ. [QE][PBR]
2. [QS]ಇಸ್ರಾಯೇಲು ತನ್ನನ್ನು ಉಂಟುಮಾಡಿದ ದೇವರಲ್ಲಿ ಸಂತೋಷಿಸಲಿ; [QE][QS2]ಚೀಯೋನಿನ ಜನರು ತಮ್ಮ ಅರಸರಲ್ಲಿ ಉಲ್ಲಾಸಿಸಲಿ. [QE]
3. [QS]ದೇವರ ಹೆಸರನ್ನು ನರ್ತಿಸುತ್ತಾ ಸ್ತುತಿಸಲಿ; [QE][QS2]ದಮ್ಮಡಿಯಿಂದಲೂ ಕಿನ್ನರಿಯಿಂದಲೂ ದೇವರನ್ನು ಕೀರ್ತಿಸಲಿ. [QE]
4. [QS]ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ. [QE][QS2]ದೀನರನ್ನು ಜಯದ ಕಿರೀಟದಿಂದ ಅಲಂಕರಿಸುತ್ತಾರೆ. [QE]
5. [QS]ಇಂಥಾ ಸನ್ಮಾನದಲ್ಲಿ ನಂಬಿಗಸ್ತರು ಸಂತೋಷಪಡಲಿ [QE][QS2]ಹಾಸಿಗೆಯಲ್ಲಿರುವಾಗಲೂ ಆನಂದಗಾನ ಹಾಡಲಿ. [QE][PBR]
6. [QS]ಉನ್ನತ ದೇವರ ಸ್ತೋತ್ರವು ಅವರ ಬಾಯಿಯಲ್ಲಿ ಇರಲಿ. [QE][QS2]ಇಬ್ಬಾಯಿ ಖಡ್ಗ ಅವರ ಕೈಯಲ್ಲಿಯೂ ಇರಲಿ. [QE]
7. [QS]ಜನಾಂಗಗಳಲ್ಲಿ ನ್ಯಾಯ ಪ್ರತೀಕಾರವಾಗಲಿ, [QE][QS2]ಅಪರಾಧಿಗಳಿಗೆ ಶಿಕ್ಷೆಯಾಗಲಿ. [QE]
8. [QS]ಅಪರಾಧದ ಅರಸರನ್ನು ಸಂಕೋಲೆಗಳಿಂದಲೂ, [QE][QS2]ಪ್ರಮುಖರನ್ನು ಕಬ್ಬಿಣದ ಬೇಡಿಗಳಿಂದಲೂ ಬಂಧಿಸಲಿ. [QE]
9. [QS]ಬರೆದಿರುವ ನ್ಯಾಯವಿಧಿಯು ಅವರಲ್ಲಿ ನೆರವೇರಲಿ, [QE][QS2]ದೇವರ ಭಕ್ತರೆಲ್ಲರಿಗೆ ಈ ಗೌರವವಿರುತ್ತದೆ. [QE][PBR] [QS]ಯೆಹೋವ ದೇವರನ್ನು ಸ್ತುತಿಸಿರಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 149 / 150
1 ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ, ಭಕ್ತರ ಸಭೆಯಲ್ಲಿ ದೇವರ ಸ್ತೋತ್ರವನ್ನೂ ಹಾಡಿರಿ. 2 ಇಸ್ರಾಯೇಲು ತನ್ನನ್ನು ಉಂಟುಮಾಡಿದ ದೇವರಲ್ಲಿ ಸಂತೋಷಿಸಲಿ; ಚೀಯೋನಿನ ಜನರು ತಮ್ಮ ಅರಸರಲ್ಲಿ ಉಲ್ಲಾಸಿಸಲಿ. 3 ದೇವರ ಹೆಸರನ್ನು ನರ್ತಿಸುತ್ತಾ ಸ್ತುತಿಸಲಿ; ದಮ್ಮಡಿಯಿಂದಲೂ ಕಿನ್ನರಿಯಿಂದಲೂ ದೇವರನ್ನು ಕೀರ್ತಿಸಲಿ. 4 ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ. ದೀನರನ್ನು ಜಯದ ಕಿರೀಟದಿಂದ ಅಲಂಕರಿಸುತ್ತಾರೆ. 5 ಇಂಥಾ ಸನ್ಮಾನದಲ್ಲಿ ನಂಬಿಗಸ್ತರು ಸಂತೋಷಪಡಲಿ ಹಾಸಿಗೆಯಲ್ಲಿರುವಾಗಲೂ ಆನಂದಗಾನ ಹಾಡಲಿ. 6 ಉನ್ನತ ದೇವರ ಸ್ತೋತ್ರವು ಅವರ ಬಾಯಿಯಲ್ಲಿ ಇರಲಿ. ಇಬ್ಬಾಯಿ ಖಡ್ಗ ಅವರ ಕೈಯಲ್ಲಿಯೂ ಇರಲಿ. 7 ಜನಾಂಗಗಳಲ್ಲಿ ನ್ಯಾಯ ಪ್ರತೀಕಾರವಾಗಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ. 8 ಅಪರಾಧದ ಅರಸರನ್ನು ಸಂಕೋಲೆಗಳಿಂದಲೂ, ಪ್ರಮುಖರನ್ನು ಕಬ್ಬಿಣದ ಬೇಡಿಗಳಿಂದಲೂ ಬಂಧಿಸಲಿ. 9 ಬರೆದಿರುವ ನ್ಯಾಯವಿಧಿಯು ಅವರಲ್ಲಿ ನೆರವೇರಲಿ, ದೇವರ ಭಕ್ತರೆಲ್ಲರಿಗೆ ಈ ಗೌರವವಿರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 149 / 150
×

Alert

×

Kannada Letters Keypad References