ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ನನ್ನ ದೇವರೇ, ನನ್ನನ್ನು ಕಾಪಾಡು, [QE][QS2]ಏಕೆಂದರೆ ನಿಮ್ಮಲ್ಲಿ ಆಶ್ರಯಪಡೆದಿದ್ದೇನೆ. [QE][PBR]
2. [QS]ನಾನು ಯೆಹೋವ ದೇವರಿಗೆ, “ನೀವೇ ನನ್ನ ಕರ್ತ; [QE][QS2]ನಿಮ್ಮನ್ನು ಬಿಟ್ಟು ನನಗಿಲ್ಲ ಒಳಿತು,” ಎಂದು ಹೇಳಿದೆನು. [QE]
3. [QS]ಭೂಲೋಕದಲ್ಲಿರುವ ದೇವಜನರ ಕುರಿತು, [QE][QS2]“ಇವರೇ ನನಗೆ ಶ್ರೇಷ್ಠರು. ಇವರಲ್ಲಿಯೇ ನನ್ನ ಎಲ್ಲಾ ಆನಂದವು,” ಎಂದು ಹೇಳುವೆನು. [QE]
4. [QS]ಇತರ ದೇವರುಗಳನ್ನು ಅವಲಂಬಿಸಿರುವವರಿಗೆ ವ್ಯಥೆಗಳು ಹೆಚ್ಚೆಚ್ಚಾಗುವವು. [QE][QS2]ಅವರಂತೆ ರಕ್ತ ಬಲಿಗಳನ್ನು ನಾನು ಅರ್ಪಿಸುವುದಿಲ್ಲ. [QE][QS2]ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಉಚ್ಚರಿಸುವುದಿಲ್ಲ. [QE][PBR]
5. [QS]ಯೆಹೋವ ದೇವರೇ, ನೀವೇ ನನ್ನ ಪಾಲೂ, ನನ್ನ ಪಾತ್ರೆಯೂ ಆಗಿದ್ದೀರಿ; [QE][QS2]ನನ್ನ ಸ್ವಾಸ್ತ್ಯವನ್ನು ಸುರಕ್ಷಿತವಾಗಿ ಇಡುವವರು ನೀವೇ. [QE]
6. [QS]ನನ್ನ ಪಾಲಿಗೆ ಬಂದ ಮೇರೆಯ ಸ್ಥಳವೂ ಸುಂದರವಾದದ್ದು; [QE][QS2]ನಿಶ್ಚಯವಾಗಿಯೂ, ನನಗೆ ದೊರೆತ ಸ್ವತ್ತು ಆನಂದಕರವಾದದ್ದು. [QE]
7. [QS]ನನಗೆ ಸಮಾಲೋಚನೆ ನೀಡುತ್ತಿರುವ ಯೆಹೋವ ದೇವರನ್ನು ನಾನು ಸ್ತುತಿಸುತ್ತಿರುವೆನು; [QE][QS2]ರಾತ್ರಿಯಲ್ಲಿಯೂ ನನ್ನ ಹೃದಯವು ನನಗೆ ಬೋಧಿಸುತ್ತದೆ. [QE]
8. [QS]ನಾನು ಯೆಹೋವ ದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. [QE][QS2]ಅವರು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲೆನು. [QE][PBR]
9. [QS]ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; [QE][QS2]ನನ್ನ ಶರೀರವು ಸಹ ಸುರಕ್ಷಿತವಾಗಿ ವಿಶ್ರಮಿಸುವುದು. [QE]
10. [QS]ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ; [QE][QS2]ನಿಮ್ಮ ನಂಬಿಗಸ್ತನನ್ನು ಕೊಳೆಯುವ ಅವಸ್ಥೆಗೆ ತರುವುದಿಲ್ಲ. [QE]
11. [QS]ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. [QE][QS2]ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; [QE][QS2]ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 16 / 150
1 ನನ್ನ ದೇವರೇ, ನನ್ನನ್ನು ಕಾಪಾಡು, ಏಕೆಂದರೆ ನಿಮ್ಮಲ್ಲಿ ಆಶ್ರಯಪಡೆದಿದ್ದೇನೆ. 2 ನಾನು ಯೆಹೋವ ದೇವರಿಗೆ, “ನೀವೇ ನನ್ನ ಕರ್ತ; ನಿಮ್ಮನ್ನು ಬಿಟ್ಟು ನನಗಿಲ್ಲ ಒಳಿತು,” ಎಂದು ಹೇಳಿದೆನು. 3 ಭೂಲೋಕದಲ್ಲಿರುವ ದೇವಜನರ ಕುರಿತು, “ಇವರೇ ನನಗೆ ಶ್ರೇಷ್ಠರು. ಇವರಲ್ಲಿಯೇ ನನ್ನ ಎಲ್ಲಾ ಆನಂದವು,” ಎಂದು ಹೇಳುವೆನು. 4 ಇತರ ದೇವರುಗಳನ್ನು ಅವಲಂಬಿಸಿರುವವರಿಗೆ ವ್ಯಥೆಗಳು ಹೆಚ್ಚೆಚ್ಚಾಗುವವು. ಅವರಂತೆ ರಕ್ತ ಬಲಿಗಳನ್ನು ನಾನು ಅರ್ಪಿಸುವುದಿಲ್ಲ. ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಉಚ್ಚರಿಸುವುದಿಲ್ಲ. 5 ಯೆಹೋವ ದೇವರೇ, ನೀವೇ ನನ್ನ ಪಾಲೂ, ನನ್ನ ಪಾತ್ರೆಯೂ ಆಗಿದ್ದೀರಿ; ನನ್ನ ಸ್ವಾಸ್ತ್ಯವನ್ನು ಸುರಕ್ಷಿತವಾಗಿ ಇಡುವವರು ನೀವೇ. 6 ನನ್ನ ಪಾಲಿಗೆ ಬಂದ ಮೇರೆಯ ಸ್ಥಳವೂ ಸುಂದರವಾದದ್ದು; ನಿಶ್ಚಯವಾಗಿಯೂ, ನನಗೆ ದೊರೆತ ಸ್ವತ್ತು ಆನಂದಕರವಾದದ್ದು. 7 ನನಗೆ ಸಮಾಲೋಚನೆ ನೀಡುತ್ತಿರುವ ಯೆಹೋವ ದೇವರನ್ನು ನಾನು ಸ್ತುತಿಸುತ್ತಿರುವೆನು; ರಾತ್ರಿಯಲ್ಲಿಯೂ ನನ್ನ ಹೃದಯವು ನನಗೆ ಬೋಧಿಸುತ್ತದೆ. 8 ನಾನು ಯೆಹೋವ ದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ಅವರು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲೆನು. 9 ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; ನನ್ನ ಶರೀರವು ಸಹ ಸುರಕ್ಷಿತವಾಗಿ ವಿಶ್ರಮಿಸುವುದು. 10 ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ; ನಿಮ್ಮ ನಂಬಿಗಸ್ತನನ್ನು ಕೊಳೆಯುವ ಅವಸ್ಥೆಗೆ ತರುವುದಿಲ್ಲ. 11 ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 16 / 150
×

Alert

×

Kannada Letters Keypad References