1. [QS]ನನ್ನ ಬಲವಾಗಿರುವ ಯೆಹೋವ ದೇವರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ. [QE][PBR]
2. [QS]ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ; [QE][QS2]ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು [QE][QS2]ಅವರು ನನ್ನ ಗುರಾಣಿ[* ಅಥವಾ ನನ್ನ ಕರ್ತ ] ಮತ್ತು ನನ್ನ ರಕ್ಷಣೆಯ ಕೊಂಬು, [† ಕೊಂಬು ಇದು ಶಕ್ತಿಯನ್ನು ಸೂಚಿಸುತ್ತದೆ. ] ನನ್ನ ಉನ್ನತವಾದ ದುರ್ಗ ಆಗಿದ್ದಾರೆ. [QE][PBR]
3. [QS]ಸ್ತುತಿ ಪಾತ್ರರಾಗಿರುವ ಯೆಹೋವ ದೇವರನ್ನು ನಾನು ಮೊರೆಯಿಟ್ಟದ್ದರಿಂದ, [QE][QS2]ಅವರು ನನ್ನ ಶತ್ರುಗಳಿಂದ ನನ್ನನ್ನು ಕಾಪಾಡಿದ್ದಾರೆ. [QE]
4. [QS]ಮರಣದ ಪಾಶಗಳು ನನ್ನನ್ನು ಸುತ್ತಿಕೊಂಡವು; [QE][QS2]ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು. [QE]
5. [QS]ಪಾತಾಳದ ಪಾಶಗಳು ನನ್ನನ್ನು ಸುತ್ತಿಕೊಂಡವು; [QE][QS2]ಮರಣದ ಬಲೆಗಳು ನನ್ನನ್ನು ಎದುರಿಸಿದವು. [QE][PBR]
6. [QS]ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; [QE][QS2]ನನ್ನ ದೇವರಿಗೆ ಮೊರೆಯಿಟ್ಟೆನು; [QE][QS]ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; [QE][QS2]ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು. [QE]
7. [QS]ದೇವರು ಬೇಸರಗೊಂಡಿದ್ದರಿಂದ [QE][QS2]ಭೂಮಿಯು ನಡುಗಿ ಕದಲಿದವು; [QE][QS2]ಪರ್ವತಗಳ ಅಸ್ತಿವಾರಗಳು ಸಹ ಕದಲಿದವು. [QE]
8. [QS]ಮೂಗಿನಿಂದ ಹೊಗೆ ಬಂದಂತೆಯೂ [QE][QS2]ಬಾಯಿಯೊಳಗಿಂದ ದಹಿಸುವ ಅಗ್ನಿ ಹೊರಟಂತೆಯೂ; [QE][QS2]ಕೆಂಡಗಳು ಅದರಿಂದ ಜ್ವಾಲಿಸಿದಂತೆಯೂ ಇರಲು, [QE]
9. [QS]ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; [QE][QS2]ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು. [QE]
10. [QS]ಅವರು ಕೆರೂಬಿಯ[‡ ಕೆರೂಬಿ ಒಂದು ವಿಧವಾದ ದೇವದೂತರು ] ಮೇಲೆ ಕೂತು ಹಾರಿದರು, [QE][QS2]ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು. [QE]
11. [QS]ಅವರು ಕತ್ತಲನ್ನು ತಮ್ಮ ಹೊದಿಕೆಯನ್ನಾಗಿಯೂ [QE][QS2]ಮಳೆ ತರುವ ಆಕಾಶದ ಕಾರ್ಮೋಡಗಳನ್ನು [QE][QS2]ತಮ್ಮ ಸುತ್ತಲಿನ ಪರದೆಯನ್ನಾಗಿಯೂ ಮಾಡಿಕೊಂಡರು. [QE]
12. [QS]ಅವರ ಸನ್ನಿಧಿಯ ಪ್ರಕಾಶದಿಂದ ಮೋಡಗಳು, [QE][QS2]ಕಲ್ಮಳೆ ಹಾಗೂ ಗುಡುಗು ಮಿಂಚುಗಳು ಹೊರಹೊಮ್ಮಿದವು. [QE]
13. [QS]ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು; [QE][QS2]ಮಹೋನ್ನತ ದೇವರ ಧ್ವನಿಯು ಕಲ್ಮಳೆ ಹಾಗೂ ಮಿಂಚುಗಳಿಂದ[§ ಕೆಲವು ಪ್ರತಿಗಳಲ್ಲಿ ಕಲ್ಮಳೆ ಹಾಗೂ ಮಿಂಚುಗಳಿಂದ ಎಂದು ಈ ವಾಕ್ಯದಲ್ಲಿ ಇಲ್ಲ. ] ಪ್ರತಿಧ್ವನಿಸಿತು. [QE]
14. [QS]ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು; [QE][QS2]ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು. [QE]
15. [QS]ಯೆಹೋವ ದೇವರೇ, ನಿಮ್ಮ ಗದರಿಕೆಯಿಂದಲೂ, [QE][QS2]ನಿಮ್ಮ ಮೂಗಿನ ಶ್ವಾಸದ ಗಾಳಿಯಿಂದಲೂ [QE][QS]ಸಮುದ್ರದ ತಳವು ಕಾಣಿಸಿದವು, [QE][QS2]ಭೂಲೋಕದ ಅಸ್ತಿವಾರಗಳು ಬಯಲಾದವು. [QE][PBR]
16. [QS]ಅವರು ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು [QE][QS2]ಅಗಾಧವಾದ ಜಲರಾಶಿಗಳಿಂದ ಹೊರಗೆಳೆದರು. [QE]
17. [QS]ಅವರು ನನಗಿಂತ ಶಕ್ತಿಶಾಲಿಯಾದ ಶತ್ರುಗಳಿಂದ, [QE][QS2]ದ್ವೇಷಿಸುತ್ತಿದ್ದ ವೈರಿಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದರು. [QE]
18. [QS]ನನ್ನ ಆಪತ್ತಿನ ದಿನದಲ್ಲಿ ನನ್ನನ್ನು ಆ ಶತ್ರುಗಳು ದಾಳಿಮಾಡಿದರು; [QE][QS2]ಆದರೆ ಯೆಹೋವ ದೇವರು ನನಗೆ ಆಧಾರವಾಗಿದ್ದರು. [QE]
19. [QS]ದೇವರು ನನ್ನನ್ನು ಹೊರಗೆ ವಿಶಾಲ ಸ್ಥಳಕ್ಕೆ ತಂದರು; [QE][QS2]ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ಕಾಪಾಡಿದರು. [QE][PBR]
20. [QS]ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; [QE][QS2]ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು. [QE]
21. [QS]ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಕೈಗೊಂಡೆನು; [QE][QS2]ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ. [QE]
22. [QS]ದೇವರ ಆಜ್ಞೆಗಳೆಲ್ಲಾ ನನ್ನ ಮುಂದೆ ಇಟ್ಟುಕೊಂಡೆನು; [QE][QS2]ಅವರ ತೀರ್ಪುಗಳಿಂದ ನಾನು ತೊಲಗಿಹೋಗಲಿಲ್ಲ. [QE]
23. [QS]ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು [QE][QS2]ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು. [QE]
24. [QS]ಆದ್ದರಿಂದ ಯೆಹೋವ ದೇವರು ನನ್ನ ನೀತಿಯ ಪ್ರಕಾರವೂ [QE][QS2]ಅವರ ದೃಷ್ಟಿಯಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಪ್ರತಿಫಲಕೊಟ್ಟರು. [QE][PBR]
25. [QS]ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ. [QE][QS2]ನಿರ್ದೋಷಿಗೆ ನೀವು ನಿರ್ದೋಷಿಯಾಗಿ ತೋರಿಸುತ್ತೀರಿ. [QE]
26. [QS]ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ. [QE][QS2]ವಕ್ರ ವ್ಯಕ್ತಿಗೆ ನಿಮ್ಮ ಬುದ್ಧಿವಂತಿಕೆಯನ್ನು ತೋರಿಸುತ್ತೀರಿ. [QE]
27. [QS]ದೀನರನ್ನು ರಕ್ಷಿಸುತ್ತೀರಿ, [QE][QS2]ಆದರೆ ನೀವು ಗರ್ವಿಷ್ಠರ ಕಣ್ಣುಗಳನ್ನು ತಗ್ಗಿಸುತ್ತೀರಿ. [QE]
28. [QS]ಯೆಹೋವ ದೇವರೇ, ನೀವು ನನ್ನ ದೀಪವನ್ನು ಬೆಳಗಿಸಿರಿ. [QE][QS2]ನನ್ನ ದೇವರು ನನ್ನ ಕತ್ತಲೆಯನ್ನು ಬೆಳಕನ್ನಾಗಿ ಮಾರ್ಪಡಿಸುವರು. [QE]
29. [QS]ನಿಮ್ಮ ಸಹಾಯದಿಂದ ವೈರಿಸೇನೆಯ ವಿರುದ್ಧ ಹೋಗುವೆನು, [QE][QS2]ನನ್ನ ದೇವರೊಂದಿಗೆ ಕೋಟೆಗೋಡೆಯನ್ನೂ ಹಾರುವೆನು. [QE][PBR]
30. [QS]ದೇವರ ಮಾರ್ಗವು ಪರಿಪೂರ್ಣವಾದದ್ದು, [QE][QS2]ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; [QE][QS2]ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ. [QE]
31. [QS]ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು? [QE][QS2]ಮತ್ತು ನಮ್ಮ ದೇವರನ್ನು ಹೊರತುಪಡಿಸಿ ರಕ್ಷಕ[* ರಕ್ಷಕ ಹೀಬ್ರೂ ಭಾಷೆಯಲ್ಲಿ ಬಂಡೆ ] ಯಾರು? [QE]
32. [QS]ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ, [QE][QS2]ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ. [QE]
33. [QS]ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಚುರುಕು ಮಾಡಿ, [QE][QS2]ಅವರು ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾರೆ. [QE]
34. [QS]ಅವರು ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತುಕೊಟ್ಟು, [QE][QS2]ನನ್ನ ಭುಜದಿಂದ ಕಂಚಿನ ಬಿಲ್ಲನ್ನು ಬಗ್ಗಿಸುವಂತೆ ಮಾಡುತ್ತಾರೆ. [QE]
35. [QS]ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ. [QE][QS2]ನಿಮ್ಮ ಬಲಗೈ ನನಗೆ ಆಧಾರವಾಗಿದೆ; [QE][QS2]ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ. [QE]
36. [QS]ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ, [QE][QS2]ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ. [QE][PBR]
37. [QS]ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿದ್ದೇನೆ; [QE][QS2]ಅವರನ್ನು ಸಂಹರಿಸಿಬಿಡುವವರೆಗೂ ನಾನು ಹಿಂದಿರುಗಲಿಲ್ಲ. [QE]
38. [QS]ಏಳಲಾರದಂತೆ ಅವರನ್ನು ತುಳಿದುಬಿಟ್ಟೆನು; [QE][QS2]ಅವರು ನನ್ನ ಪಾದಗಳ ಕೆಳಗೆ ಬಿದ್ದರು. [QE]
39. [QS]ನೀವು ಯುದ್ಧಕ್ಕಾಗಿ ನನಗೆ ಬಲವನ್ನು [QE][QS2]ಆಯುಧವನ್ನಾಗಿ ನೀಡಿ, ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ. [QE]
40. [QS]ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; [QE][QS2]ನಾನು ನನ್ನ ವೈರಿಗಳನ್ನು ಸಂಹರಿಸಿದೆನು. [QE]
41. [QS]ಅವರು ಸಹಾಯಕ್ಕಾಗಿ ಮೊರೆಯಿಟ್ಟರು, [QE][QS2]ಆದರೆ ರಕ್ಷಿಸುವವರು ಯಾರೂ ಇರಲಿಲ್ಲ [QE][QS]ಯೆಹೋವ ದೇವರಿಗೂ ಮೊರೆಯಿಟ್ಟರು, [QE][QS2]ಆದರೆ ಅವರೂ ಉತ್ತರ ಕೊಡಲಿಲ್ಲ. [QE]
42. [QS]ಅವರನ್ನು ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳಿನಂತೆ ಪುಡಿಪುಡಿ ಮಾಡಿದೆನು; [QE][QS2]ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು. [QE]
43. [QS]ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ; [QE][QS2]ನನ್ನನ್ನು ಜನಾಂಗಗಳಿಗೆ ನಾಯಕನನ್ನಾಗಿ ಮಾಡಿರುವಿರಿ. [QE][QS]ನಾನು ಅರಿಯದ ಜನರು ನನಗೆ ವಿಧೇಯರಾಗುವರು. [QE]
2. [QS2]ವಿದೇಶಿಯರು ನನಗೆ ಅಧೀನರಾದರು; [QE][QS2]ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು. [QE]
45. [QS]ಅವರು ಭಯಗೊಳ್ಳುವರು; [QE][QS2]ನಡುಗುತ್ತಾ ತಮ್ಮ ಕೋಟೆಗಳಿಂದ ಹೊರಬರುವರು. [QE][PBR]
46. [QS]ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರವಾಗಲಿ. [QE][QS2]ನನ್ನ ರಕ್ಷಕರಾದ ದೇವರು ಮಹಿಮೆ ಹೊಂದಲಿ. [QE]
47. [QS]ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ [QE][QS2]ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ. [QE]
2. [QS2]ದೇವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ; [QE][QS]ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ, [QE][QS2]ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ. [QE]
49. [QS]ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು, [QE][QS2]ನಿಮ್ಮನ್ನು ಕೊಂಡಾಡಿ ನಿಮ್ಮ ಹೆಸರನ್ನು ಕೀರ್ತಿಸುವೆನು. [QE][PBR]
50. [QS]ದೇವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; [QE][QS2]ತಮ್ಮ ಅಭಿಷಿಕ್ತನಿಗೂ ದಾವೀದನಿಗೂ ಅವನ ಸಂತತಿಯವರಿಗೂ [QE][QS2]ಒಡಂಬಡಿಕೆಯ ಪ್ರೀತಿಯನ್ನು ಯುಗಯುಗಕ್ಕೂ ಅನುಗ್ರಹಿಸುವರು. [QE]