1. [QS]ಆಕಾಶವು ದೇವರ ಮಹಿಮೆಯನ್ನು ಸಾರುತ್ತದೆ; [QE][QS2]ಅಂತರಿಕ್ಷವು ಅವರ ಕೈಕೆಲಸವನ್ನು ಘೋಷಿಸುತ್ತದೆ. [QE]
2. [QS]ಹಗಲೆಲ್ಲಾ ಅವು ಮಾತನಾಡುತ್ತವೆ; [QE][QS2]ರಾತ್ರಿಯೆಲ್ಲಾ ಅವು ಅರಿವನ್ನು ಪ್ರಕಟಿಸುತ್ತವೆ. [QE]
3. [QS]ಅವುಗಳಿಗೆ ಮಾತೂ ಇಲ್ಲ, ಪದವೂ ಇಲ್ಲ, [QE][QS2]ಅವುಗಳ ಸ್ವರವು ಕೇಳುವುದೂ ಇಲ್ಲ. [QE]
4. [QS]ಅವುಗಳ ಧ್ವನಿ ಭೂಲೋಕವೆಲ್ಲಾ ಹರಡಿವೆ; [QE][QS2]ಅವುಗಳ ಮಾತುಗಳೋ ಲೋಕದ ಕಟ್ಟಕಡೆಯವರೆಗೂ ಹೋಗುತ್ತವೆ; [QE][QS]ಆಕಾಶದಲ್ಲಿ ದೇವರು ಸೂರ್ಯನಿಗೆ ಗುಡಾರ ಹಾಕಿದ್ದಾರೆ. [QE]
2. [QS2]ಸೂರ್ಯನು ಮದುಮಗನಂತೆ ತನ್ನ ಕೊಠಡಿಯಿಂದ ಹೊರಟುಬಂದು, [QE][QS2]ಪಂದ್ಯಕ್ಕೆ ಹರ್ಷದಿಂದ ಓಡುವ ಪರಾಕ್ರಮಶಾಲಿಯಂತೆ ಇದ್ದಾನೆ. [QE]
6. [QS]ಆಕಾಶದ ಒಂದು ಕಡೆಯಿಂದ ಉದಯಿಸಿ [QE][QS2]ಮತ್ತೊಂದು ಕಡೆಯವರೆಗೆ ಹೊರಟು ಪ್ರಯಾಣಿಸುತ್ತಾನೆ; [QE][QS2]ಅದರ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ. [QE][PBR]
7. [QS]ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು, [QE][QS2]ಪ್ರಾಣಕ್ಕೆ ಜೀವಕರವಾಗಿದೆ; [QE][QS]ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು, [QE][QS2]ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ. [QE]
8. [QS]ಯೆಹೋವ ದೇವರ ಸೂತ್ರಗಳು ನೀತಿಯುಳ್ಳವುಗಳಾಗಿದ್ದು [QE][QS2]ಅವು ಹೃದಯಕ್ಕೆ ಆನಂದಕರವಾಗಿವೆ; [QE][QS]ಯೆಹೋವ ದೇವರ ಆಜ್ಞೆಗಳು ಸ್ಪಷ್ಟವಾಗಿದ್ದು, [QE][QS2]ಕಣ್ಣುಗಳಿಗೆ ಪ್ರಕಾಶಕರವಾಗಿವೆ. [QE]
9. [QS]ಯೆಹೋವ ದೇವರ ಭಯವು ಶುದ್ಧವಾಗಿದ್ದು, [QE][QS2]ಎಂದೆಂದಿಗೂ ಶಾಶ್ವತವಾಗಿದೆ. [QE][QS]ಯೆಹೋವ ದೇವರ ತೀರ್ಪುಗಳು ಸತ್ಯವಾಗಿದ್ದು, [QE][QS2]ಅವೆಲ್ಲವೂ ನೀತಿಯುಳ್ಳದ್ದಾಗಿವೆ. [QE][PBR]
10. [QS]ಅವು ಬಂಗಾರಕ್ಕಿಂತಲೂ, [QE][QS2]ಅಪರಂಜಿಗಿಂತಲೂ ಅಮೂಲ್ಯವಾಗಿವೆ; [QE][QS]ಅವು ಜೇನಿಗಿಂತಲೂ, [QE][QS2]ಅಪ್ಪಟ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ. [QE]
11. [QS]ನಿಮ್ಮ ಸೇವಕನು ಅವುಗಳಿಂದ ಎಚ್ಚರಿಕೆ ಪಡೆಯುತ್ತಾನೆ; [QE][QS2]ಅವುಗಳನ್ನು ಕೈಗೊಳ್ಳುವುದರಲ್ಲಿ ದೊಡ್ಡ ಪ್ರತಿಫಲವುಂಟು. [QE]
12. [QS]ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ? [QE][QS2]ನನ್ನ ಗುಪ್ತ ಪಾಪಗಳನ್ನು ಕ್ಷಮಿಸು. [QE]
13. [QS]ಬೇಕುಬೇಕೆಂದು ಪಾಪಮಾಡದಂತೆ ನಿಮ್ಮ ಸೇವಕನನ್ನು ಕಾಪಾಡು; [QE][QS2]ಅಂಥ ಪಾಪಗಳು ನನ್ನ ಮೇಲೆ ಆಳಿಕೆ ಮಾಡದಿರಲಿ. [QE][QS]ಆಗ ನಾನು ತಪ್ಪಿಲ್ಲದವನಾಗಿ, [QE][QS2]ಮಹಾಪರಾಧದಿಂದ ಬಿಡುಗಡೆಯಾಗಿರುವೆನು. [QE][PBR]
14. [QS]ಯೆಹೋವ ದೇವರೇ, ನನ್ನ ಬಂಡೆಯೇ, ನನ್ನ ವಿಮೋಚಕರೇ, [QE][QS2]ನನ್ನ ಬಾಯಿಯ ಮಾತುಗಳೂ ನನ್ನ ಹೃದಯದ ಧ್ಯಾನವೂ [QE][QS2]ನಿಮ್ಮ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ. [QE]