1. [QS]ರಾಷ್ಟ್ರಗಳು ಒಳಸಂಚು ಮಾಡುವುದೂ [QE][QS2]ಜನಾಂಗಗಳು ವ್ಯರ್ಥವಾಗಿ ಕುತಂತ್ರ ಮಾಡುವುದೂ ಏಕೆ? [QE]
2. [QS]ಯೆಹೋವ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ, [QE][QS2]ಭೂಲೋಕದ ಅರಸರು ನಿಂತುಕೊಳ್ಳುತ್ತಾರೆ. [QE][QS2]ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು. [QE]
3. [QS]“ಅವರು ಹಾಕಿದ ಬೇಡಿಗಳನ್ನು ಮುರಿದು [QE][QS2]ಬಂಧಗಳನ್ನು ಹರಿದು ಬೀಸಾಡೋಣ,” ಎನ್ನುತ್ತಾರೆ. [QE][PBR]
4. [QS]ಪರಲೋಕದಲ್ಲಿ ಕೂತಿರುವ ದೇವರು ಅದಕ್ಕೆ ನಗುವರು, [QE][QS2]ಕರ್ತದೇವರು ಅವರನ್ನು ಕಂಡು ಅಪಹಾಸ್ಯ ಮಾಡುವರು. [QE]
5. [QS]ಕರ್ತದೇವರು ತಮ್ಮ ಕೋಪದಿಂದ ಅವರನ್ನು ಗದರಿಸುತ್ತಾ, [QE][QS2]ತಮ್ಮ ಬೇಸರದಿಂದ ಅವರನ್ನು ಕಳವಳಪಡಿಸಿ ಹೀಗೆ ಹೇಳುವರು, [QE]
6. [QS]“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ [QE][QS2]ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.” [QE]
7. [PS]ನಾನು ಯೆಹೋವ ದೇವರ ತೀರ್ಪನ್ನು ಹೀಗೆ ಪ್ರಕಟಿಸುವೆನು: [PE][QS]ಅವರು ನನಗೆ ಹೇಳಿದ್ದು, “ನೀನು ನನ್ನ ಪುತ್ರನು; [QE][QS2]ಇಂದು ನಾನು ನಿನ್ನ ತಂದೆಯಾಗಿದ್ದೇನೆ. [QE]
8. [QS]ನನ್ನನ್ನು ಕೇಳು, [QE][QS2]ಆಗ ನಾನು ರಾಷ್ಟ್ರಗಳನ್ನು ನಿನ್ನ ವಾರಸಾಗಿಯೂ, [QE][QS2]ಭೂಮಿಯ ಕಟ್ಟಕಡೆಯವರೆಗೂ ಇರುವ ದೇಶಗಳನ್ನೂ ನಿಮ್ಮ ಸೊತ್ತಾಗಿಯೂ ಕೊಡುವೆನು. [QE]
9. [QS]ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, [QE][QS2]ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.” [QE][PBR]
10. [QS]ಆದ್ದರಿಂದ, ರಾಜರುಗಳೇ, ಈಗ ಜ್ಞಾನವಂತರಾಗಿರಿ. [QE][QS2]ಭೂಲೋಕದ ಅಧಿಕಾರಿಗಳೇ, ಎಚ್ಚರಿಕೆಯಿಂದಿರಿ. [QE]
11. [QS]ಭಯಭಕ್ತಿಯಿಂದ ಯೆಹೋವ ದೇವರ ಸೇವೆಮಾಡಿರಿ, [QE][QS2]ನಡುಗುತ್ತಾ ಅವರ ಆಳ್ವಿಕೆಯಲ್ಲಿ ಉಲ್ಲಾಸಪಡಿರಿ. [QE]
12. [QS]ಯೆಹೋವ ದೇವರು ಬೇಸರಗೊಂಡು, [QE][QS2]ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. [QE][QS]ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. [QE][QS2]ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು. [QE]