ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]ಯೆಹೋವ ದೇವರು ಇಕ್ಕಟ್ಟಿನಲ್ಲಿ ನಿಮಗೆ ಉತ್ತರವನ್ನು ನೀಡಲಿ; [QE][QS2]ಯಾಕೋಬನ ದೇವರ ಹೆಸರು ನಿಮ್ಮನ್ನು ಕಾಪಾಡಲಿ. [QE]
2. [QS]ದೇವರು ಪರಿಶುದ್ಧ ಸ್ಥಳದೊಳಗಿಂದ ನಿಮಗೆ ಸಹಾಯ ಕಳುಹಿಸಲಿ; [QE][QS2]ಅವರು ಚೀಯೋನಿನಿಂದ ನಿಮಗೆ ಆಧಾರ ನೀಡಲಿ. [QE]
3. [QS]ನಿಮ್ಮ ಯಜ್ಞಾರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿಕೊಂಡು, [QE][QS2]ನಿಮ್ಮ ದಹನಬಲಿಗಳನ್ನು ಸ್ವೀಕರಿಸಲಿ. [QE]
4. [QS]ದೇವರು ನಿಮ್ಮ ಹೃದಯದ ಬಯಕೆಯನ್ನು ನಿಮಗೆ ದಯಪಾಲಿಸಲಿ; [QE][QS2]ನಿಮ್ಮ ಎಲ್ಲಾ ಯೋಜನೆಗಳಲ್ಲಿಯೂ ಯಶಸ್ಸನ್ನು ನೀಡಲಿ. [QE]
5. [QS]ನಾವು ದೇವರ ಜಯದಲ್ಲಿ ಆನಂದ ಘೋಷಮಾಡಿ, [QE][QS2]ನಮ್ಮ ದೇವರ ಹೆಸರಿನಲ್ಲಿಯೇ ನಾವು ನಮ್ಮ ಧ್ವಜಗಳನ್ನು ಎತ್ತುವೆವು. [QE][PBR] [QS]ಯೆಹೋವ ದೇವರು ನಿಮ್ಮ ಬಿನ್ನಹಗಳನ್ನೆಲ್ಲಾ ಪೂರೈಸಲಿ. [QE][PBR]
6. [QS]ಈಗ ನಾನು ಇದನ್ನು ಬಲ್ಲೆನು: [QE][QS2]ಯೆಹೋವ ದೇವರು ತಮ್ಮ ಅಭಿಷಿಕ್ತನಿಗೆ ಜಯ ನೀಡುವರು. [QE][QS]ತಮ್ಮ ಜಯದ ಬಲಗೈಯ ಶಕ್ತಿಯಿಂದಲೂ [QE][QS2]ತಮ್ಮ ಪರಿಶುದ್ಧ ಪರಲೋಕದಿಂದಲೂ ಅವನಿಗೆ ಉತ್ತರಕೊಡುವರು. [QE]
7. [QS]ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳಲ್ಲಿಯೂ ಭರವಸೆಯಿಡುತ್ತಾರೆ; [QE][QS2]ನಾವಾದರೋ ನಮ್ಮ ಯೆಹೋವ ದೇವರ ಹೆಸರಿನಲ್ಲಿ ಭರವಸೆಯನ್ನಿಡುತ್ತೇವೆ. [QE]
8. [QS]ಅವರು ಬಗ್ಗಿ ಬೀಳುತ್ತಾರೆ, [QE][QS2]ನಾವಾದರೋ ಎದ್ದು ಸ್ಥಿರವಾಗಿ ನಿಲ್ಲುವೆವು. [QE]
9. [QS]ಯೆಹೋವ ದೇವರೇ, ಅರಸನಿಗೆ ಜಯಕೊಡಿರಿ! [QE][QS2]ನಾವು ಕರೆಯುವಾಗ ನಮಗೆ ಉತ್ತರಕೊಡಿರಿ! [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 20 / 150
1 ಯೆಹೋವ ದೇವರು ಇಕ್ಕಟ್ಟಿನಲ್ಲಿ ನಿಮಗೆ ಉತ್ತರವನ್ನು ನೀಡಲಿ; ಯಾಕೋಬನ ದೇವರ ಹೆಸರು ನಿಮ್ಮನ್ನು ಕಾಪಾಡಲಿ. 2 ದೇವರು ಪರಿಶುದ್ಧ ಸ್ಥಳದೊಳಗಿಂದ ನಿಮಗೆ ಸಹಾಯ ಕಳುಹಿಸಲಿ; ಅವರು ಚೀಯೋನಿನಿಂದ ನಿಮಗೆ ಆಧಾರ ನೀಡಲಿ. 3 ನಿಮ್ಮ ಯಜ್ಞಾರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿಕೊಂಡು, ನಿಮ್ಮ ದಹನಬಲಿಗಳನ್ನು ಸ್ವೀಕರಿಸಲಿ. 4 ದೇವರು ನಿಮ್ಮ ಹೃದಯದ ಬಯಕೆಯನ್ನು ನಿಮಗೆ ದಯಪಾಲಿಸಲಿ; ನಿಮ್ಮ ಎಲ್ಲಾ ಯೋಜನೆಗಳಲ್ಲಿಯೂ ಯಶಸ್ಸನ್ನು ನೀಡಲಿ. 5 ನಾವು ದೇವರ ಜಯದಲ್ಲಿ ಆನಂದ ಘೋಷಮಾಡಿ, ನಮ್ಮ ದೇವರ ಹೆಸರಿನಲ್ಲಿಯೇ ನಾವು ನಮ್ಮ ಧ್ವಜಗಳನ್ನು ಎತ್ತುವೆವು. ಯೆಹೋವ ದೇವರು ನಿಮ್ಮ ಬಿನ್ನಹಗಳನ್ನೆಲ್ಲಾ ಪೂರೈಸಲಿ. 6 ಈಗ ನಾನು ಇದನ್ನು ಬಲ್ಲೆನು: ಯೆಹೋವ ದೇವರು ತಮ್ಮ ಅಭಿಷಿಕ್ತನಿಗೆ ಜಯ ನೀಡುವರು. ತಮ್ಮ ಜಯದ ಬಲಗೈಯ ಶಕ್ತಿಯಿಂದಲೂ ತಮ್ಮ ಪರಿಶುದ್ಧ ಪರಲೋಕದಿಂದಲೂ ಅವನಿಗೆ ಉತ್ತರಕೊಡುವರು. 7 ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳಲ್ಲಿಯೂ ಭರವಸೆಯಿಡುತ್ತಾರೆ; ನಾವಾದರೋ ನಮ್ಮ ಯೆಹೋವ ದೇವರ ಹೆಸರಿನಲ್ಲಿ ಭರವಸೆಯನ್ನಿಡುತ್ತೇವೆ. 8 ಅವರು ಬಗ್ಗಿ ಬೀಳುತ್ತಾರೆ, ನಾವಾದರೋ ಎದ್ದು ಸ್ಥಿರವಾಗಿ ನಿಲ್ಲುವೆವು. 9 ಯೆಹೋವ ದೇವರೇ, ಅರಸನಿಗೆ ಜಯಕೊಡಿರಿ! ನಾವು ಕರೆಯುವಾಗ ನಮಗೆ ಉತ್ತರಕೊಡಿರಿ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 20 / 150
×

Alert

×

Kannada Letters Keypad References