ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು
1. [QS]ಯೆಹೋವ ದೇವರೇ, ನಿಮ್ಮ ಬಲದಲ್ಲಿ ಅರಸನು ಆನಂದಿಸುತ್ತಾನೆ; [QE][QS2]ನೀವು ಆತನಿಗೆ ಕೊಡುವ ಜಯಗಳಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುತ್ತಾನೆ! [QE][PBR]
2. [QS]ಅರಸನ ಹೃದಯದ ಆಶೆಯನ್ನು ನೀವು ಈಡೇರಿಸಿದ್ದೀರಿ; [QE][QS2]ಆತನ ತುಟಿಗಳ ಬಿನ್ನಹವನ್ನು ಹಿಂದಿಟ್ಟುಕೊಳ್ಳಲಿಲ್ಲ. [QE]
3. [QS]ನೀವು ಉತ್ತಮ ಆಶೀರ್ವಾದಗಳಿಂದ ಅರಸನನ್ನು ಸ್ವಾಗತಿಸಿದ್ದೀರಿ; [QE][QS2]ಚೊಕ್ಕ ಬಂಗಾರದ ಕಿರೀಟವನ್ನು ಆತನ ತಲೆಯ ಮೇಲಿಟ್ಟಿದ್ದೀರಿ. [QE]
4. [QS]ಜೀವವನ್ನು ಅರಸನು ನಿಮ್ಮಿಂದ ಬೇಡಲು, [QE][QS2]ನೀವು ಆತನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟಿದ್ದೀರಿ. [QE]
5. [QS]ನೀವು ಕೊಟ್ಟ ಜಯಗಳ ಮೂಲಕ ಅರಸನ ಪ್ರಭಾವ ಹೆಚ್ಚಾಗಿದೆ; [QE][QS2]ಗೌರವವನ್ನೂ ಘನತೆಯನ್ನೂ ಆತನ ಮೇಲೆ ಇಟ್ಟಿರುತ್ತೀರಿ. [QE]
6. [QS]ನೀವು ನಿಶ್ಚಯವಾಗಿ ಅರಸನಿಗೆ ನಿತ್ಯ ಆಶೀರ್ವಾದ ದಯಪಾಲಿಸಿದ್ದೀರಿ; [QE][QS2]ನಿಮ್ಮ ಸನ್ನಿಧಿಯಲ್ಲಿ ಆತನು ಅಧಿಕ ಆನಂದಪಡುವಂತೆ ಮಾಡಿದ್ದೀರಿ. [QE]
7. [QS]ಏಕೆಂದರೆ ಅರಸನು ಯೆಹೋವ ದೇವರಲ್ಲಿ ಭರವಸೆ ಇಡುತ್ತಾನೆ; [QE][QS2]ಮಹೋನ್ನತರ ಒಡಂಬಡಿಕೆಯ ಪ್ರೀತಿಯಿಂದ [QE][QS2]ಅರಸನು ಕದಲದೆ ಇರುವನು. [QE][PBR]
8. [QS]ನಿಮ್ಮ ಹಸ್ತವು ನಿಮ್ಮ ಶತ್ರುಗಳನ್ನೆಲ್ಲಾ ವಶಪಡಿಸಿಕೊಳ್ಳುವುದು. [QE][QS2]ನಿಮ್ಮ ಬಲಗೈ ನಿಮ್ಮ ವೈರಿಗಳನ್ನು ಸಿಕ್ಕಿಸುವುದು. [QE]
9. [QS]ನೀವು ಬರುವ ಕಾಲದಲ್ಲಿ [QE][QS2]ಅವರನ್ನು ಅಗ್ನಿಕುಂಡದಂತೆ ದಹಿಸಿಬಿಡುವಿರಿ. [QE][QS]ಯೆಹೋವ ದೇವರು ತಮ್ಮ ಬೇಸರದಿಂದ ಅವರನ್ನು ದಂಡಿಸಿಬಿಡುವರು; [QE][QS2]ಬೆಂಕಿಯು ಅವರನ್ನು ಭಸ್ಮ ಮಾಡುವುದು. [QE]
10. [QS]ಅವರ ವಂಶವನ್ನು ಭೂಲೋಕದೊಳಗಿಂದಲೂ [QE][QS2]ಅವರ ಸಂತತಿಯನ್ನು ಮಾನವರೊಳಗಿಂದಲೂ ಉಳಿಯದಿರಲಿ. [QE]
11. [QS]ಅವರು ನಿಮಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು, [QE][QS2]ಅವರು ಕುಯುಕ್ತಿಯನ್ನು ಕಲ್ಪಿಸಿದರೂ ಅದು ಕೈಗೂಡದಿರಲಿ. [QE]
12. [QS]ನಿಮ್ಮ ಬಿಲ್ಲನ್ನು ಅವರಿಗೆ ವಿರೋಧವಾಗಿ ಎತ್ತುವಾಗ [QE][QS2]ಅವರು ನಿಮಗೆ ಬೆನ್ನುಮಾಡಿ ಓಡಿಹೋಗಲಿ. [QE][PBR]
13. [QS]ಯೆಹೋವ ದೇವರೇ, ನಿಮ್ಮ ಬಲದಲ್ಲಿ ಉನ್ನತರಾಗಿದ್ದೀರಿ, [QE][QS2]ನಾವು ನಿಮ್ಮ ಪರಾಕ್ರಮವನ್ನು ಹಾಡಿ ಕೀರ್ತಿಸುವೆವು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 21 / 150
1 ಯೆಹೋವ ದೇವರೇ, ನಿಮ್ಮ ಬಲದಲ್ಲಿ ಅರಸನು ಆನಂದಿಸುತ್ತಾನೆ; ನೀವು ಆತನಿಗೆ ಕೊಡುವ ಜಯಗಳಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುತ್ತಾನೆ! 2 ಅರಸನ ಹೃದಯದ ಆಶೆಯನ್ನು ನೀವು ಈಡೇರಿಸಿದ್ದೀರಿ; ಆತನ ತುಟಿಗಳ ಬಿನ್ನಹವನ್ನು ಹಿಂದಿಟ್ಟುಕೊಳ್ಳಲಿಲ್ಲ. 3 ನೀವು ಉತ್ತಮ ಆಶೀರ್ವಾದಗಳಿಂದ ಅರಸನನ್ನು ಸ್ವಾಗತಿಸಿದ್ದೀರಿ; ಚೊಕ್ಕ ಬಂಗಾರದ ಕಿರೀಟವನ್ನು ಆತನ ತಲೆಯ ಮೇಲಿಟ್ಟಿದ್ದೀರಿ. 4 ಜೀವವನ್ನು ಅರಸನು ನಿಮ್ಮಿಂದ ಬೇಡಲು, ನೀವು ಆತನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟಿದ್ದೀರಿ. 5 ನೀವು ಕೊಟ್ಟ ಜಯಗಳ ಮೂಲಕ ಅರಸನ ಪ್ರಭಾವ ಹೆಚ್ಚಾಗಿದೆ; ಗೌರವವನ್ನೂ ಘನತೆಯನ್ನೂ ಆತನ ಮೇಲೆ ಇಟ್ಟಿರುತ್ತೀರಿ. 6 ನೀವು ನಿಶ್ಚಯವಾಗಿ ಅರಸನಿಗೆ ನಿತ್ಯ ಆಶೀರ್ವಾದ ದಯಪಾಲಿಸಿದ್ದೀರಿ; ನಿಮ್ಮ ಸನ್ನಿಧಿಯಲ್ಲಿ ಆತನು ಅಧಿಕ ಆನಂದಪಡುವಂತೆ ಮಾಡಿದ್ದೀರಿ. 7 ಏಕೆಂದರೆ ಅರಸನು ಯೆಹೋವ ದೇವರಲ್ಲಿ ಭರವಸೆ ಇಡುತ್ತಾನೆ; ಮಹೋನ್ನತರ ಒಡಂಬಡಿಕೆಯ ಪ್ರೀತಿಯಿಂದ ಅರಸನು ಕದಲದೆ ಇರುವನು. 8 ನಿಮ್ಮ ಹಸ್ತವು ನಿಮ್ಮ ಶತ್ರುಗಳನ್ನೆಲ್ಲಾ ವಶಪಡಿಸಿಕೊಳ್ಳುವುದು. ನಿಮ್ಮ ಬಲಗೈ ನಿಮ್ಮ ವೈರಿಗಳನ್ನು ಸಿಕ್ಕಿಸುವುದು. 9 ನೀವು ಬರುವ ಕಾಲದಲ್ಲಿ ಅವರನ್ನು ಅಗ್ನಿಕುಂಡದಂತೆ ದಹಿಸಿಬಿಡುವಿರಿ. ಯೆಹೋವ ದೇವರು ತಮ್ಮ ಬೇಸರದಿಂದ ಅವರನ್ನು ದಂಡಿಸಿಬಿಡುವರು; ಬೆಂಕಿಯು ಅವರನ್ನು ಭಸ್ಮ ಮಾಡುವುದು. 10 ಅವರ ವಂಶವನ್ನು ಭೂಲೋಕದೊಳಗಿಂದಲೂ ಅವರ ಸಂತತಿಯನ್ನು ಮಾನವರೊಳಗಿಂದಲೂ ಉಳಿಯದಿರಲಿ. 11 ಅವರು ನಿಮಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು, ಅವರು ಕುಯುಕ್ತಿಯನ್ನು ಕಲ್ಪಿಸಿದರೂ ಅದು ಕೈಗೂಡದಿರಲಿ. 12 ನಿಮ್ಮ ಬಿಲ್ಲನ್ನು ಅವರಿಗೆ ವಿರೋಧವಾಗಿ ಎತ್ತುವಾಗ ಅವರು ನಿಮಗೆ ಬೆನ್ನುಮಾಡಿ ಓಡಿಹೋಗಲಿ. 13 ಯೆಹೋವ ದೇವರೇ, ನಿಮ್ಮ ಬಲದಲ್ಲಿ ಉನ್ನತರಾಗಿದ್ದೀರಿ, ನಾವು ನಿಮ್ಮ ಪರಾಕ್ರಮವನ್ನು ಹಾಡಿ ಕೀರ್ತಿಸುವೆವು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 21 / 150
×

Alert

×

Kannada Letters Keypad References