ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, [QE][QS2]ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; [QE][QS]ನಾನು ಯೆಹೋವ ದೇವರಲ್ಲಿ ಕದಲದೆ [QE][QS2]ಭರವಸೆ ಇಟ್ಟಿದ್ದೇನೆ. [QE]
2. [QS]ಯೆಹೋವ ದೇವರೇ, ನನ್ನನ್ನು ಶೋಧಿಸಿ, ಪರೀಕ್ಷಿಸಿರಿ; [QE][QS2]ನನ್ನ ಅಂತರಿಂದ್ರಿಯಗಳನ್ನೂ ನನ್ನ ಹೃದಯವನ್ನೂ ಶೋಧಿಸಿರಿ. [QE]
3. [QS]ನಿಮ್ಮ ಒಡಂಬಡಿಕೆಯ ಪ್ರೀತಿಯು ಯಾವಾಗಲೂ ನನ್ನ ಮನಸ್ಸು ತುಂಬ ಇದೆ; [QE][QS2]ನಿಮ್ಮ ನಂಬಿಗಸ್ತಿಕೆಯಲ್ಲಿ ನಾನು ಬಾಳುತ್ತಿದ್ದೇನೆ. [QE][PBR]
4. [QS]ಮೋಸಗಾರರ ಸಂಗಡ ನಾನು ಕುಳಿತುಕೊಳ್ಳಲಿಲ್ಲ; [QE][QS2]ವಂಚಕರ ಸಂಗಡ ನಾನು ಹೋಗುವುದಿಲ್ಲ. [QE]
5. [QS]ದುರ್ಮಾರ್ಗಿಗಳ ಸಭೆಯನ್ನು ದ್ವೇಷಿಸಿದ್ದೇನೆ; [QE][QS2]ದುಷ್ಟರ ಸಂಗಡ ಕುಳಿತುಕೊಳ್ಳುವುದಿಲ್ಲ. [QE]
6. [QS]ನನ್ನ ಕೈಗಳನ್ನು ನಿರ್ಮಲವಾಗಿ ತೊಳೆದುಕೊಂಡು, [QE][QS2]ಯೆಹೋವ ದೇವರೇ, ನಿಮ್ಮ ಬಲಿಪೀಠವನ್ನು ಸುತ್ತುತ್ತಾ, [QE]
7. [QS]ಸ್ತೋತ್ರ ಧ್ವನಿಯೆತ್ತಿ ಸಾರುತ್ತಾ [QE][QS2]ನಿಮ್ಮ ಅದ್ಭುತಗಳನ್ನೆಲ್ಲಾ ತಿಳಿಸುವೆನು. [QE][PBR]
8. [QS]ಯೆಹೋವ ದೇವರೇ, ನೀವು ವಾಸಿಸುವ ಆಲಯವನ್ನೂ, [QE][QS2]ನಿಮ್ಮ ಮಹಿಮೆಯ ನಿವಾಸವನ್ನೂ ಪ್ರೀತಿಸುತ್ತೇನೆ. [QE]
9. [QS]ಪಾಪಿಗಳ ಸಂಗಡ ನನ್ನ ಪ್ರಾಣವನ್ನೂ, [QE][QS2]ರಕ್ತಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡಿರಿ. [QE]
10. [QS]ಅವರ ಕೈಗಳಲ್ಲಿ ಕೇಡು ಇದೆ; [QE][QS2]ಅವರ ಬಲಗೈ ಲಂಚಗಳಿಂದ ತುಂಬಿದೆ. [QE]
11. [QS]ನಾನಾದರೋ ನನ್ನ ಯಥಾರ್ಥತೆಯಲ್ಲಿ ನಡೆಯುತ್ತೇನೆ; [QE][QS2]ನನ್ನನ್ನು ವಿಮೋಚಿಸಿರಿ; ನನಗೆ ಕರುಣೆಯುಳ್ಳವರಾಗಿರಿ. [QE][PBR]
12. [QS]ನನ್ನ ಪಾದವು ಸಮ ನೆಲದಲ್ಲಿ ನಿಂತಿದೆ; [QE][QS2]ನಾನು ಮಹಾಸಭೆಯಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 26 / 150
1 ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; ನಾನು ಯೆಹೋವ ದೇವರಲ್ಲಿ ಕದಲದೆ ಭರವಸೆ ಇಟ್ಟಿದ್ದೇನೆ. 2 ಯೆಹೋವ ದೇವರೇ, ನನ್ನನ್ನು ಶೋಧಿಸಿ, ಪರೀಕ್ಷಿಸಿರಿ; ನನ್ನ ಅಂತರಿಂದ್ರಿಯಗಳನ್ನೂ ನನ್ನ ಹೃದಯವನ್ನೂ ಶೋಧಿಸಿರಿ. 3 ನಿಮ್ಮ ಒಡಂಬಡಿಕೆಯ ಪ್ರೀತಿಯು ಯಾವಾಗಲೂ ನನ್ನ ಮನಸ್ಸು ತುಂಬ ಇದೆ; ನಿಮ್ಮ ನಂಬಿಗಸ್ತಿಕೆಯಲ್ಲಿ ನಾನು ಬಾಳುತ್ತಿದ್ದೇನೆ. 4 ಮೋಸಗಾರರ ಸಂಗಡ ನಾನು ಕುಳಿತುಕೊಳ್ಳಲಿಲ್ಲ; ವಂಚಕರ ಸಂಗಡ ನಾನು ಹೋಗುವುದಿಲ್ಲ. 5 ದುರ್ಮಾರ್ಗಿಗಳ ಸಭೆಯನ್ನು ದ್ವೇಷಿಸಿದ್ದೇನೆ; ದುಷ್ಟರ ಸಂಗಡ ಕುಳಿತುಕೊಳ್ಳುವುದಿಲ್ಲ. 6 ನನ್ನ ಕೈಗಳನ್ನು ನಿರ್ಮಲವಾಗಿ ತೊಳೆದುಕೊಂಡು, ಯೆಹೋವ ದೇವರೇ, ನಿಮ್ಮ ಬಲಿಪೀಠವನ್ನು ಸುತ್ತುತ್ತಾ, 7 ಸ್ತೋತ್ರ ಧ್ವನಿಯೆತ್ತಿ ಸಾರುತ್ತಾ ನಿಮ್ಮ ಅದ್ಭುತಗಳನ್ನೆಲ್ಲಾ ತಿಳಿಸುವೆನು. 8 ಯೆಹೋವ ದೇವರೇ, ನೀವು ವಾಸಿಸುವ ಆಲಯವನ್ನೂ, ನಿಮ್ಮ ಮಹಿಮೆಯ ನಿವಾಸವನ್ನೂ ಪ್ರೀತಿಸುತ್ತೇನೆ. 9 ಪಾಪಿಗಳ ಸಂಗಡ ನನ್ನ ಪ್ರಾಣವನ್ನೂ, ರಕ್ತಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡಿರಿ. 10 ಅವರ ಕೈಗಳಲ್ಲಿ ಕೇಡು ಇದೆ; ಅವರ ಬಲಗೈ ಲಂಚಗಳಿಂದ ತುಂಬಿದೆ. 11 ನಾನಾದರೋ ನನ್ನ ಯಥಾರ್ಥತೆಯಲ್ಲಿ ನಡೆಯುತ್ತೇನೆ; ನನ್ನನ್ನು ವಿಮೋಚಿಸಿರಿ; ನನಗೆ ಕರುಣೆಯುಳ್ಳವರಾಗಿರಿ. 12 ನನ್ನ ಪಾದವು ಸಮ ನೆಲದಲ್ಲಿ ನಿಂತಿದೆ; ನಾನು ಮಹಾಸಭೆಯಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 26 / 150
×

Alert

×

Kannada Letters Keypad References