ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ದೇವದೂತರೇ, ಬಲವು ಯೆಹೋವ ದೇವರದೇ, [QE][QS2]ಮಹಿಮೆ ಯೆಹೋವ ದೇವರದೇ ಎಂದು ಹೇಳಿ ಕೊಂಡಾಡಿರಿ. [QE]
2. [QS]ಯೆಹೋವ ದೇವರ ನಾಮಕ್ಕೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; [QE][QS2]ಪರಿಶುದ್ಧತ್ವವೆಂಬ ವಸ್ತ್ರದೊಡನೆ ಯೆಹೋವ ದೇವರನ್ನು ಆರಾಧಿಸಿರಿ. [QE][PBR]
3. [QS]ಯೆಹೋವ ದೇವರ ಧ್ವನಿಯು ಜಲರಾಶಿಗಳ ಮೇಲೆ ಇದೆ; [QE][QS2]ಮಹಿಮೆಯ ದೇವರು ಇದ್ದಾರೆ; [QE][QS2]ಯೆಹೋವ ದೇವರು ಮಹಾಸಾಗರಗಳ ಮೇಲೆ ಇದ್ದಾರೆ. [QE]
4. [QS]ಯೆಹೋವ ದೇವರ ಧ್ವನಿಯು ಶಕ್ತಿಯುಳ್ಳದ್ದು; [QE][QS2]ಯೆಹೋವ ದೇವರ ಧ್ವನಿಯು ವೈಭವವುಳ್ಳದ್ದು. [QE]
5. [QS]ಯೆಹೋವ ದೇವರ ಧ್ವನಿಯು ದೇವದಾರು ವೃಕ್ಷಗಳನ್ನು ಮುರಿಯುತ್ತದೆ; [QE][QS2]ಯೆಹೋವ ದೇವರು ಲೆಬನೋನಿನ ದೇವದಾರು ವೃಕ್ಷಗಳನ್ನು ಮುರಿಯುತ್ತಾರೆ. [QE]
6. [QS]ಲೆಬನೋನ್ ಪರ್ವತವು ಕರುವಿನ ಹಾಗೆಯೂ [QE][QS2]ಸಿರ್ಯೋನ್ ಬೆಟ್ಟವು ಎಳೆಯ ಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾರೆ. [QE]
7. [QS]ಯೆಹೋವ ದೇವರ ಧ್ವನಿಯು [QE][QS2]ಸಿಡಿಲಿನ ಮಿಂಚಿನಂತೆ ಅಪ್ಪಳಿಸುತ್ತದೆ. [QE]
8. [QS]ಯೆಹೋವ ದೇವರ ಶಬ್ದವು ಮರುಭೂಮಿಯನ್ನು ನಡುಗಿಸುತ್ತದೆ; [QE][QS2]ಯೆಹೋವ ದೇವರು ಕಾದೇಶ್ ಮರುಭೂಮಿಯನ್ನು ನಡುಗಿಸುತ್ತಾರೆ. [QE]
9. [QS]ಯೆಹೋವ ದೇವರ ಧ್ವನಿಯು ಜಿಂಕೆಗಳು ಈಯುವಂತೆ ಮಾಡಿ [QE][QS2]ಅಡವಿಗಳನ್ನು ಬಯಲು ಮಾಡುತ್ತದೆ; [QE][QS]ದೇವರ ಮಂದಿರದಲ್ಲಿ ಪ್ರತಿಯೊಬ್ಬರೂ “ಮಹಿಮೆ!” ಎಂದು ಘೋಷಿಸುತ್ತಾರೆ. [QE][PBR]
10. [QS]ಯೆಹೋವ ದೇವರು ಪ್ರಳಯದ ಮೇಲೆ ಕುಳಿತುಕೊಳ್ಳುತ್ತಾರೆ; [QE][QS2]ಯುಗಯುಗಕ್ಕೂ ಯೆಹೋವ ದೇವರು ಅರಸರಾಗಿ ಕುಳಿತುಕೊಂಡಿದ್ದಾರೆ. [QE]
11. [QS]ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು; [QE][QS2]ಯೆಹೋವ ದೇವರು ತಮ್ಮ ಜನರನ್ನು ಸಮಾಧಾನದಿಂದ ಆಶೀರ್ವದಿಸುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 29 / 150
1 ದೇವದೂತರೇ, ಬಲವು ಯೆಹೋವ ದೇವರದೇ, ಮಹಿಮೆ ಯೆಹೋವ ದೇವರದೇ ಎಂದು ಹೇಳಿ ಕೊಂಡಾಡಿರಿ. 2 ಯೆಹೋವ ದೇವರ ನಾಮಕ್ಕೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ವಸ್ತ್ರದೊಡನೆ ಯೆಹೋವ ದೇವರನ್ನು ಆರಾಧಿಸಿರಿ. 3 ಯೆಹೋವ ದೇವರ ಧ್ವನಿಯು ಜಲರಾಶಿಗಳ ಮೇಲೆ ಇದೆ; ಮಹಿಮೆಯ ದೇವರು ಇದ್ದಾರೆ; ಯೆಹೋವ ದೇವರು ಮಹಾಸಾಗರಗಳ ಮೇಲೆ ಇದ್ದಾರೆ. 4 ಯೆಹೋವ ದೇವರ ಧ್ವನಿಯು ಶಕ್ತಿಯುಳ್ಳದ್ದು; ಯೆಹೋವ ದೇವರ ಧ್ವನಿಯು ವೈಭವವುಳ್ಳದ್ದು. 5 ಯೆಹೋವ ದೇವರ ಧ್ವನಿಯು ದೇವದಾರು ವೃಕ್ಷಗಳನ್ನು ಮುರಿಯುತ್ತದೆ; ಯೆಹೋವ ದೇವರು ಲೆಬನೋನಿನ ದೇವದಾರು ವೃಕ್ಷಗಳನ್ನು ಮುರಿಯುತ್ತಾರೆ. 6 ಲೆಬನೋನ್ ಪರ್ವತವು ಕರುವಿನ ಹಾಗೆಯೂ ಸಿರ್ಯೋನ್ ಬೆಟ್ಟವು ಎಳೆಯ ಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾರೆ. 7 ಯೆಹೋವ ದೇವರ ಧ್ವನಿಯು ಸಿಡಿಲಿನ ಮಿಂಚಿನಂತೆ ಅಪ್ಪಳಿಸುತ್ತದೆ. 8 ಯೆಹೋವ ದೇವರ ಶಬ್ದವು ಮರುಭೂಮಿಯನ್ನು ನಡುಗಿಸುತ್ತದೆ; ಯೆಹೋವ ದೇವರು ಕಾದೇಶ್ ಮರುಭೂಮಿಯನ್ನು ನಡುಗಿಸುತ್ತಾರೆ. 9 ಯೆಹೋವ ದೇವರ ಧ್ವನಿಯು ಜಿಂಕೆಗಳು ಈಯುವಂತೆ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ದೇವರ ಮಂದಿರದಲ್ಲಿ ಪ್ರತಿಯೊಬ್ಬರೂ “ಮಹಿಮೆ!” ಎಂದು ಘೋಷಿಸುತ್ತಾರೆ. 10 ಯೆಹೋವ ದೇವರು ಪ್ರಳಯದ ಮೇಲೆ ಕುಳಿತುಕೊಳ್ಳುತ್ತಾರೆ; ಯುಗಯುಗಕ್ಕೂ ಯೆಹೋವ ದೇವರು ಅರಸರಾಗಿ ಕುಳಿತುಕೊಂಡಿದ್ದಾರೆ. 11 ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು; ಯೆಹೋವ ದೇವರು ತಮ್ಮ ಜನರನ್ನು ಸಮಾಧಾನದಿಂದ ಆಶೀರ್ವದಿಸುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 29 / 150
×

Alert

×

Kannada Letters Keypad References