1. [QS]ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವೆನು; [QE][QS2]ನೀವು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿದ್ದೀರಿ. [QE][QS2]ನನ್ನನ್ನು ಮೇಲಕ್ಕೆ ಎತ್ತಿದ್ದೀರಿ. [QE]
2. [QS]ನನ್ನ ದೇವರಾದ ಯೆಹೋವ ದೇವರೇ, ಸಹಾಯಕ್ಕಾಗಿ ನಿಮಗೆ ಮೊರೆಯಿಡಲು, [QE][QS2]ನನ್ನನ್ನು ಸ್ವಸ್ಥಮಾಡಿದ್ದೀರಿ. [QE]
3. [QS]ಯೆಹೋವ ದೇವರೇ, ನನ್ನ ಪ್ರಾಣವನ್ನು ಪಾತಾಳದೊಳಗಿಂದ ಎತ್ತಿದ್ದೀರಿ; [QE][QS2]ನಾನು ಸಮಾಧಿ ಸೇರದ ಹಾಗೆ ನನ್ನನ್ನು ಬದುಕಿಸಿದ್ದೀರಿ. [QE][PBR]
4. [QS]ಯೆಹೋವ ದೇವರ ವಿಶ್ವಾಸಿಗಳೇ ಅವರನ್ನು ಕೊಂಡಾಡಿರಿ; [QE][QS2]ಅವರ ಪರಿಶುದ್ಧ ನಾಮವನ್ನು ಕೊಂಡಾಡಿರಿ. [QE]
5. [QS]ಅವರ ಕೋಪವು ಕ್ಷಣಮಾತ್ರವೇ; [QE][QS2]ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ; [QE][QS]ರಾತ್ರಿಯಲ್ಲಿ ದುಃಖ ಬಂದಿದ್ದರೂ; [QE][QS2]ಬೆಳಿಗ್ಗೆ ಆನಂದವು ಬರುವುದು. [QE][PBR]
6. [QS]ನಾನು ಸುರಕ್ಷಿತನಾಗಿದ್ದಾಗ, [QE][QS2]“ನಾನೆಂದೂ ಕದಲುವುದಿಲ್ಲ,” ಎಂದು ಹೇಳಿಕೊಂಡೆನು. [QE]
7. [QS]ಯೆಹೋವ ದೇವರೇ, ನಿಮ್ಮ ದಯೆಯಿಂದ [QE][QS2]ನನ್ನ ರಾಜ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀರಿ [QE][QS]ಆದರೆ ನೀವು ನಿಮ್ಮ ಮುಖವನ್ನು ಮರೆಮಾಡಲು [QE][QS2]ನಾನು ಕಳವಳಗೊಂಡೆನು. [QE][PBR]
8. [QS]ಯೆಹೋವ ದೇವರೇ, ನಾನು ನಿಮಗೆ ಮೊರೆಯಿಟ್ಟೆನು; [QE][QS2]ಕರುಣೆಗಾಗಿ ಯೆಹೋವ ಕರ್ತ ಆಗಿರುವವರಿಗೆ ಬಿನ್ನವಿಸಿದೆನು. [QE]
9. [QS]ನಾನು ಸಮಾಧಿಯಲ್ಲಿ ಇಳಿದು ಹೋಗಿ ನಾಶವಾದರೆ, [QE][QS2]ಅದರಿಂದ ನಿಮಗೆ ಆಗುವ ಲಾಭವೇನು? [QE][QS]ಧೂಳು ನಿಮ್ಮನ್ನು ಸ್ತುತಿಸುವುದೋ? [QE][QS2]ಅದು ನಿಮ್ಮ ನಂಬಿಗಸ್ತಿಕೆಯನ್ನು ಪ್ರಕಟಿಸುವುದೋ? [QE]
10. [QS]ಯೆಹೋವ ದೇವರೇ, ಲಾಲಿಸು; ನನ್ನನ್ನು ಕರುಣಿಸಿರಿ; [QE][QS2]ಯೆಹೋವ ದೇವರೇ, ನನಗೆ ಸಹಾಯಕರಾಗಿರಿ. [QE][PBR]
11. [QS]ನೀವು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರುಗಿಸಿದ್ದೀರಿ; [QE][QS2]ನೀವು ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಹರ್ಷವಸ್ತ್ರವನ್ನು ನನಗೆ ಧರಿಸಿದ್ದೀರಿ. [QE]
12. [QS]ಆದ್ದರಿಂದ ನನ್ನ ಹೃದಯವು ಮೌನವಿರದೆ ನಿಮ್ಮನ್ನು ಯುಗಯುಗಕ್ಕೂ ಕೊಂಡಾಡುತ್ತಿರುವುದು. [QE][QS2]ನನ್ನ ದೇವರಾದ ಯೆಹೋವ ದೇವರೇ, ನಾನು ನಿಮ್ಮನ್ನು ಸದಾಕಾಲವೂ ಸ್ತುತಿಸುವೆನು. [QE]