ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರೇ, ನಿಮ್ಮನ್ನೇ ಆಶ್ರಯಿಸಿಕೊಂಡಿದ್ದೇನೆ; [QE][QS2]ನಾನು ಎಂದಿಗೂ ನಾಚಿಕೆಪಡದಂತೆ ಮಾಡಿರಿ; [QE][QS2]ನಿಮ್ಮ ನೀತಿಯಲ್ಲಿ ನನ್ನನ್ನು ವಿಮೋಚಿಸಿರಿ. [QE]
2. [QS]ನಿಮ್ಮ ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ; [QE][QS2]ಬೇಗ ಬಂದು ನನ್ನನ್ನು ಬಿಡಿಸಿರಿ; [QE][QS]ನನ್ನನ್ನು ರಕ್ಷಿಸುವುದಕ್ಕೆ ನನ್ನ ಆಶ್ರಯದ ಬಂಡೆಯೂ, [QE][QS2]ಬಲವಾದ ಕೋಟೆಯೂ ಆಗಿರಿ. [QE]
3. [QS]ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ; [QE][QS2]ನಿಮ್ಮ ಹೆಸರಿನ ನಿಮಿತ್ತ ನನ್ನನ್ನು ನಡೆಸಿರಿ; ನನಗೆ ಮಾರ್ಗದರ್ಶಕರಾಗಿರಿ. [QE]
4. [QS]ವೈರಿಯು ಗುಪ್ತವಾಗಿ ಒಡ್ಡಿದ ಬಲೆಯೊಳಗಿಂದ ನನ್ನನ್ನು ಹೊರಗೆ ಎಳೆಯಿರಿ; [QE][QS2]ನೀವೇ ನನಗೆ ಆಶ್ರಯ. [QE]
5. [QS]ನಿಮ್ಮ ಕೈಗೆ ನನ್ನ ಆತ್ಮವನ್ನು ಒಪ್ಪಿಸಿದ್ದೇನೆ; [QE][QS2]ನಂಬಿಗಸ್ತದ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನನ್ನು ವಿಮೋಚಿಸಿದ್ದೀರಿ. [QE][PBR]
6. [QS]ದೇವರಲ್ಲದವುಗಳನ್ನು ಅನುಸರಿಸುವವರಿಂದ ನಾನು ಪ್ರತ್ಯೇಕವಾಗಿದ್ದೇನೆ; [QE][QS2]ನಾನು ಯೆಹೋವ ದೇವರಲ್ಲಿಯೇ ಭರವಸೆ ಇಟ್ಟಿದ್ದೇನೆ. [QE]
7. [QS]ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಉಲ್ಲಾಸಿಸಿ ಸಂತೋಷ ಪಡುವೆನು; [QE][QS2]ಏಕೆಂದರೆ ನೀವು ನನ್ನ ಕಷ್ಟಗಳನ್ನು ಲಕ್ಷ್ಯಕ್ಕೆ ತಂದು, [QE][QS2]ನನ್ನ ಪ್ರಾಣದ ಸಂಕಟಗಳನ್ನು ಅರಿತಿದ್ದೀರಿ. [QE]
8. [QS]ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿ ಬಿಡಲಿಲ್ಲ; [QE][QS2]ನನ್ನ ಪಾದಗಳನ್ನು ವಿಶಾಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀರಿ. [QE][PBR]
9. [QS]ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಇಕ್ಕಟ್ಟಿನಲ್ಲಿದ್ದೇನೆ; [QE][QS2]ನನ್ನ ಕಣ್ಣೂ ನನ್ನ ಪ್ರಾಣವೂ [QE][QS2]ನನ್ನ ದೇಹವೂ ದುಃಖದಿಂದ ಕ್ಷೀಣವಾಗಿವೆ. [QE]
10. [QS]ನನ್ನ ಜೀವವು ಚಿಂತೆಯಿಂದಲೂ, [QE][QS2]ನನ್ನ ವರ್ಷಗಳು ನಿಟ್ಟುಸಿರಿನಿಂದಲೂ ಕಳೆದುಹೋಗಿವೆ; [QE][QS]ನನ್ನ ಅಪರಾಧದಿಂದ ನನ್ನ ಶಕ್ತಿಯು ಕುಂದಿಹೋಗಿದೆ; [QE][QS2]ನನ್ನ ಎಲುಬುಗಳು ಕ್ಷೀಣವಾಗಿವೆ. [QE]
11. [QS]ನನ್ನ ವೈರಿಗಳೆಲ್ಲರ ನಿಮಿತ್ತವಾಗಿ [QE][QS2]ನನ್ನ ನೆರೆಯವರಿಗೆ ನಾನು ನಿಂದೆಯೂ, [QE][QS]ಮಿತ್ರರಿಗೆ ಹೆದರಿಕೆಯೂ ಆಗಿದ್ದೇನೆ; [QE][QS2]ದಾರಿಯಲ್ಲಿ ನನ್ನನ್ನು ಕಂಡವರು ನನ್ನನ್ನು ಬಿಟ್ಟು ಓಡಿಹೋಗುತ್ತಾರೆ. [QE]
12. [QS]ನಾನು ಸತ್ತುಹೋದವರಂತೆ ಎಲ್ಲರು ನನ್ನನ್ನು ಮರೆತುಬಿಟ್ಟಿದ್ದಾರೆ; [QE][QS2]ನಾನು ಒಡೆದ ಮಡಕೆಯಂತೆ ಇದ್ದೇನೆ. [QE]
13. [QS]ಅನೇಕರು ಹೀಗೆ ಪಿಸುಗುಟ್ಟುವುದನ್ನು ಕೇಳಿದ್ದೇನೆ. [QE][QS2]ಸುತ್ತಲೂ ಅಂಜಿಕೆ ಇದೆ; [QE][QS]ಅನೇಕರು ನನ್ನ ಪ್ರಾಣವನ್ನು ತೆಗೆಯಬೇಕೆಂದು [QE][QS2]ಒಳಸಂಚು ಮಾಡುತ್ತಿದ್ದಾರೆ. [QE][PBR]
14. [QS]ಯೆಹೋವ ದೇವರೇ, ನಾನು ನಿಮ್ಮಲ್ಲಿ ಭರವಸೆ ಇಟ್ಟಿದ್ದೇನೆ; [QE][QS2]“ನನ್ನ ದೇವರು ನೀವೇ,” ಎಂದು ಹೇಳಿಕೊಂಡಿದ್ದೇನೆ. [QE]
15. [QS]ನನ್ನ ಸಮಯವು ನಿಮ್ಮ ಕೈಯಲ್ಲಿ ಇವೆ; [QE][QS2]ನನ್ನ ಶತ್ರುಗಳ ಕೈಯಿಂದಲೂ [QE][QS2]ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸಿರಿ. [QE]
16. [QS]ನಿಮ್ಮ ಮುಖವು ನಿಮ್ಮ ಸೇವಕನ ಮೇಲೆ ಪ್ರಕಾಶಿಸಲಿ; [QE][QS2]ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನನ್ನನ್ನು ರಕ್ಷಿಸಿರಿ. [QE]
17. [QS]ಯೆಹೋವ ದೇವರೇ, ನಾನು ನಾಚಿಕೆಪಡದಂತೆ ಮಾಡಿರಿ; [QE][QS2]ನಾನು ನಿಮಗೆ ಮೊರೆಯಿಟ್ಟಿದ್ದೇನೆ; [QE][QS]ದುಷ್ಟರು ನಾಚಿಕೆಪಡಲಿ; [QE][QS2]ಅವರು ಸಮಾಧಿ ಸೇರಲಿ. [QE]
18. [QS]ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ, [QE][QS2]ಕಠಿಣವಾಗಿಯೂ ಮಾತನಾಡುವ [QE][QS2]ಸುಳ್ಳಿನ ತುಟಿಗಳು ಮೌನವಾಗಲಿ. [QE][PBR]
19. [QS]ನಿಮ್ಮ ಒಳ್ಳೆಯತನವು ಎಷ್ಟೋ ಸಮೃದ್ಧ; [QE][QS2]ನೀವು ನಿಮಗೆ ಭಯಪಡುವವರಿಗೋಸ್ಕರ ಆ ಒಳ್ಳೆಯತನವನ್ನಿಟ್ಟಿದ್ದೀರಿ, [QE][QS]ನಿಮ್ಮನ್ನು ಆಶ್ರಯಿಸಿಕೊಳ್ಳುವವರಿಗೆ [QE][QS2]ನೀವು ನಿಮ್ಮ ಒಳ್ಳೆಯತನವನ್ನು ಎಲ್ಲರ ಮುಂದೆ ದಯಪಾಲಿಸಿದ್ದೀರಿ. [QE]
20. [QS]ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ [QE][QS2]ನೀವು ಅವರನ್ನು ನಿಮ್ಮ ಸಾನಿಧ್ಯದಲ್ಲಿಯೇ ಮರೆಮಾಡುತ್ತೀರಿ; [QE][QS]ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ [QE][QS2]ಅವರನ್ನು ನಿಮ್ಮ ನಿವಾಸದಲ್ಲಿ ಅಡಗಿಸುತ್ತೀರಿ. [QE][PBR]
21. [QS]ಯೆಹೋವ ದೇವರಿಗೆ ಸ್ತುತಿಯುಂಟಾಗಲಿ; [QE][QS2]ಮುತ್ತಿಗೆ ಹಾಕಲಾದ ನಗರದಲ್ಲಿದ್ದ ನನಗೆ [QE][QS2]ದೇವರು ಆಶ್ಚರ್ಯಕರವಾದ ಒಡಂಬಡಿಕೆಯ ಪ್ರೀತಿಯನ್ನು ತೋರಿಸಿದ್ದಾರೆ. [QE]
22. [QS]“ನಾನು ನಿಮ್ಮ ಕಣ್ಣುಗಳ ಎದುರಿನಿಂದ ತೆಗೆದು ಹಾಕಲಾಗಿದ್ದೇನೆ” ಎಂದು [QE][QS2]ನನ್ನ ಗಾಬರಿಯಲ್ಲಿ ಹೇಳಿದೆನು; [QE][QS]ಆದರೂ ನಾನು ಸಹಾಯಕ್ಕಾಗಿ ನಿಮಗೆ ಮೊರೆಯಿಡಲು [QE][QS2]ನೀವು ಕರುಣೆಗಾಗಿ ಕೂಗಿದ್ದನ್ನು ಕೇಳಿದ್ದೀರಿ. [QE][PBR]
23. [QS]ಭಕ್ತರೇ, ಯೆಹೋವ ದೇವರನ್ನು ಪ್ರೀತಿಸಿರಿ; [QE][QS2]ಯೆಹೋವ ದೇವರು ನಂಬಿಗಸ್ತರನ್ನು ಕಾಯುತ್ತಾರೆ; [QE][QS2]ಅಹಂಕಾರಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. [QE]
24. [QS]ಯೆಹೋವ ದೇವರಲ್ಲಿ ನಿರೀಕ್ಷಿಸುವವರೆಲ್ಲರೂ ದೃಢವಾಗಿರಿ; [QE][QS2]ನಿಮ್ಮ ಹೃದಯವು ಧೈರ್ಯದಿಂದ ಇರಲಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 31 / 150
1 ಯೆಹೋವ ದೇವರೇ, ನಿಮ್ಮನ್ನೇ ಆಶ್ರಯಿಸಿಕೊಂಡಿದ್ದೇನೆ; ನಾನು ಎಂದಿಗೂ ನಾಚಿಕೆಪಡದಂತೆ ಮಾಡಿರಿ; ನಿಮ್ಮ ನೀತಿಯಲ್ಲಿ ನನ್ನನ್ನು ವಿಮೋಚಿಸಿರಿ. 2 ನಿಮ್ಮ ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ; ಬೇಗ ಬಂದು ನನ್ನನ್ನು ಬಿಡಿಸಿರಿ; ನನ್ನನ್ನು ರಕ್ಷಿಸುವುದಕ್ಕೆ ನನ್ನ ಆಶ್ರಯದ ಬಂಡೆಯೂ, ಬಲವಾದ ಕೋಟೆಯೂ ಆಗಿರಿ. 3 ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ; ನಿಮ್ಮ ಹೆಸರಿನ ನಿಮಿತ್ತ ನನ್ನನ್ನು ನಡೆಸಿರಿ; ನನಗೆ ಮಾರ್ಗದರ್ಶಕರಾಗಿರಿ. 4 ವೈರಿಯು ಗುಪ್ತವಾಗಿ ಒಡ್ಡಿದ ಬಲೆಯೊಳಗಿಂದ ನನ್ನನ್ನು ಹೊರಗೆ ಎಳೆಯಿರಿ; ನೀವೇ ನನಗೆ ಆಶ್ರಯ. 5 ನಿಮ್ಮ ಕೈಗೆ ನನ್ನ ಆತ್ಮವನ್ನು ಒಪ್ಪಿಸಿದ್ದೇನೆ; ನಂಬಿಗಸ್ತದ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನನ್ನು ವಿಮೋಚಿಸಿದ್ದೀರಿ. 6 ದೇವರಲ್ಲದವುಗಳನ್ನು ಅನುಸರಿಸುವವರಿಂದ ನಾನು ಪ್ರತ್ಯೇಕವಾಗಿದ್ದೇನೆ; ನಾನು ಯೆಹೋವ ದೇವರಲ್ಲಿಯೇ ಭರವಸೆ ಇಟ್ಟಿದ್ದೇನೆ. 7 ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಉಲ್ಲಾಸಿಸಿ ಸಂತೋಷ ಪಡುವೆನು; ಏಕೆಂದರೆ ನೀವು ನನ್ನ ಕಷ್ಟಗಳನ್ನು ಲಕ್ಷ್ಯಕ್ಕೆ ತಂದು, ನನ್ನ ಪ್ರಾಣದ ಸಂಕಟಗಳನ್ನು ಅರಿತಿದ್ದೀರಿ. 8 ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿ ಬಿಡಲಿಲ್ಲ; ನನ್ನ ಪಾದಗಳನ್ನು ವಿಶಾಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀರಿ. 9 ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಇಕ್ಕಟ್ಟಿನಲ್ಲಿದ್ದೇನೆ; ನನ್ನ ಕಣ್ಣೂ ನನ್ನ ಪ್ರಾಣವೂ ನನ್ನ ದೇಹವೂ ದುಃಖದಿಂದ ಕ್ಷೀಣವಾಗಿವೆ. 10 ನನ್ನ ಜೀವವು ಚಿಂತೆಯಿಂದಲೂ, ನನ್ನ ವರ್ಷಗಳು ನಿಟ್ಟುಸಿರಿನಿಂದಲೂ ಕಳೆದುಹೋಗಿವೆ; ನನ್ನ ಅಪರಾಧದಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲುಬುಗಳು ಕ್ಷೀಣವಾಗಿವೆ. 11 ನನ್ನ ವೈರಿಗಳೆಲ್ಲರ ನಿಮಿತ್ತವಾಗಿ ನನ್ನ ನೆರೆಯವರಿಗೆ ನಾನು ನಿಂದೆಯೂ, ಮಿತ್ರರಿಗೆ ಹೆದರಿಕೆಯೂ ಆಗಿದ್ದೇನೆ; ದಾರಿಯಲ್ಲಿ ನನ್ನನ್ನು ಕಂಡವರು ನನ್ನನ್ನು ಬಿಟ್ಟು ಓಡಿಹೋಗುತ್ತಾರೆ. 12 ನಾನು ಸತ್ತುಹೋದವರಂತೆ ಎಲ್ಲರು ನನ್ನನ್ನು ಮರೆತುಬಿಟ್ಟಿದ್ದಾರೆ; ನಾನು ಒಡೆದ ಮಡಕೆಯಂತೆ ಇದ್ದೇನೆ. 13 ಅನೇಕರು ಹೀಗೆ ಪಿಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತಲೂ ಅಂಜಿಕೆ ಇದೆ; ಅನೇಕರು ನನ್ನ ಪ್ರಾಣವನ್ನು ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ. 14 ಯೆಹೋವ ದೇವರೇ, ನಾನು ನಿಮ್ಮಲ್ಲಿ ಭರವಸೆ ಇಟ್ಟಿದ್ದೇನೆ; “ನನ್ನ ದೇವರು ನೀವೇ,” ಎಂದು ಹೇಳಿಕೊಂಡಿದ್ದೇನೆ. 15 ನನ್ನ ಸಮಯವು ನಿಮ್ಮ ಕೈಯಲ್ಲಿ ಇವೆ; ನನ್ನ ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸಿರಿ. 16 ನಿಮ್ಮ ಮುಖವು ನಿಮ್ಮ ಸೇವಕನ ಮೇಲೆ ಪ್ರಕಾಶಿಸಲಿ; ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನನ್ನನ್ನು ರಕ್ಷಿಸಿರಿ. 17 ಯೆಹೋವ ದೇವರೇ, ನಾನು ನಾಚಿಕೆಪಡದಂತೆ ಮಾಡಿರಿ; ನಾನು ನಿಮಗೆ ಮೊರೆಯಿಟ್ಟಿದ್ದೇನೆ; ದುಷ್ಟರು ನಾಚಿಕೆಪಡಲಿ; ಅವರು ಸಮಾಧಿ ಸೇರಲಿ. 18 ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ, ಕಠಿಣವಾಗಿಯೂ ಮಾತನಾಡುವ ಸುಳ್ಳಿನ ತುಟಿಗಳು ಮೌನವಾಗಲಿ. 19 ನಿಮ್ಮ ಒಳ್ಳೆಯತನವು ಎಷ್ಟೋ ಸಮೃದ್ಧ; ನೀವು ನಿಮಗೆ ಭಯಪಡುವವರಿಗೋಸ್ಕರ ಆ ಒಳ್ಳೆಯತನವನ್ನಿಟ್ಟಿದ್ದೀರಿ, ನಿಮ್ಮನ್ನು ಆಶ್ರಯಿಸಿಕೊಳ್ಳುವವರಿಗೆ ನೀವು ನಿಮ್ಮ ಒಳ್ಳೆಯತನವನ್ನು ಎಲ್ಲರ ಮುಂದೆ ದಯಪಾಲಿಸಿದ್ದೀರಿ. 20 ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ನೀವು ಅವರನ್ನು ನಿಮ್ಮ ಸಾನಿಧ್ಯದಲ್ಲಿಯೇ ಮರೆಮಾಡುತ್ತೀರಿ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ನಿಮ್ಮ ನಿವಾಸದಲ್ಲಿ ಅಡಗಿಸುತ್ತೀರಿ. 21 ಯೆಹೋವ ದೇವರಿಗೆ ಸ್ತುತಿಯುಂಟಾಗಲಿ; ಮುತ್ತಿಗೆ ಹಾಕಲಾದ ನಗರದಲ್ಲಿದ್ದ ನನಗೆ ದೇವರು ಆಶ್ಚರ್ಯಕರವಾದ ಒಡಂಬಡಿಕೆಯ ಪ್ರೀತಿಯನ್ನು ತೋರಿಸಿದ್ದಾರೆ. 22 “ನಾನು ನಿಮ್ಮ ಕಣ್ಣುಗಳ ಎದುರಿನಿಂದ ತೆಗೆದು ಹಾಕಲಾಗಿದ್ದೇನೆ” ಎಂದು ನನ್ನ ಗಾಬರಿಯಲ್ಲಿ ಹೇಳಿದೆನು; ಆದರೂ ನಾನು ಸಹಾಯಕ್ಕಾಗಿ ನಿಮಗೆ ಮೊರೆಯಿಡಲು ನೀವು ಕರುಣೆಗಾಗಿ ಕೂಗಿದ್ದನ್ನು ಕೇಳಿದ್ದೀರಿ. 23 ಭಕ್ತರೇ, ಯೆಹೋವ ದೇವರನ್ನು ಪ್ರೀತಿಸಿರಿ; ಯೆಹೋವ ದೇವರು ನಂಬಿಗಸ್ತರನ್ನು ಕಾಯುತ್ತಾರೆ; ಅಹಂಕಾರಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. 24 ಯೆಹೋವ ದೇವರಲ್ಲಿ ನಿರೀಕ್ಷಿಸುವವರೆಲ್ಲರೂ ದೃಢವಾಗಿರಿ; ನಿಮ್ಮ ಹೃದಯವು ಧೈರ್ಯದಿಂದ ಇರಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 31 / 150
×

Alert

×

Kannada Letters Keypad References