ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯಾರ ಉಲ್ಲಂಘನೆಗಳು ಕ್ಷಮಿಸಲಾಗಿವೆಯೋ, [QE][QS2]ಯಾರ ಪಾಪಗಳು ಮುಚ್ಚಲಾಗಿವೆಯೋ [QE][QS2]ಅವರೇ ಧನ್ಯರು. [QE]
2. [QS]ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ, [QE][QS2]ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ [QE][QS2]ಆ ಮನುಷ್ಯನು ಧನ್ಯನು. [QE][PBR]
3. [QS]ನಾನು ನನ್ನ ಪಾಪವನ್ನು ಅರಿಕೆ ಮಾಡದೆ ಇದ್ದಾಗ, [QE][QS2]ದಿನವೆಲ್ಲಾ ನರಳುವುದರಿಂದ [QE][QS2]ನನ್ನ ಎಲುಬುಗಳು ಸವೆದು ಹೋದವು. [QE]
4. [QS]ದೇವರೇ, ರಾತ್ರಿ ಹಗಲು [QE][QS2]ನಿಮ್ಮ ಕೈ ನನ್ನ ಮೇಲೆ ಭಾರವಾಗಿತ್ತು; [QE][QS]ನನ್ನ ಬಲವು ಬೇಸಿಗೆಯ ಬಿಸಿಲಿನಲ್ಲಿ [QE][QS2]ಕುಂದಿಹೋಗುವಂತೆ ಆಯಿತು. [QE][PBR]
5. [QS]ನನ್ನ ಪಾಪವನ್ನು ನಿಮಗೆ ತಿಳಿಸಿ, [QE][QS2]ನನ್ನ ಅನ್ಯಾಯವನ್ನು ಮರೆಮಾಡದೆ, [QE][QS]“ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ [QE][QS2]ಅರಿಕೆ ಮಾಡುವೆನು,” ಎಂದು ಹೇಳಿದೆನು; [QE][QS]ಆಗ, ನೀವು [QE][QS2]ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ. [QE][PBR]
6. [QS]ಆದುದರಿಂದ ಭಕ್ತರೆಲ್ಲರು ನೀವು [QE][QS2]ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ; [QE][QS]ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು [QE][QS2]ಅವರ ಸಮೀಪಕ್ಕೆ ಬರುವುದಿಲ್ಲ. [QE]
7. [QS]ನೀವು ನನಗೆ ಮರೆಮಾಡುವ ಸ್ಥಳವಾಗಿರುವಿರಿ; [QE][QS2]ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀರಿ; [QE][QS2]ವಿಮೋಚನಾ ಧ್ವನಿಗಳಿಂದ ನೀವು ನನ್ನನ್ನು ಸುತ್ತುವರಿಯುತ್ತೀರಿ. [QE][PBR]
8. [QS]ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿನಗೆ ಬುದ್ಧಿ ಹೇಳಿ, [QE][QS2]ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; [QE][QS2]ನನ್ನ ಮೆಚ್ಚುಗೆಯಿಂದ ನಿನ್ನನ್ನು ನಡೆಸುವೆನು. [QE]
9. [QS]ವಿವೇಕವಿಲ್ಲದ ಕುದುರೆಯ ಹಾಗೆಯೂ, [QE][QS2]ಹೇಸರಗತ್ತೆಯ ಹಾಗೆಯೂ ಇರಬೇಡಿರಿ; [QE][QS]ಬಾರಿನಿಂದಲೂ, ಕಡಿವಾಣದಿಂದಲೂ ಅವುಗಳನ್ನು ನಿಯಂತ್ರಿಸಬೇಕು, [QE][QS2]ಇಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ. [QE]
10. [QS]ದುಷ್ಟರಿಗೆ ವ್ಯಥೆಗಳು ಬಹಳ; [QE][QS2]ಆದರೆ ಯೆಹೋವ ದೇವರಲ್ಲಿ ಭರವಸವಿಡುವವನನ್ನು [QE][QS2]ಅದರ ಒಂಡಬಡಿಕೆಯ ಪ್ರೀತಿಯು ಸುತ್ತುವರಿಯುವುದು. [QE][PBR]
11. [QS]ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; [QE][QS2]ಯಥಾರ್ಥ ಹೃದಯ ಉಳ್ಳವರೇ, ಜಯಗೀತೆ ಹಾಡಿರಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 32 / 150
1 ಯಾರ ಉಲ್ಲಂಘನೆಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು. 2 ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ, ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ ಆ ಮನುಷ್ಯನು ಧನ್ಯನು. 3 ನಾನು ನನ್ನ ಪಾಪವನ್ನು ಅರಿಕೆ ಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದು ಹೋದವು. 4 ದೇವರೇ, ರಾತ್ರಿ ಹಗಲು ನಿಮ್ಮ ಕೈ ನನ್ನ ಮೇಲೆ ಭಾರವಾಗಿತ್ತು; ನನ್ನ ಬಲವು ಬೇಸಿಗೆಯ ಬಿಸಿಲಿನಲ್ಲಿ ಕುಂದಿಹೋಗುವಂತೆ ಆಯಿತು. 5 ನನ್ನ ಪಾಪವನ್ನು ನಿಮಗೆ ತಿಳಿಸಿ, ನನ್ನ ಅನ್ಯಾಯವನ್ನು ಮರೆಮಾಡದೆ, “ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ ಅರಿಕೆ ಮಾಡುವೆನು,” ಎಂದು ಹೇಳಿದೆನು; ಆಗ, ನೀವು ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ. 6 ಆದುದರಿಂದ ಭಕ್ತರೆಲ್ಲರು ನೀವು ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ; ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು ಅವರ ಸಮೀಪಕ್ಕೆ ಬರುವುದಿಲ್ಲ. 7 ನೀವು ನನಗೆ ಮರೆಮಾಡುವ ಸ್ಥಳವಾಗಿರುವಿರಿ; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀರಿ; ವಿಮೋಚನಾ ಧ್ವನಿಗಳಿಂದ ನೀವು ನನ್ನನ್ನು ಸುತ್ತುವರಿಯುತ್ತೀರಿ. 8 ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿನಗೆ ಬುದ್ಧಿ ಹೇಳಿ, ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಮೆಚ್ಚುಗೆಯಿಂದ ನಿನ್ನನ್ನು ನಡೆಸುವೆನು. 9 ವಿವೇಕವಿಲ್ಲದ ಕುದುರೆಯ ಹಾಗೆಯೂ, ಹೇಸರಗತ್ತೆಯ ಹಾಗೆಯೂ ಇರಬೇಡಿರಿ; ಬಾರಿನಿಂದಲೂ, ಕಡಿವಾಣದಿಂದಲೂ ಅವುಗಳನ್ನು ನಿಯಂತ್ರಿಸಬೇಕು, ಇಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ. 10 ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಯೆಹೋವ ದೇವರಲ್ಲಿ ಭರವಸವಿಡುವವನನ್ನು ಅದರ ಒಂಡಬಡಿಕೆಯ ಪ್ರೀತಿಯು ಸುತ್ತುವರಿಯುವುದು. 11 ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯ ಉಳ್ಳವರೇ, ಜಯಗೀತೆ ಹಾಡಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 32 / 150
×

Alert

×

Kannada Letters Keypad References