ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. [QS]ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ; [QE][QS2]ಮನನೊಂದು ನನ್ನನ್ನು ಶಿಕ್ಷಿಸಬೇಡಿರಿ. [QE]
2. [QS]ಏಕೆಂದರೆ, ನಿಮ್ಮ ಬಾಣಗಳು ನನ್ನಲ್ಲಿ ನಾಟಿವೆ. [QE][QS2]ನಿಮ್ಮ ಶಿಕ್ಷಾ ಹಸ್ತವು ನನ್ನ ಮೇಲೆ ಭಾರವಾಗಿದೆ. [QE]
3. [QS]ನಿಮ್ಮ ಬೇಸರದ ನಿಮಿತ್ತ ನನ್ನ ಶರೀರದಲ್ಲಿ ಸ್ವಸ್ಥತೆ ಏನೂ ಇಲ್ಲ; [QE][QS2]ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ಕ್ಷೇಮವೇ ಇಲ್ಲ. [QE]
4. [QS]ಏಕೆಂದರೆ, ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿ ಹೋಗಿವೆ; [QE][QS2]ದೋಷ ಭಾವನೆಯ ಹೊರೆಯು ನನಗೆ ಬಹುಭಾರವಾಗಿವೆ. [QE][PBR]
5. [QS]ನನ್ನ ಮೂರ್ಖತನದ ನಿಮಿತ್ತ ನನಗಾದ ಗಾಯಗಳು [QE][QS2]ದುರ್ವಾಸನೆಯಿಂದ ಕೀವು ತುಂಬಿವೆ. [QE]
6. [QS]ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ. [QE][QS2]ದಿನವೆಲ್ಲಾ ದುಃಖದಿಂದ ನಾನು ಅಲೆಯುತ್ತಿದ್ದೇನೆ. [QE]
7. [QS]ನನ್ನ ಸೊಂಟ ಬಹು ಬೇನೆಯಿಂದ ತುಂಬಿದೆ. [QE][QS2]ನನ್ನ ದೇಹದಲ್ಲಿ ಕ್ಷೇಮವೇ ಇಲ್ಲ. [QE]
8. [QS]ಬಲಹೀನನಾಗಿದ್ದೇನೆ, ಬಹಳ ಜಜ್ಜಿ ಹೋಗಿದ್ದೇನೆ; [QE][QS2]ನನ್ನ ಹೃದಯದ ವೇದನೆಯಿಂದ ನರಳುತ್ತಾ ಇದ್ದೇನೆ. [QE][PBR]
9. [QS]ಯೆಹೋವ ದೇವರೇ, ನಿಮಗೆ ನನ್ನ ಅಪೇಕ್ಷೆಗಳೆಲ್ಲಾ ಗೊತ್ತೇ ಇದೆ; [QE][QS2]ನನ್ನ ನಿಟ್ಟುಸಿರು ನಿಮಗೆ ಮರೆಯಾದದ್ದಲ್ಲ. [QE]
10. [QS]ನನ್ನ ಹೃದಯ ಬಡಿದುಕೊಳ್ಳುತ್ತದೆ. ನನ್ನ ಶಕ್ತಿಯು ನನ್ನನ್ನು ಬಿಟ್ಟುಹೋಗಿದೆ; [QE][QS2]ನನ್ನ ಕಣ್ಣುಗಳ ಬೆಳಕು ಸಹ ಹೋಗಿಬಿಟ್ಟಿದೆ. [QE]
11. [QS]ನನ್ನ ಪ್ರಿಯರೂ, ನನ್ನ ಸ್ನೇಹಿತರೂ ನನ್ನ ಬಾಧೆಗೆ ಓರೆಯಾಗಿ ನಿಲ್ಲುತ್ತಾರೆ; [QE][QS2]ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ. [QE]
12. [QS]ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; [QE][QS2]ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; [QE][QS2]ದಿನವೆಲ್ಲಾ ಮೋಸಗಳನ್ನು ಆಲೋಚಿಸುತ್ತಾರೆ. [QE][PBR]
13. [QS]ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳುವುದಿಲ್ಲ; [QE][QS2]ತನ್ನ ಬಾಯಿ ತೆರೆಯದ ಮೂಕನ ಹಾಗಿದ್ದೇನೆ. [QE]
14. [QS]ನಾನು ಕಿವಿ ಕೇಳಿಸದವನಂತೆ ಇದ್ದೇನೆ. [QE][QS2]ನಾನು ಪ್ರತ್ಯುತ್ತರ ಕೊಡಲಾರದಂತೆಯೂ ಇದ್ದೇನೆ. [QE]
15. [QS]ಯೆಹೋವ ದೇವರೇ, ನಿಮ್ಮನ್ನೇ ಎದುರು ನೋಡುತ್ತೇನೆ; [QE][QS2]ನನ್ನ ದೇವರಾದ ಯೆಹೋವ ದೇವರೇ, ನೀವು ಉತ್ತರ ಕೊಡುವಿರಿ. [QE]
16. [QS]ಏಕೆಂದರೆ ನಾನು, “ಅವರು ನನಗೋಸ್ಕರ ಸಂತೋಷಪಡದೆ ಇರಲಿ [QE][QS2]ನನ್ನ ಪಾದ ಜಾರುವಾಗ ಅವರು ನನಗೆ ವಿರೋಧವಾಗಿ [QE][QS2]ತಮ್ಮನ್ನು ಹೆಚ್ಚಿಸಿಕೊಳ್ಳದಿರಲಿ,” ಎಂದುಕೊಂಡೆನು. [QE][PBR]
17. [QS]ನಾನು ಎಡವಿ ಬೀಳಲಿದ್ದೇನೆ; [QE][QS2]ನನ್ನ ನೋವು ಯಾವಾಗಲೂ ನನ್ನ ಮುಂದೆ ಇದೆ. [QE]
18. [QS]ನನ್ನ ಅಕ್ರಮವನ್ನು ಅರಿಕೆ ಮಾಡುವೆನು; [QE][QS2]ನನ್ನ ಪಾಪಕ್ಕೋಸ್ಕರ ದುಃಖಪಡುವೆನು. [QE]
19. [QS]ನನ್ನ ಶತ್ರುಗಳು ಬಲಗೊಂಡಿದ್ದಾರೆ. [QE][QS2]ನನ್ನನ್ನು ವಿನಾಕಾರಣವಾಗಿ ದ್ವೇಷಿಸುವವರು ಹೆಚ್ಚಿದ್ದಾರೆ. [QE]
20. [QS]ನನ್ನ ಶತ್ರುಗಳು ಒಳ್ಳೆಯದಕ್ಕೆ ಬದಲಾಗಿ [QE][QS2]ಕೇಡನ್ನು ಸಲ್ಲಿಸುತ್ತಿದ್ದಾರೆ. [QE][QS2]ನಾನು ಒಳ್ಳೆಯದನ್ನು ಹಿಂದಟ್ಟುವ ಕಾರಣ ನನ್ನನ್ನು ಎದುರಿಸುತ್ತಾರೆ. [QE][PBR]
21. [QS]ಯೆಹೋವ ದೇವರೇ, ನನ್ನನ್ನು ಬಿಡಬೇಡಿರಿ; [QE][QS2]ನನ್ನ ದೇವರೇ, ನನಗೆ ದೂರವಾಗಿರಬೇಡಿರಿ. [QE]
22. [QS]ನನ್ನ ರಕ್ಷಕ ಆಗಿರುವ ಯೆಹೋವ ದೇವರೇ, [QE][QS2]ನನ್ನ ಸಹಾಯಕ್ಕೆ ಬೇಗ ಬನ್ನಿರಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 38 / 150
1 ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ; ಮನನೊಂದು ನನ್ನನ್ನು ಶಿಕ್ಷಿಸಬೇಡಿರಿ. 2 ಏಕೆಂದರೆ, ನಿಮ್ಮ ಬಾಣಗಳು ನನ್ನಲ್ಲಿ ನಾಟಿವೆ. ನಿಮ್ಮ ಶಿಕ್ಷಾ ಹಸ್ತವು ನನ್ನ ಮೇಲೆ ಭಾರವಾಗಿದೆ. 3 ನಿಮ್ಮ ಬೇಸರದ ನಿಮಿತ್ತ ನನ್ನ ಶರೀರದಲ್ಲಿ ಸ್ವಸ್ಥತೆ ಏನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ಕ್ಷೇಮವೇ ಇಲ್ಲ. 4 ಏಕೆಂದರೆ, ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿ ಹೋಗಿವೆ; ದೋಷ ಭಾವನೆಯ ಹೊರೆಯು ನನಗೆ ಬಹುಭಾರವಾಗಿವೆ. 5 ನನ್ನ ಮೂರ್ಖತನದ ನಿಮಿತ್ತ ನನಗಾದ ಗಾಯಗಳು ದುರ್ವಾಸನೆಯಿಂದ ಕೀವು ತುಂಬಿವೆ. 6 ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ. ದಿನವೆಲ್ಲಾ ದುಃಖದಿಂದ ನಾನು ಅಲೆಯುತ್ತಿದ್ದೇನೆ. 7 ನನ್ನ ಸೊಂಟ ಬಹು ಬೇನೆಯಿಂದ ತುಂಬಿದೆ. ನನ್ನ ದೇಹದಲ್ಲಿ ಕ್ಷೇಮವೇ ಇಲ್ಲ. 8 ಬಲಹೀನನಾಗಿದ್ದೇನೆ, ಬಹಳ ಜಜ್ಜಿ ಹೋಗಿದ್ದೇನೆ; ನನ್ನ ಹೃದಯದ ವೇದನೆಯಿಂದ ನರಳುತ್ತಾ ಇದ್ದೇನೆ. 9 ಯೆಹೋವ ದೇವರೇ, ನಿಮಗೆ ನನ್ನ ಅಪೇಕ್ಷೆಗಳೆಲ್ಲಾ ಗೊತ್ತೇ ಇದೆ; ನನ್ನ ನಿಟ್ಟುಸಿರು ನಿಮಗೆ ಮರೆಯಾದದ್ದಲ್ಲ. 10 ನನ್ನ ಹೃದಯ ಬಡಿದುಕೊಳ್ಳುತ್ತದೆ. ನನ್ನ ಶಕ್ತಿಯು ನನ್ನನ್ನು ಬಿಟ್ಟುಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ಹೋಗಿಬಿಟ್ಟಿದೆ. 11 ನನ್ನ ಪ್ರಿಯರೂ, ನನ್ನ ಸ್ನೇಹಿತರೂ ನನ್ನ ಬಾಧೆಗೆ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ. 12 ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಆಲೋಚಿಸುತ್ತಾರೆ. 13 ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳುವುದಿಲ್ಲ; ತನ್ನ ಬಾಯಿ ತೆರೆಯದ ಮೂಕನ ಹಾಗಿದ್ದೇನೆ. 14 ನಾನು ಕಿವಿ ಕೇಳಿಸದವನಂತೆ ಇದ್ದೇನೆ. ನಾನು ಪ್ರತ್ಯುತ್ತರ ಕೊಡಲಾರದಂತೆಯೂ ಇದ್ದೇನೆ. 15 ಯೆಹೋವ ದೇವರೇ, ನಿಮ್ಮನ್ನೇ ಎದುರು ನೋಡುತ್ತೇನೆ; ನನ್ನ ದೇವರಾದ ಯೆಹೋವ ದೇವರೇ, ನೀವು ಉತ್ತರ ಕೊಡುವಿರಿ. 16 ಏಕೆಂದರೆ ನಾನು, “ಅವರು ನನಗೋಸ್ಕರ ಸಂತೋಷಪಡದೆ ಇರಲಿ ನನ್ನ ಪಾದ ಜಾರುವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳದಿರಲಿ,” ಎಂದುಕೊಂಡೆನು. 17 ನಾನು ಎಡವಿ ಬೀಳಲಿದ್ದೇನೆ; ನನ್ನ ನೋವು ಯಾವಾಗಲೂ ನನ್ನ ಮುಂದೆ ಇದೆ. 18 ನನ್ನ ಅಕ್ರಮವನ್ನು ಅರಿಕೆ ಮಾಡುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು. 19 ನನ್ನ ಶತ್ರುಗಳು ಬಲಗೊಂಡಿದ್ದಾರೆ. ನನ್ನನ್ನು ವಿನಾಕಾರಣವಾಗಿ ದ್ವೇಷಿಸುವವರು ಹೆಚ್ಚಿದ್ದಾರೆ. 20 ನನ್ನ ಶತ್ರುಗಳು ಒಳ್ಳೆಯದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುತ್ತಿದ್ದಾರೆ. ನಾನು ಒಳ್ಳೆಯದನ್ನು ಹಿಂದಟ್ಟುವ ಕಾರಣ ನನ್ನನ್ನು ಎದುರಿಸುತ್ತಾರೆ. 21 ಯೆಹೋವ ದೇವರೇ, ನನ್ನನ್ನು ಬಿಡಬೇಡಿರಿ; ನನ್ನ ದೇವರೇ, ನನಗೆ ದೂರವಾಗಿರಬೇಡಿರಿ. 22 ನನ್ನ ರಕ್ಷಕ ಆಗಿರುವ ಯೆಹೋವ ದೇವರೇ, ನನ್ನ ಸಹಾಯಕ್ಕೆ ಬೇಗ ಬನ್ನಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 38 / 150
×

Alert

×

Kannada Letters Keypad References